ನಗರದಲ್ಲಿ ಜುಲೈ 7 ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
Monday, July 3rd, 2017ಮಂಗಳೂರು : ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಜುಲೈ 7 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಬಲವರ್ಧನೆ ಮಾಡಬೇಕು ಎಂಬ ಉದ್ದೇಶದಿಂದ ಜು.7ರಂದು ಅಪರಾಹ್ನ 3 ಗಂಟೆಗೆ ಅಡ್ಯಾರ್ ನಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವರು ಎಂದವರು ಹೇಳಿದ್ದಾರೆ. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, […]