Blog Archive

ಕಂಬಳದ ಮೇಲಿನ ನಿಷೇಧ ವಿರೋಧಿಸಿ ಬೃಹತ್‌ ಪ್ರತಿಭಟನೆ

Saturday, January 28th, 2017
Kambala-Protest

ಮಂಗಳೂರು : ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳದ ಮೇಲಿನ ನಿಷೇಧ ವಿರೋಧಿಸಿ ಕಡಲ ನಗರಿಯಲ್ಲಿ ಪ್ರತಿಭಟನೆಗಳು ಪ್ರಬಲಗೊಂಡಿವೆ. ಇಂದು ಸಹ ಸಚಿವ ಅಭಯಚಂದ್ರ ಜೈನ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ( ಹಕ್ಕೊತ್ತಾಯ ಜಾಥಾ ) ನಡೆಯಿತು. ನೂರಾರು ಕೋಣಗಳ ಸಮೇತ ಬೀದಿಗಳಿದ ಸಾವಿರಾರು ಸಂಖ್ಯೆಯ ಕಂಬಳ ಪ್ರಿಯರು ಮೂಡಬಿದರೆಯ ಸ್ವರಾಜ್ ಮೈದಾನದಿಂದ ಪ್ರತಿಭಟನೆ ಜಾಥಾ ಪ್ರಾರಂಭಿಸಿದರು. ಈ ಜಾಥಾ ಸ್ವರಾಜ್‌ ಮೈದಾನದಿಂದ ಕಡಲಕೆರೆವರೆಗೆ ಸಾಗಲಿದೆ. ಪ್ರತಿಭಟನಾ ಮೆರವಣೆಗೆಯಲ್ಲಿ ಕಂಬಳದ ಮೇಲಿನ ನಿಷೇಧಕ್ಕೆ ವಿರೋಧ ವ್ಯಕ್ತ ಪಡಿಸಿದ ಪ್ರತಿಭಟನಾಕಾರರು, […]

ಕಂಬಳ ಹೋರಾಟಕ್ಕೆ ಬೀದಿಗಿಳಿಯಲಿರುವ ತುಳು ಕಲಾವಿದರು

Friday, January 27th, 2017
Tulu Actors

ಮಂಗಳೂರು: ತುಳು ಚಿತ್ರರಂಗದ ಕಲಾವಿದರು ಕಂಬಳ ಹೋರಾಟಕ್ಕೆ ಮುಂದಾಗಿದ್ದು , ಜ. 27 ರಂದು ಮಂಗಳೂರು ನಗರದಲ್ಲಿ ನಡೆಯುವ ಮಾನವ ಸರಪಳಿ ಹಾಗೂ 28 ರಂದು ಮೂಡುಬಿದಿರೆಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ತುಳು ಚಿತ್ರರಂಗದ ಹಿರಿಯ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್‌ಬೈಲ್ ಮತ್ತು ಹಿರಿಯ ನಟ, ನಿರ್ದೇಶಕ ದೇವದಾಸ ಕಾಪಿಕಾಡ್ ಹೇಳಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಕೊಡಿಯಾಲ್‌ಬೈಲ್, ತುಳು ಚಿತ್ರರಂಗದ ಕಲಾವಿದರು ಮಾತ್ರವಲ್ಲ ನಾಟಕ, ಯಕ್ಷಗಾನ, ಸಾಂಸ್ಕೃತಿಕ ರಂಗಭೂಮಿಯ ಕಲಾವಿದರು ಕಂಬಳ ಬೆಂಬಲಿಸಿ […]

ಎರಡು ತಿಂಗಳಿಗೊಮ್ಮೆ ಪಡಿತರ ವಿತರಣೆಯ ವ್ಯವಸ್ಥೆ ಶೀಘ್ರ ಜಾರಿಗೆ ಬರಲಿದೆ: ಯು.ಟಿ.ಖಾದರ್

Thursday, January 26th, 2017
U-T-Khadar

ಮಂಗಳೂರು: ಎರಡು ತಿಂಗಳಿಗೊಮ್ಮೆ ಪಡಿತರ ವಿತರಣೆಯ ವ್ಯವಸ್ಥೆ ಶೀಘ್ರ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ರಮದ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು. ಇದರಿಂದ ಗ್ರಾಹಕರಿಗೆ ಅನುಕೂಲವಾಗಲಿದೆ. ಎರಡು ತಿಂಗಳು ಅಥವಾ ಮೂರು ತಿಂಗಳ ಪಡಿತರವನ್ನು ಒಮ್ಮೆಲೆ ವಿತರಿಸಿದರೆ ಗ್ರಾಹಕರು ಪದೇ ಪದೆ ಪಡಿತರ ಅಂಗಡಿಗೆ ಬರುವುದು ತಪ್ಪುತ್ತದೆ. ಈ ಬಗ್ಗೆ ಜನತೆಯ ಅಭಿಪ್ರಾಯವನ್ನೂ ಸಂಗ್ರಹಿಸಲಾಗುತ್ತಿದೆ. […]

ಕಂಬಳದ ಬಗ್ಗೆ ತಡೆಯಾಜ್ಞೆ ತೆರವುಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು: ರವಿಶಂಕರ ಪ್ರಸಾದ್

Wednesday, January 25th, 2017
BJP

ಮಂಗಳೂರು: ಕಂಬಳದ ಬಗ್ಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಆದರೆ ಈ ತಡೆಯಾಜ್ಞೆ ತೆರವುಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ಕೈಗೊಳ್ಳಲು ಮುಂದಾಗಲಿ ಆಗ ಕೇಂದ್ರ ಸರ್ಕಾರ ಮುಕ್ತವಾಗಿ ಸ್ಪಂದಿಸಲಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್ ಹೇಳಿದ್ದಾರೆ. ತಮಿಳುನಾಡು ಸರ್ಕಾರ ಕೈಗೊಂಡ ಸುಗ್ರೀವಾಜ್ಞೆ ರೀತಿಯಲ್ಲೆ ಕರ್ನಾಟಕ ಸರ್ಕಾರ ಕಂಬಳ ಬಗ್ಗೆ ನಿರ್ಣಯ ಕೈಗೊಳ್ಳಲಿ ಕಂಬಳದ ಬಗ್ಗೆ ಮೋದಿ ಸರ್ಕಾರ ಗೌರವ ಇರಿಸಿದ್ದು ಸ್ಥಳೀಯ ಕಲೆ ಸಂಸ್ಕೃತಿ ಆಚರಣೆ ಕ್ರೀಡೆಗಳ ಬಗ್ಗೆ ಕೇಂದ್ರ ಸರ್ಕಾರ ಗೌರವ ಹೊಂದಿದೆ […]

ಕಂಬಳವನ್ನು ಉಳಿಸುವ ಸಲುವಾಗಿ ಜ. 28ರಂದು ನಡೆಯುವ ಹೋರಾಟಕ್ಕೆ ಜ್ಯಾತ್ಯಾತೀತವಾಗಿ ಬೆಂಬಲ

Wednesday, January 25th, 2017
District-Kambala-Committee1

ಮಂಗಳೂರು: ಅನಾದಿ ಕಾಲದಿಂದಲೂ ಆಚರಿಸಿಕೊಂಡು ಬರುತ್ತಿರುವ ಕಂಬಳವನ್ನು ಉಳಿಸುವ ಸಲುವಾಗಿ ಜ. 28ರಂದು ಮೂಡಬಿದ್ರೆಯಲ್ಲಿ ನಡೆಯುವ ಹೋರಾಟವನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು ಸಭೆ ನಡೆಯಿತು. ಪಕ್ಷಾತೀತ, ಜ್ಯಾತ್ಯಾತೀತವಾಗಿ ನಡೆಯುವ ಹೋರಾಟಕ್ಕೆ ಎಲ್ಲರೂ ಬೆಂಬಲ ಘೋಷಿಸಿದ್ದಾರೆ. ಕಂಬಳ ಹಿಂಸೆಯನ್ನು ಪ್ರಚೋದಿಸುವಂತಹ ಕ್ರೀಡೆ ಅಲ್ಲ. ಕಾಲ ಕಾಲಕ್ಕೆ ಪೌಷ್ಟಿಕ ಆಹಾರವನ್ನುಂಡು, ದೇಹಕ್ಕೆ ಸೂಕ್ತ ಮಸಾಜು ಮಾಡಿಸಿಕೊಂಡು, ಕೆಸರು ಗದ್ದೆಯಲ್ಲಿ ಓಡುವ ಕೋಣಗಳು ಅತ್ಯಂತ ಆರೋಗ್ಯದಾಯಕವಾಗಿರುತ್ತದೆ. ಕೃಷಿಗೆ ಬಳಸುವ ಎತ್ತುಗಳನ್ನಾದರೂ ನಿರ್ವಿರ್ಯಗೊಳಿಸುತ್ತಾರೆ. ಆದರೆ, ಕಂಬಳದ […]

ಕಂಬಳ ನಿಷೇಧ ತುಳುನಾಡಿನ ಜನತೆಯ ಆತ್ಮಾಭಿಮಾನವನ್ನು ಪ್ರಶ್ನಿಸುವಂತಾಗಿದೆ : ಯೋಗೀಶ್ ಶೆಟ್ಟಿ

Saturday, November 26th, 2016
trv kambala

ಮಂಗಳೂರು: ಕಂಬಳ ನಿಷೇಧ ಕುರಿತಂತೆ ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್(ಪೆಟಾ) ಸಲ್ಲಿಸಿದ್ದ ಅರ್ಜಿಯ ಹಿನ್ನೆಲೆಯಲ್ಲಿ ಹೈಕೋರ್ಟ್‌ ಈ ಕ್ರೀಡೆಗೆ ಮಧ್ಯಂತರ ತಡೆ ನೀಡಿರುವುದು ತುಳುನಾಡಿನ ಜನತೆಯ ಆತ್ಮಾಭಿಮಾನವನ್ನು ಪ್ರಶ್ನಿಸುವಂತಾಗಿದೆ. ಕಂಬಳ ತುಳುನಾಡಿನ ಸಂಸ್ಕೃತಿಯ ಒಂದು ಭಾಗವೇ ಆಗಿದ್ದು, ಯಾವುದೇ ಕಾರಣಕ್ಕೂ ಈ ಕ್ರೀಡೆ ನಿಲ್ಲಬಾರದು. ಕಂಬಳದಲ್ಲಿ ಕೋಣಗಳಿಗೆ ಹಿಂಸೆ ನೀಡಲಾಗುತ್ತಿದೆ ಎಂಬ ವಿತಂಡವಾದ ಒಪ್ಪುವಂಥದಲ್ಲ ಎಂದು ತುಳುನಾಡು ರಕ್ಷಣಾ ವೇದಿಕೆಯ  ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಸುದ್ದಿಗಾರರಿಗೆ ತಿಳಿಸಿದ್ದಾರೆ. ಪ್ರಾಣಿದಯಾ ಸಂಘದವರಿಗೆ ಎತ್ತು, ಕೋಣ, ಇತರ […]