Blog Archive

ಬೆಳ್ತಂಗಡಿ ತಾಲೂಕಿನಲ್ಲಿ ಗಬ್ಬದ ಹಸುವಿನ ಮೇಲೆ ಚಿರತೆ ದಾಳಿ

Sunday, October 18th, 2020
leapored

ಬೆಳ್ತಂಗಡಿ : ಚಿರತೆಯೊಂದು ಬೆಳ್ತಂಗಡಿ ತಾಲೂಕಿನ ಕರಿಮಣೇಲು ಗ್ರಾಮದಲ್ಲಿ ಗಬ್ಬದ ಹಸುವಿನ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ. ಮೂರು ದಿನಗಳ ಹಿಂದೆ  ಹೋರಿಯನ್ನು ಹಟ್ಟಿಯಿಂದ ಹೊತ್ತೊಯ್ದು ತಿಂದು ಹಾಕಿತ್ತು. ಇದೀಗ ಶನಿವಾರ ರಾತ್ರಿ ಮತ್ತೆ ಖಂಡಿಗ ನಿವಾಸಿ ಜಯರಾಮ್ ಶೆಟ್ಟಿಯರ ತೋಟದಲ್ಲಿ ಗಬ್ಬದ ಹಸುವಿಗೆ ಆಕ್ರಮಣ ಮಾಡಿ ಗಾಯಗೊಳಿಸಿದೆ. ಸ್ಥಳಕ್ಕೆ ಭೇಟಿ ನೀಡಿರುವ ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳು ಬೋನ್ ಅಳವಡಿಸಿ ಶೀಘ್ರ ಚಿರತೆಯನ್ನು ಪತ್ತೆ ಮಾಡುವ ಭರವಸೆಯನ್ನು ಗ್ರಾಮಸ್ಥರಿಗೆ ನೀಡಿದ್ದಾರೆ. ಆದರೆ ಇಲ್ಲಿನ ಜನತೆ ಮಾತ್ರ […]

ಜಿಲ್ಲಾಧಿಕಾರಿ ನಿವಾಸದ ಸಮೀಪವೇ 2.5 ಕೋಟಿ ಬೆಲೆಯ ಅಕ್ರಮ ಶ್ರೀಗಂಧದ ಕೊರಡು ದಾಸ್ತಾನು

Tuesday, October 6th, 2020
Sandalwood

ಕಾಸರಗೋಡು : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪ ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸುತ್ತಿದ್ದ ಸುಮಾರು ಒಂದು ಕ್ವಿ೦ಟಾಲ್ ಶ್ರೀಗಂಧದ ಕೊರಡುಗಳನ್ನು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ನೇತೃತ್ವದ ತಂಡ ವಶಪಡಿಸಿಕೊಂಡ ಘಟನೆ ಕಾಸರಗೋಡು ನಗರ ಹೊರವಲಯದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪ ವಶಪಡಿಸಿಕೊಂಡ ಶ್ರೀಗಂಧದ ಮೌಲ್ಯ ಸುಮಾರು 2.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಮಂಗಳವಾರ ಮುಂಜಾನೆ 4.30ರ ಸುಮಾರಿಗೆ ಜಿಲ್ಲಾಧಿಕಾರಿ, ಅವರ ಕಾರು […]

ಮಂಗಳೂರು ಹೆದ್ದಾರಿ 75ರಲ್ಲಿ ಪ್ರತಿದಿನ ಸಂಚರಿಸುವ ನಾಲ್ಕು ಆನೆಗಳ ಹಿಂಡು

Sunday, August 30th, 2020
wild-elephant

ಉಪ್ಪಿನಂಗಡಿ:  ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆನೆಗಳು ಹಿಂಡು ಹಿಂಡಾಗಿ ಸಾಗುವ ಮೂಲಕ ವಾಹನ ಸವಾರರಲ್ಲಿ ಭೀತಿ ಮೂಡಿಸುತ್ತಿವೆ. ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಕೆಲವು ದಿನಗಳಿಂದೀಚೆಗೆ ಪ್ರತಿದಿನ ನಸುಕಿನಲ್ಲಿ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಯಿಂದ ಕೌಕ್ರಾಡಿಯತ್ತ ಸಾಗುವ ನಾಲ್ಕು ಆನೆಗಳ ಹಿಂಡು ಸಂಜೆಯ ವೇಳೆಗೆ ಅದೇ ದಾರಿಯಿಂದ ಮರಳುತ್ತಿವೆ. ಇತ್ತ ಭೂತಲಡ್ಕ, ಹೊನ್ನೆಜಾಲು ಮೊದಲಾದ ಗ್ರಾಮಗಳ ಇಬ್ರಾಹಿಂ, ನಾರಾಯಣ ಗೌಡ, ಸೇಸಪ್ಪ, ಥಾಮಸ್‌, ಹರಿಯಪ್ಪ, ಪ್ರಸನ್ನ, ನೌಶಾದ್‌ ಅಮೀದ್‌, ನೀಲಮ್ಮ ಮುಂತಾದವರ ಭತ್ತದ ಪೈರು, ಬಾಳೆ, ತೆಂಗು ಇತ್ಯಾದಿ ಕೃಷಿಯನ್ನು […]

ಸಾರ್ವಜನಿಕರಿಗೆ ವಿತರಿಸಲು 1.27 ಲಕ್ಷ ಸಸಿಗಳನ್ನು ಸಿದ್ಧಪಡಿಸಿದ ಅರಣ್ಯ ಇಲಾಖೆ

Wednesday, June 3rd, 2020
plants

ಮಂಗಳೂರು: ಪಡೀಲ್‌ನಲ್ಲಿರುವ ಮಂಗಳೂರು ಅರಣ್ಯ ವಿಭಾಗದ “ಸಸ್ಯ ಕ್ಷೇತ್ರ’ದಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳಿಗೆ ವಿತರಿಸಲು 1.27 ಲಕ್ಷ ಸಸಿಗಳನ್ನು ಸಿದ್ಧಪಡಿಸಿಡಲಾಗಿದೆ. ಜೂ.1ರಿಂದ ವಿತರಣೆ ಆರಂಭವಾಗಿದೆ ಎಂದು ಮಂಗಳೂರು ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್‌ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತ ನಾಡಿದ ಅವರು, 2020-21ನೇ ಸಾಲಿನಲ್ಲಿ ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಸಸಿ ವಿತರಿಸಲು 40,000 ಸಾಗುವಾನಿ, ನೆಲ್ಲಿ, ನುಗ್ಗೆ, ಪೇರಳೆ, ಬೀಟೆ, ಬಿಲ್ವಪತ್ರೆ, ಸೀತಾಫಲ, ಶಿವಣೆ, ಶ್ರೀಗಂಧ, ಹೂವಾಸಿ, ಹೆಬ್ಬೇವು, ಕರಿಬೇವು, ಸಂಪಿಗೆ, ಸುರಹೊನ್ನೆ, ನೇರಳೆ, ಪನ್ನೇರಳೆ ಸಹಿತ […]

ಕೂಳೂರು ನದಿಯಲ್ಲಿ ಈಜಾಡುತ್ತಿದ್ದ ಮತ್ತೊಂದು ಕಾಡುಕೋಣ

Thursday, May 7th, 2020
Kadu Kona

ಮಂಗಳೂರು: ನಗರದಲ್ಲಿ ಮತ್ತೊಂದು ಕಾಡುಕೋಣ ಇದೆ ಎಂಬ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಮಂಗಳವಾರವೇ ಹರಿದಾಡಿತ್ತು. ಬಂಗ್ರ ಕೂಳೂರು ನದಿ ತೀರದಲ್ಲಿ ಕಾಡುಕೋಣ ಇದೆ ಎಂಬ ಮಾಹಿತಿಯನ್ನು ಸಾರ್ವಜನಿಕರು ಅರಣ್ಯ ಇಲಾಖೆಗೆ ನೀಡಿದ್ದು, ಪರಿಸರದಲ್ಲಿ ಬುಧವಾರ ಬೆಳಗ್ಗಿನಿಂದಲೇ ಕಾರ್ಯಾಚರಣೆ ನಡೆಸಲಾಗಿತ್ತು. ಮಧ್ಯಾಹ್ನದ ವೇಳೆ ಕೂಳೂರು ಸೇತುವೆ ಬಳಿ ಕಾಣಿಸಿ ಕೊಂಡಿತಾದರೂ ಬಳಿಕ ಅಲ್ಲಿಂದ ಬೇರೆ ಕಡೆ ತೆರಳಿತ್ತು. ಮತ್ತೆ ಅದೇ ಸ್ಥಳದಲ್ಲಿ ಕಾಣಿಸಿಕೊಂಡಿದ್ದು, ಕಾಡಿಗಟ್ಟುವ ಕಾರ್ಯಾಚರಣೆ ರಾತ್ರಿ ವರೆಗೂ ಮುಂದುವರಿದಿತ್ತು. ಬುಧವಾರ ಕಾಣಿಸಿಕೊಂಡ ಕಾಡುಕೋಣವು ಬೆಳಗ್ಗಿನಿಂದಲೇ ಅರಣ್ಯ ಇಲಾಖೆಯ ಸಿಬಂದಿಯನ್ನು ಸತಾಯಿಸುತ್ತಿತ್ತು. […]

ಮೈಸೂರು : ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

Wednesday, March 4th, 2020
chirate

ಮೈಸೂರು : ಆಗಾಗ ಊರಿಗೆ ನುಗ್ಗಿ ನಾಯಿಗಳನ್ನು ಹೊತ್ತೊಯ್ದು ಜನರಿಗೆ ಭೀತಿ ಹುಟ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ತಿ.ನರಸೀಪುರ ತಾಲೂಕಿನ ತುಂಬಲ ಗ್ರಾಮದ ಸಮೀಪದ ಬಟ್ಟಳಿಗೆ ಹುಂಡಿ ಗ್ರಾಮದಲ್ಲಿ ಮಹದೇವ್ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ 2 ವರ್ಷದ ಗಂಡು ಚಿರತೆ ಸೆರೆಯಾಗಿದೆ. ನಿನ್ನೆಯಷ್ಟೆ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಇಂದು ಸುಮಾರು 2 ವರ್ಷದ ಚಿರತೆ ಸೆರೆಯಾಗಿದೆ. ಹಲವು ದಿನಗಳಿಂದ ಬಟ್ಟಳಿಗೆ ಹುಂಡಿ ಗ್ರಾಮದ ಜನರಿಗೆ […]

ಸಚಿವ ಆನಂದ್ ಸಿಂಗ್‍ಗೆ ಅರಣ್ಯ ಇಲಾಖೆ ಖಾತೆ ನೀಡಿದ್ದು ಕಳ್ಳನ ಕೈಗೆ ಕೀಲಿ ಕೈ ಕೊಟ್ಟಂತೆ : ಮಾಜಿ ಸಚಿವ ಹೆಚ್.ಎಂ ರೇವಣ್ಣ

Friday, February 14th, 2020
revanna

ರಾಯಚೂರು : ಸಚಿವ ಆನಂದ್ ಸಿಂಗ್‍ಗೆ ಅರಣ್ಯ ಇಲಾಖೆ ಖಾತೆ ನೀಡಿದ್ದು ಕಳ್ಳನ ಕೈಗೆ ಕೀಲಿ ಕೈ ಕೊಟ್ಟಂತೆ ಆಗಿದೆ ಅಂತ ಮಾಜಿ ಸಚಿವ ಹೆಚ್.ಎಂ ರೇವಣ್ಣ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಗಣಿ ವ್ಯವಾಹಾರದಲ್ಲಿ ಸ್ವಲ್ಪ ಅರಣ್ಯ ಅಸ್ತವ್ಯಸ್ತವಾಗುವುದು ಸರಿ ಅಂತ ಹೇಳೋ ಸಚಿವನಿಂದ ಏನನ್ನು ನಿರೀಕ್ಷೆ ಮಾಡಬಹುದು ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ವಿಳಂಬ ಮಾಡಿದ್ದು ನೋಡಿದರೆ ಇಂಥ ಪರಿಸ್ಥಿತಿ ಯಾರಿಗೂ ಬರೋದು ಬೇಡ. ವಿಶ್ವನಾಥ್ ಸ್ಥಿತಿಯಂತೂ ಕೇಳೋದೇ […]

ಗಾಯಾಳುವನ್ನು ನಿರ್ಲಕ್ಷಿಸಿದ ಅರಣ್ಯ ಇಲಾಖೆ : ಪ್ರಜಾ ಪರಿವರ್ತನಾ ವೇದಿಕೆ ಆರೋಪ

Friday, January 10th, 2020
HR-Ravi

ಮಡಿಕೇರಿ : ವಿರಾಜಪೇಟೆಯ ಕೋತೂರು ಗ್ರಾಮದ ಲಕ್ಕಂದ ಪೈಸಾರಿಯಲ್ಲಿ ಕಾಡಾನೆ ದಾಳಿಗೆ ಒಳಗಾಗಿ ಚಿಂತಾಜನಕ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೆಚ್.ಆರ್.ರವಿ ಅವರನ್ನು ಅರಣ್ಯ ಇಲಾಖೆ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಪ್ರಜಾ ಪರಿವರ್ತನಾ ವೇದಿಕೆಯ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಎಸ್.ಮುತ್ತಪ್ಪ, ಗಾಯಾಳುವಿನ ಚಿಕಿತ್ಸಾ ವೆಚ್ಚ ಮತ್ತು ಪರಿಹಾರವಾಗಿ 5 ಲಕ್ಷ ರೂ. ನೀಡಬೇಕೆಂದು ಒತ್ತಾಯಿಸಿದ್ದಾರೆ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರವಿ ಅವರನ್ನು ಭೇಟಿಯಾದ ಮುತ್ತಪ್ಪ ಹಾಗೂ ವೇದಿಕೆಯ ಪದಾಧಿಕಾರಿಗಳು ಧೈರ್ಯ ತುಂಬಿದರಲ್ಲದೆ ಅರಣ್ಯ […]

ಕಾಡಂಚಿನ ಕಾಫಿತೋಟದಿಂದ ನಿಗೂಢವಾಗಿ ಕಣ್ಮರೆಯಾಗಿದ್ದ 2 ವರ್ಷದ ಕಂದಮ್ಮ ಪತ್ತೆಯಾಗಿದ್ದು ಎಲ್ಲಿ ಗೊತ್ತಾ ?

Tuesday, January 7th, 2020
madikeri

ಮಡಿಕೇರಿ : ಕೊಡಗಿನ್ನಲ್ಲಿ ಈಗಾಗಲೇ ಕಾಫಿ ಕೊಯಿಲು ಶುರುವಾಗಿದ್ದು ಕೂಲಿಕಾರ್ಮಿಕರ ಅಲಭ್ಯತೆಯಿಂದಾಗಿ ಹೊರಜಿಲ್ಲೆಗಳಿಂದ, ಹೊರರಾಜ್ಯಗಳಿಂದ ಕಾರ್ಮಿಕರನ್ನು ಕರೆತಂದು ಕೊಡಗಿನ ಕಾಫಿತೋಟಗಳಲ್ಲಿ ಕಾಫಿ ಕುಯ್ಯಿಸಿಕೊಳ್ಳಲಾಗುತ್ತಿದೆ. ಹಾಗೆಯೇ ವೀರಾಜಪೇಟೆ ತಾಲ್ಲೂಕಿನ ಕೇರಳ ಗಡಿ ಭಾಗ ವೆಸ್ಟ್ ನೆಮ್ಮೆಲೆ ಗ್ರಾಮದ ಪೆಮ್ಮಂಡ ರಾಜ್ ಕುಶಾಲಪ್ಪರವರವರ ತೋಟಕ್ಕೆ, ಜನವರಿ 5ರಂದು ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಿಂದ 11 ಜನ ಕೂಲಿಕಾರ್ಮಿಕರು ತೋಟದ ಕೆಲಸಕ್ಕೆ ಬಂದಿಳಿದುಕೊಂಡಿದ್ದರು. ಎಂದಿನಂತೆ ಭಾನುವಾರ ಕಾಫಿ ಕೊಯ್ಯಲು ಆರಂಭಮಾಡಿದಾಗ, ಕಾರ್ಮಿಕ ನಾಗರಾಜು ಮತ್ತು ಸೀತಾ ದಂಪತಿಯ ಒಂದು ವರ್ಷ 9 ತಿಂಗಳು […]

ಕಾರ್ಮಾಡು ಗ್ರಾಮದಲ್ಲಿ ಮುಂದುವರಿದ ಹುಲಿ ಭೀತಿ

Monday, December 16th, 2019
tiger

ಮಡಿಕೇರಿ : ವಿರಾಜಪೇಟೆ ತಾಲ್ಲೂಕಿನ ಕಾರ್ಮಾಡು ಗ್ರಾಮದಲ್ಲಿ ಹುಲಿ ಭೀತಿ ಮುಂದುವರೆದಿದೆ. ಕಳೆದ ಒಂದು ವಾರದಿಂದ ಎರಡು ಹಸುಗಳನ್ನು ಬಲಿ ಪಡೆದ ಹುಲಿ ಗ್ರಾಮ ವ್ಯಾಪ್ತಿಯಲ್ಲಿ ಮತ್ತೆ ಸಂಚರಿಸಿರುವ ಹೆಜ್ಜೆ ಗುರುತು ಪತ್ತೆಯಾಗಿದೆ. ಕೊಟ್ಟಂಗಡ ಮಧು ಮಂಜುನಾಥ್ ರವರ ತೋಟ ಮತ್ತು ಗದ್ದೆಯಲ್ಲಿ ಹೆಜ್ಜೆ ಗುರುತು ಕಂಡು ಬಂದಿದೆ. ಹುಲಿ ಭೀತಿಯಿಂದಾಗಿ ಗ್ರಾಮಸ್ಥರು ತೋಟ ಮತ್ತು ಗದ್ದೆಗೆ ಹೋಗಲು, ಮಕ್ಕಳನ್ನು ಶಾಲಾ ಕಾಲೇಜಿಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಹುಲಿಯನ್ನು ಸೆರೆ ಹಿಡಿದು ಕಾಡಿಗೆ […]