Blog Archive

ಫಲ್ಗುಣಿ ನದಿ : ತಪ್ಪು ಮಾಡಿದವರ ಮೇಲೆ ಎಫ್‌ಐಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ : ತಹಶೀಲ್ದಾರ್

Friday, May 26th, 2017
TP meeting

ಮಂಗಳೂರು  : ಗುರುಪುರದ ಫಲ್ಗುಣಿ ನದಿ ನೀರು ಕಪ್ಪಾಗಿರುವ ಬಗ್ಗೆ ಕಾಲಮಿತಿಯೊಳಗೆ ಸಮರ್ಪಕ ವರದಿ ಸಲ್ಲಿಸುವಂತೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಇತರ ಸಂಬಂಧಿತ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಇತ್ತೀಚೆಗೆ ಸಭೆ ಕರೆದು ಸೂಚಿಸಿದ್ದಾರೆ. ತಪ್ಪು ಮಾಡಿದವರ ಮೇಲೆ ಎಫ್‌ಐಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ಮಹದೇವಯ್ಯ ಭರವಸೆ ನೀಡಿದ್ದರು. ಫಲ್ಗುಣಿ ನದಿಗೆ ಕಟ್ಟಲಾಗಿರುವ ಮರವೂರು ಡ್ಯಾಂ ನೀರು ಕಲುಷಿತಗೊಳ್ಳಲು ಕಾರಣರಾದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ […]

ಕಿರುಕುಳ ವಿರೋಧಿಸಿ ಸೂಕ್ತ ರಕ್ಷಣೆ ನೀಡವಂತೆ ಮಂಗಳಮುಖಿಯರ ಅಳಲು

Tuesday, February 7th, 2017
Transgenders

ಮಂಗಳೂರು: ಸ್ವಾಭಿಮಾನದಿಂದ ಬದುಕಲು ಪ್ರಯತ್ನಿಸುತ್ತಿರುವ ತಮಗೆ ಕಿರುಕುಳ ನೀಡಿ, ಹಲ್ಲೆ ಮಾಡಲಾಗುತ್ತಿದೆ. ನಮಗೆ ಸೂಕ್ತ ರಕ್ಷಣೆ ನೀಡಬೇಕೆಂದು ಮಂಗಳಮುಖಿಯರು ತಮ್ಮ ನೋವು ತೋಡಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪರಿವರ್ತನಾ ಚಾರಿಟೇಬಲ್ ಟ್ರಸ್ಟ್‌ನ ಶ್ರೀನಿಧಿ, ಪರಿವರ್ತನಾ ಟ್ರಸ್ಟ್ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಸಭ್ಯ ನಾಗರಿಕರಾಗಿ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಆದರೆ ಮಂಗಳಮುಖಿಯರ ನಾಯಕಿ ಎನಿಸಿಕೊಂಡ ರಾಣಿ ಎಂಬಾಕೆ ನಾವು ದುಡಿದ ಹಣದಲ್ಲಿ ತಿಂಗಳಿಗೆ 6 ಸಾವಿರ ರೂ. ನೀಡುವಂತೆ ಬೆದರಿಸಿ, ಕಿರುಕುಳ ನೀಡಿ ಹಲ್ಲೆ ಮಾಡಿದ್ದಾಳೆ. ಹಲ್ಲೆ ಕುರಿತು […]

ಅನಧಿಕೃತ ನೀರು ಪಡೆಯುತ್ತಿರುವ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ

Friday, December 24th, 2010
ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್

ಮಂಗಳೂರು :  ಮಹಾನಗರಪಾಲಿಕೆಗೆ ವಂಚಿಸಿ ಹೆಚ್ಚುವರಿ ನೀರು ಪಡೆಯತ್ತಿರುವವರ ಮೇಲೆ ನಿರ್ಧಾಕ್ಷಿಣ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಇಂದು ತಮ್ಮಕಚೇರಿಯಲ್ಲಿ ಮಂಗಳೂರು ಮಹಾನಗರಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು. ಮಹಾನಗರಪಾಲಿಕೆಯಿಂದ ಅದಿಕೃತವಾಗಿ ನೀರು ಸಂಪರ್ಕ ಪಡೆದು ಅನಧಿಕೃತವಾಗಿ ಯಥೇಚ್ಛವಾಗಿ ನೀರನ್ನು ಬಳಸುತ್ತಿರುವ ಉದ್ದಿಮೆ ಕೈಗಾರಿಕೆಗಳನ್ನು ಪತ್ತೆ ಹಚ್ಚಿ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸುವುದು ಸೇರಿದಂತೆ ದಂಡ ವಸೂಲು ಮಾಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅತ್ಯಂತ ಕಡುಬಡವರಿಗೆ ನೀರು ಸಂಪರ್ಕ ಪಡೆಯಲು ಸಾಧ್ಯವಾಗುವಂತೆ […]