Blog Archive

ರಾಜ್ಯದಲ್ಲಿ ವಿದ್ಯುತ್ ಅಭಾವವಿಲ್ಲದಂತೆ ಕ್ರಮ : ಡಿ.ಕೆ.ಶಿವಕುಮಾರ್

Wednesday, February 7th, 2018
D-K-Shivkumar

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಅಭಾವ ತಲೆದೋರದಂತೆ ಮಾಡಿಕೊಳ್ಳಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ವಿಧಾನ ಪರಿಷತ್‍ನಲ್ಲಿ ಭರವಸೆ ನೀಡಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಮೋಟಮ್ಮ ಅವರ ಪರವಾಗಿ ಐವನ್ ಡಿಸೋಜಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರೈತರಿಗೆ ಕೈಗಾರಿಕೆಗಳಿಗೆ ಸೇರಿದಂತೆ ಯಾರಿಗೂ ಯಾವುದೇ ಕಾರಣಕ್ಕೂ ವಿದ್ಯುತ್ ಅಭಾವ ತಲೆದೋರದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಪ್ರಸ್ತುತ ರಾಜ್ಯದಲ್ಲಿ ಸರಾಸರಿ ವಿದ್ಯುತ್ ಬೇಡಿಕೆ ಪ್ರಮಾಣ 10 ಸಾವಿರ ಮೆಗಾ ವ್ಯಾಟ್‍ಗಳಾಗಿದ್ದು, ಕಳೆದ ಜನವರಿ ತಿಂಗಳಲ್ಲಿ […]

ಕ್ರೈಸ್ತ ಅಭಿವೃದ್ಧಿ ಪರಿಷತ್‌ಅನ್ನು ಕ್ರೈಸ್ತ ಅಭಿವೃದ್ಧಿ ನಿಗಮವಾಗಿ ಪರಿವರ್ತಿಸಲು ಡಿಸೋಜಾ ಒತ್ತಾಯ

Friday, January 19th, 2018
ivan-desouza

ಮಂಗಳೂರು: ಕ್ರೈಸ್ತರ ಬೆಳವಣಿಗೆಯ ದೃಷ್ಟಿಯಿಂದ ಕೈಸ್ತ ಅಭಿವೃದ್ಧಿ ಪರಿಷತ್‌ಅನ್ನು ಕ್ರೈಸ್ತ ಅಭಿವೃದ್ಧಿ ನಿಗಮವಾಗಿ ಪರಿವರ್ತಿಸಬೇಕೆಂದು ಪರಿಷತ್‌ ಮುಖ್ಯ ಸಚೇತಕ ಐವನ್ ಡಿಸೋಜಾ ಒತ್ತಾಯಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 2011ನೇ ಸಾಲಿನಲ್ಲಿ 50 ಕೋಟಿ ರೂ. ಅನುದಾನದಲ್ಲಿ ಪ್ರಾರಂಭಗೊಂಡ ಕ್ರೈಸ್ತ ಅಭಿವೃದ್ಧಿ ಪರಿಷತ್‌ಅನ್ನು ಕ್ರೈಸ್ತ ಅಭಿವೃದ್ಧಿ ನಿಗಮವನ್ನಾಗಿ ಘೋಷಿಸಬೇಕೆಂದು ಈಗಾಗಲೇ ಕ್ರೈಸ್ತ ಅಭಿವೃದ್ಧಿ ಪರಿಷತ್ ತೀರ್ಮಾನಿಸಿದೆ ಎಂದು ಹೇಳಿದರು. ಮುಂಬರುವ 2018-19ನೆ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ ಒದಗಿಸಬೇಕೆಂದೂ ಅವರು […]

ಯಾರಿಗೆ ಸಿಗುತ್ತೆ ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್?

Monday, January 15th, 2018
abhay-chandra

ಮಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಭಾರೀ ಕುತೂಹಲ ಕೆರಳಿಸಿದ ಕ್ಷೇತ್ರ ಮುಲ್ಕಿ ಮೂಡಬಿದರೆ ವಿಧಾನ ಸಭಾ ಕ್ಷೇತ್ರ. ಭಾರಿ ನಿರೀಕ್ಷೆಯ ಕ್ಷೇತ್ರವಾದ ಮುಲ್ಕಿ- ಮೂಡಬಿದಿರೆಗೆ ಈ ಭಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರು ಎನ್ನುವುದು ಕುತೂಹಲ ಹಾಗೂ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಕ್ಷೇತ್ರದಿಂದ ಕಳೆದ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಭಯಚಂದ್ರ ಜೈನ್ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನುವ ಸುಳಿವು ಈ ಹಿಂದೆಯೇ ನೀಡಿದ್ದರು. ಈ ಬಾರಿ ಕ್ಷೇತ್ರ ದಿಂದ […]

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ

Monday, October 23rd, 2017
kittur chennamma jayanti celebration

ಮಂಗಳೂರು: ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜಾ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಇತಿಹಾಸದ ಧೀಮಂತ ಮಹಿಳೆ ಎಂದು  ಅಭಿಪ್ರಾಯಿಸಿದ್ದಾರೆ. ಪ್ರಥಮ ಬಾರಿಗೆ ನಗರದ ರಾಮಕೃಷ್ಣ ವಿದ್ಯಾಸಂಸ್ಥೆಗಳ ಆವರಣದ ಸಭಾಭವನದಲ್ಲಿ ದ.ಕ. ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ನಡೆಯುತ್ತಿದ್ದ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಬ್ರಿಟಿಷರ ವಿರುದ್ಧ ರಣ ಕಹಳೆ ಊದಿದ್ದ ಚೆನ್ನಮ್ಮ ಇತಿಹಾಸದ ಪುಟಗಗಳಲ್ಲಿ ಸೇರಿ ಹೋಗಿದ್ದರೂ ಆಕೆಯ ಕೆಚ್ಚೆದೆಯ […]

ಕೇಂದ್ರ ಸರ್ಕಾರ ತನ್ನ ಸಾಧನೆಯ ಬಗ್ಗೆ ಶ್ವೇತಪತ್ರ ಹೊರಡಿಸಲಿ – ಐವನ್

Thursday, May 18th, 2017
Ivan

ಮಂಗಳೂರು : ಕೇಂದ್ರ ಸರ್ಕಾರ ತನ್ನ ಸಾಧನೆಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕೇಂದ್ರ ಸರ್ಕಾರ  ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸುತ್ತಿದೆ. ಆದರೆ ಯಾವುದೇ ಜನೋಪಯೋಗಿ ಯೋಜನೆಯನ್ನು ಕೈಗೊಂಡಿಲ್ಲ. ಆದ್ದರಿಂದ ರೈತರಿಗೆ, ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರಿಗೆ ಅಚ್ಛೇ ದಿನ್ ಇನ್ನೂ ಬಂದಿಲ್ಲ. ಕೇವಲ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಕಂಪನಿಗಳಿಗೆ ಅಚ್ಛೇ ದಿನ್ ಬಂದಿದೆ. ನೋಟು ಅಮಾನ್ನೀಕರಣದಿಂದಾಗಿ […]

ರಾಜ್ಯದ ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ನಡೆಸುವ ಮೂಲಕ ಕೇಂದ್ರ ಸರಕಾರದ ಪಿತೂರಿ

Saturday, March 18th, 2017
Ivan

ಮಂಗಳೂರು :  ಐಟಿ ದಾಳಿ ನಡೆಸುವ ಮೂಲಕ ರಾಜ್ಯ ಸರಕಾರದ ವಿರದ್ಧು ಕೇಂದ್ರ ಸರಕಾರವು  ಪಿತೂರಿ ನಡೆಸುತ್ತಿದೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜಾ ಆಪಾದಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಐಟಿ ದಾಳಿ ನಡೆಯುತ್ತಿದೆ. ಅವರೆಲ್ಲಾ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಕೋಟಿಗಟ್ಟಲೆ ಹಣ ಪತ್ತೆ ಮಾಡಿದರು ಎಂದಾಕ್ಷಣ ಅದಕ್ಕೆ ಭ್ರಷ್ಟಾಚಾರದ ಹೆಸರು ನೀಡುವುದು ಎಷ್ಟು ಸರಿ ಎಂದು […]

ರುದ್ರೇಶ್ ಹತ್ಯೆ ಪ್ರಕರಣವನ್ನು ರಾಜಕೀಯಗೊಳಿಸುವುದು ಖಂಡನೀಯ: ಐವನ್ ಡಿಸೋಜಾ

Saturday, October 22nd, 2016
Ivan

ಮಂಗಳೂರು: ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣವನ್ನು ರಾಜಕೀಯಗೊಳಿಸುವುದು ಖಂಡನೀಯ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರುದ್ರೇಶ್ ಹತ್ಯೆಯನ್ನು ಯಾರೇ ಮಾಡಿರಲಿ ಅದು ತಪ್ಪು. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಪತ್ತೆಗಾಗಿ ಕ್ರಮ ತೆಗೆದುಕೊಂಡಿದೆ. ತನಿಖೆಗಾಗಿ ಪೊಲೀಸರ ಆರು ತಂಡ ರಚಿಸಲಾಗಿದೆ. ಪ್ರಕರಣವನ್ನು ಬೇಧಿಸಲು ಸರ್ಕಾರದ ಎಲ್ಲಾ ಕ್ರಮಗಳು ಜಾರಿಯಲ್ಲಿದೆ. ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟಿಸುತ್ತೇವೆ, ಬಂದ್ ಮಾಡುತ್ತೇವೆ ಎಂದು ಹೇಳುವುದು ಸರಿಯಲ್ಲ. ಕೊಲೆ ನಡೆದಾಗ ಬಿಜೆಪಿಯವರಿಗೆ […]

ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮನೆಗೆ ಸೌರಶಕ್ತಿ ಮೇಲ್ಛಾವಣಿ

Friday, October 23rd, 2015
Ivan Solar

ಮಂಗಳೂರು : ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ತಮ್ಮ ಮನೆಗೆ ಸೌರಶಕ್ತಿ ಮೇಲ್ಛಾವಣಿಯನ್ನು ಅಳವಡಿಸಿದ್ದಾರೆ. ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಶಾಸಕ ಮೊಯಿದೀನ್ ಬಾವಾ ಬುಧವಾರ ಸೌರಶಕ್ತಿ ಮೇಲ್ಛಾವಣಿ ಘಟಕ ಅಳವಡಿಕೆಗೆ ಚಾಲನೆ ನೀಡಿದರು. ಪ್ರತಿದಿನ 47 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡುವ ಶಕ್ತಿಯನ್ನು ಹೊಂದಿದೆ. ಸುಮಾರು 7.50 ಲಕ್ಷದಿಂದ 8 ಲಕ್ಷ ರೂಪಾಯಿ ತನಕ ವೆಚ್ಚ ಮಾಡಿ, ದಿನವೊಂದಕ್ಕೆ 47 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡುವ ಘಟಕ ನಿರ್ಮಾಣ ಮಾಡಲಾಗಿದೆ. ಈ ಸೌರಶಕ್ತಿ ಘಟಕದಿಂದ ತಿಂಗಳಿಗೆ ತನ್ನ […]

ಕುವೈತ್ ಗೆ ವಿಮಾನ ಪುನಾರಂಭಿಸಲು ಐವನ್ ಡಿಸೋಜಾ ಒತ್ತಾಯ

Friday, July 25th, 2014
Ivan D souza

ಮಂಗಳೂರು : ಮಂಗಳೂರಿನಿಂದ ಕುವೈತ್ ಗೆ ನೇರ ವಿಮಾನ ರದ್ದು ಪಡಿಸಿದ್ದರ ಹಿಂದೆ ಲಾಭಿ ಕೆಲಸ ಮಾಡಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಖಾಸಗಿ ವಿಮಾನ ಸಂಸ್ಥೆಯ ಸಹಯೋಗ ಪಡೆದು ಕುವೈತ್ ವಿಮಾನ ಪುನಾರಂಭಿಸುವಂತೆ ಒತ್ತಾಯಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಇಂದು ಮೂಲಬೂತ ಸೌಲಭ್ಯ ಅಭಿವೃದ್ದಿ ಸಚಿವ ರೋಷನ್ ಬೇಗ್ ರಿಗೆ ಕುವೈತ್ ಗೆ ವಿಮಾನ ಆರಂಭಿಸಲು ಇರುವ ತೊಡಕುಗಳ ಬಗ್ಗೆ ಪ್ರಶ್ನಿಸಿದ್ದು, ಪ್ರಯಾಣಿಕರ ಕೊರತೆಯಿಂದ ವಿಮಾನ ರದ್ದು ಪಡಿಸಲಾಗಿದೆ ಎಂಬ ಉತ್ತರಕ್ಕೆ […]

ಕಾಂಗ್ರೆಸ್ : ರಾಜ್ಯ ವಿಧಾನ ಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಜೆ.ಆರ್.ಲೋಬೊ ಕಣಕ್ಕೆ

Saturday, April 6th, 2013
JR Lobo & Ivan D Souza

ಮಂಗಳೂರು : ಕಾಂಗ್ರೆಸ್ ಪಕ್ಷದಿಂದ ರಾಜ್ಯ ವಿಧಾನ ಸಭೆಯ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು, ಈಗ ಸಿದ್ಧವಾಗಿರುವ ಪಟ್ಟಿಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ದಿಂದ ಜೆ.ಆರ್.ಲೋಬೊ ರಿಗೆ ಟಿಕೆಟ್ ನೀಡಲಾಗಿದೆ. ಕೆಲ ತಿಂಗಳ ಹಿಂದೆ ಸರ್ಕಾರಿ ಹುದ್ದೆಯಿಂದ ಸ್ವಯಂ ನಿವೃತ್ತಿಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರಿದ  ಜೆ.ಆರ್.ಲೋಬೊ ಪಕ್ಷಕ್ಕೆ ಸೇರಿ ಸಾಮಾನ್ಯ ಕಾರ್ಯಕರ್ತನಂತೆ ತೆರೆ ಮರೆಯಲ್ಲೇ  ತನ್ನ ಪಾಲಿನ ಕೆಲಸ ಮಾಡಿಕೊಂಡಿದ್ದರು. ಒಂದೆಡೆ ಈ ಬಾರಿ ದಕ್ಷಿಣ ವಿಧಾನಸಭಾ ಕ್ಷೇತ್ರ ಸ್ಪರ್ಧಿಸುವ ಅವಕಾಶ ಒದಗಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು […]