Blog Archive

ನಾಡಿನ ಪ್ರಗತಿಗೆ ಕರಾವಳಿಗರ ಕೊಡುಗೆ ಅಪಾರ : ನಳಿನ್ ಕುಮಾರ್ ಕಟೀಲ್

Friday, February 21st, 2020
nalin

ಮಂಗಳೂರು : ಕರಾವಳಿಗರು ನಾಡಿನ ಪ್ರಗತಿಗೆ ವಿಶಿಷ್ಟ ಕೊಡುಗೆ ನೀಡಿ ಜಗದ್ವಿಖ್ಯಾತರಾಗಿದ್ದಾರೆ ಎಂದು ಲೋಕಸಭಾಸದಸ್ಯರು ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟರು. ಕಲಬುರಗಿಯ ದಕ್ಷಿಣ ಕನ್ನಡ ಸಂಘ (ರಿ) ಮತ್ತು ಹೋಟೆಲ್ ಮಾಲಿಕರ ಸಂಘದ, ವತಿಯಿಂದ ಫೆ. 19 ರಂದು ನಗರದ ಆಮಂತ್ರಣ ಹೋಟೆಲಿನ ’ಅನ್ನಪೂರ್ಣ ಸಭಾಂಗಣದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು. ಕರಾವಳಿಯ ದೈವ ದೇಗುಲಗಳ ಅಭಿವೃದ್ಧಿ ಸಹಿತ ಧಾರ್ಮಿಕ ಕ್ಷೇತ್ರ, ಶಿಕ್ಷಣಕ್ಷೇತ್ರ, ಕೈಗಾರಿಕಾ ಕ್ಷೇತ್ರಗಳಿಗೆ ಪರವೂರಿನಲ್ಲಿ ದುಡಿಯುವ ಕೈಗಳ ಅಪಾರ […]

ಕರಾವಳಿಯಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯ ಪತ್ರಕರ್ತರ 35ನೇ ಸಮ್ಮೇಳನ

Saturday, February 15th, 2020
patrakrta

ಮಂಗಳೂರು : ಮಾ.7 ಮತ್ತು 8ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದ್ದು, ಇದು ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಆಶ್ರಯದಲ್ಲಿ ನಡೆಯಲಿರುವ ಮೊದಲ ಸಮ್ಮೇಳನವಾಗಿದೆ. ಮಂಗಳೂರು ನಗರವು ಕನ್ನಡ ಪತ್ರಿಕೋದ್ಯಮದ ತವರೂರು. ಪತ್ರಿಕಾ ರಂಗಕ್ಕೆ ಸಂಬಂಧಿಸಿದಂತೆ ಅನೇಕ ಚಾರಿತ್ರಿಕ ಹೆಜ್ಜೆ ಗುರುತುಗಳನ್ನು ಮೂಡಿಸಿದ ನಗರ. 177 ವರ್ಷಗಳ ಹಿಂದೆ ಈ ಊರಿನಲ್ಲಿಯೇ ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಹುಟ್ಟಿತು. ಇಲ್ಲಿ ಶುರುವಾದ ಕನ್ನಡ ಪತ್ರಿಕೋದ್ಯಮ ಆಂದೋಲನ ಕನ್ನಡ ನಾಡಿನಾದ್ಯಂತ ವ್ಯಾಪಿಸಿತ್ತು. ಆ ದಿನಗಳಲ್ಲೇ […]

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ರೆಡ್ ಅಲರ್ಟ್ ಘೋಷಣೆ

Thursday, October 24th, 2019
red-alert

ಮಂಗಳೂರು : ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ  ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಭಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಸೂಕ್ತ ಎಚ್ಚರಿಕೆ ವಹಿಸುವಂತೆ ಪ್ರಕಟನೆಯಲ್ಲಿ ತಿಳಿಸಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಆರಂಭವಾಗಿದ್ದು, ವಾಯುಭಾರ ಕುಸಿತ ಪ್ರಭಾವದಿಂದ ಕೇರಳ-ಕರ್ನಾಟಕ ಕರಾವಳಿ ಮತ್ತು […]

ಮಂಗಳೂರಿನಲ್ಲಿ‌ ದಸರಾ ಗೊಂಬೆಗಳ ಪ್ರದರ್ಶನ

Friday, October 4th, 2019
gombegalu

ಮಂಗಳೂರು : ದಸರಾ ಹಬ್ಬದ ಸಂದರ್ಭ ಮೈಸೂರು ಭಾಗದಲ್ಲಿ ದಸರಾ ಗೊಂಬೆಗಳನ್ನು ಮನೆಯಲ್ಲಿಟ್ಟು ಆರಾಧಿಸುವುದು ಸಾಮಾನ್ಯ. ಆದರೆ ಈ ಸಂಸ್ಕೃತಿ ಇದೀಗ ಕರಾವಳಿ ಜಿಲ್ಲೆಯಲ್ಲೂ ಸಹ ಕಾಣಿಸಿಕೊಂಡಿದ್ದು, ನಮ್ಮವರು ಎಂಬ ಸಂಘಟನೆ ಕಳೆದ ಕೆಲವು ವರ್ಷಗಳಿಂದ ಈ ಸಂಪ್ರದಾಯವನ್ನು ಅನುಸರಿಸಿಕೊಂಡು ಬರುತ್ತಿದೆ. ಮಂಗಳೂರಿನಲ್ಲಿ ವಾಸವಾಗಿರುವ ಹಳೆ ಮೈಸೂರಿನ ಜನರು ಸೇರಿ ‘ವಿಪ್ರಕೂಟ ನಮ್ಮವರು’ ಎಂಬ ಸಂಘಟನೆಯನ್ನು ಕಟ್ಟಿಕೊಂಡು ದಸರಾ ಸಂದರ್ಭದಲ್ಲಿ ಮಂಗಳೂರಿನಲ್ಲಿ‌ ಗೊಂಬೆ ಪ್ರದರ್ಶನ ಮಾಡುವ ಮೂಲಕ ಮೈಸೂರಿನ ಸಂಸ್ಕೃತಿಯನ್ನು ತುಳುನಾಡಿನವರಿಗೆ ಪರಿಚಯಿಸುತ್ತಿದ್ದಾರೆ. ಕಳೆದ ಒಂದು ದಶಕಗಳಿಂದ […]

ಕರಾವಳಿಯಲ್ಲಿ ಎತ್ತಿನಹೊಳೆ ನೀರಾವರಿ ಯೋಜನೆ : ಸುಪ್ರೀಂ ಕೋರ್ಟ್‌ಗೆ ಮನವಿ

Thursday, September 5th, 2019
yethina-hole

ಮಂಗಳೂರು : ಕರಾವಳಿಯ ಜೀವನಾಡಿ ನೇತ್ರಾವತಿಗೆ ಆತಂಕ ತರಿಸುವ ಎತ್ತಿನಹೊಳೆ ನೀರಾವರಿ ಯೋಜನೆಯ ವಿರುದ್ಧ ಕಾನೂನು ಹೋರಾಟ ಈಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಗುರುವಾರ ವಿಚಾರಣೆ ಆರಂಭವಾಗಲಿದೆ. ಎತ್ತಿನಹೊಳೆ ಯೋಜನೆಯ ವಿರುದ್ಧ ಪರಿಸರವಾದಿಗಳು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಹಸಿರು ನ್ಯಾಯ ಪೀಠ (ಎನ್‌ಜಿಟಿ)ವು ಮೇಯಲ್ಲಿ ವಜಾಗೊಳಿಸಿ ತೀರ್ಪು ನೀಡಿತ್ತು. ಎನ್‌ಜಿಟಿ ಪೀಠದ ತೀರ್ಪು ಪ್ರಶ್ನಿಸಿ ಪರಿಸರ ಹೋರಾಟಗಾರ ಕೆ.ಎನ್‌. ಸೋಮಶೇಖರ್‌ ಒಂದು ತಿಂಗಳ ಹಿಂದೆಯಷ್ಟೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ […]

ದಕ್ಷಿಣ ಕನ್ನಡದಲ್ಲಿ ಇನ್ನೆರಡು ದಿನ ಭಾರಿ ಮಳೆ : ಆರೆಂಜ್ ಅಲರ್ಟ್ ಘೋಷಣೆ

Wednesday, September 4th, 2019
orenge-alert

ಮಂಗಳೂರು : ಕರಾವಳಿಯಲ್ಲಿ ಸೆ. 4 ರ ಬುಧವಾರ ಉತ್ತಮ ಮಳೆ ಸುರಿದಿದ್ದು, ಇನ್ನೆರಡು ದಿನ ಮಳೆ ತೀವ್ರವಾಗಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ಸುರಿದ ಮಳೆ ಹಲವೆಡೆ ಹಾನಿ ಉಂಟು ಮಾಡಿದ್ದು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಿಂದ ಚಾರ್ಮಾಡಿ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಇನ್ನು ಇದರೊಂದಿಗೆ ಸಮುದ್ರದ ಅಬ್ಬರವೂ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಸೆ.2 ರಿಂದಲೇ ನಾಲ್ಕು ದಿನಗಳವರೆಗೆ ಅರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಅಲರ್ಟ್ ಗುರುವಾರದವರೆಗೆ ಘೋಷಿಸಲಾಗಿದ್ದರೂ, […]

ಮಂಗಳೂರು : ಕಡಲ ತೀರದಲ್ಲಿ ಕಟ್ಟೆಚ್ಚರ

Thursday, August 29th, 2019
Karavali-kattecchara

ಮಂಗಳೂರು : ಕರಾವಳಿ ತೀರದಲ್ಲಿ ಕಟ್ಟುನಿಟ್ಟಿನ ಭದ್ರತೆ ನಿರಂತರವಾಗಿ ಮುಂದುವರಿಯಲಿದೆ. 15 ದಿನಗಳಿಂದ ಕಡಲ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಡಾ| ಹರ್ಷ ಪಿ.ಎಸ್‌. ಅವರು ತಿಳಿಸಿದ್ದಾರೆ. ಕಡಲು ಅಥವಾ ಕಡಲ ತೀರದಲ್ಲಿ ಶಂಕಿತ ಬೋಟ್‌ ಮತ್ತು ವ್ಯಕ್ತಿಗಳು ಕಂಡುಬಂದರೆ ಮಾಹಿತಿ ನೀಡುವಂತೆ ಮೀನುಗಾರರನ್ನು ಕೇಳಿಕೊಳ್ಳಲಾಗಿದೆ. ಮಾರ್ಕೆಟ್‌, ಮಾಲ್‌, ಆಸ್ಪತ್ರೆ, ಬಸ್ಸು- ರೈಲು ನಿಲ್ದಾಣಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದವರು ವಿವರಿಸಿದರು. ಸರಕಾರಿ ಲಾಂಛನವನ್ನು ಅನಧಿಕೃತವಾಗಿ ಬಳಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಟ್ರಾಫಿಕ್‌ […]

ಕರಾವಳಿಯಲ್ಲಿ ಮತ್ತೆ ಉಂಟಾಗುತ್ತಿದೆ, ಡೆಂಗ್ಯೂ ಜ್ವರ

Monday, August 26th, 2019
dengue

ಮಂಗಳೂರು : ಕರಾವಳಿಯಲ್ಲಿ ಈಗ ಮಳೆ ಬಿಟ್ಟೂ ಬಿಟ್ಟು ಬರುತ್ತಿದ್ದು, ಆಗಾಗ ಬಿಸಿಲು ಕಾಣಿಸಿಕೊಳ್ಳುತ್ತಿದೆ. ಇದು ಸೊಳ್ಳೆ ಸಂತಾನಾಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಿ ಮತ್ತೆ ಡೆಂಗ್ಯೂ ಉಲ್ಬಣಿಸಲು ಕಾರಣವಾಗಬಹುದೇ ಎಂಬ ಭೀತಿ ಉಂಟಾಗಿದೆ. ಈ ಕುರಿತು ಮಾತನಾಡಿರುವ ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ.ನವೀನ್‌ಚಂದ್ರ, ಶಂಕಿತ ಡೆಂಗ್ಯೂವಿನಿಂದ ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ 6 ಮಂದಿಯ ರಕ್ತವನ್ನು ಎಲಿಸಾ ಪರೀಕ್ಷೆಗೆ ಕಳುಹಿಸಲಾಗಿದೆ. ಉಳಿದವರ ರಕ್ತವನ್ನೂ ಪರೀಕ್ಷೆಗೆ ಕಳುಹಿಸಲಾಗುವುದು. ಜಿಲ್ಲೆಯಲ್ಲಿ ಪ್ರಾಥಮಿಕ ಪರೀಕ್ಷೆಯಲ್ಲಿ ಡೆಂಗ್ಯೂ ಪಾಸಿಟಿವ್ ಎಂಬ […]

ಕರಾವಳಿಯಲ್ಲಿ ವಾಯುಭಾರ ಕುಸಿತದಿಂದ ಮತ್ತೆ ಭಾರೀ ಮಳೆಯಾಗುವ ಸೂಚನೆ

Thursday, August 8th, 2019
Subrhmanya

ಮಂಗಳೂರು : ಕರಾವಳಿಯಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಿರುವ ಹವಾಮಾನ ಇಲಾಖೆ ಮತ್ತೆ ವಾಯುಭಾರ ಕುಸಿತದಿಂದ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ವರ್ಷಾಧಾರೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತೆ ಶಾಲೆ-ಕಾಲೇಜಿಗೆ ರಜೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಳದ ಸಮೀಪ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಪ್ರವಾಹ ಅಧಿಕವಾಗಿದ್ದು ನದಿಯಲ್ಲಿ ಬೃಹತ್ ಎರಡು ಮರಗಳು ನೀರಿನಲ್ಲಿ ಬಂದು ಕಿಂಡಿ ಅಣೆಕಟ್ಟಿಗೆ ಸಿಲುಕಿ ಕೃತಕ ಪ್ರವಾಹ ಉಂಟಾಗಿ ಶಿಶಿಲ […]

ಕರಾವಳಿ ದೇವಸ್ಥಾನಗಳಿಗೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್..!

Monday, December 17th, 2018
yash-star

ಕೊಲ್ಲೂರು: ಕನ್ನಡ ಚಲನಚಿತ್ರ ರಂಗದ ಖ್ಯಾತ ಯುವ ನಟ ಯಶ್‌ ಅವರು ರವಿವಾರ ಕರಾವಳಿಯ ಪ್ರಮುಖ ದೇಗುಲಗಳಿಗೆ ಭೇಟಿ ನೀಡಿ ಪೂಜೆ, ಸೇವೆ ಸಲ್ಲಿಸಿದರು. ಇತ್ತೀಚೆಗೆ ಹೆಣ್ಣುಮಗುವಿನ ತಂದೆಯಾಗಿರುವ ಯಶ್‌ ಅವರ ಹೊಸ ಸಿನೆಮಾ ಬಿಡುಗಡೆಯ ಹಂತದಲ್ಲಿದೆ. ಕರಾವಳಿ ತೀರ್ಥಯಾತ್ರೆಯ ಆರಂಭದಲ್ಲಿ ಯಶ್‌ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕೊಲ್ಲೂರು ದೇಗುಲಕ್ಕೆ ರೂ. 1.06 ಲಕ್ಷ ದೇಣಿಗೆ ನೀಡಿದರು. ಕೊಲ್ಲೂರು ದೇಗುಲದ […]