Blog Archive

ಗೋಡ್ಸೆ ಅನುಯಾಯಿ ಆದಿತ್ಯನಾಥ್ ರಿಂದ ನಮಗೆ ಪಾಠ ಬೇಡ: ಸಿದ್ದರಾಮಯ್ಯ

Monday, January 8th, 2018
congress-war

ಉಡುಪಿ: ಕಲ್ಲಡ್ಕ ಪ್ರಭಾಕರ ಭಟ್ ಶಾಲೆಗೆ ಮಾತ್ರ ಏಕೆ ಊಟ, ಬೇರೆ ಶಾಲೆಗಳಿಗೂ ಕೊಡಬಹುದಲ್ಲಾ? ಹೀಗೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಾಫ್ಟ್ ಹಿಂದುತ್ವ ಅಂದರೆ ಏನು? ಈ ಸಾಫ್ಟ್, ಹಾರ್ಡ್ ಏನೂ ಇಲ್ಲ. ನಾನು ದೇವಸ್ಥಾನಗಳಿಗೆ ಹೋಗುತ್ತೇನೆ. ಹಾಗಂತ ಎಲ್ಲಾ ದೇವಸ್ಥಾನಕ್ಕೆ ಹೋಗಲ್ಲ. ಕೃಷ್ಣಮಠಕ್ಕೆ ಹೋಗದೇ ಇರೋದು ದೊಡ್ಡ ವಿಷಯ ಅಲ್ಲ ಎಂದು ತಮ್ಮ ವಿರುದ್ಧ ಆರೋಪಗಳಿಗೆ ಉತ್ತರಿಸಿದರು. ಕರಾವಳಿಯಲ್ಲಿ ಉಲ್ಬಣವಾಗಿರುವ ಕೋಮು ಸಂಘರ್ಷಕ್ಕೆ ಕೋಮುವಾದಿ […]

ಬಶೀರ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಲು ಸಂಸದ ನಳಿನ್ ಒತ್ತಾಯ

Monday, January 8th, 2018
basheer

ಉಡುಪಿ: ಮಂಗಳೂರು ಕೊಟ್ಟಾರಚೌಕಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಅಬ್ದುಲ್ ಬಶೀರ್ ಕುಟುಂಬಕ್ಕೆ ರಾಜ್ಯ ಸರಕಾರ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ಹತ್ಯೆಗಳು ನಿರಂತರ ನಡೆಯುತ್ತಿದ್ದು, ಈ ರೀತಿಯ ಮತಾಂಧರ ಹತ್ಯೆ ಖಂಡನೀಯ. ಯಾವುದೇ ಧ್ವೇಷ ಇದ್ದರೂ ಕಾನೂನು ಕೈಗೆತ್ತಿಕೊಂಡು ಒಬ್ಬ ವ್ಯಕ್ತಿಯನ್ನು ಹತ್ಯೆಗೈಯ್ಯುವ ಹಕ್ಕು ಯಾರಿಗೂ ಇಲ್ಲ ಎಂದರು. ಸಿದ್ದರಾಮಯ್ಯ ಸರಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. […]

ದಕ್ಷಿಣ ಕನ್ನಡ ಕೋಮುವಾದದ ಪ್ರಯೋಗಾಲಯ ಆಗಬಾರದು: ಸಿದ್ದರಾಮಯ್ಯ

Monday, January 8th, 2018
Ramanath-rai

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 76 ಕೋಟಿ ರೂಪಾಯಿ ವೆಚ್ಚದ ಅಭಿವೃದಿ ಕಾಮಗಾರಿಗಳನ್ನು ಉದ್ಘಾಟಿಸಿದರು . ಈ ನಡುವೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಂಗಳೂರಿನಲ್ಲಿ ಮೃತಪಟ್ಟ ದೀಪಕ್ ರಾವ್ ಹಾಗು ಅಬ್ದುಲ್ ಬಷೀರ್ ಅವರ ಸಾವಿಗೆ ಸಂತಾಪ ಸೂಚಿಸಲಾಯಿತು. ನಂತರ ಕಾರ್ಯಕ್ರಮವನ್ನು ಉದೇಶಿಸಿ ಮಾತನಾಡಿದ ಅವರು, “ನಾವು ವಿಶ್ವ ಮಾನವರಾಗಬೇಕು. ಮೊದಲು ನಾವು […]

ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್, ಬಷೀರ್ ಮನೆಗೆ ಸಿಎಂ ಭೇಟಿ

Monday, January 8th, 2018
deepak-rao

ಮಂಗಳೂರು: ದುಷ್ಕರ್ಮಿಗಳಿಂದ ಕೊಲೆಯಾದ ದೀಪಕ್ ರಾವ್ ಮತ್ತು ಅಬ್ದುಲ್ ಬಷೀರ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸಂಜೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ದಕ್ಷಿಣ ಕನ್ನಡ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ಮೊದಲಿಗೆ ಸುರತ್ಕಲ್ ಕಾಟಿಪಳ್ಳದಲ್ಲಿರುವ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಮನೆಗೆ ಸಂಜೆ ವೇಳೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದರು. ಸಿ‌.ಎಂ ಅವರೊಂದಿಗೆ ಸಚಿವ ರಮನಾಥ್ ರೈ, ಯು.ಟಿ ಖಾದರ್, ಮಂಗಳೂರು ಮೇಯರ್ ಕವಿತಾ ಸನಿಲ್ ಕೂಡ ದೀಪಕ್ ಮನೆಗೆ ಭೇಟಿ ನೀಡಿದರು. ಸಂಕಷ್ಟಕ್ಕೆ ಸ್ಪಂದಿಸಿದ […]

ಬಿಜೆಪಿಯವರು ಊಸರವಳ್ಳಿ ಇದ್ದ ಹಾಗೆ: ಸಿದ್ದರಾಮಯ್ಯ ವ್ಯಂಗ್ಯ

Monday, January 8th, 2018
mangaluru

ಮಂಗಳೂರು: “ಬಿಜೆಪಿಯವರು ಊಸರವಳ್ಳಿ ಇದ್ದ ಹಾಗೆ; ಆಗಾಗ ಬಣ್ಣ ಬದಲಾಯಿಸುವವರು,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು. “ಕೆಲವರಿಗೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಬರುತ್ತದೆ ಎಂದು ಭಯವಿದೆ. ನಾನು ಸರಕಾರ ಹಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳುತ್ತಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಗುಜಾರಾತ್ ಹಾಗೂ ವಿದೇಶಕ್ಕೆ ತಮ್ಮ ಸ್ವಂತ ದುಡ್ಡಿನಲ್ಲಿ ಹೋಗುತ್ತಾರಾ?,” ಎಂದು ಪ್ರಶ್ನಿಸಿದರು . ದಕ್ಷಿಣ […]

ನಾಳೆ ಮೂರು ಕಡೆ ಸಿಎಂ ಸಮಾವೇಶ: ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ

Saturday, January 6th, 2018
mangaluru

ಮಂಗಳೂರು: ಅಹಿತಕರ ಘಟನೆಗಳ ನಡುವೆ ರವಿವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಜಿಲ್ಲಾ ಬಂದ್‌ಗೆ ಕರೆ ನೀಡುವ ತವಕದಲ್ಲಿರುವ ಹಿಂದೂ ಸಂಘಟನೆಗಳು, ಕರಿಪತಾಕೆ ಹಿಡಿಯುತ್ತೇವೆ ಎಂದು ಸವಾಲೆಸೆದ ಜೆಡಿಎಸ್‌, ಇಷ್ಟಲ್ಲದೆ ಭದ್ರತೆ, ಕಾರ್ಯಕ್ರಮ ಜೋಡಣೆಯ ತಯಾರಿ ಪೊಲೀಸ್‌ ಇಲಾಖೆಯ ನಿದ್ದೆಗೆಡಿಸಿದೆ. ಜಿಲ್ಲೆಯ ಮೂರು ಕಡೆ ಬೃಹತ್‌ ಸಮಾವೇಶ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಅವಧಿಯ ಕೊನೆಯ ಭೇಟಿ ಇದಾಗಿದೆ. ಮುಂದಿನ ಕೆಲ ತಿಂಗಳಲ್ಲಿ ಚುನಾವಣೆ ಎದುರಿಸಲಿರುವ ಕಾರಣ, ಕಾಂಗ್ರೆಸ್‌ಗೆ ಇದು ಶಕ್ತಿ ಪ್ರದರ್ಶನದ ವೇದಿಕೆ. […]

ಬಶೀರ್‌ ಕೊಂಚ ಚೇತರಿಕೆ; ನಾಲ್ವರು ವಶಕ್ಕೆ

Saturday, January 6th, 2018
hospital

ಮಂಗಳೂರು: ಕೊಟ್ಟಾರ ಚೌಕಿಯಲ್ಲಿ ಬುಧವಾರ ರಾತ್ರಿ ಮಾರಕಾಯುಧಗಳಿಂದ ಹಲ್ಲೆಗೊಳಗಾಗಿ ತೀವ್ರ ಗಾಯಗೊಂಡಿದ್ದ ಆಕಾಶ ಭವನದ ಬಶೀರ್‌ (48) ಅವರ ಆರೋಗ್ಯ ಸ್ಥಿತಿ ತುಸು ಚೇತರಿಕೆ ಕಂಡಿದ್ದು, ಈ ಘಟನೆ ಕುರಿತಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಎಲ್ಲ ನಾಲ್ವರು ಆರೋಪಿಗಳು ಕ್ರಿಮಿನಲ್‌ ಹಿನ್ನೆಲೆ ಯವರಾಗಿದ್ದು, ಕಳೆದ ಜುಲೈ ತಿಂಗಳಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಡ್ಯಾರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ನಡೆದ ಹಲ್ಲೆ ಕೃತ್ಯದಲ್ಲಿ ಭಾಗಿಯಾದವರು ಎನ್ನಲಾಗಿದೆ. ವಶಕ್ಕೆ ಪಡೆದವರಲ್ಲಿ ಇಬ್ಬರು ಪಡೀಲ್‌ನವರು, […]

ನಾಳೆಯಿಂದ ಎರಡು ದಿನ ಕರಾವಳಿಯಲ್ಲಿ ಸಿಎಂ

Saturday, January 6th, 2018
siddaramiah

ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಜ.7ರಿಂದ 2 ದಿನ ದ. ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು, 200ಕ್ಕೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಈ ಭಾಗದಲ್ಲಿ ಮುಖ್ಯಮಂತ್ರಿಗಳ ಮಹತ್ವದ ಪ್ರವಾಸ ಇದು. ದಕ್ಷಿಣ ಕನ್ನಡ ಕಾರ್ಯಕ್ರಮ: ಪುತ್ತೂರು, ಬಂಟ್ವಾಳ ಹಾಗೂ ಮೂಡ ಬಿದಿರೆ ವಿ.ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 200 ಕೋ. ರೂ. ವೆಚ್ಚದ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ ಮಾಡಲಿದ್ದಾರೆ. ಪುತ್ತೂರು ವಿ. ಸಭಾ […]

ಬಳ್ಳಾರಿಯಲ್ಲಿ ಚುನಾವಣೆಗೆ ಸ್ಪರ್ಧಿಸಬೇಡಿ: ರಾಹುಲ್ ಗಾಂಧಿಗೆ ಬಿಎಸ್‌ವೈ ಎಚ್ಚರಿಕೆ

Saturday, January 6th, 2018
rahul-gandhi

ಬಳ್ಳಾರಿ: ಲೋಕಸಭಾ ಚುನಾವಣೆಗೆ ಬಳ್ಳಾರಿಯಿಂದ ಚುನಾವಣೆಗೆ ನಿಲ್ಲುವ ಪ್ರಯತ್ನದಲ್ಲಿರುವ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದು, ಚುನಾವಣೆಗೆ ನಿಂತರೆ ಸೋಲು ಖಚಿತ ಎಂದಿದ್ದಾರೆ. ಬಳ್ಳಾರಿಯಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ರಾಹುಲ್ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರಂತೆ ಬಳ್ಳಾರಿಯಲ್ಲಿ ಲೋಕಸಭೆ ಚುನಾವಣೆಗೆ ನಿಂತು ಗೆಲ್ಲುವ ಪ್ರಯತ್ನದಲ್ಲಿದ್ದಾರೆ ಆದರೆ ಅವರು ಇಲ್ಲಿ ಚುನಾವಣೆಗೆ ನಿಂತರೆ ಒಂದು ಲಕ್ಷ ಮತಗಳ ಅಂತರದಿಂದ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಸಿದ್ದರಾಮಯ್ಯ […]

ಪೂಜಾರಿ ಆತ್ಮಚರಿತ್ರೆ ಬಿಡುಗಡೆಗೆ ಸಿದ್ಧ, ರಾಜ್ಯ ರಾಜಕಾರಣದಲ್ಲಿ ತಳಮಳ

Friday, January 5th, 2018
janardhan-poojary

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ಒಂದೆಡೆ ಬಿಜೆಪಿ ಪರಿರ್ವತನಾ ಯಾತ್ರೆ ಆರಂಭಿಸಿದ್ದರೆ, ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾಧನಾ ಸಮಾವೇಶ ನಡೆಯುತ್ತಿದೆ. ಇವೆಲ್ಲದರ ಮಧ್ಯೆ ಕಾಂಗ್ರೆಸ್ ಪಾಳಯದಲ್ಲಿ ಈಗ ಭಾರೀ ತಳಮಳ ಆರಂಭವಾಗಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ. ನೇರ, ನಿಷ್ಠುರ ಮಾತುಗಳ ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಗುರುತಿಸಿ ಕೊಂಡಿರುವ ಬಿ. ಜನಾರ್ಧನ ಪೂಜಾರಿ ಅವರ ಆತ್ಮಚರಿತ್ರೆ ಬಿಡುಗಡೆಗೆ ಸಿದ್ದವಾಗಿದೆ. ಈ ಹಿನ್ನೆಲೆಯಲ್ಲಿ […]