Blog Archive

ಆನಂದ್ ಸಿಂಗ್ ಮರಳಿ ಬಿಜೆಪಿ ತೆಕ್ಕೆಗೆ , ಕುತೂಹಲ ಮೂಡಿಸಿದೆ ನಡೆ..!

Thursday, May 17th, 2018
anand-singh

ಬೆಂಗಳೂರು: ರಾಜ್ಯ ಸರ್ಕಾರ ರಚನೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನ ಕಸರತ್ತು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ನಡುವೆಯೇ ಪಕ್ಷಗಳಿಗೆ ಆಪರೇಷನ್ ಭೀತಿ ಎದುರಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತನ್ನ ಶಾಸಕರನ್ನು ಆಪರೇಷನ್ ಗೆ ಒಳಗಾಗದಂತೆ ರೆಸಾರ್ಟ್ ಮತ್ತು ಹೋಟೆಲ್ ಗಳಲ್ಲಿ ಕೂಡಿಹಾಕಿವೆ. ಇದರ ನಡುವೆ ಫಲಿತಾಂಶ ಪ್ರಕಟಗೊಂಡಂದಿನಿಂದ ನಾಪತ್ತೆಯಾಗಿರುವ ಶಾಸಕ ಆನಂದ್ ಸಿಂಗ್ ಬಗ್ಗೆ ವ್ಯಾಪಕ ಕುತೂಹಲ ಮೂಡಿದೆ. ಆನಂದ್ ಸಿಂಗ್ ಮರಳಿ ಬಿಜೆಪಿ ತೆಕ್ಕೆಗೆ ಮರಳಿದ್ದಾರೆ ಎನ್ನುವ ಮಾತುಗಳು ರಾಜಕೀಯವ ವಲಯದಲ್ಲಿ ದಟ್ಟವಾಗಿ ಕೇಳಿಬರುತ್ತಿವೆ. ಚುನಾವಣಾ […]

ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿದ ರಾಹುಲ್ ಗಾಂಧಿ

Thursday, May 17th, 2018
rahul-gandhi

ಹರ್ಯಾಣ : ಹರ್ಯಾಣದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ. “ಭಾರತದಲ್ಲಿ ಭಯ ಮತ್ತು ಅಭದ್ರತೆಯ ವಾತಾವರಣ ತಲೆದೂರಿದೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸಹ ಸರ್ಕಾರಕ್ಕೆ ಹೆದರುವಂಥ ಪರಿಸ್ಥಿತಿ ಇದೆ. ಇಂಥ ಪರಿಸ್ಥಿತಿ ಪಾಕಿಸ್ಥಾನದಂತ ಸರ್ವಾಧಿಕಾರಿ ದೇಶಗಳಲ್ಲಿ ಮಾತ್ರ ಇರುತ್ತಿತ್ತು” ಎಂದು ಅವರು ಹೇಳಿಕೆ ನೀಡಿದ್ದರು. ಹರ್ಯಾಣದಲ್ಲಿ ಇಂದು ನಡೆದ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಅವರು ಕರ್ನಾಟಕದ ರಾಜಕೀಯದ ಕುರಿತು ಬೇಸರ ವ್ಯಕ್ತಪಡಿಸಿದರು. ಬಹುಮತವಿಲ್ಲದಿದ್ದರೂ ಸರ್ಕಾರ ರಚಿಸಿದ, ಮುಖ್ಯಮಂತ್ರಿಯಾಗಿ ಬಿ ಎಸ್ […]

ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅವಕಾಶ ಕೊಡುವುದು ಬಹುತೇಕ ಖಚಿತ..!

Wednesday, May 16th, 2018
governor

ಬೆಂಗಳೂರು: ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನಕ್ಕೆ ಇಂದು ರಾಜ್ಯಪಾಲರು ಒಪ್ಪಿಗೆ ಸೂಚಿಸಿದರೆ ನಾಳೆ ರಾಜಭವನದಲ್ಲಿ ಯಡಿಯೂರಪ್ಪ ಒಬ್ಬರೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಬಹುಮತ ಸಾಬೀತಿನ ನಂತರ ಸಂಪುಟ ರಚನೆ ಮಾಡಲಿದ್ದಾರೆ ಎನ್ನಲಾಗಿದೆ. ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅವಕಾಶ ಕೊಡುವುದು ಬಹುತೇಕ ಖಚಿತವಾಗಿದ್ದು, ಇಂದು ಸಂಜೆ 6 ಗಂಟೆ ಬಳಿಕ ರಾಜ್ಯಪಾಲ ವಜುಭಾಯ್ ವಾಲಾ ತಮ್ಮ ನಿರ್ಧಾರ ಪ್ರಕಟ ಮಾಡಲಿದ್ದಾರೆ. ರಾಜ್ಯಪಾಲರು ಅನುಮತಿ ಕೊಟ್ಟರೆ ಮಾತ್ರ ನಾಳೆ ಯಡಿಯೂರಪ್ಪ ಒಬ್ಬರಿಂದ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ರಾಜಭವನದಲ್ಲಿ ನಾಳೆ ಮಧ್ಯಾಹ್ನ […]

ಕರಾವಳಿಯಲ್ಲಿ ಬಿಜೆಪಿ ಗೆಲುವು ಮೃತ ಹಿಂದೂ ಕಾರ್ಯಕರ್ತರಿಗೆ ಸಮರ್ಪಣೆ’

Wednesday, May 16th, 2018
nalin-kumar

ಮಂಗಳೂರು: ಕರಾವಳಿಯಲ್ಲಿಕಾಂಗ್ರೆಸ್ ಧೂಳಿಪಟವಾಗಿದೆ. ಬಿಜೆಪಿಯ ದಿಗ್ವಿಜಯವನ್ನು ದುಷ್ಕರ್ಮಿಗಳ ದಾಳಿಗೆ ಬಲಿಯಾದ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ್ , ದೀಪಕ್ ರಾವ್ ಮಡಿಲಿಗೆ ಅರ್ಪಣೆ ಮಾಡುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಕರಾವಳಿಯಲ್ಲಿ ಜನಾಶೀರ್ವಾದ ಬಿಜೆಪಿಗೆ ದೊರೆತಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ರಲ್ಲಿ ಬಿಜೆಪಿ ಆಭ್ಯರ್ಥಿಗಳು ಜಯಗಳಿಸಿದ್ದಾರೆ. ದುರಾಡಳಿತ, ಭ್ರಷ್ಟಾಚಾರ, ಕೋಮುಭಾವನೆ ಕೆರಳಿಸುವ ಗೂಂಡಾಗಿರಿ ರಾಜಕಾರಣದಿಂದ ಜನರು ಬೇಸತ್ತಿದ್ದರು. ಈ ಹಿನ್ನೆಲೆಯಲ್ಲಿ ಕರಾವಳಿಯ ಜನರು ಕಾಂಗ್ರೆಸ್ […]

ಸರಕಾರ ರಚನೆಗೆ ಬಿಜೆಪಿಗೆ ಆಹ್ವಾನ ನೀಡಿದ ರಾಜ್ಯಪಾಲರು!

Wednesday, May 16th, 2018
parivarthan

ಬೆಂಗಳೂರು: ಮತದಾರ ಮಹಾಪ್ರಭು ನೀಡಿದ ಜನಾದೇಶ ನಮ್ಮ ಬಳಿ ಇದೆ. ನಾವೇ ಸರ್ಕಾರ ರಚಿಸಲು ಅರ್ಹರು ಎಂದು ಹೇಳುತ್ತಿರುವ ಬಿಜೆಪಿ ನಾಯಕರು ರಾಜಭವನಕ್ಕೆ ತೆರಳಿ, ವಜುಭಾಯಿ ವಾಲರನ್ನು ಭೇಟಿ ಮಾಡಿದ್ದಾರೆ. 104 ಶಾಸಕರ ಬೆಂಬಲವಿರುವ ಎರಡು ಪತ್ರಗಳನ್ನು ರಾಜ್ಯಪಾಲರಿಗೆ ಸಲ್ಲಿಕೆ ಮಾಡಿರುವ ಯಡಿಯೂರಪ್ಪ ಅವರು ಸರ್ಕಾರ ರಚನೆಗೆ ಮೊದಲು ಅವಕಾಶ ನೀಡಬೇಕು. ಗುರುವಾರ(ಮೇ 17) ದಂದು ಪ್ರಮಾಣ ವಚನ ಸ್ವೀಕರಿಸಿ, ಒಂದು ವಾರದೊಳಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಕೋರಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲ ಮುಂದಿರುವ ನಾಲ್ಕು ಆಯ್ಕೆಗಳು […]

ಬಿಜೆಪಿಯಿಂದ ಸರಕಾರ ರಚನೆಗೆ ಹಕ್ಕು ಮಂಡನೆ

Wednesday, May 16th, 2018
yedeyurappa-2

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇಂದು ಬೆಳಗ್ಗೆ ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪ ನೇತೃತ್ವದ ಪಕ್ಷದ ನಿಯೋಗವು ರಾಜ್ಯಪಾಲ ವಜುಬಾಯಿ ರುಡಬಾಯಿ ವಾಲ ಅವರನ್ನು ಭೇಟಿಯಾಗಿ 104 ಶಾಸಕರ ಸಹಿ ಇರುವ ಪತ್ರವನ್ನು ಸಲ್ಲಿಸಿದೆ. ಆ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಸರಕಾರ ರಚಿಸಲು ಅವಕಾಶ ಕಲ್ಪಿಸುವಂತೆ ಕೋರಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪ […]

ಬಿಜೆಪಿ ವಿಜಯೋತ್ಸವ ವೇಳೆ ಕಲ್ಲು ತೂರಾಟ, ತಲವಾರು ದಾಳಿ: ನಾಲ್ವರಿಗೆ ಗಾಯ

Wednesday, May 16th, 2018
accident

ಮಂಗಳೂರು: ಬಿಜೆಪಿ ವಿಜಯೋತ್ಸವ ವೇಳೆ ಕಲ್ಲು ತೂರಾಟ, ತಲವಾರು ದಾಳಿ ನಡೆಸಲಾಗಿದ್ದು, ನಾಲ್ವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಹೊರವಲಯದ ಅಡ್ಯಾರ್ ಪದವಿನಲ್ಲಿ ಘಟನೆ ನಡೆದಿದೆ. ವಿಜಯೋತ್ಸವ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಸುಮಾರು 50ಕ್ಕೂ ಹೆಚ್ಚಿನ ಯುವಕರು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Tuesday, May 15th, 2018
resigns

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಜನಾದೇಶ ಪಡೆಯುವ ಕಾಲ ಇದೀಗ ಬಂದಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮೇ 12ರಂದು ಮತದಾನವಾಗಿದೆ. ಚುನಾವಣಾ ಪೂರ್ವ ಸಮೀಕ್ಷೆ, ಅಭಿಪ್ರಾಯಗಳ ಸಂಗ್ರಹ ಕುತೂಹಲಕಾರಿ ಫಲಿತಾಂಶವನ್ನು ನೀಡಿದೆ. ಆದರೆ, ಅಂತಿಮ ಜನಾದೇಶ ಇಂದು(ಮೇ 15) ಮಧ್ಯಾಹ್ನ ಹೊರಬೀಳಲಿದೆ.  ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಲ್ಲದೆ ಸರಿ ಸುಮಾರು 28ಕ್ಕೂ ಅಧಿಕ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. 2,622 ಅಭ್ಯರ್ಥಿಗಳಿದ್ದು, ಪುರುಷ ಅಭ್ಯರ್ಥಿಗಳು 2,405, ಮಹಿಳೆಯರು […]

ಕೊರಟಗೆರೆಯಲ್ಲಿ ವಿಜಯ ಪತಾಕೆ ಹಾರಿಸಿದ ಡಾ.ಜಿ.ಪರಮೇಶ್ವರ..!

Tuesday, May 15th, 2018
perameshwar

ಬೆಂಗಳೂರು: ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ಬರದಂತೆ ತಡೆಯಬೇಕು, ಬಿಎಸ್ ಯಡಿಯೂರಪ್ಪ ಅವರು ಮತ್ತೊಮ್ಮೆ ಸಿಎಂ ಆಗಬಾರದು, ಜಾತಿವಾದಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಈಗ ತನ್ನ ಅಧಿಕಾರ ಉಳಿಸಿಕೊಳ್ಳಲು ಕಸರತ್ತು ಆರಂಭಿಸಿದೆ. ಗೋವಾದಲ್ಲಿ ಆದ ಆಘಾತವನ್ನು ಕರ್ನಾಟಕದಲ್ಲಿ ಆಗದಂತೆ ನೋಡಿಕೊಳ್ಳಲು ಹಿರಿಯ ಕಾಂಗ್ರೆಸ್ಸಿಗ ಗುಲಾಂ ನಬಿ ಅಜಾದ್ ಮುಂದಾಗಿದ್ದಾರೆ. ಇದಕ್ಕಾಗಿ ಜಾತ್ಯಾತೀತ ಜನತಾ ದಳ ಜತೆ ಮೈತ್ರಿ ಸಾಧಿಸಲು ಕಾಂಗ್ರೆಸ್ ಮುಂದಾಗಿದೆ. ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಎಲ್ಲಾ ಬೇಡಿಕೆಗೆ […]

ಪುತ್ತೂರು ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಗೆಲುವು

Tuesday, May 15th, 2018
sanjeev-matondar

ಪುತ್ತೂರು: ಕಾಂಗ್ರೆಸ್ ಕೈಯಲ್ಲಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರವನ್ನು ಕಸಿದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಸಕಿ ಶಕುಂತಳಾ ಶೆಟ್ಟಿಯವರು ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ವಿರುದ್ಧ ಪರಾಭವಗೊಂಡಿದ್ದಾರೆ.