Blog Archive

ಸದನದಲ್ಲಿ ನಮಗೆ ಬಹುಮತ ಸಾಬೀತಾಗುವುದು ಖಚಿತ: ಡಿ.ಕೆ. ಶಿವಕುಮಾರ್

Saturday, May 19th, 2018
shivkumar

ಬೆಂಗಳೂರು: ನಮ್ಮ ಎಲ್ಲಾ ಶಾಸಕರೂ ಕಾಂಗ್ರೆಸ್ ಪರವಾಗಿ ಓಟ್ ಮಾಡಲಿದ್ದಾರೆ. ಸದನದಲ್ಲಿ ನಮಗೆ ಬಹುಮತ ಸಾಬೀತಾಗುವುದು ಖಚಿತ ಎಂದು ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಪ್ರತಾಪ್ ಗೌಡ, ಆನಂದ್ ಸಿಂಗ್ ಅವರನ್ನು ಯಾರು ಕರ್ಕೊಂಡು ಹೋಗಿದ್ದಾರೆ ಎಂದು ನಾನು ನನ್ನ ಬಾಯಲ್ಲಿ ಹೇಳುವುದಿಲ್ಲ. ಆನಂದ್ ಸಿಂಗ್ ಕೆಲವೇ ಕ್ಷಣಗಳಲ್ಲಿ ಆಗಮಿಸಲಿದ್ದಾರೆ. ನಮ್ಮ ಪರವಾಗಿ ಮತ ಹಾಕಲಿದ್ದಾರೆ ಎಂದು ಹೇಳಿದರು. ಪ್ರತಾಪ್ ಗೌಡ ಪಾಟೀಲ್ ಪ್ರಮಾಣವಚನ ಸ್ವೀಕರಿಸುತ್ತಾರೆ. ಪ್ರತಾಪ್ […]

ವಿಶ್ವಾಸಮತ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪೂಜೆ

Saturday, May 19th, 2018
bjp-bless

ಮಂಗಳೂರು: ರಾಜ್ಯದ ನೂತನ ಸರಕಾರ ರಚನೆಗೆ ವಿಶ್ವಾಸಮತ ಯಾಚನೆಯ ಹೈಡ್ರಾಮ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ರಾಜ್ಯದ ನೂತನ ಮುಖ್ಯಮಂತ್ರಿ ಬಿ ಎಸ್ .ಯಡಿಯೂರಪ್ಪ ಅವರು ಬಹುಮತ ಸಾಬೀತು ಪಡಿಸುವ ವಿಶ್ವಾಸದಲ್ಲಿದ್ದಾರೆ. ಈ ನಡುವೆ ಬಿಜೆಪಿ ಕಾರ್ಯಕರ್ತರು ಬಹುಮತ ಸಾಬೀತು ಯಶಸ್ವಿಯಾಗಲಿ ಎಂದು ದೇವರ ಮೊರೆ ಹೋಗಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಿ.ಎಸ್.ಯಡಿಯೂರಪ್ಪ ಸದನದಲ್ಲಿ ಬಹುಮತ ಸಾಬೀತುಪಡಿಸುವಂತಾಗಬೇಕು ಎಂದು ಬಿಜೆಪಿ ಕಾರ್ಯಕರ್ತರು ಪುತ್ತೂರಿನಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿದರು. ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆ ಮುಖಂಡ […]

ಮಂಗಳೂರಲ್ಲಿ ಬಿಜೆಪಿ, ಕಾಂಗ್ರೆಸ್‌‌ ಕಚೇರಿಗೆ ಪೊಲೀಸ್ ಭದ್ರತೆ..!

Saturday, May 19th, 2018
manglore

ಮಂಗಳೂರು: ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ರಾಜ್ಯದಲ್ಲಿ ಉಂಟಾಗಿರುವ ಅನಿಶ್ಚಿತತೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮತ್ತು ಕಾಂಗ್ರೆಸ್‌‌‌ನ ಜಿಲ್ಲಾ ಪೊಲೀಸ್ ಕಚೇರಿಗಳಿಗೆ ಭದ್ರತೆ ನೀಡಲಾಗಿದೆ. ಮಂಗಳೂರಿನ ಕೊಡಿಯಾಲ್ ಬೈಲ್‌‌‌ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಒಂದು ಕೆಎಸ್‌ಆರ್‌‌ಪಿ ತುಕಡಿ ಕಾರ್ಯನಿರ್ವಹಿಸುತ್ತಿದ್ದರೆ, ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್‌‌ ಜಿಲ್ಲಾ ಕಚೇರಿಗೆ ನಗರ ಪೊಲೀಸರು ಭದ್ರತೆ ನೀಡಿದ್ದಾರೆ. ಇಂದು ವಿಶ್ವಾಸಮತ ಯಾಚನೆ ಇರುವ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಭದ್ರತೆಯನ್ನು ನಿಯೋಜಿಸಲಾಗಿದೆ ಎನ್ನಲಾಗುತ್ತಿದೆ.

ಆನಂದ್ ಸಿಂಗ್, ಪ್ರತಾಪ್ ಗೌಡ ಮಧ್ಯಾಹ್ನ ಸದನಕ್ಕೆ ಹಾಜರ್?

Saturday, May 19th, 2018
anand-singh

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಮೂರು ದಿನದ ಅಧಿಕಾರದ ಅಳಿವು ಉಳಿವಿನ ಇಂದಿನ ಸಂದರ್ಭದಲ್ಲಿ ಕಣ್ಮರೆಯಾಗಿರುವ ಇಬ್ಬರು ಶಾಸಕರು ಎಲ್ಲಿದ್ದಾರೆ ಎನ್ನುವ ಪ್ರಶ್ನೆ ಕಾಡುತ್ತಿದೆ. ಕಣ್ಮರೆಯಾಗಿರುವ ಶಾಸಕರು ಸದ್ಯ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಇರಬಹುದು ಎಂದು ಊಹಿಸಲಾಗುತ್ತಿದೆ. ಇವರಿಬ್ಬರೂ ಮಧ್ಯಾಹ್ನ 1 ಗಂಟೆಗೆ ಸದನಕ್ಕೆ ಆಗಮಿಸಬಹುದು, ಅವರನ್ನು ಕರೆತರಲು ಮಾಜಿ ಸಚಿವ ಎಂ.ಬಿ.ಪಾಟೀಲ್ ತೆರಳಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಮಸ್ಕಿ ಶಾಸಕ ಪ್ರತಾಪ್ ಗೌಡ ಮೂರನೇ […]

ವಿಧಾನಸಭೆಯ ಸದ್ಯದ ಮ್ಯಾಜಿಕ್ ನಂಬರ್ 110…!

Saturday, May 19th, 2018
siddaramaih

ಬೆಂಗಳೂರು: ವಿಧಾನಸಭೆಯಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಹಾಗೂ ಮಸ್ಕಿ ಶಾಸಕ ಪ್ರತಾಪ್ ಗೌಡ ಗೈರಾದ ಹಿನ್ನೆಲೆಯಲ್ಲಿ ಮ್ಯಾಜಿಕ್ ಸಂಖ್ಯೆ 110ಕ್ಕೆ ಇಳಿದಿದೆ. ಬಿಜೆಪಿ ಕಡೆಯಿಂದ ಎಲ್ಲಾ 104 ಸದಸ್ಯರಿದ್ದಾರೆ. ಕಾಂಗ್ರೆಸ್‌ನ 78 ಸದಸ್ಯರ ಪೈಕಿ 76 ಮಂದಿ ಉಪಸ್ಥಿತರಿದ್ದಾರೆ. ಜೆಡಿಎಸ್‌ನ 37 ಶಾಸಕರ ಪೈಕಿ 36 ಮಂದಿ ಇದ್ದಾರೆ. ಇವರ ಒಟ್ಟು ಸದಸ್ಯರ ಸಂಖ್ಯೆ 38 ಆಗಿದ್ದರೂ, ಕುಮಾರಸ್ವಾಮಿ ಎರಡು ಕ್ಷೇತ್ರದಲ್ಲಿ ಗೆದ್ದಿರುವ ಕಾರಣ ಇವರ ಶಾಸಕರ ಬಲ 37. ಇಂದು ಎಲ್ಲರೂ ಹಾಜರಾಗುತ್ತಿದ್ದು, ಹೆಚ್.ಡಿ. […]

ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ, ಕಾಂಗ್ರೆಸ್ ನಲ್ಲೂ ಯಾವುದೇ ಸಮಸ್ಯೆ ಇಲ್ಲ: ಕುಮಾರಸ್ವಾಮಿ

Saturday, May 19th, 2018
kumaraswamy

ಬೆಂಗಳೂರು: ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಕಾಂಗ್ರೆಸ್ ನಲ್ಲೂ ಯಾವುದೇ ಸಮಸ್ಯೆ ಇಲ್ಲ. ಎಲ್ಲ ಶಾಸಕರು ಒಗ್ಗಟ್ಟಿನಿಂದ ಇದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಎಸ್ ಯಡಿಯೂರಪ್ಪ ವಿಶ್ವಾಸ ಮತ ಯಾಚನೆಯಲ್ಲಿ ಸೋಲುತ್ತಾರೆ ಎಂದು ಕುಮಾರಸ್ವಾಮಿ ನುಡಿದರು. ಪ್ರತಿಯೊಬ್ಬರಿಗೂ ಆಶಾವಾದ ಇದ್ದೇ ಇರುತ್ತದೆ. ಸಂಜೆ 4 ಗಂಟೆಯವರೆಗೆ ಬಿಜೆಪಿ ನಾಯಕರು ನಮ್ಮ ಶಾಸಕರಿಗಾಗಿ ಗಾಳ ಹಾಕುತ್ತಾರೆ. ಅವರು ಆಶಾವಾದ ಹೊಂದಿರುವುದು ತಪ್ಪಲ್ಲ ಎಂದರು. ಮಾಜಿ ಮುಖ್ಯ ಮಂತ್ರಿ […]

ಕಾಂಗ್ರೆಸ್‌‌‌-ಜೆಡಿಎಸ್‌ ಮೈತ್ರಿ ಪ್ರಜಾಪ್ರಭುತ್ವ ವಿರೋಧಿ: ನಳಿನ್ ಕುಮಾರ್ ಕಟೀಲ್

Saturday, May 19th, 2018
nalin-kumar

ಮಂಗಳೂರು: ಚುನಾವಣೆಯ ಸಂದರ್ಭದಲ್ಲಿ ವೈಯಕ್ತಿಕ ಮತ್ತು ಸೈದ್ಧಾಂತಿಕವಾಗಿ ವಿರೋಧ ಮಾಡಿ ಈಗ ಅಧಿಕಾರ ಮಾಡಲು ಯತ್ನಿಸುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್‌ನ್ನು ರಾಜ್ಯದ ಜನ ತಿರಸ್ಕರಿಸಿದ್ದಾರೆ. ಬಿಜೆಪಿಗೆ ಜನಾಶೀರ್ವಾದ ಇದ್ದು, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದರು. ಅಪ್ಪನಾಣೆ ಹಾಕಿಕೊಂಡವರು ಈಗ ಒಂದಾಗಿದ್ದು, ಸಿದ್ದರಾಮಯ್ಯರಿಗೆ ಅಪ್ಪನ ಮೇಲೆ ನಂಬಿಕೆ ಇಲ್ಲದಂತಾಗಿದೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಗೆ ನಾಳೆ ಸದನವನ್ನು ಎದುರಿಸುವ ಧೈರ್ಯವಿಲ್ಲ: ಶೋಭಾ ಕರಂದ್ಲಾಜೆ

Friday, May 18th, 2018
shobha-karandlaje

ಬೆಂಗಳೂರು: ಕಾಂಗ್ರೆಸ್ ಗೆ ಸದನ ಎದುರಿಸುವ ಧೈರ್ಯವಿಲ್ಲ. ಕಾಂಗ್ರೆಸ್ ನ ಶಾಸಕರು ಹತಾಶರಾಗಿದ್ದಾರೆ. ಭಯಗೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಮುಖಂಡರು ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ಅವರ ನೇಮಕವನ್ನು ವಿರೋಧಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ನೇಮಕಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೋಪಯ್ಯ ಅವರು 4ನೇ ಬಾರಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಆಗಿ ಕೆಲಸ ಮಾಡಿದ ಅನುಭವವಿದೆ. ಹಿಂದೆ ವಿಧಾನಸಭೆಯ […]

ಹಂಗಾಮಿ ಸ್ಪೀಕರ್‌ ಆಗಿ ಬೋಪಯ್ಯ ನೇಮಕ..!

Friday, May 18th, 2018
K-G-Bopaih

ಬೆಂಗಳೂರು: ನಾಳೆ ಹೊಸ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಲಿದ್ದು, ನಿಯಮದ ಪ್ರಕಾರ ಮೊದಲಿಗೆ ಹಂಗಾಮಿ ಸ್ಪೀಕರ್‌ ಆಯ್ಕೆ ನಡೆಯಬೇಕಿದೆ. ಈ ಪ್ರಕಾರ ಹಂಗಾಮಿ ಸ್ಪೀಕರ್‌ ಆಗಿ ಕೆ.ಜಿ. ಬೋಪಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಜಿ. ಬೋಪಯ್ಯ ಸ್ಪೀಕರ್‌ ಆಗಿ ಕೆಲಸ ಮಾಡಿದ್ದರು. ಇದೀಗ ರಾಜ್ಯಪಾಲರು ಬೋಪಯ್ಯ ಅವರನ್ನೇ ಹಂಗಾಮಿ ಸ್ಪೀಕರ್‌ ಆಗಿ ಆಯ್ಕೆಗೊಂಡಿದ್ದಾರೆ. ಇದಕ್ಕೂ ಕಾಂಗ್ರೆಸ್‌‌ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಹಂಗಾಮಿ ಸ್ಪೀಕರ್‌ ಆಯ್ಕೆ ಹೇಗೆ …? 1. […]

ರಾಜ್ಯಪಾಲರ ನಿಲುವು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರತಿಭಟನೆ

Friday, May 18th, 2018
congress-protest

ಮಂಗಳೂರು: ಪೂರ್ಣ ಬಹುಮತವಿಲ್ಲದ ಬಿಜೆಪಿಗೆ ಸರಕಾರ ನಡೆಸಲು ರಾಜ್ಯಪಾಲರು ಅವಕಾಶ ನೀಡಿರುವುದು ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಗುರುವಾರ ಸಂಜೆ ಮಂಗಳೂರು ಪುರಭವನ ಮುಂಭಾಗದ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಜೆ.ಆರ್‌.ಲೋಬೋ ಮಾತನಾಡಿ, ದೇಶದಲ್ಲಿ ಪ್ರಜಾ ಪ್ರಭುತ್ವ ವಿರೋಧಿ ನಿಲುವು ಹಾಗೂ ನಡವಳಿಕೆಗಳು ನಡೆಯುತ್ತಲೇ ಇವೆ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತವಿಲ್ಲದ ಬಿಜೆಪಿ ಪಕ್ಷಕ್ಕೆ ರಾಜ್ಯಪಾಲರು ಸರಕಾರ ರಚನೆಗೆ ಅವಕಾಶ […]