Blog Archive

ಇಂದು ಸಿದ್ದು ಸರ್ಕಾರದ ಕೊನೆ ಬಜೆಟ್… ರಾಜ್ಯದ ಜನತೆಗೆ ಸಿಗ್ತಾವಾ ಭರ್ಜರಿ ಭಾಗ್ಯಗಳು!?

Friday, February 16th, 2018
siddaramaih

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018-19ನೇ ಸಾಲಿನ ಆಯವ್ಯಯವನ್ನು ಇಂದು ಬೆಳಗ್ಗೆ 11.30ಕ್ಕೆ ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ 6ನೇ ಹಾಗೂ ಹಣಕಾಸು ಸಚಿವರಾಗಿ 13ನೇ ಬಜೆಟ್‌ಅನ್ನು ಇಂದು ಮಂಡಿಸಲಿದ್ದು, ರಾಜ್ಯದಲ್ಲಿ ಅತಿಹೆಚ್ಚು ಬಜೆಟ್ ಮಂಡಿಸಿದ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಆಡಳಿತ ಸರ್ಕಾರದ ಕೊನೆಯ ಬಜೆಟ್ ಕೂಡ ಇದಾಗಲಿದ್ದು, ಚುನಾವಣಾ ವರ್ಷವೂ ಆಗಿರುವುದರಿಂದ ಜನಪ್ರಿಯ ಯೋಜನೆಗಳಿಗೆ ಹೆಚ್ಚು ಒತ್ತುಕೊಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು […]

ಸಿಎಂ ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಬಾರದು: ಬಿಎಸ್‌ವೈ

Thursday, February 15th, 2018
yedeyorappa

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಮಂಡಿಸಲಿರುವ ಬಜೆಟ್‌ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಚುನಾವಣಾ ಸನಿಹದಲ್ಲಿ ಅವರು ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸೇವಾಲಾಲ್ ಜಯಂತಿ ಆಚರಣೆ ಮಾಡಲಾಯಿತು. ಜಯಂತಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ನಂತರ ಅನ್ವರ್ ಮಾನ್ಪಾಡಿ ವರದಿ ಬಹಿರಂಗ ಪಡಿಸಲು ಬಿಜೆಪಿ ರೂಪಿಸಿರುವ ಪ್ರತ್ಯೇಕ ವೆಬ್ ಸೈಟ್‌ಗೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು. ರಾಜ್ಯಾದ್ಯಂತ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ […]

ರೈತರು, ಸರ್ಕಾರಿ ನೌಕರರರಿಗೆ ಸಿಎಂ ಸಿಹಿಸುದ್ದಿ?!

Thursday, February 15th, 2018
siddaramaih

ಬೆಂಗಳೂರು: ಪ್ರಸಕ್ತ ಬಜೆಟ್‍ನಲ್ಲಿ ರಾಜ್ಯದ ರೈತರು ಹಾಗೂ ಸರ್ಕಾರಿ ನೌಕರರಿಗೆ ಬಂಪರ್ ಬಹುಮಾನ ಕಾದಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಸಿಎಂ ಸಿದ್ದರಾಮಯ್ಯ ಚುನಾವಣೆ ಹೊಸ್ತಿಲಲ್ಲಿ ಮಂಡಿಸುತ್ತಿರುವ ಬಜೆಟ್ ಇದಾಗಿದೆ. ಮುಖ್ಯಮಂತ್ರಿಯಾಗಿ ಆರನೇ ಹಾಗೂ ಹಣಕಾಸು ಸಚಿವರಾಗಿ ದಾಖಲೆಯ 13ನೇ ಬಜೆಟ್ ಮಂಡಿಸುತ್ತಿರುವ ಕೀರ್ತಿಗೆ ಸಿಎಂ ಭಾಜನರಾಗಲಿದ್ದು, ಈ ಮಹತ್ವದ ಗಳಿಗೆಯಲ್ಲಿ ದೊಡ್ಡ ಸಂಖ್ಯೆಯಲ್ಲಿರುವ ಕೃಷಿಕರು ಹಾಗೂ ಸರ್ಕಾರಿ ನೌಕರರನ್ನು ಸಮಾಧಾನಪಡಿಸಲು ಸಿಎಂ ಮುಂದಾಗಿದ್ದಾರೆ. ರಾಜ್ಯ ಬಜೆಟ್‍ನಲ್ಲಿ ಈ ಎರಡು ವರ್ಗದವರನ್ನು ಸಮಾಧಾನಪಡಿಸುವ ಉತ್ತಮ ಕೊಡುಗೆ ಇರಲಿದೆ […]

ದೇಶದ 6ನೇ ಶ್ರೀಮಂತ ಮುಖ್ಯಮಂತ್ರಿ… ಅದರ ಕುರಿತು ಟ್ವಿಟರ್‌‌ನಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು?

Wednesday, February 14th, 2018
congress

ಬೆಂಗಳೂರು: ದೇಶದ ಆರನೇ ಶ್ರೀಮಂತ ಮುಖ್ಯಮಂತ್ರಿ ಎನ್ನುವ ಸರ್ವೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಟ್ವಿಟರ್‌‌ನಲ್ಲಿ ಅದರ ಕುರಿತು ಮಾಹಿತಿ ಹೊರಹಾಕಿದ್ದಾರೆ. ಸರ್ವೆಯಲ್ಲಿ ಹೇಳಿರುವುದು ಅವಿಭಕ್ತ ಕುಟುಂಬದ ಆಸ್ತಿಯ ಲೆಕ್ಕ. ಕಳೆದ ಚುನಾವಣೆಯಲ್ಲಿ ಅವಿಭಕ್ತ ಕುಟುಂಬದ ಒಟ್ಟು ಆಸ್ತಿಯನ್ನು ಘೋಷಿಸಿದ್ದೆ. ಅಣ್ಣ, ತಮ್ಮಂದಿರ ಎಲ್ಲಾ ಆಸ್ತಿಯನ್ನ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿತ್ತು. ನನ್ನ ಅಣ್ಣ ತೀರಿ ಹೋದ ಮೇಲೆ, ನಾನೇ ಮನೆಯ ಯಜನಮಾನನಾಗಿದ್ದೆ. ಈಗ ಕುಟುಂಬದ ಆಸ್ತಿಯನ್ನ ವಿಭಜಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಜತೆಗೆ ನನ್ನ ನಿಜವಾದ ಆಸ್ತಿ […]

ಚುನಾವಣಾ ರಣತಂತ್ರ… ಸಿದ್ದರಾಮಯ್ಯ ತವರಲ್ಲಿ ಮೋದಿ ಯಾತ್ರೆಗೆ ಸಜ್ಜು

Saturday, February 10th, 2018
narendra-modi

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಫೆ.19ರಂದು ಪ್ರಧಾನಿ ನರೇಂದ್ರ ಮೋದಿ ದಿನವಿಡೀ ಕಾಯ೯ಕ್ರಮಗಳಲ್ಲಿ ಭಾಗವಹಿಸುವ ಮೂಲಕ ಮೈಸೂರು ಭಾಗದಲ್ಲಿ ರಣತಂತ್ರ ರೂಪಿಸಲು ಸಜ್ಜಾಗಿದ್ದಾರೆ. ಅಂದು ಬೆಳಿಗ್ಗೆ ಮೊದಲಿಗೆ ನಗರದ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಜೋಡಿ ಹಳಿಗಳನ್ನು ಉದ್ಘಾಟಿಸಲಿದ್ದಾರೆ. ನಂತರ ಮೈಸೂರಿಂದ ಉತ್ತರ ಕರ್ನಾಟಕಕ್ಕೆ ನೇರ ಸಂಪರ್ಕ ಕಲ್ಪಿಸುವ ಹಾಗೂ ಸಂಚಾರಕ್ಕೆ ನೆರವಾಗುವಂತ ರೈಲಿಗೆ ಚಾಲನೆ ನೀಡಲಿದ್ದಾರೆ. ಆ ನಂತರ ಕೆ.ಆರ್.ಎಸ್ ರಸ್ತೆಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಇಎಸ್‍ಐ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. […]

ಸಂಸತ್‌‌ನಲ್ಲಿ ಸಿದ್ದರಾಮಯ್ಯ ಹೆಸರು ಉಲ್ಲೇಖ… ಮೋದಿಗೆ ಟ್ಟಿಟ್ಟರ್‌‌ನಲ್ಲಿ ಸಿಎಂ ಟಾಂಗ್‌

Thursday, February 8th, 2018
narendra-modi

ಬೆಂಗಳೂರು: ಲೋಕಸಭೆಯಲ್ಲಿ ನಡೆಯುತ್ತಿರುವ ಬಜೆಟ್‌‌ ಅಧಿವೇಶನದ ವೇಳೆ ಭಾಷಣ ಮಾಡುತ್ತಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರ ಹೆಸರು ಉಲ್ಲೇಖಿಸಿ ಮಾತನಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನೀವು ಸಂಸತ್‌ನಲ್ಲಿ ನನ್ನನ್ನು ಮತ್ತು ಬಸವಣ್ಣನವರನ್ನು ನೆನಪಿಸಿಕೊಂಡಿದ್ದರಿಂದ ಸಂತಸವಾಗಿದೆ. ಉಳ್ಳವರು ಶಿವಾಲಯ ಮಾಡುವರು, ನಾನೇನು ಮಾಡಲಿ ಬಡವನಯ್ಯಾ ಎಂದು ಬಸವಣ್ಣ ಹೇಳಿದ್ದರು. ಬಸವಣ್ಣನವರ ತತ್ವಗಳನ್ನು ನೀವು ಅನುಸರಿಸಿದರೆ ಕನ್ನಡಿಗರು ನಿಮಗೆ ಧನ್ಯವಾದ ಹೇಳುತ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಅಟಲ್ ಬಿಹಾರಿ […]

ವಿಜಯ ಶಂಕರ್‌, ಅನಿಲ್‌ ಕಾಂಗ್ರೆಸ್‌ಗೆ ಸೇರ್ಪಡೆ

Tuesday, February 6th, 2018
congress

ಬೆಂಗಳೂರು: ಮಾಜಿ ಸಚಿವ ಸಿ. ಎಚ್‌. ವಿಜಯ ಶಂಕರ್‌ ಹಾಗೂ ದಿವಂಗತ ಶಾಸಕ ಚಿಕ್ಕಮಾದು ಅವರ ಪುತ್ರ ಅನಿಲ್‌ ಚಿಕ್ಕಮಾದು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ತಮ್ಮ ಬೆಂಬಲಿಗರೊಂದಿಗೆ ವಿಜಯ ಶಂಕರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದರು. ಅನಿಲ್‌ ಚಿಕ್ಕಮಾದು ಜಿಲ್ಲಾ ಪಂಚಾಯತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ತೊರೆದು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದರು. ಪಕ್ಷಕ್ಕೆ ಸೇರ್ಪಡೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, […]

ಮೋದಿ ಅವರ ಬೆಂಗಳೂರು ಭಾಷಣ ಕೇವಲ ‘ಸಂಡೇ ಶೋ’: ಯು.ಟಿ.ಖಾದರ್

Monday, February 5th, 2018
u-t-kader

ಮಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣ ಕೇವಲ ‘ಸಂಡೇ ಶೋ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಲೇವಡಿ ಮಾಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಿರೀಕ್ಷೆಯಂತೆ ಬೆಂಗಳೂರಿಗೆ ಬಂದ ಪ್ರಧಾನಿ ಮೋದಿ ಒಂದು ತಾಸಿನ ಸುಳ್ಳಿನ ಕಂತೆ ಹೇಳಿ ಮರಳಿದ್ದಾರೆ. ಅವರ ಆಗಮನದಿಂದ ರಾಜ್ಯ ಆಡಳಿತಕ್ಕೆ ಬಲ ಬರುತ್ತದೆಯೇ ಹೊರತು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು. “ಅವರ ನಯವಾದ ಸುಳ್ಳನ್ನು ರಾಜ್ಯದ ಬುದ್ಧಿವಂತ […]

ಮಾಜಿ ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

Wednesday, January 31st, 2018
anand-singh

ಬೆಂಗಳೂರು: ಮಾಜಿ ಸಚಿವ, ವಿಜಯನಗರ ಕ್ಷೇತ್ರದ ಮಾಜಿ ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ಸೇರಿದರು. ಶನಿವಾರ ಅವರು ಶಾಸಕ ಸ್ಥಾನ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಸಮ್ಮುಖದಲ್ಲಿ ಆನಂದ್ ಸಿಂಗ್ ತಮ್ಮ ಬೆಂಬಲಿಗರ ಜೊತೆ ಪಕ್ಷ ಸೇರ್ಪಡೆಯಾದರು. ಶಾಸಕ ಸ್ಥಾನಕ್ಕೆ ಬಳ್ಳಾರಿಯ ಆನಂದ್ ಸಿಂಗ್ ರಾಜೀನಾಮೆ! ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ‘ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತ ಬಯಸಿ ಬರುವವರಿಗೆ ಸ್ವಾಗತ. […]

ಅಮಾಯಕರ ಕೊಲೆಗೆ ಸಿಎಂ ಸಹಜ ಸಾವು ಪ್ರಮಾಣಪತ್ರ: ಸೂಲಿಬೆಲೆ

Monday, January 29th, 2018
chakravarthi

ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮಾಯಕ ಯುವಕರ ಕೊಲೆಗಳಿಗೆ ಸಹಜ ಸಾವು ಎಂಬ ಪ್ರಮಾಣ ಪತ್ರ ನೀಡಿ ಅವುಗಳನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ರಾಜ್ಯದಲ್ಲಿ ಎಷ್ಟು ಕೆಟ್ಟ ಆಡಳಿತವನ್ನು ನೀಡಬಹುದೋ ಅದನ್ನು ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕಾಂಗ್ರೆಸ್‌ ಸರಕಾರ ತೋರಿಸಿ ಕೊಟ್ಟಿದೆ ಎಂದು ಯುವ ಬ್ರಿಗೇಡ್‌ನ‌ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದ್ದಾರೆ. ರವಿವಾರ ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಸಹ ಮತ ಬಳಗ ಹೊರತಂದಿರುವ “ಹಡೆದವ್ವನ ಶಾಪ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. […]