ಜಾತಿ/ಆದಾಯ ಪ್ರಮಾಣಪತ್ರ: ತ್ವರಿತಗತಿಯಲ್ಲಿ ನೀಡಲು ಡಿಸಿ ಸೂಚನೆ
Thursday, July 9th, 2015ಮಂಗಳೂರು : ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಕೋರಿ ಸಲ್ಲಿಕೆಯಾಗುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿಗೊಳಿಸಿ, ಪ್ರಮಾಣಪತ್ರಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರು ತಹಶೀಲ್ದಾರ್‌ಗಳಿಗೆ ಸೂಚಿಸಿದ್ದಾರೆ. ಅವರು ಬುಧವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಶಾಲಾ-ಕಾಲೇಜು ಆರಂಭವಾಗಿರುವುದರಿಂದ ಶೈಕ್ಷಣಿಕ ಉದ್ದೇಶಗಳಿಗಾಗಿ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳಿಗಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸುತ್ತಿದ್ದಾರೆ. ನಾಡಕಚೇರಿಗಳ ಮುಂದೆ ಸಾರ್ವಜನಿಕರು ಜಮಾಯಿಸುತ್ತಿದ್ದು, ಪ್ರತೀನಿತ್ಯವೂ ಜನಜಂಗುಳಿಯಿಂದ ಕೂಡಿರುತ್ತವೆ. ಜನಸಾಮಾನ್ಯರೂ ಕೂಡಾ ಇದಕ್ಕಾಗಿ ತಮ್ಮ ಕೆಲಸ ಕಾರ್ಯ […]