Blog Archive

‘ಸತ್ಯವನ್ನು ಉತ್ಪಾದಿಸುತ್ತಿರುವ ಮಾಧ್ಯಮಗಳು ಸ್ವವಿಮರ್ಶೆ ಮಾಡಿಕೊಳ್ಳಬೇಕು’

Saturday, December 2nd, 2017
Dr-Nithyanand-Shetty

ಮೂಡುಬಿದಿರೆ: ಆಳ್ವಾಸ್ ನುಡಿಸಿರಿ 2017 ರ ಎರಡನೇ ದಿನದ ವಿಶೇಷ ವಿಚಾರ ಗೋಷ್ಠಿಯು ಶನಿವಾರ ಕಾಲೇಜಿನ ರತ್ನಾಕರ ವರ್ಣಿ ವೇದಿಕೆಯಲ್ಲಿ ಜರುಗಿತು. “ಮಾಧ್ಯಮ-ಸ್ವವಿಮರ್ಶೆಯ ನೆಲೆ” ವಿಚಾರದಡಿ ಮಾಧ್ಯಮದ ಮೂರು ಪ್ರಧಾನ ಆಯಾಮಗಳಾದ ಸಾಮಾಜಿಕ ಜಾಲತಾಣ, ಪತ್ರಿಕಾ ರಂಗ ಹಾಗು ದೃಶ್ಯ ಮಾಧ್ಯಮಗಳ ಕುರಿತು ಚರ್ಚೆ ನಡೆಯಿತು. ದೃಶ್ಯ ಮಾಧ್ಯಮಗಳ ಬಗ್ಗೆ ತುಮಕೂರು ವಿವಿಯ ಪ್ರಾಧ್ಯಾಪಕ ಡಾ. ನಿತ್ಯಾನಂದ ಶೆಟ್ಟಿ ಪ್ರಚಲಿತ ಉದಾಹರಣೆಗಳನ್ನು ನೀಡಿ “ಮಾಧ್ಯಮಗಳಿಗೆ ಸ್ವವಿಮರ್ಶೆಯ” ಅವಶ್ಯಕತೆಯ ಕುರಿತು ಮಾತನಾಡಿದರು. “ದೃಶ್ಯ ಮಾಧ್ಯಮ ಉಳಿದ ಮಾಧ್ಯಮಗಳಿಗಿಂತ ದೊಡ್ಡ ವ್ಯಾಪ್ತಿ […]

ಹಲವು ಸಂಸ್ಸೃತಿಗಳೊಂದಿಗಿನ ಸಹಬಾಳ್ವೆಯೇ ಬಹುತ್ವ; ಡಾ ಸಿ ಎನ್ ರಾಮಚಂದ್ರನ್

Friday, December 1st, 2017
Nudisiri17

ಮೂಡುಬಿದಿರೆ : ಆಳ್ವಾಸ್ ನುಡಿಸಿರಿ ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವನ್ನು ಕನ್ನಡದ ಖ್ಯಾತ ವಿಮರ್ಶಕ, ವಿದ್ವಾಂಸ ಸಿ.ಎನ್. ರಾಮಚಂದ್ರನ್ ರತ್ನಾಕರವರ್ಣಿ ವೇದಿಕೆಯಲ್ಲಿ ಉದ್ಘಾಟಿಸಿದರು. ‘ಕರ್ನಾಟಕ:ಬಹುತ್ವದ ನೆಲೆಗಳು’ಪರಿಕಲ್ಪನೆಯಲ್ಲಿ ನಡೆಯುತ್ತಿರುವ ಸಮ್ಮೇಳನವನ್ನು ಉದ್ಘಾಟಿಸಿದ ಸಿ.ಎನ್. ರಾಮಚಂದ್ರನ್, “ಪ್ಲೂರಲಿಜ಼ಮ್ ಅಥವಾ ಬಹುತ್ವ” ದ ಕಲ್ಪನೆಯು ಇಂದಿಗೆ ಪ್ರಸ್ತುತವಾದುದು; ಇದು ಅಸ್ಮಿತತೆಯ ರಾಜಕಾರಣ/ ಐಡೆಂಟಿಟಿ ಪಾಲಿಟಿಕ್ಸ್ ಆಗಿ ಬದಲಾಗುತ್ತಿದೆ. ಹಲವು ಸಂಸ್ಕೃತಿಗಳ ಸಹಬಾಳ್ವೆ ಹಾಗು ಬೆಳವಣಿಗೆಯಿಂದ ಬಹುತ್ವ ಸಾಧಿಸಬೇಕಾಗಿದೆ. ಭಾರತದಂತಹ ರಾಷ್ಟ್ರದಲ್ಲಿ ಪ್ರತಿಯೊಂದರಲ್ಲೂ ಬಹುತ್ವವನ್ನು ಕಾಣಬಹುದು. ಬಹುತ್ವದ ಜೊತೆಗೆ ಬರುವ […]

ರಾಷ್ಟ್ರೀಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಾಗತಿಹಳ್ಳಿ ಚಂದ್ರಶೇಖರ್

Tuesday, October 24th, 2017
Alvas nudisiri

ಮಂಗಳೂರು:  ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.1ರಿಂದ 3ರವರೆಗೆ ನಡೆಯಲಿರುವ 14ನೇ ವರ್ಷದ ಆಳ್ವಾಸ್ ನುಡಿಸಿರಿಯ ಉದ್ಘಾಟಕರಾಗಿ ಸಾಹಿತಿ ಡಾ.ಸಿ.ಎನ್.ರಾಮಚಂದ್ರನ್, ಸರ್ವಾಧ್ಯಕ್ಷರಾಗಿ ಡಾ.ನಾಗತಿಹಳ್ಳಿ ಚಂದ್ರಶೇಖರ್ ಆಯ್ಕೆ ಮಾಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಬಹುತ್ವದ ನೆಲೆಗಳು ಎನ್ನುವ ಪ್ರಧಾನ ಪರಿಕಲ್ಪನೆಯಡಿ ಈ ಬಾರಿಯ ಸಮ್ಮೇಳನ ನಡೆಯಲಿದೆ ಎಂದು ಅವರು ವಿವರಿಸಿದರು. ರಾಜ್ಯ, ಹೊರ ರಾಜ್ಯ ಮತ್ತು ಹೊರ ದೇಶದಲ್ಲಿರುವ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ […]

ಹಾಸನ, ಚನ್ನರಾಯಪಟ್ಟಣ ಆಳ್ವಾಸ್ ನುಡಿಸಿರಿ ಘಟಕದಲ್ಲಿ ಸಾಂಸ್ಕೃತಿಕ ವೈಭವ

Monday, January 30th, 2017
Alvas-NUDISIRI-GATAKA

ಮೂಡುಬಿದಿರೆ: ವಿವಿಧತೆಯಲ್ಲಿ ಏಕತೆಯನ್ನು ಸಾದಿಸಿರುವ ನಮ್ಮ ದೇಶ ಕಲೆ ಸಂಸ್ಕೃತಿಗೆ ವಿಶ್ವದಾತ್ಯಂತ ಪ್ರಸಿದ್ಧಿ. ನಾವು ವಾಸಿಸುವ ಈ ಭೂಮಿ ತಪೋಭೂಮಿ ಇದ್ದಂತೆ. ಇಂತಹ ಭೂಮಿಯಲ್ಲಿ ನೆಲೆಸಿರುವ ನಾವೆಲ್ಲರೂ ಪುಣ್ಯವಂತರು. ಇಂತಹ ಸಾವಿರಾರು ವರ್ಷಗಳ ಇತಿಹಾಸ ಇರುವ ನಮ್ಮ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಆಳ್ವಾಸ ನುಡಿಸಿರಿ ವಿರಾಸತ್ ಚನ್ನರಾಯಪಟ್ಟಣ ಘಟಕದ ಅಧ್ಯಕ್ಷ ಶಾಸಕ ಸಿ ಎನ್ ಬಾಲಕೃಷ್ಣ ನುಡಿದರು. ಆಳ್ವಾಸ ನುಡಿಸಿರಿ ವಿರಾಸತ್ ಘಟಕ ಚನ್ನರಾಯಪಟ್ಟಣದಲ್ಲಿ ಶನಿವಾರ ಸರ್ಕಾರಿ ಮಾಧ್ಯಮಿಕ ಶಾಲಾ […]

ಆಳ್ವಾಸ್ ನುಡಿಸಿರಿಯಲ್ಲಿ ‘ಸೋದರ ಭಾಷೆಗಳು-ನಾಳೆಗಳ ನಿರ್ಮಾಣ’

Saturday, November 19th, 2016
neighbouring languages

ಮೂಡುಬಿದಿರೆ: ಜಾಗತಿಕ ಭಾಷೆಗಳು ನಮ್ಮನ್ನು ಆಳುತ್ತಿರುವ, ಆಕ್ರಮಿಸುತ್ತಿರುವ ಹೊತ್ತಿನಲ್ಲಿ ನಮ್ಮ ಸೋದರ ಭಾಷೆಗಳಲ್ಲಿ ಏನಾಗುತ್ತಿದೆಯೆಂಬುದನ್ನು ಅರಿತುಕೊಳ್ಳುವುದು ತುಂಬಾ ಮುಖ್ಯ. ಈ ಹಿನ್ನೆಲೆಯಲ್ಲಿ ಆಳ್ವಾಸ್ ನುಡಿಸಿರಿಯಲ್ಲಿ ‘ಸೋದರ ಭಾಷೆಗಳು-ನಾಳೆಗಳ ನಿರ್ಮಾಣ’ ಎಂಬ ವಿಶೇಷ ವಿಚಾರ ಗೋಷ್ಠಿಯನ್ನು ನಡೆಸಲಾಯಿತು. ಈ ವಿಚಾರಗೋಷ್ಠಿಯಲ್ಲಿ ಕನ್ನಡ, ತಮಿಳು, ಮಲೆಯಾಳಂ ಭಾಷೆಗಳಲ್ಲಿ ನಡೆಯುತ್ತಿರುವ ಪ್ರಗತಿಪರ ಬದಲಾವಣೆಗಳ ಕುರಿತು ವಿದ್ವಾಂಸರು ತಮ್ಮ ವಿಚಾರವನ್ನು ಮಂಡಿಸಿದರು. ತಮಿಳು ಭಾಷೆ-ನಾಳೆಗಳ ನಿರ್ಮಾಣ ತಮಿಳು ಭಾಷೆಯಲ್ಲಾಗಿರುವ, ಆಗುತ್ತಿರುವ ತ್ವರಿತ ಬದಲಾವಣೆಗಳ ಕುರಿತು ಮಾತನಾಡಿದ ಡಾ.ತಮಿಳ್ ಸೆಲ್ವಿ, ಕರ್ನಾಟಕದಲ್ಲಿ ನಾಳೆಗಳನ್ನು ನಿರ್ಮಾಣ […]

ಕನ್ನಡದ ಇತರೆ ಹಬ್ಬಗಳಿಗಿಂತ ಆಳ್ವಾಸ್ ನುಡಿಸಿರಿ ವಿಭಿನ್ನವಾಗಿ ನಿಲ್ಲುತ್ತದೆ: ಬಿ.ಜಯಶ್ರೀ

Friday, November 18th, 2016
Alwas Vidyasiri

ಮೂಡುಬಿದಿರೆ: ಆಳ್ವಾಸ್ ನುಡಿಸಿರಿ- ಕನ್ನಡ ನಾಡು, ನುಡಿ, ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನದ ಅಂಗವಾಗಿ ಆಳ್ವಾಸ್ ‘ವಿದ್ಯಾರ್ಥಿ ಸಿರಿ’-ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಹಾಗೂ ‘ಆಳ್ವಾಸ್ ಸಿನಿಸಿರಿ’-ಮಿನಿ ಚಲನಚಿತ್ರೋತ್ಸವವನ್ನು ಇಲ್ಲಿನ ರತ್ನಾಕರವರ್ಣಿ ವೇದಿಕೆಯಲ್ಲಿ ಉದ್ಘಾಟಿಸಲಾಯಿತು. ಆಳ್ವಾಸ್ ವಿದ್ಯಾರ್ಥಿಸಿರಿಯನ್ನು ಉದ್ಘಾಟಿಸಿದ ಕನ್ನಡ ರಂಗಭೂಮಿಯ ಖ್ಯಾತ ಕಲಾವಿದೆ ಬಿ.ಜಯಶ್ರೀ, ‘ಆಳ್ವಾಸ್ ನುಡಿಸಿರಿಯ ಮೂಲಕ ಕನ್ನಡ ಸಂಸ್ಕೃತಿ ಲೋಕಕ್ಕೆ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಎಂ. ಮೋಹನ್ ಆಳ್ವರ ಕಾರ್ಯ ನಿಜಕ್ಕೂ ಶ್ಲಾಘನೀಯವಾದುದು. ತನ್ನ ವೈಶಿಷ್ಟ್ಯತೆಯಿಂದಾಗಿ ಕನ್ನಡದ ಇತರೆ ಹಬ್ಬಗಳಿಗಿಂತ ಆಳ್ವಾಸ್ ನುಡಿಸಿರಿ ವಿಭಿನ್ನವಾಗಿ […]

ಕೃಷಿಯನ್ನು ಕಡೆಗಣಿಸಿದರೆ ಈ ನಾಡು ಅಭಿವೃದ್ಧಿಯಾಗದು: ಮೋಹನ್ ಆಳ್ವ

Friday, November 18th, 2016
alvas-krishisiri

ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ಕೇವಲ ಸಾಹಿತ್ಯ ಸಮ್ಮೇಳನವಷ್ಟೇ ಅಲ್ಲ. ನಾಡಿಗೇ ಅನ್ನದಾತನಾದ ಕೃಷಿಕನಿಗೆ ಪ್ರಾಮುಖ್ಯತೆ ನೀಡುವ ಒಂದು ಉತ್ಸವವೂ ಹೌದು. ಈ ಹಿನ್ನೆಲೆಯಲ್ಲಿ ನುಡಿಸಿರಿ ಭಾಗವಾಗಿ ಆಳ್ವಾಸ್ ಕೃಷಿಸಿರಿಯನ್ನು ಇಂದು ಉದ್ಘಾಟಿಸಲಾಯಿತು. ವಿದ್ಯಾಗಿರಿಯಲ್ಲಿ ನೂತನವಾಗಿ ನಿರ್ಮಿತವಾದ ಶಿರ್ತಾಡಿ ಧರ್ಮಸಾಮ್ರಾಜ್ಯ ಕೃಷಿ ಆವರಣದಲ್ಲಿ ಮಿಜಾರುಗುತ್ತು ಆನಂದ ಆಳ್ವ ಅವರು ಕೃಷಿಸಿರಿಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ‘ಕೃಷಿಯನ್ನು ಕಡೆಗಣಿಸಿದರೆ ಈ ನಾಡು ಅಭಿವೃದ್ಧಿಯಾಗದು. ಕರ್ನಾಟಕದಲ್ಲಿ ಕೃಷಿ ಕ್ಷೇತ್ರದಲ್ಲಿ […]

ನಾಡು-ನುಡಿ ಸಂಸ್ಕೃತಿಯ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ದಿನಗಣನೆ ಆರಂಭ

Tuesday, November 15th, 2016
alwas nudisiri

ಮಂಗಳೂರು: ಆಳ್ವಾಸ್ ಶಿಕ್ಷಣ ಸಂಸ್ಥೆ ಹಮ್ಮಿಕೊಳ್ಳುವ ನಾಡು-ನುಡಿಯ ಸಂಸ್ಕೃತಿಯ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ದಿನಗಣನೆ ಆರಂಭವಾಗಿದೆ. ಮೂಡಬಿದ್ರೆಯ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ಇದೇ ತಿಂಗಳ 18, 19 ಮತ್ತು 20ರಂದು ನಡೆಯುವ ಸಮ್ಮೇಳನ ಕರ್ನಾಟಕ: ನಾಳೆಗಳ ನಿರ್ಮಾಣ ಎಂಬ ಪರಿಕಲ್ಪನೆಯಡಿಯಲ್ಲಿ ಆಯೋಜನೆಗೊಂಡಿದೆ. ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ. ಬಿ.ಎನ್. ಸುಮಿತ್ರಾ ಬಾಯಿ ವಹಿಸಲಿದ್ದಾರೆ. ಉದ್ಘಾಟನೆಯನ್ನು ಕವಿ, ಸಾಹಿತಿ ಡಾ. ಜಯಂತ್ ಕಾಯ್ಕಿಣಿ ನೆರವೇರಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮ್ಮೇಳನದ ರೂವಾರಿ ಡಾ. ಎಂ. ಮೋಹನ್ ಆಳ್ವ, ಮೂರು […]

ನ.18ರಿಂದ 20ರವರೆಗೆ ಆಳ್ವಾಸ್ ನುಡಿಸಿರಿ

Thursday, September 1st, 2016
Alwas-nudisiri

ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವು ಈ ಬಾರಿ ನ.18, 19 ಮತ್ತು 20ರಂದು ಮೂರು ದಿನಗಳ ಕಾಲ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿರುವ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆಯಲಿದೆ. “ಕರ್ನಾಟಕ-ನಾಳೆಗಳ ನಿರ್ಮಾಣ” ಎಂಬ ಪರಿಕಲ್ಪನೆಯೊಂದಿಗೆ ನಡೆಯುವ 13ನೇ ವರ್ಷದ ಈ ನುಡಿಸಿರಿಯಲ್ಲಿ ಅತ್ಯುತ್ತಮ ವಿಚಾರಗೋಷ್ಠಿಗಳು, ಕವಿ ಸಮಯ-ಕವಿ ನಮನ ಸೇರಿದಂತೆ ಈ ಬಾರಿ “ನನ್ನ ಕಥೆ-ನಿಮ್ಮ ಜೊತೆ” ಎಂಬ ಹೊಸ ಶೀರ್ಷಿಕೆಯೊಂದಿಗೆ ಕಲಾವಿದರ ಜೀವನ ಚರಿತ್ರೆ ಪರಿಚಯವಾಗಲಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ […]

ಆಳ್ವಾಸ್ ನುಡಿಸಿರಿ 2015ರ ಸರ್ವಾಧ್ಯಕ್ಷರಾಗಿ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರೀ

Thursday, November 5th, 2015
Venkatachala

ಮೂಡುಬಿದಿರೆ : ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ನಡೆಸಿಕೊಂಡು ಬರುತ್ತಿರುವ ನಾಡು-ನುಡಿ-ಸಂಸ್ಕೃತಿಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಆಳ್ವಾಸ್ ನುಡಿಸಿರಿ. ಈ ಸಮ್ಮೇಳನವನ್ನು ಕಳೆದ 12 ವರ್ಷಗಳಿಂದ ಕನ್ನಡ ಬಾಂಧವರ ಸಹಕಾರದಿಂದ ನಿರಂತರವಾಗಿ ಸಂಘಟಿಸಿಕೊಂಡು ಬರುವ ಮೂಲಕ ನಾಡಿನಾದ್ಯಂತ ನಾಡು-ನುಡಿಯ ಎಚ್ಚರವನ್ನು, ಸಂಸ್ಕೃತಿ ಪ್ರೀತಿ-ಗೌರವಗಳನ್ನು ವೃದ್ಧಿಸಲು ಸಾಧ್ಯವಾಗಿದೆ. ಕನ್ನಡಿಗರ ಹೆಮ್ಮೆಯ ಈ ಕಾರ್ಯಕ್ರಮವು ಈ ವರ್ಷ ನವೆಂಬರ್ 26, 27, 28 ಮತ್ತು 29 (ಗುರುವಾರ, ಶುಕ್ರವಾರ, ಶನಿವಾರ ಮತ್ತು ಆದಿತ್ಯವಾರ) ನೇ ದಿನಾಂಕಗಳಂದು […]