Blog Archive

ಚೀನಾದಲ್ಲಿ ಇನ್ನು ದಂಪತಿಗಳು ಮೂರು ಮಕ್ಕಳನ್ನು ಹೊಂದಬಹುದು

Monday, May 31st, 2021
china-child

ಬೀಜಿಂಗ್ : ವಿವಾಹಿತ ದಂಪತಿಗಳು ಮೂರು ಮಕ್ಕಳನ್ನು ಹೊಂದ ಬಹುದು ಎಂದು ಚೀನಾ ಸೋಮವಾರ ಪ್ರಕಟಿಸಿದೆ. ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೊಲಿಟ್‌ಬ್ಯುರೊ ಸಭೆಯಲ್ಲಿ ಈ ಬದಲಾವಣೆಯನ್ನು ಅನುಮೋದಿಸಲಾಗಿದೆ ಎಂದು ಅಧಿಕೃತ ಸುದ್ದಿ ಸಂಸ್ಥೆ ಕ್ಸಿನ್ಹುವಾ ವರದಿ ಮಾಡಿದೆ. ಇತ್ತೀಚಿನ ಮಾಹಿತಿಯು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳಲ್ಲಿ ಚೀನಾದ ಜನನ ಪ್ರಮಾಣ ಕುಸಿದಿದೆ ಎಂಬ ನಾಟಕೀಯ ವರದಿಯನ್ನು ತೋರಿಸಿದ ನಂತರ ಈಗ ಅಸ್ತಿತ್ವದಲ್ಲಿರುವ ಎರಡು ಮಕ್ಕಳ ಮಿತಿಯ ಪ್ರಮುಖ ನೀತಿ ಬದಲಾವಣೆಯಾಗಿದೆ. ದೇಶದ […]

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಅಲೆವೂರು

Tuesday, February 16th, 2021
Rajesh Shetty

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಅಲೆವೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2021-23ನೆ ಸಾಲಿನ ಚುನಾವಣಾ ಪ್ರಕ್ರಿಯೆ ಉಡುಪಿ ಅಜ್ಜರಕಾಡಿನ ಐಎಂಎ ಭವನದಲ್ಲಿ ಫೆ.16ರಂದು ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ, ಉಪಾಧ್ಯಕ್ಷರುಗಳಾಗಿ ಆರ್.ಬಿ.ಜಗದೀಶ್, ವಿನಯ್ ಪಾಯಸ್, ಬಾಲಕೃಷ್ಣ ಪೂಜಾರಿ, ಕೋಶಾಧಿ ಕಾರಿಯಾಗಿ ಉಮೇಶ್ ಮಾರ್ಪಳ್ಳಿ, ಸಹ ಕಾರ್ಯದರ್ಶಿಯಾಗಿ ರಾಜೇಶ್ ಗಾಣಿಗ, ಕ್ರೀಡಾ ಕಾರ್ಯ ದರ್ಶಿಯಾಗಿ ಸುರೇಶ್ ಎರ್ಮಾಳ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಮೋದ್ ಸುವರ್ಣ, ಹರಿಪ್ರಸಾದ್ ನಂದಳಿಕೆ, ಗಣೇಶ್ ಸಾಬರಕಟ್ಟೆ, […]

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆ

Thursday, February 4th, 2021
Lukman

ಮಂಗಳೂರು : ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಕೊನೆಗೂ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯಾದ್ಯಂತ ಜನವರಿ 10,11,12 ನೇ ದಿನಾಂಕದಂದು ಯುವ ಕಾಂಗ್ರೆಸ್ ಬ್ಲಾಕ್, ಜಿಲ್ಲೆ ಮತ್ತು ರಾಜ್ಯ ಮಟ್ಟಕ್ಕೆ ಚುನಾವಣೆ ನಡೆಸಲಾಗಿತ್ತು. ಚುನಾವಣೆಯು ಪಾರದರ್ಶಕವಾಗಿ ನಡೆಯಬೇಕೆಂಬ ನಿಟ್ಟಿನಲ್ಲಿ ಮೊಬೈಲ್ ಅಪ್ಲಿಕೇಶನ್ ಮೂಲಕ ಚುನಾವಣೆ ನಡೆಸಲಾಗಿತ್ತು. ಅಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ 5573 ಮತಗಳನ್ನು ಗಳಿಸಿದ್ದರೆ, ನಿಕಟಸ್ಫರ್ಧಿ ಗಿರೀಶ್ ಆಳ್ವಾ 4169 ಮತಗಳನ್ನು ಪಡೆದು […]

ಅಲೆಮಾರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರಾಗಿ ಕೆ. ರವೀಂದ್ರಶೆಟ್ಟಿ ನೇಮಕ

Tuesday, December 1st, 2020
K Raveendra Shetty

ಮಂಗಳೂರು :  ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರಶೆಟ್ಟಿ ಉಳಿದೊಟ್ಟು ಅವರನ್ನು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಅಧ್ಯಕ್ಷರನ್ನಾಗಿ ಸರಕಾರದ ಅಧೀನ ಕಾರ್ಯದರ್ಶಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರು ನೇಮಕ ಮಾಡಿ ಆದೇಶ ಮಾಡಿರುತ್ತಾರೆ. ಮುಖ್ಯಮಂತ್ರಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ರವೀಂದ್ರಶೆಟ್ಟಿ ಪ್ರಸ್ತುತ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸದಸ್ಯರಾಗಿ, ಮಂಡಲ ಪ್ರಮುಖರಾಗಿದ್ದು ಸೇರಿದಂತೆ ಹಲವಾರು ಧಾರ್ಮಿಕ ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕಾಪು ತಾಲ್ಲೂಕು ಪಂಚಾಯತಿಯ ಮೊದಲ ಅಧ್ಯಕ್ಷರಾಗಿ ಬಿಜೆಪಿಯ ಶಶಿಪ್ರಭಾ ಶೆಟ್ಟಿ

Wednesday, November 4th, 2020
Shashiprabha

ಕಾಪು :  ಕಾಪು ತಾಲ್ಲೂಕು ಪಂಚಾಯತಿಯ ಮೊದಲ ಅಧ್ಯಕ್ಷರಾಗಿ ಬಿಜೆಪಿಯಿಂದ ಕಣಕ್ಕಿಳಿದ ಶಶಿಪ್ರಭಾ ಶೆಟ್ಟಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಾಂಗ್ರೆಸ್ಸಿನ ಯು ಸಿ ಶೇಖಬ್ಬ ಉಚ್ಚಿಲ ಅವರು ಚುನಾವಣಾ ಪ್ರಕ್ರಿಯೆಯ ಆಧಾರದ ಮೇಲೆ ಆಯ್ಕೆಯಾಗಿದ್ದಾರೆ. ಆಗಸ್ಟ್ 10 ರಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ರಾಜ್ಯ ಹೈಕೋರ್ಟ್ ಹೊರಡಿಸಿದ ತಡೆಯಾಜ್ಞೆಯನ್ನು ಗಮನದಲ್ಲಿಟ್ಟುಕೊಂಡು ಫಲಿತಾಂಶದ ಘೋಷಣೆಯನ್ನು ತಡೆಹಿಡಿಯಲಾಗಿದೆ. ಹೈಕೋರ್ಟ್, ಅಕ್ಟೋಬರ್ 20 ರ ಆದೇಶದ ಪ್ರಕಾರ, ತಡೆಯಾಜ್ಞೆಯನ್ನು ಖಾಲಿ ಮಾಡಿತ್ತು. ನ್ಯಾಯಾಲಯದ ಪರಿಷ್ಕೃತ ಆದೇಶದ ಆಧಾರದ […]

ನಾಥ ಪಂಥದ ಗುರು ಹಾಗೂ ಹಿಂದೂ ಧರ್ಮದ ನಿಂದನೆ ಯುವ ಕಾಂಗ್ರೆಸ್​ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು

Saturday, October 10th, 2020
Mithun-Rai

ಪುತ್ತೂರು : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ, ಮಿಥುನ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ  ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಿಥುನ್ ರೈ ಅವಹೇಳನಕಾರಿಯಾಗಿ ಮಾತನಾಡಿರುವುದು ಹಿಂದೂ ಧರ್ಮದ ಅನುಯಾಯಿಗಳ ಭಾವನೆಗೆ ಧಕ್ಕೆಯಾಗಿದೆ. ಯೋಗಿ ಆದಿತ್ಯನಾಥ್ ಹಿಂದೂ ಧರ್ಮದ ಹಾಗೂ ನಾಥ ಪಂಥದ […]

ರಾಜ್ಯ ಸಾಹಿತ್ಯ ಪರಿಷತ್ ನ ಅಧ್ಯಕ್ಷರನ್ನು ಪದತ್ಯುತಗೊಳಿಸಿಸಲು ಒತ್ತಾಯ

Saturday, September 12th, 2020
Veereshwara Bhat

ಮಂಗಳೂರು : ಕರ್ನಾಟಕ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಮನು  ಬಳಿಗಾರ್ ರವರ ಅಧಿಕಾರ ಅವಧಿಯು ಈಗಾಗಲೇ ಮುಗಿದಿದ್ದು ತಕ್ಷಣಕ್ಕೆ ಪದತ್ಯುತಗೊಳಿಸಿ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಗಡಿನಾಡು ಕಾಸರಗೋಡಿನ ಕನ್ನಡ ಹೋರಾಟಗಾರ ಜಿ ವೀರೇಶ್ವರ ಭಟ್ ಕರ್ಮರ್ಕರ್ ಒತ್ತಾಯಿಸಿದ್ದಾರೆ. ಶನಿವಾರ ನಗರದ  ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಸರಗೋಡಿನ ಕನ್ನಡಿಗರಿಗೆ ಎಲ್ಲಾ ರೀತಿಯ ಸವಲತ್ತುಗಳನ್ನು ನೀಡಬೇಕು, ಕಾಸರಗೋಡಿನಲ್ಲಿ ಕನ್ನಡ ಪರ ಚಟುವಟಿಕೆಗಳನ್ನು ಬೆಂಬಲಿಸಬೇಕು, ಕನ್ನಡಿಗರ ಮೇಲೆ ದೌರ್ಜನ್ಯ ವನ್ನು‌ ನಿಲ್ಲಿಸಬೇಕು, ಕಾಸರಗೋಡಿನ ಕನ್ನಡಿಗರಿಗೆ ಕರ್ನಾಟಕದಲ್ಲಿ ಕಡ್ಡಾಯವಾಗಿ […]

ಸೆಂಟ್ರಲ್‌ ಮಾರ್ಕೆಟ್‌ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ.ಎಂ.ಕೆ ನಿಧನ

Wednesday, August 26th, 2020
mmk

ಮಂಗಳೂರು : ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದ ನಗರದ ಸೆಂಟ್ರಲ್‌ ಮಾರ್ಕೆಟ್‌ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೊಹಮದ್‌ ಮುಸ್ತಫಾ (59) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹಣ್ಣು ಹಂಪಲು ವ್ಯಾಪಾರಿಯಾಗಿದ್ದ ಅವರು ವ್ಯಾಪಾರಸ್ಥರ ವಲಯದಲ್ಲಿ ” ಎಂ.ಎಂ.ಕೆ” ಎಂದು ಜನಪ್ರಿಯರಾಗಿದ್ದರು. ಜಿಲ್ಲಾಡಳಿತ ಸೆಂಟ್ರಲ್‌ ಮಾರುಕಟ್ಟೆಯ ತರಕಾರಿ ಹಾಗೂ ಹಣ್ಣುಹಂಪಲು  ಸಗಟು ವ್ಯಾಪಾರವನ್ನು ನಗರದ ಹೊರ ವಲಯದ ಬೈಕಂಪಾಡಿಯ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಲು ನಿರ್ಧರಿಸಿದ್ದಾಗ ವ್ಯಾಪಾರಸ್ಥರ ಸಂಘದ […]

ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ನಿಧನ

Sunday, August 16th, 2020
Thumbe Moideen

ಮಂಗಳೂರು :  ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ (89) ಅವರು ರವಿವಾರ ಪೂರ್ವಾಹ್ನ 11.30ಕ್ಕೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅಹ್ಮದ್ ಹಾಜಿ ಅವರ ಪಾರ್ಥಿವ ಶರೀರವನ್ನು ಅಪರಾಹ್ನ 3 ಗಂಟೆಗೆ ತುಂಬೆಯಲ್ಲಿರುವ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗುವುದು. 4 ಗಂಟೆಯ ಬಳಿಕ ತುಂಬೆ ಮಸೀದಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ. ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ […]

ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾಗಿ ಮೊದಲ ಬಾರಿಗೆ ಮಂಗಳೂರಿಗೆ ಬಂದ ಡಿ.ಕೆ ಶಿವಕುಮಾರ್

Friday, July 31st, 2020
dk shivakumar

ಮಂಗಳೂರು : ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರು ಜು.31ರ ಶುಕ್ರವಾರ ಜಿಲ್ಲೆಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೆಪಿಸಿಸಿ ಅಧ್ಯಕ್ಷರನ್ನು, ಮಾಜಿ ಸಚಿವ ಯು.ಟಿ ಖಾದರ್, ಮಾಜಿ ಶಾಸಕ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಹರೀಶ್, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮತ್ತಿತರು ಬರಮಾಡಿಕೊಂಡರು . ಆ ಬಳಿಕ ಮಾಜಿ ಸಚಿವ […]