Blog Archive

ಸಾಧಕರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2015ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ

Monday, September 26th, 2016
tulu academy award

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ 2015ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನವನ್ನು ಶನಿವಾರ  ತುಳು ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಡಾ.ಇಂದಿರಾ ಹೆಗ್ಡೆ (ತುಳು ಸಾಹಿತ್ಯ ಮತ್ತು ಸಂಶೋಧನೆ), ಕೋಟಿ ಪರವ (ತುಳು ಜಾನಪದ) ಹಾಗೂ ಬೇತ ಕುಂಞ ಕುಲಾಲ್ (ತುಳು ಯಕ್ಷಗಾನ) ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ 2015ನೇ ಸಾಲಿನ ಗೌರವ ಪ್ರಶಸ್ತಿ ಸ್ವೀಕರಿಸಿದರು. 2015ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಯಡಿ ತುಳು ಕಥಾ ವಿಭಾಗದಲ್ಲಿ `ಗುತ್ತುದಿಲ್ಲದ […]

ಫೆಬ್ರವರಿ 24 ರಂದು ದೆಹಲಿಯಲ್ಲಿ ನಡೆಯಲಿರುವ ತುಳುವರ ಜಾಗತಿಕ ಸಮ್ಮೇಳನ ‘ದೆಹಲಿ ತುಳು ಸಿರಿ’

Tuesday, February 19th, 2013
Delhi Tulu Siri

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಫೆಬ್ರವರಿ 24 ರಂದು ಬಾನುವಾರ ದೆಹಲಿಯಲ್ಲಿ ಬೃಹತ್ ‘ದೆಹಲಿ ತುಳು ಸಿರಿ’ ತುಳುವರ ಸಮ್ಮೇಳನವನ್ನು ಅಯೋಜಿಸಲಾಗಿದ್ದು. ಈ ಸಮ್ಮೆಳನದಲ್ಲಿ  ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಸಲುವಾಗಿ ಕೇಂದ್ರ ಸರಕಾರವನ್ನು ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಶ್ರೀ ಉಮಾನಾಥ ಎ.ಕೋಟ್ಯಾನ್ ಅವರು ಇಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಹಾಗೂ ಮಾನ್ಯತೆಗಾಗಿ ಕರ್ನಾಟಕ ತುಳು […]

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

Wednesday, March 28th, 2012
World Theatre Day

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳವಾರ ಅಕಾಡೆಮಿ ಚಾವಡಿಯಲ್ಲಿ ನಡೆದ ವಿಶ್ವ ರಂಗಭೂಮಿ ದಿನಾಚರಣೆ-ತುಳು ರಂಗಭೂಮಿಯ ಬೆಳವಣಿಗೆ ಕುರಿತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮಾನಾಥ ಎ. ಕೋಟ್ಯಾನ್‌ ವಹಿಸಿದ್ದರು. ಕಲಾವಿದರು ರಾತ್ರಿಯಿಡೀ ನಿದ್ದೆಗೆಟ್ಟು ಪ್ರದರ್ಶನ ನೀಡಿ ಪ್ರೇಕ್ಷಕರನ್ನು ಮನರಂಜಿಸಿ ತಮ್ಮ ಪ್ರತಿಭೆಗೆ ಸರಿಯಾದ ಮಾನ್ಯತೆ ದೊರೆಯದ ಕಾಲವೊಂದಿತ್ತು. ಈಗ ಅದು ಬದಲಾಗಿದೆ ರಂಗಭೂಮಿಯಲ್ಲಿ ಹಲವಾರು ಬದಲಾವಣೆಗಳಾಗಿವೆ, ಕಲಾವಿದರಿಗೆ ಪ್ರತಿಭೆಗೆ ತಕ್ಕ ಪ್ರಾಧಾನ್ಯತೆ ಸಿಕ್ಕುತ್ತಿದೆ ಎಂದು ಅವರು […]

ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರಗಳನ್ನು ಚಿಕ್ಕಂದಿನಲ್ಲೇ ಕಲಿಸಬೇಕು : ಒಡಿಯೂರು ಶ್ರೀ

Sunday, September 18th, 2011
Odiyooru Sree

ವಿಟ್ಲ : ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಮತ್ತು ಶ್ರೀ ಗುರುದೇವದತ್ತ ಸಂಸ್ಥಾನಮ್‌ ಒಡಿಯೂರು ಇದರ ಜಂಟೀ ಆಶ್ರಯದಲ್ಲಿ ಒಡಿಯೂರು ಜ್ಞಾನ ಮಂದಿರದಲ್ಲಿ ಮೂರು ದಿನಗಳ ಕವಿತಾ ರಚನಾ ಕಮ್ಮಟವನ್ನು ಒಡಿಯೂರು ಶ್ರೀ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ರವಿವಾರ ದೀಪ ಬೆಳಗಿಸಿ ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಒಡಿಯೂರು ಶ್ರೀಗಳು ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರಗಳನ್ನು ಚಿಕ್ಕಂದಿನಲ್ಲೇ ಕಲಿಸಬೇಕು. ಮಕ್ಕಳಲ್ಲಿ ತುಳು ಭಾಷೆಯ ಪ್ರೀತಿಯನ್ನು ಬೆಳೆಸಬೇಕು. ಪ್ರತಿ ಮನೆಯಲ್ಲಿಯೂ ಸನಾತನ ತುಳು ಸಂಸ್ಕೃತಿಯನ್ನು ಬೆಳೆಸುವ ಕೆಲಸ […]

ತುಳು ಸಾಹಿತ್ಯ ಅಕಾಡೆಮಿ ಕಟ್ಟಡ ನಿಮರ್ಾಣಕ್ಕೆ ರೂ.2 ಕೋಟಿ ಮಂಜೂರು

Friday, July 8th, 2011
palthady-ramakrishna-achar

ಮಂಗಳೂರು: ಕರ್ನಾಟಕ ಸರ್ಕಾರ ಕರ್ನಾಟಕ ಸರ್ಕಾರ ಅಭಿವೃದ್ಧಿಗೆ ಅನೇಕ ಪ್ರಗತಿಪರ ಕಾರ್ಯಗಳನ್ನು ಮಾಡುತ್ತಿದ್ದು,ಇದೀಗ ಕರ್ನಾಟಕ ತುಳು ಸಾಹಿತ್ಯ ತುಳು ಭಾಷೆ ಹಾಗೂ ಸಾಹಿತ್ಯ ಅಕಾಡೆಮಿ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಗಳನ್ನು ಮಂಜೂರು ಮಾಡಿದೆಯೆಂದುಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇದರ ಅಧ್ಯಕ್ಷರಾದ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ತಿಳಿಸಿದ್ದಾರೆ. ತುಳು ಸಾಹಿತ್ಯಾಭಿವೃದ್ಧಿಗೆ ಸಾಹಿತ್ಯ ಕಟ್ಟಡ ನಿಮರ್ಾಣಕ್ಕಾಗಿ ರೂ.2 ಕೋಟಿ ಮಂಜೂರು ಮಾಡಲು ಸಹಕಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜೆ.ಕೃಷ್ಣ ಪಾಲೇಮಾರ್ರವರಿಗೆ ಡಾ.ರಾಮಕೃಷ್ಣ ಆಚಾರ್ […]