Blog Archive

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ : ಸಚಿವ ಕೆ.ಎಸ್. ಈಶ್ವರಪ್ಪ

Saturday, November 30th, 2019
Eshwarappa

ಬೆಂಗಳೂರು : ಸಿದ್ದರಾಮಯ್ಯ ಅವರಿಗೆ ಮುಪ್ಪು ಬಂದಿದೆ, ದೇಶ, ಸಮಾಜ, ಅಭಿವೃದ್ಧಿಗಾಗಿ ಧ್ಯಾನ ಮಾಡಲಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ. ಇನ್ನಾದರೂ ದೇಶ, ಧರ್ಮ, ಹಿಂದುಳಿದವರು, ದಲಿತರ ಉದ್ದಾರಕ್ಕೆ ಪ್ರಯತ್ನಿಸಲಿ, ಧ್ಯಾನ‌ ಮಾಡಲಿ ಎಂದು ಹೇಳಿದರು. ಸಿದ್ದರಾಮಯ್ಯ ಅವರು ತಾವು ಹೋದ ಪಕ್ಷವನ್ನು ಛಿದ್ತ ಛಿದ್ರ ಮಾಡುತ್ತಿದ್ದಾರೆ. ಜಾತಿ, ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿದ್ದಾರೆ. ಅವರು ಖಂಡಿತ ಮುಂದೆ […]

ಕೊಡಗು ಜಿ.ಪಂ.ನೂತನ ಭವನ ಉದ್ಘಾಟನೆ

Friday, October 25th, 2019
kodagu jilla panchayath

ಮಡಿಕೇರಿ : ನಗರದ ಹೊರ ವಲಯದಲ್ಲಿ 25ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಜಿಲ್ಲಾ ಪಂಚಾಯಿತಿ ನೂತನ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ರಾಜ್ಯ ಹಾಗೂ ಜಿಲ್ಲೆಯಲ್ಲಿ ನೆರೆಯಿಂದಾಗಿ ಕೃಷಿ ಸೇರಿದಂತೆ ಇತರೆ ಬೆಳೆ ನಷ್ಟವಾಗಿದ್ದು, ಬೆಳೆ ಪರಿಹಾರವನ್ನು ಎಂಟು ಹತ್ತು ದಿನದಲ್ಲಿ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಅವರು ತಿಳಿಸಿದರು. ಕಳೆದ ಬಾರಿ […]

ಸುಪ್ರೀಂಕೋರ್ಟ್ ನಲ್ಲಿ ಅನರ್ಹ‌ ಶಾಸಕರಿಗೆ ನ್ಯಾಯ ಸಿಗುವ ವಿಶ್ವಾಸವಿದೆ : ಕೆ.ಎಸ್.ಈಶ್ವರಪ್ಪ

Saturday, September 28th, 2019
eshwarappa

ಶಿವಮೊಗ್ಗ : ಸುಪ್ರೀಂಕೋರ್ಟ್ ಅನರ್ಹ ಶಾಸಕರ ವಿಚಾರದಲ್ಲಿ ಯಾವ ನಿಲುವು ತೆಗೆದುಕೊಳ್ಳುತ್ತದೆಯೋ ಯಾರಿಗೂ ಗೊತ್ತಿಲ್ಲ. ಅವರು ಅನರ್ಹರು ಅಂತ ನಾನಲ್ಲ, ದೇವರೇ ಬಂದು ಹೇಳಿದರೂ ಆಗಲ್ಲ. ಅದನ್ನು ಕೋರ್ಟ್ ತೀರ್ಮಾನ ಮಾಡುತ್ತದೆ ಎಂದು‌ ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಹೇಳಿದರು. ಸುಪ್ರೀಂಕೋರ್ಟ್ ಅಂದಿನ‌ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಶಾಸಕರ ರಾಜೀನಾಮೆ ಅಂಗೀಕಾರ ಮಾಡ್ತೀರಾ, ಇಲ್ಲ ತಿರಸ್ಕಾರ ಮಾಡ್ತೀರಾ ಅಂತ ಕೇಳಿತ್ತು. ಆದ್ರೆ ರಮೇಶ್ ಕುಮಾರ್ ಎರಡನ್ನು ಬಿಟ್ಟು‌ ಸಿದ್ದರಾಮಯ್ಯನವರ ಮಾತು ಕೇಳಿ ಶಾಸಕರನ್ನು ಅನರ್ಹರನ್ನಾಗಿ […]

ಮೋದಿ ಅವರನ್ನು ವಿಶ್ವವೇ ಒಪ್ಪಿದ್ದರೂ ಪಾಕಿಸ್ತಾನ ಹಾಗೂ ಸಿದ್ದರಾಮಯ್ಯ ಮಾತ್ರ ದ್ವೇಷಿಸುತ್ತಾರೆ: ಕೆ.ಎಸ್.ಈಶ್ವರಪ್ಪ

Thursday, August 9th, 2018
ishwarappa

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವವೇ ಒಪ್ಪಿದ್ದರೂ ಪಾಕಿಸ್ತಾನ ಹಾಗೂ ಸಿದ್ದರಾಮಯ್ಯ ಮಾತ್ರ ದ್ವೇಷಿಸುತ್ತಾರೆ ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೂ ಮುನ್ನ ಮೋದಿಯನ್ನು ಕೊಲೆಗಡುಕ ಅಂದಿದ್ದರು. ಹಿಂದುಳಿದ ವರ್ಗಗಳ ದ್ವೇಷಿ ಅಂತಾ ಕರೆದಿದ್ದರು. ತಮ್ಮನ್ನು ತಾವು ಅಹಿಂದ ವರ್ಗಗಳ ಚಾಂಪಿಯನ್ ಎಂದುಕೊಳ್ಳುವ ಸಿದ್ದರಾಮಯ್ಯ ಒಬಿಸಿ ಶಾಶ್ವತ ಆಯೋಗಕ್ಕೆ ರಾಜ್ಯಸಭೆಯಲ್ಲಿ ಬೆಂಬಲ ಕೊಡಿಸಲಿಲ್ಲ ಎಂದು ದೂರಿದರು‌. 3 ತಿಂಗಳೋ- 6 ತಿಂಗಳೋ ಸರ್ಕಾರ ಇರಲಿದ್ದು, ಈ […]

ಕಾಡಿಗೆ ಬೆಂಕಿ ಹಚ್ಚುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು: ಆರ್.ಶಂಕರ್

Monday, July 9th, 2018
R-Shankar

ಬೆಂಗಳೂರು : ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ದುಷ್ಕರ್ಮಿಗಳು ಕಳ್ಳ ಸಾಗಾಣಿಕೆ ಮಾಡುವುದು ಮತ್ತು ಅದನ್ನು ಮುಚ್ಚಿ ಹಾಕಲು ಕಾಡಿಗೆ ಬೆಂಕಿ ಹಚ್ಚುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಆರ್. ಶಂಕರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಇಂದು ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಹಿರಿಯ ಸದಸ್ಯ ಕೆ.ಎಸ್. ಈಶ್ವರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರಣ್ಯದಲ್ಲಿ ಅಕ್ರಮವಾಗಿ ಮರಗಳ ಕಳ್ಳ ಸಾಗಾಣಿಕೆ ಹಾಗೂ ಬೇಕಂತಲೆ ಕಾಡಿಗೆ ಬೆಂಕಿ ಹಚ್ಚುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಕಳೆದ […]

ಬಜೆಟ್​ನಲ್ಲಿ ಸಾಲಮನ್ನಾ ಘೋಷಣೆ ಮಾಡಲೇಬೇಕು..ಇಲ್ಲವಾದಲ್ಲಿ ಉಗ್ರ ಹೋರಾಟ: ಕೆ.ಎಸ್ ಈಶ್ವರಪ್ಪ

Wednesday, July 4th, 2018
eshwarappa

ಬೆಂಗಳೂರು: ಬಜೆಟ್ನಲ್ಲಿ ಸಾಲಮನ್ನಾ ಘೋಷಣೆ ಮಾಡಲೇಬೇಕು. ಇಲ್ಲವಾದಲ್ಲಿ ಬಿಜೆಪಿ ರಾಜ್ಯವ್ಯಾಪಿ ಉಗ್ರ ಹೋರಾಟ ಮಾಡಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮುಂದುವರೆಯುತ್ತದೆ. ಬಳಿಕ ಸಿಎಂ ಏನು ಉತ್ತರ ನೀಡಲಿದ್ದಾರೆ ಎಂದು ನೋಡುತ್ತೇವೆ. ಬಜೆಟ್ನಲ್ಲಿ ಸಾಲಮನ್ನಾ ಘೋಷಣೆ ಮಾಡಲೇಬೇಕು, ಇಲ್ಲವಾದಲ್ಲಿ ಬಿಜೆಪಿ ರಾಜ್ಯ ವ್ಯಾಪಿ ಉಗ್ರ ಹೋರಾಟ ಮಾಡಲಿದೆ. ಶಾಸಕರ ನಿಧಿ ವಾಪಸ್ಗೆ ಬೆಂಬಲವಿದೆ. ಖರ್ಚಾಗದೇ ಉಳಿದ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳೋದಾದರೆ ಅದು […]

ಶಿವಮೊಗ್ಗ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ ಭರ್ಜರಿ ಗೆಲುವು

Tuesday, May 15th, 2018
k-s-ishwarappa

ಶಿವಮೊಗ್ಗ : ಕಳೆದ ಬಾರಿ… ಅಂದ್ರೆ 2013 ರ ವಿಧಾನಸಭೆ ಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ್ದ ಕೆ.ಎಸ್.ಈಶ್ವರಪ್ಪ ಮುಖದಲ್ಲಿ ಇದೀಗ ಮಂದಹಾಸ ಮೂಡಿದೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ ಗೆಲುವಿನ ನಗೆ ಬೀರಿದ್ದಾರೆ. ಹಾಲಿ ಶಾಸಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಸನ್ನ ಕುಮಾರ್ ವಿರುದ್ಧ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕೆಜೆಪಿ ನಡುವಿನ ಮತ […]

ಶಿಘ್ರದಲ್ಲೇ ಡಿ.ವಿ.ಸದಾನಂದ ಗೌಡರ ಸಂಪುಟ ವಿಸ್ತರಣೆ

Monday, May 7th, 2012
Dv Sadananada Gowda

ಬೆಂಗಳೂರು : ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಇನ್ನು ಒಂದು ವಾರದಲ್ಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಸೋಮವಾರ ಮತ್ತೊಮ್ಮೆ ಹೇಳಿದ್ದಾರೆ. ಸುಮಾರು 21 ಖಾತೆಗಳ ಹೊರೆಯನ್ನು ಹೊಂದಿರುವ ಅವರು ಖಾತೆ ಹಂಚಿಕೆಯ ಮೂಲಕ ತಮ್ಮ ಮೇಲಿರುವ ಜವಾಬ್ದಾರಿಯನ್ನು ಕಡಿಮೆ ಮಾಡಲು ಮುಂದಾಗಿದ್ದಾರೆ. ಸಂಪುಟ ಪುನಾರಚನೆ, ಖಾತೆ ಹಂಚಿಕೆ ಸಂಬಂಧ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಿ ವಿಸ್ತರಿಸುವುದಾಗಿ ಸಿಎಂ ವಿಶ್ವಾಸದಿಂದ ಹೇಳಿದ್ದಾರೆ. ಸುಮಾರು 21 ಖಾತೆಗಳ ಭಾರ ಹೊರುವುದು ಸುಲಭವಲ್ಲ. ಎಲ್ಲ ಖಾತೆಗಳಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ […]