Blog Archive

ಆರ್‌ಆರ್‌ ನಗರದಲ್ಲಿ ಚುನಾವಣೆ ಹಿನ್ನೆಲೆ ಬಂದ್‌ ಇಲ್ಲ: ಬಿ.ಎಸ್.ಯಡಿಯೂರಪ್ಪ

Saturday, May 26th, 2018
yedeyurappa-bjp

ಬೆಂಗಳೂರು: ಆರ್‌ ಆರ್‌ ನಗರ ವಿಧಾನಸಭೆ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಕರೆ ನೀಡಿದ್ದ ಬಂದ್ ಮಾಡದಿರಲು ಬಿಜೆಪಿ ನಿರ್ಧರಿಸಿದೆ. ಬೆಂಗಳೂರು ಹೊರತುಪಡೆಸಿ, ರಾಜ್ಯಾದ್ಯಂತ ರೈತರು ಕರೆ ನೀಡಿರುವ ಹೋರಾಟಕ್ಕೆ ತಮ್ಮ ಬೆಂಬಲ ಇದೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆರ್‌ ಆರ್‌ ನಗರದಲ್ಲಿ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ಪರ ಚುನಾವಣೆ ಪ್ರಚಾರ ನಡೆಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಾಲಮನ್ನಾ ಮಾಡುವಂತೆ ರೈತರು ಬಂದ್ ನಡೆಸಲು ನಿರ್ಧರಿಸಿದ್ದಾರೆ. ಅವರಿಗೆ ಪಕ್ಷದ ಬೆಂಬಲವಿದೆ ಎಂದಷ್ಟೇ […]

ಯೋಗಿ ಮುಖಕ್ಕೆ ಚಪ್ಪಲಿಯಲ್ಲಿ ಹೊಡಿಯಬೇಕು ಎನಿಸಿತ್ತು: ವ್ಯಗ್ರರಾದ ಉದ್ಧವ್‌

Saturday, May 26th, 2018
yogi-adithyanath

ಮುಂಬೈ: ಶಿವಸೇನೆ ಮುಖ್ಯಸ್ಥ ಉದ್ಧವ್‌‌ ಠಾಕ್ರೆ ತಮ್ಮ ಸಾಮ್ನಾ ಪತ್ರಿಕೆಯಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ವಿರುದ್ಧ ವಿವಾದಾತ್ಮಕ ಬರಹ ಪ್ರಕಟಿಸಿದ್ದಾರೆ. ಸಿಎಂ ಯೋಗಿಯನ್ನು ಅವರ ಚಪ್ಪಲಿಯಿಂದಲೇ ಅವರ ಮುಖಕ್ಕೆ ಹೊಡೆಯಬೇಕೆಂದು ಶಿವಸೇನಾ ವರಿಷ್ಠ ಉದ್ಧವ್‌ ಠಾಕ್ರೆಗೆ ಅನಿಸಿತ್ತಂತೆ. ಹೀಗಂತಾ ಅವರೇ ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಹೊಸ ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದಾರೆ. ಪಲ್ಗಾರ್‌ಗೆ ಭೇಟಿ ನೀಡಿದ್ದ ವೇಳೆ ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಸ್ಪಷ್ಟನಮನ ಸಲ್ಲಿಸುವಾಗ ಸಿಎಂ ಯೋಗಿ ಚಪ್ಪಲಿ ಧರಿಸಿದ್ದರ […]

ಜಯನಗರ ಚುನಾವಣೆ: ಬಿಜೆಪಿಯಿಂದ ಪ್ರಹ್ಲಾದ್ ನಾಮಪತ್ರ ಸಲ್ಲಿಕೆ

Saturday, May 26th, 2018
file-nomination

ಬೆಂಗಳೂರು: ಶಾಸಕ ಬಿ.ಎನ್.ವಿಜಯ್‍ಕುಮಾರ್ ಅವರ ಅಕಾಲಿಕ ನಿಧನದಿಂದ ಮುಂದೂಡಲ್ಪಟ್ಟಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶುಕ್ರವಾರ ಬಿ.ಎನ್.ಪ್ರಹ್ಲಾದ್ ನಾಮಪತ್ರ ಸಲ್ಲಿಸಿದರು. ಕೇಂದ್ರ ಸಚಿವ ಅನಂತಕುಮಾರ್ ಸೇರಿದಂತೆ ಇತರ ಬಿಜೆಪಿ ಮುಖಂಡರ ಜೊತೆ ತೆರಳಿದ ಪ್ರಹ್ಲಾದ್ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಜಯನಗರ ಅಭ್ಯರ್ಥಿಯಾಗಿದ್ದ ವಿಜಯ್‍ಕುಮಾರ್ ನಿಧನದಿಂದ ಮುಂದೂಡಲ್ಪಟ್ಟಿದ್ದ ಚುನಾವಣೆಯಲ್ಲಿ ವಿಜಯ್‍ಕುಮಾರ್ ಅವರ ಸಹೋದರ ಬಿ.ಎನ್.ಪ್ರಹ್ಲಾದ್ ಅವರಿಗೆ ಬಿ ಫಾರಂ ನೀಡಲು ಬಿಜೆಪಿ ತೀರ್ಮಾನಿಸಿ, ಕ್ಷೇತ್ರದಲ್ಲಿ ಅಭ್ಯರ್ಥಿಯ ಗೆಲುವಿನ ಹೊಣೆಗಾರಿಕೆಯನ್ನು ಕೇಂದ್ರ ಸಚಿವ ಅನಂತಕುಮಾರ್ ಅವರ ಹೆಗಲಿಗೆ ಹೊರಿಸಲಾಗಿದೆ. […]

ಸಾಲ ಮನ್ನಾ ಬಗ್ಗೆ ಬಿಜೆಪಿ ಬ್ಲ್ಯಾಕ್‌ಮೇಲ್ ಮಾಡಲು ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

Friday, May 25th, 2018
d-k--shivkumar

ಬೆಂಗಳೂರು: ಸಾಲ ಮನ್ನಾ ವಿಚಾರವಾಗಿ ಬಿಜೆಪಿ ಡೆಡ್‌ಲೈನ್ ಕೊಡಲು ಸಾಧ್ಯವಿಲ್ಲ. ಬಹುಮತ ಸಾಬೀತು ವೇಳೆ ವಾಕ್ ಔಟ್ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ರೈತರು ಶಾಂತಿಯುತವಾಗಿ ವರ್ತಿಸಬೇಕು. ಯಡಿಯೂರಪ್ಪಗೆ ಸಿಎಂ ಆಗಲು ಅಡ್ಡಿಯಾಗಿದ್ದು, ಕಾಂಗ್ರೆಸ್ ಶಕ್ತಿ. ನನ್ನಿಂದ ಮಾತ್ರ ಅದು ಆಗಿಲ್ಲವೆಂದು ಸ್ಪಷ್ಟಪಡಿಸಿದರು. ಯಡಿಯೂರಪ್ಪ ಅವರು ಇಂದು ಕೆಟ್ಟ ಸಂಸದೀಯ ವ್ಯವಹಾರವನ್ನು ಶುರು ಮಾಡಿದ್ದಾರೆ. ಬಂದ್ ಮಾಡುತ್ತೇವೆ ಎಂದು ಹೇಳುವ […]

ಬಿಜೆಪಿ ಇಂದಿಗೂ ನಮ್ಮ ಶಾಸಕರಿಗೆ ಆಮಿಷ ಒಡ್ಡುತ್ತಿದೆ: ಪರಮೇಶ್ವರ್‌

Friday, May 25th, 2018
congress

ಬೆಂಗಳೂರು: ಬಿಜೆಪಿ ಶಾಸಕರು ಇಂದಿಗೂ ಕೂಡ ನಮ್ಮ ಶಾಸಕರಿಗೆ ಆಮಿಷ ಒಡ್ಡುತ್ತಿದ್ದಾರೆ. ಆದರೆ ನಮ್ಮ ಶಾಸಕರು ಯಾವುದೇ ಆಮಿಷಕ್ಕೆ ಒಳಗಾಗಲ್ಲ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದು ವಿಶ್ವಾಸಮತ ಯಾಚನೆ ಇದ್ದು, ವಿಶ್ವಾಸಮತ ಸಾಬೀತು ಪಡಿಸುವ ವಿಶ್ವಾಸವಿದೆ. ವಿಶ್ವಾಸಮತ ಯಾಚನೆ ಜೊತೆ ಸ್ಪೀಕರ್ ಚುನಾವಣೆ ಕೂಡ ಇದೆ. ಶಾಸಕ ರಮೇಶ್ ಕುಮಾರ್ ಸ್ಪೀಕರ್ ಚುನಾವಣೆಯಲ್ಲಿ ಗೆದ್ದು ಸ್ಪೀಕರ್ ಆಗಲಿದ್ದಾರೆ. ನಮ್ಮಲ್ಲಿ ಹೆಚ್ಚು ಸ್ಥಾನಗಳು ಇರುವುದರಿಂದ ರಮೇಶ್ ಕುಮಾರ್ ಸ್ಪೀಕರ್ […]

ಬಿಜೆಪಿ ನಾಯಕರು ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ: ಕುಮಾರಸ್ವಾಮಿ

Thursday, May 24th, 2018
janatha-dal

ಬೆಂಗಳೂರು: ಬುಧವಾರ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಬಿಜೆಪಿ ನಾಯಕರು ನಮ್ಮನ್ನು ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಕಿಡಿ ಕಾರಿದರು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಪಟ್ಟನಾಯಕನಹಳ್ಳಿ ನಂಜಾವಧೂತ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ನಾಯಕರು ನಮ್ಮ ಮೇಲೆ ಟೀಕೆ ಮಾಡುವುದನ್ನ ಬಿಡಬೇಕು ಅದರಲ್ಲೇ ಕಾಲ ಕಳೆಯಬಾರದು ಎಂದು ಟಾಂಗ್ ನೀಡಿದರು. ಇನ್ನು […]

ಇಂದು ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

Thursday, May 24th, 2018
yedeyurappa

ಬೆಂಗಳೂರು: ಇಂದು ಸಂಜೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಂಜೆ 6ಗಂಟೆಗೆ ಮಾಜಿ ಸಿಎಂ ಹಾಗೂ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪಕ್ಷದ ರಾಜ್ಯಮಟ್ಟದ ನಾಯಕರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಶುಕ್ರವಾರ ನಡೆಯುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿಶ್ವಾಸಮತದಲ್ಲಿ ಪಾಲ್ಗೊಳ್ಳಬೇಕೋ, ಬೇಡವೋ ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೇ ಅತ್ಯಂತ ಸಮೀಪದಲ್ಲೇ ಇರುವ ಚುನಾವಣೆಗಳಲ್ಲಿ ಗೆಲ್ಲುವ ಸಂಬಂಧ ಕೈಗೊಳ್ಳಬೇಕಾದ ತಂತ್ರವನ್ನು ಹೆಣೆಯಲಾಗುತ್ತದೆ. ಒಂದರ ಹಿಂದೆ ಒಂದು ಚುನಾವಣೆ ಬರುತ್ತಿದ್ದು, ಸಮ್ಮಿಶ್ರ […]

ರಾಜ್ಯಾದ್ಯಂತ ಕರಾಳ ದಿನಾಚರಣೆ ಆಚರಿಸಿ ಬಿಜೆಪಿ ಪ್ರತಿಭಟನೆ

Wednesday, May 23rd, 2018
strike-bjp

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆ ವಿರೋಧಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಕರಾಳ ದಿನಾಚರಣೆ ಆಚರಿಸುತ್ತಿದೆ. ಇಂದು ಸಂಜೆ ಹೆಚ್‌.ಡಿ.ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ, ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಜಯಪುರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿ, ಕೈಯಲ್ಲಿ ಕಪ್ಪು ಧ್ವಜ ಹಿಡಿದು ಕಾಂಗ್ರೆಸ್-ಜೆಡಿಎಸ್ ಮುಖಂಡರ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು. […]

ಶಾಂತಿಯುತ ಬಂಟ್ವಾಳವೇ ನನ್ನ ಗುರಿ : ರಾಜೇಶ್ ನಾಯ್ಕ್

Tuesday, May 22nd, 2018
rajesh-naik

ಬಂಟ್ವಾಳ: ವಿಧಾನಸಭಾ ಚುನಾವಣೆಯಲ್ಲಿ ಏಳನೇ ಗೆಲುವಿನ ಉತ್ಸಾಹದಲ್ಲಿದ್ದ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರ ನಾಗಾಲೋಟಕ್ಕೆ ಬ್ರೇಕ್ ಹಾಕಿದವರು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು. 2013ರ ಚುನಾವಣೆಯಲ್ಲಿ ರೈ ವಿರುದ್ಧ 17,850 ಮತಗಳ ಅಂತರದಲ್ಲಿ ಸೋತಿದ್ದ ರಾಜೇಶ್ ನಾಯ್ಕ್ ಈ ಬಾರಿ 15,971 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ರಾಜೇಶ್ ನಾಯ್ಕ್ ಮಂಗಳೂರು ತಾಲೂಕಿನ ಗಂಜಿಮಠದ ತೆಂಕ ಎಡಪದವು ಗ್ರಾಮದ ನಿವಾಸಿ. ರಮೇಶ ನಾಯ್ಕ್ ಮತ್ತು ಸರೋಜಿನಿ ಆರ್. ನಾಯ್ಕ್ ದಂಪತಿಯ ಇಬ್ಬರು ಮಕ್ಕಳ […]

ಪಾಕಿಸ್ತಾನ ಪರ ಘೋಷಣೆ ಆರೋಪ, ಕಾಂಗ್ರೆಸ್‌ ದೂರಿಗೆ ಬಿಜೆಪಿ ಪ್ರತಿದೂರು

Tuesday, May 22nd, 2018
bjp-party

ಮಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸರ್ಕಾರ ವಿಶ್ವಾಸಮತ ಯಾಚಿಸದೆ ರಾಜೀನಾಮೆ ನೀಡಿದ ಸಂದರ್ಭದಲ್ಲಿ ಸಂಭ್ರಮಾಚರಣೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಂಗಳೂರಿನ ಜಯಪ್ರಶಾಂತ್ ಎಂಬುವವರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ವಿಡಿಯೋವನ್ನು ತಿರುಚಿ ಅದರಲ್ಲಿ ಪಾಕಿಸ್ತಾನ ಪರ ಘೋಷಣೆ ಹಾಕಲಾಗಿದ್ದು, ಈ ರೀತಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕ ಜೆ.ಆರ್.ಲೋಬೋ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಆಯುಕ್ತರಿಗೆ ದೂರು […]