Blog Archive

ಪುತ್ತೂರು ಫಾರೆಸ್ಟ್ ಗಾರ್ಡ್ ಎಸಿಬಿ ಬಲೆಗೆ

Tuesday, July 18th, 2017
Forest Guard

ಪುತ್ತೂರು : ಮರ ಸಾಗಿಸಲು ಲಂಚ ಸ್ವೀಕರಿಸುತ್ತಿದ್ದಾಗ ಪುತ್ತೂರು ಫಾರೆಸ್ಟ್ ಗಾರ್ಡ್ ಒಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಕ್ಯಾತಲಿಂಗಯ್ಯ ಎಂಬುವರು ಎಸಿಬಿ ಬಲೆಗೆ ಬಿದ್ದ ಫಾರೆಸ್ಟ್ ಗಾರ್ಡ್. ಇವರು ಇಬ್ರಾಹಿಂ ಎಂಬುವರಿಂದ 1,500 ರೂ. ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕೊಲ್ತಿಗೆಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ನಡೆದಿದೆ. ಎಸ್ಪಿ ಶೃತಿ ನೇತೃತ್ವದಲ್ಲಿ ಡಿವೈಎಸ್ಪಿ ಸುಧೀರ್ ಹೆಗ್ಡೆ, ಇನ್ಸ್‌‌‌ಪೆಕ್ಟರ್ ಯೋಗೀಶ್ ಕುಮಾರ್ ಬಿಸಿ ಮತ್ತು ತಂಡ ಕಾರ್ಯಾಚರಣೆ ನಡೆಸಿತ್ತು.

ಲಂಚ ಸ್ವೀಕರಿಸುತ್ತಿದ್ದ ನಗರ ಯೋಜನೆ ಪುತ್ತೂರು ಉಪ ನಿರ್ದೇಶಕಿ ಎಸಿಬಿ ಬಲೆಗೆ

Thursday, April 13th, 2017
Town Planing officer

ಮಂಗಳೂರು: ಭೂ ಪರಿವರ್ತನೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ಪುತ್ತೂರು ನಗರ ಯೋಜನೆ ಇಲಾಖೆ ಉಪ ನಿರ್ದೇಶಕರನ್ನು ಭ್ರಷ್ಟಾಚಾರ ನಿಗ್ರಹದಳ ಬಂಧಿಸಿದೆ. ಪುತ್ತೂರಿನ ಅರ್ಯಾಪು ಗ್ರಾಮದಲ್ಲಿ ವಾಸವಾಗಿರುವ ಪಿ.ಕೇಶವ ಸುವರ್ಣ ತಮ್ಮ ಜಮೀನನ್ನು ವಾಣಿಜ್ಯ ಪರಿವರ್ತನೆಗಾಗಿ ನಗರ ಅಭಿವೃದ್ಧಿ ಪ್ರಾಧಿಕಾರ, ಪುತ್ತೂರು ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ನಗರ ಯೋಜನೆ ಪುತ್ತೂರು ಉಪ ನಿರ್ದೇಶಕಿ ಲಾವಣ್ಯ ಎಂಬವರು ಸದರಿ ಜಮೀನನ್ನು ವಾಣಿಜ್ಯ ಪರಿವರ್ತನೆಗಾಗಿ ಎನ್ಓಸಿ ನೀಡಲು 10,000 ಹಣ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಅರ್ಜಿದಾರರು ಭ್ರಷ್ಟಾಚಾರ ನಿಗ್ರಹ […]

ವಿಶೇಷ ಭೂ ಸ್ವಾಧೀನಾಧಿಕಾರಿಯೋರ್ವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಪೊಲೀಸರ ಬಲೆಗೆ

Thursday, January 5th, 2017
Gayathri-n-nayak

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿಯೋರ್ವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಗಾಯತ್ರಿ ನಾಯಕ್ ಎಸಿಬಿ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ. ಇವರು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೋಗೀಶ್ ಎಂಬವರಿಂದ ತಮ್ಮ ಕಚೇರಿಯಲ್ಲಿ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಗಾಯತ್ರಿಯನ್ನು ವಶಕ್ಕೆ ಪಡೆದರು. ಯೋಗೀಶ್ ಅವರಿಗೆ ದೊರೆತ ಭೂ ಪರಿಹಾರದ ಮೊತ್ತದಲ್ಲಿ 1.6 ಲಕ್ಷ ರೂ. ಲಂಚ ನೀಡಬೇಕೆಂದು ಗಾಯತ್ರಿ […]

ಲಂಚಾವತಾರ ಹಿನ್ನೆಲೆಯಲ್ಲಿ ಎಸಿಬಿ ದಾಳಿ: ಬೆಳ್ತಂಗಡಿಯಲ್ಲಿ ಕೋಟ್ಯಾಂತರ ಮೌಲ್ಯದ ಸೊತ್ತು ವಶ

Friday, December 23rd, 2016
belthangady

ಬೆಳ್ತಂಗಡಿ: ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಾರ್ವಜನಿಕರ ದೂರಿನ ಮೇರೆಗೆ ಗುರುವಾರ ಮುಂಜಾನೆ ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಗೋವಿಂದ ನಾಯ್ಕ ಅವರ ಮನೆ ಮೇಲೆ ದಾಳಿ ನಡೆಸಿದ್ದು, ಕೋಟ್ಯಾಂತರ ಮೌಲ್ಯದ ಆಸ್ತಿಗಳ ದಾಖಲೆ ಪತ್ರ, ಚಿನ್ನಾಭರಣ, ನಗದು ಹಣವನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಕಚೇರಿಯ ಸಿಬ್ಬಂದಿ ಗೋವಿಂದ ನಾಯ್ಕ ಅವರು ಕುವೆಟ್ಟು ಗ್ರಾಮದ ಗುರುವಾಯನಕರೆ ಹವ್ಯಕ ಭವನದ ಸನಿಹದ ವಾಸ್ತವ್ಯವಿರುವ ಮನೆಗೆ ಮಂಗಳೂರು ಎಸಿಬಿಯ ತಂಡ ದಾಳಿ ಬೆಳಿಗ್ಗೆ 6 ಗಂಟೆಯ […]

ಹರೀಶ್‌ ಪೂಜಾರಿ ಹತ್ಯೆ ದುಷ್ಕರ್ಮಿಗಳ ಪತ್ತೆಗೆ ವಿಶೇಷ ತಂಡ

Saturday, November 14th, 2015
Rai Cheque

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ಅವಶ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬಂಟ್ವಾಳದಲ್ಲಿ ಹರೀಶ್‌ ಪೂಜಾರಿ ಅವರನ್ನು ಹತ್ಯೆ ಮಾಡಿರುವ ಹಾಗೂ ಶಮೀವುಲ್ಲ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಪತ್ತೆಗೆ ವಿಶೇಷ ಪೊಲೀಸ್‌ ತಂಡ ರಚಿಸಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಬಿ.ಸಿ. ರೋಡಿನಲ್ಲಿ ಗುರುವಾರ ಸಂಭವಿಸಿರುವ ಅಹಿತಕಾರಿ ಘಟನೆಗಳು ಹಾಗೂ ಶುಕ್ರವಾರ ನಡೆದಿರುವ ಬಂದ್‌ ಹಿನ್ನೆಲೆಯಲ್ಲಿ ನಗರದ ಸರ್ಕಿಟ್‌ಹೌಸ್‌ನಲ್ಲಿ ಪತ್ರಿಕಾಗೋಷ್ಠಿ […]