ಧರ್ಮಸ್ಥಳ: ಹೆಗ್ಗಡೆ ಪಟ್ಟಾಭಿಷೇಕದ ಸುವರ್ಣ ಮಹೋತ್ಸವಕ್ಕೆ ಸಿದ್ಧತೆ
Saturday, October 14th, 2017ಉಜಿರೆ: ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ 1968ರ ಅ. 24ರಂದು ಸಂಪ್ರದಾಯದಂತೆ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದ ಡಿ. ವೀರೇಂದ್ರ ಹೆಗ್ಗಡೆ ಅವರು 50 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿದ್ದು, ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ವರ್ಧಂತ್ಯುತ್ಸವವು ಇದೇ 24ರಂದು ನಡೆಯಲಿದೆ. ಧರ್ಮಸ್ಥಳದ ಸಿಬ್ಬಂದಿ, ಊರಿನ ನಾಗರಿಕರು ಹಾಗೂ ಭಕ್ತಾಭಿಮಾನಿಗಳು ಸರಳ ರೀತಿಯಲ್ಲಿ ಸುವರ್ಣ ಮಹೋತ್ಸವವನ್ನು ಆಚರಿಸಲು ನಿರ್ಧರಿಸಿದ್ದಾರೆ. ಡಿ. ಹರ್ಷೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. 24ರಂದು ಸಂಜೆ 5.30ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ […]