Blog Archive

ಕಡಲ್ಕೊರೆತಕ್ಕೆ ಉಳ್ಳಾಲ ಉಚ್ಚಿಲದಲ್ಲಿ ಕೊಚ್ಚಿ ಹೋದ ಸಂಪರ್ಕ ರಸ್ತೆ : ಯು.ಟಿ. ಖಾದರ್ ಭೇಟಿ

Monday, August 10th, 2020
utk

ಉಳ್ಳಾಲ: ತೀವ್ರ ಕಡಲ್ಕೊರೆತದ ಪರಿಣಾಮ  ಉಚ್ಚಿಲ ಭಾಗದಲ್ಲಿ ಸಂಪರ್ಕ ರಸ್ತೆ ಕೊಚ್ಚಿ ಹೋಗಿದೆ. ಇದಕ್ಕೆ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣವೆಂದು ಮಾಜಿ ಸಚಿವ ಹಾಗೂ ಶಾಸಕ ಯು.ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಳ್ಳಾಲದ ಸೋಮೇಶ್ವರ, ಉಚ್ಚಿಲ, ಬಟ್ಟಂಪಾಡಿ ಹಾಗೂ ಇನ್ನಿತರ ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ಯು.ಟಿ.ಖಾದರ್ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪ್ರತಿ ವರ್ಷ ಕಡಲು ಕೊರೆತದಿಂದ ಸಾರ್ವಜನಿಕರ ಆಸ್ತಿಪಾಸ್ತಿ ಹಾಗೂ ಪ್ರಾಣಿ, ಪಕ್ಷಿಗಳ ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದೆವು. ಎರಡು ತಿಂಗಳಿಂದ ಸಮಸ್ಯೆಗಳ […]

ಕಾರು ಡಿಕ್ಕಿ ಹೊಡೆದು ಲಾರಿಯಡಿಗೆ ಸಿಲುಕಿ ದ್ವಿ ಚಕ್ರವಾಹನ ಸವಾರ ದಾರುಣ ಸಾವು

Saturday, July 11th, 2020
ubaid ullal

ಮಂಗಳೂರು : ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಲಾರಿನಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ಸೇತುವೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಉಳ್ಳಾಲ ಬಂಡಿಕೊಟ್ಯ ನಿವಾಸಿ ಉಬೈದ್(28) ಎಂದು ಗುರುತಿಸಲಾಗಿದೆ. ಉಬೇದ್‌ ಗೆ ಇದೇ ಜುಲೈ 23 ರಂದು ಮದುವೆ ಕೂಡ ನಿಶ್ಚಯವಾಗಿತ್ತು. ಹಿಂಬದಿ ಸವಾರ ಶಾಕಿರ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಬೈದುಲ್ಲಾ ಅವರು ಶಾಕಿರ್ ಎಂಬಾತನ ಜೊತೆಗೂಡಿ ದ್ವಿಚಕ್ರ ವಾಹನದಲ್ಲಿ ಮಂಗಳೂರಿನಿಂದ ಉಳ್ಳಾಲಕ್ಕೆ ತೆರಳುತ್ತಿದ್ದಾಗ […]

ಉಳ್ಳಾಲದಲ್ಲಿ ಒಂದೇ ದಿನ 28 ಮಂದಿಯಲ್ಲಿ ಕೋವಿಡ್ ಸೋಂಕು, ಸ್ವಯಂ ಪ್ರೇರಿತವಾಗಿ ಬಂದ್

Thursday, July 2nd, 2020
Ullala Corona

ಉಳ್ಳಾಲ :  ಉಳ್ಳಾಲ ಪರಿಸರದಲ್ಲಿ ಗುರುವಾರ ಒಂದೇ ದಿನ ಒಟ್ಟು 28 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಉಳ್ಳಾಲದಾದ್ಯಂತ  ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಗುರುವಾರ ಪತ್ತೆಯಾದ ಪ್ರಕರಣಗಳಲ್ಲಿ ಮುಕ್ಕಚ್ಚೇರಿಯ 29ರ ಮಹಿಳೆ, 39 ವರ್ಷದ ಗಂಡಸು, ಆಝಾದನಗರ ಉಳ್ಳಾಲದ 44 ಹಾಗೂ 55ರ ಗಂಡಸು, 36, 50, 30ರ ಮಹಿಳೆಯರು, 13 ಹಾಗೂ 8ರ ಬಾಲಕರು, 12 ವರ್ಷದ ಬಾಲಕಿ, 2 ವರ್ಷದ ಹರೆಯದ ಮಗು, ಉಳ್ಳಾಲ ಪಟೇಲ ಕಂಪೌಂಡಿನ 51ರ ಹರೆಯದ ಗಂಡಸು, ಹರೇಕಳ ಪಂಚಾಯತ್ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 90 ಹೊಸ ಕೋವಿಡ್ 19 ಪ್ರಕರಣ ಪತ್ತೆ

Thursday, July 2nd, 2020
DK-corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 90 ಹೊಸ ಕೋವಿಡ್ 19 ಪ್ರಕರಣಗಳು ದೃಢಪಟ್ಟಿವೆ ಇದರೊಂದಿಗೆ ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 915 ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ 15 ಮಂದಿ ಕುವೈಟ್, ಸೌದಿ, ಮತ್ತು ದುಬಾಯಿಯಿಂದ ಆಗಮಿಸಿದವರಾಗಿದ್ದರೆ, 19 ಮಂದಿ ILI ಪ್ರಕರಣದವರಾಗಿದ್ದಾರೆ, 8 ಮಂದಿ SARI ಪ್ರಕರಣದವರಾಗಿದ್ದಾರೆ, 31 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದವರಾಗಿದ್ದಾರೆ. ದಕ್ಷಿಣ ಕನ್ನಡ ಉಳ್ಳಾಲ ಪರಿಸರದಲ್ಲಿ ಇಂದು ಒಂದೇ ದಿನ 28 ಹೊಸ ಪ್ರಕರಣಗಳು ದೃಢಪಟ್ಟಿತ್ತು.

ಸೋಮವಾರ ದಕ್ಷಿಣ ಕನ್ನಡದಲ್ಲಿ ಕೋವಿಡ್ ಸೋಂಕಿಗೆ ಉಳ್ಳಾಲದ 60 ವರ್ಷದ ವೃದ್ಧೆ ಬಲಿ

Monday, June 29th, 2020
covid-death

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಕೋವಿಡ್ ಸೋಂಕಿಗೆ  ಉಳ್ಳಾಲದ 60 ವರ್ಷದ ವೃದ್ಧೆ ಬಲಿಯಾಗಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕಿತ್ಸೆ ವೃದ್ಧೆ ಸೋಮವಾರ  ಮುಂಜಾನೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಈ ಮೂಲಕ ಕೊರೋನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ. ಉಳ್ಳಾಲ ನಿವಾಸಿಯಾದ ಇವರು ಕೆಲವು ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ದಕ್ಷಿಣ ಕನ್ನಡ […]

ಉಳ್ಳಾಲ ವ್ಯಾಪ್ತಿಯಲ್ಲಿ ಒಂದೇ ಮನೆಯ 17 ಸದಸ್ಯರಿಗೆ ಕೊರೋನಾ ಸೋಂಕು ದೃಢ ಜೊತೆಗೆ 22 ಸೋಂಕು ಪತ್ತೆ

Saturday, June 27th, 2020
Ullala Covid

ಉಳ್ಳಾಲ: , ಉಳ್ಳಾಲದ ಪ್ರಥಮ ಸೋಂಕಿತೆಯ ಮನೆಯಲ್ಲಿದ್ದ ಎಲ್ಲಾ 16 ಮಂದಿ ಸದಸ್ಯರಿಗೆ ಸೋಂಕು ತಗುಲಿದ್ದು ಮಹಿಳೆ ಸೇರಿದಂತೆ ಒಂದೇ ಮನೆಯ 17 ಸದಸ್ಯರಿಗೆ ಸೋಂಕು ದೃಢವಾದಂತಾಗಿದೆ. ಉಳ್ಳಾಲ ವ್ಯಾಪ್ತಿಯಲ್ಲಿ ಪೊಲೀಸರು ಸೇರಿದಂತೆ 22 ಸೋಂಕು ಶನಿವಾರ ದೃಢವಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಳ್ಳಾಲ, ದೇರಳಕಟ್ಟೆ, ಅಸೈಗೋಳಿ ಸೇರಿ ಸೋಂಕಿತರ ಸಂಖ್ಯೆ 29ಕ್ಕೇರಿದ್ದು ಒರ್ವ ಮಹಿಳೆ ಮೃತಪಟ್ಟಿದ್ದಾರೆ. ಉಳ್ಳಾಲ ಆಝಾದ್ ನಗರದ 57ರ ಹರೆಯದ ಮಹಿಳೆಗೆ ಆರಂಭದಲ್ಲಿ ಸೋಂಕು ತಗುಲಿತ್ತು. ಅವರಿಗೆ ನಗರದ ವೆನ್‍ಲಾಕ್ ಕೋವಿಡ್ […]

ಒಳಚರಂಡಿ ಇಲ್ಲದ ಊರು ಅದು ಅಘೋಷಿತ ಸ್ಲಂ : ಯು.ಟಿ. ಖಾದರ್

Friday, February 28th, 2020
ullal

ಮಂಗಳೂರು : ಒಂದು ಊರು ಅಭಿವೃದ್ಧಿಯಾಗಬೇಕಾದರೆ ಜನಸಾಮಾನ್ಯರು ಸರಕಾರದೊಂದಿಗೆ ಕೈಜೋಡಿಸಿದರೆ ಮಾತ್ರ ಸಾಧ್ಯ. ಉಳ್ಳಾಲದ ಕೆಲವು ಸ್ಥಳಗಳಲ್ಲಿ ಚರಂಡಿಗಳಲ್ಲಿ ಕಸವು ತುಂಬಿಕೊಂಡಿದೆ. ಅದನ್ನು ಶುಚಿಗೊಳಿಸಬಹುದು. ಆದರೆ ಕೆಲವು ದಿನಗಳಲ್ಲಿ ಮತ್ತೆ ಅದೇ ಪರಿಸ್ಥಿತಿ ಬರುತ್ತದೆ. ಇದೆಲ್ಲ ಕಡಿಮೆ ಆಗಬೇಕಾದರೆ ಉಳ್ಳಾಲದಲ್ಲಿ ಒಳ ಚರಂಡಿ ಬರದೆ ಯಾವುದೂ ಸಾಧ್ಯವಾಗುವುದಿಲ್ಲ. ಯಾವ ಊರಿನಲ್ಲಿ ಒಳಚರಂಡಿ ಇಲ್ಲ ಅದು ಸ್ಲಂ ಆಗುತ್ತದೆ ಎಂದು ಮಾಜಿ ಸಚಿವರು ಮತ್ತು ಶಾಸಕರಾಗಿರುವ ಯು.ಟಿ. ಖಾದರ್ ಅಭಿಪ್ರಾಯ ವ್ಯಕ್ತಪಡಿಸಿದರು. ನೆಹರು ಯುವ ಕೇಂದ್ರ ಮಂಗಳೂರು, ಉಳ್ಳಾಲ […]

ಉಳ್ಳಾಲದ ಉಳಿಯ ಬಳಿ ದೋಣಿ ಮಗುಚಿ ಓರ್ವ ವಿದ್ಯಾರ್ಥಿನಿ ಮೃತ್ಯು

Sunday, January 19th, 2020
Renita

ಮಂಗಳೂರು : ಮಿಲಾಗ್ರಿಸ್ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದ ಅಂತಿಮ ಪದವಿಯ ವಿದ್ಯಾರ್ಥಿನಿ ಯೊಬ್ಬಳು ದೋಣಿ ವಿಹಾರ ಸಂದರ್ಭದಲ್ಲಿ ಜೋರಾಗಿ ಬೀಸುತ್ತಿದ್ದ ಗಾಳಿಗೆ ದೋಣಿ ಮಗುಚಿ ಮೃತಪಟ್ಟ ಘಟನೆ  ಭಾನುವಾರ ಸಂಜೆ ಉಳ್ಳಾಲದ ಉಳಿಯ ಹೊಯ್ಗೆ ಎಂಬಲ್ಲಿ ನಡೆದಿದೆ. ಮೀಯಪದವು ನಿವಾಸಿ ರೆನಿಟಾ(18) ಮೃತ ವಿದ್ಯಾರ್ಥಿನಿ. ಮಿಲಾಗ್ರಿಸ್ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದ ಅಂತಿಮ ಪದವಿಯ ವಿದ್ಯಾರ್ಥಿನಿಯಾಗಿದ್ದಳು. ಉಳ್ಳಾಲ ಠಾಣಾ ವ್ಯಾಪ್ತಿಯ ಉಳ್ಳಾಲದ ಉಳಿಯ ಹೊಯ್ಗೆ ಎಂಬಲ್ಲಿ ಈ ದುರಂತ ಸಂಭವಿಸಿದ್ದು ಇನ್ನಿಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿಯ ಹೊಯ್ಗೆಯಲ್ಲಿರುವ ಜಾರ್ಜ್ ಎಂಬವರ ಮನೆಗೆ ತೊಕ್ಕೊಟ್ಟು ಚರ್ಚ್ […]

ಉಳ್ಳಾಲ ನೇತ್ರಾವತಿ ಸೇತುವೆಯ ಮೇಲೆ ಶೀಘ್ರವೇ ಸಿಸಿ ಕ್ಯಾಮರಾ ಅಳವಡಿಕೆಗೆ ನಿರ್ಧಾರ : ಶಾಸಕ ವೇದವ್ಯಾಸ್ ಕಾಮತ್

Saturday, January 18th, 2020
kamath

ಮಂಗಳೂರು : ಉಳ್ಳಾಲದ ನೇತ್ರಾವತಿ ನದಿ ಸೇತುವೆಯ ಎರಡೂ ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಕೆಗೆ ಕ್ರಿಯಾ ಯೋಜನೆ ಹಾಗೂ ಸೇತುವೆಯ ಎರಡೂ ಬದಿಗಳಲ್ಲಿ ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ಶನಿವಾರ ನಡೆದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ವೆಲೆನ್ಸಿಯಾ ಜಂಕ್ಷನ್‌ನಲ್ಲಿರುವ ಪಾರ್ಕನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಡೆಯಿಂದ ತಕ್ಷಣವೇ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ನಗರದ ಸೌಂದರ್ಯ ಹೆಚ್ಚಿಸಲು ಸಹಕಾರಿಯಾಗುವಂತೆ ಪಾರ್ಕ್ ಅಭಿವೃದ್ಧಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿ […]

ಉಳ್ಳಾಲ : ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕನಿಗಾಗಿ ಪೊಲೀಸರಿಂದ ಶೋಧ

Friday, January 3rd, 2020
ullal

ಉಳ್ಳಾಲ : ಯುವಕನೋರ್ವ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಹಾರಿ ನಾಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ನದಿಗೆ ಹಾರಿದರೆನ್ನಲಾದವರನ್ನು ಉಳ್ಳಾಲಬೈಲ್ ನಿವಾಸಿ ನವೇಶ್(30) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟಿನಲ್ಲಿ ಅಂಗಡಿ ಹೊಂದಿರುವ ಇವರು ಇಂದು ಮುಂಜಾನೆ 6:30ರ ಸುಮಾರಿಗೆ ನದಿಗೆ ಹಾರಿದ್ದರೆನ್ನಲಾಗಿದೆ. ಇವರ ಬೈಕ್ ಸೇತುವೆಯ ಮೇಲೆ ನಿಲ್ಲಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿರುವ ಪೊಲೀಸರು ನವೇಶ್‌ಗಾಗಿ ಶೋಧ ಮುಂದುವರಿಸಿದ್ದಾರೆ.