2ನೇ ಬಾರಿಗೆ ಸ್ಪೀಕರ್ ಸ್ಥಾನ ಅಲಂಕರಿಸಿದ ರಮೇಶ್ ಕುಮಾರ್
Friday, May 25th, 2018ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿ ಕಾಂಗ್ರೆಸ್ ಪಕ್ಷದ ಕೆ.ಆರ್.ರಮೇಶ್ ಕುಮಾರ್ ಅವಿರೋಧ ಆಯ್ಕೆಯಾಗಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿಯ ಸುರೇಶ್ ಕುಮಾರ್ ಅವರು ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ರಮೇಶ್ ಕುಮಾರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆ ಕಲಾಪ ಮಧ್ಯಾಹ್ನ 12.20ರ ಸುಮಾರಿಗೆ ಆರಂಭವಾಗುತ್ತಿದ್ದಂತೆಯೇ ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು, ಸ್ಪೀಕರ್ ಸ್ಥಾನಕ್ಕೆ ಸುರೇಶ್ ಕುಮಾರ್ ಅವರನ್ನು ಸೂಚಿಸುತ್ತಿಲ್ಲ ಎಂದು ಹೇಳಿದರು. ಅದಕ್ಕೆ ಸಮ್ಮತಿ ಇರುವುದಾಗಿ ಸುರೇಶ್ […]