Blog Archive

ಕೊರೊನಾ ಸಮರಕ್ಕೆ ಕೇಂದ್ರ ಸರ್ಕಾರದಿಂದ1.70 ಲಕ್ಷ ಕೋಟಿ ರೂ.ಪ್ಯಾಕೇಜ್  : ನಳಿನ್‌ಕುಮಾರ್ ಶ್ಲಾಘನೆ

Thursday, March 26th, 2020
Nalin Kumar K

ಮಂಗಳೂರು : ಕೊರೊನಾ ಸೋಂಕು ಹರಡದಂತೆ ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಇದೀಗ 1.70 ಲಕ್ಷ ಕೋಟಿ ರೂ.ಪ್ಯಾಕೇಜ್ ಘೋಷಿಸುವ ಮೂಲಕ ಕೇಂದ್ರ ಸರ್ಕಾರ ಮಹತ್ವದ ಸ್ಪಂದನೆ ನೀಡಿದೆ. ಸೋಂಕು ನಿವಾರಣೆ ಹೋರಾಟದ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುವವರಿಗೆ ತಲಾ ೫೦ ಲಕ್ಷ ರೂ. ಮೌಲ್ಯದ ಮೆಡಿಕಲ್ ಇನ್ಸೂರೆನ್ಸ್ ಒದಗಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯದ ಜನತೆಯ ಪರವಾಗಿ ಅಭಿನಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ […]

ಮೀಸಲಾತಿ ಗೊಂದಲ : ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Monday, February 17th, 2020
cog.pratibhatane

ಮಡಿಕೇರಿ : ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಇದ್ದ ಮೀಸಲಾತಿಯ ಹಕ್ಕನ್ನು ದುರ್ಬಲಗೊಳಿಸಲು ಹೊರಟಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೀಸಲಾತಿ ಪ್ರತಿಪಾದನೆ ಕುರಿತು ಸರ್ಕಾರ ಮತ್ತೆ ಸುಪ್ರೀಂಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ […]

ಕೇಂದ್ರ ಸರ್ಕಾರದ ವಿರುದ್ಧ ಕೊಡಗು ಕಾಂಗ್ರೆಸ್ ಪ್ರತಿಭಟನೆ : ಆರ್ಥಿಕ ನೀತಿಗೆ ಖಂಡನೆ

Wednesday, November 13th, 2019
Kodagu

ಮಡಿಕೇರಿ : ಕೇಂದ್ರ ಸರ್ಕಾರ ಜನ ವಿರೋಧಿ ಆರ್ಥಿಕ ನೀತಿ ಅನುಸರಿಸುತ್ತಿದೆ ಮತ್ತು ದೇಶವನ್ನು ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಡಳಿತದ ಭವನದ ಎದುರು ಪ್ರತಿಭಟನೆ ನಡೆಸಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮುಂಜುನಾಥ್ ಕುಮಾರ್ ಲೋಕಸಭಾ ಚುನಾವಣೆಯ […]

ಕಾಂಗ್ರೆಸ್​ನಲ್ಲಿ ಗುಂಪುಗಾರಿಕೆ ಇಲ್ಲ : ಮಲ್ಲಿಕಾರ್ಜುನ ಖರ್ಗೆ

Wednesday, October 9th, 2019
kharge

ಕಲಬುರಗಿ : ಕಾಂಗ್ರೆಸ್ ಸೇರಿದ ಮೇಲೆ ಎಲ್ಲರೂ ಕಾಂಗ್ರೆಸ್ಸಿಗರೆ ಹೊರತಾಗಿ ಮೂಲ, ವಲಸೆ ಕಾಂಗ್ರೆಸ್ಸಿಗರು ಅನ್ನೋ ಪ್ರಶ್ನೆಯೇ ಇಲ್ಲ. ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಇರಬಹುದು. ಆದರೆ, ಕಾಂಗ್ರೆಸ್ನಲ್ಲಿ ಗುಂಪುಗಾರಿಕೆ ಇಲ್ಲ ಎಂದು ಎಐಸಿಸಿ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ದೊಡ್ಡ ಸಮುದ್ರ, ಇಲ್ಲಿ ಎಲ್ಲಾ ನದಿಗಳು ಬಂದು ಸೇರುತ್ತವೆ. ಹಾಗೆ ಪಕ್ಷಕ್ಕೆ ಬರುವವರು ಒಟ್ಟಾಗಿ ಇರ್ತಾರೆ. ಇಲ್ಲಿ ಗುಂಪುಗಾರಿಕೆಗೆ ಅವಕಾಶವಿಲ್ಲ. ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಇರುವುದು ಸಹಜ. ಇದನ್ನೇ ಮಾಧ್ಯಮದವರು ಮಸಾಲೆ ಹಚ್ಚಿ ವೈಭವೀಕರಿಸಿ […]

ಎರಡು ಆದೇಶಗಳಲ್ಲಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದೆ : ಆರ್.ಅಶೋಕ್

Saturday, October 5th, 2019
R-Ashok

ಬೆಂಗಳೂರು : ರಾಜ್ಯದಲ್ಲಿ ನೆರೆಯಿಂದ ಆಗಿರುವ ಒಟ್ಟು ಅಂದಾಜು ಹಾನಿ 38,000 ಕೋಟಿ ರೂ. ಆದರೆ ಎನ್‍ಡಿಆರ್‍ಎಫ್ ನಿಯಮಾವಳಿ ಪ್ರಕಾರ ರಾಜ್ಯಕ್ಕೆ 3,810.80 ಕೋಟಿ ರೂ. ಬರಬೇಕು. ಅದರಲ್ಲಿ ಮೊದಲ ಕಂತು 1,200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಎರಡು ಪ್ರತ್ಯೇಕ ಆದೇಶಗಳಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಳುಹಿಸಿದ ಅಂದಾಜು ನಷ್ಟದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ, […]

ಕೇಂದ್ರ ಸರ್ಕಾರ, ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ : ಪ್ರಿಯಾಂಕ್ ಖರ್ಗೆ

Friday, August 30th, 2019
priyank-kharge

ಕಲಬುರಗಿ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಪ್ಪಿತಸ್ಥರು ಎಂದು ಎಲ್ಲಿಯೂ ಕಂಡು ಬಂದಿಲ್ಲ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿರವಾಗುತ್ತಿದೆ. ಹೀಗಾಗಿ ಪ್ರತಿಪಕ್ಷಗಳನ್ನು ನಿಯಂತ್ರಣದಲ್ಲಿ ಇಡಬೇಕೆಂದು ಈ ರೀತಿ ಕೇಂದ್ರ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿ‌ಪಕ್ಷಗಳ ವಿರುದ್ಧ ಜಾರಿ ನಿರ್ದೆಶನಾಲಯ‌ ಹಾಗೂ ಇತರ ಸಂಸ್ಥೆಗಳು ಅಸ್ತ್ರ‌ ಬಳಸಿಕೊಳ್ಳುತ್ತಿದೆ‌. ಕರ್ನಾಟಕದಲ್ಲೂ ಕೇಂದ್ರ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು […]

ಮಂಗಳೂರು ಏರ್​ಪೋರ್ಟ್​ ಖಾಸಗೀಕರಣ ವಿರೋಧಿಸಿ ಕಾರ್ಮಿಕರ ಪ್ರತಿಭಟನೆ

Tuesday, December 11th, 2018
ಮಂಗಳೂರು ಏರ್​ಪೋರ್ಟ್​ ಖಾಸಗೀಕರಣ ವಿರೋಧಿಸಿ ಕಾರ್ಮಿಕರ ಪ್ರತಿಭಟನೆ

ಮಂಗಳೂರು: ಕೇಂದ್ರ ಸರ್ಕಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು‌ ಖಾಸಗೀಕರಣ ಮಾಡಲು ಹೊರಟಿರುವುದನ್ನು ವಿರೋಧಿಸಿ ವಿಮಾನ ನಿಲ್ದಾಣದ ಕಾರ್ಮಿಕರ ಒಕ್ಕೂಟದಿಂದ ಇಂದಿನಿಂದ ಮೂರು ದಿನಗಳ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣ ಕಾರ್ಮಿಕಾಧಿಕಾರಿಗಳ ಒಕ್ಕೂಟಗಳ ಶಾಖಾ ಕಾರ್ಯದರ್ಶಿ ಶ್ರವಣ್ ಕುಮಾರ್ ಧರಣಿಯನ್ನು ಉದ್ಘಾಟಿಸಿದರು. ಈ ಸಂದರ್ಭ ಭೇಟಿ ನೀಡಿದ್ದ ಕಾಸರಗೋಡಿನ ಸಂಸದ ಪಿ.ಕರುಣಾಕರನ್ ಮಾತನಾಡಿ, ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ, ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುವೆ ಎಂದು ಹೇಳಿದ್ರು. ವಿಮಾನ ನಿಲ್ದಾಣ ಕಾರ್ಮಿಕಾಧಿಕಾರಿಗಳ ಒಕ್ಕೂಟಗಳ ಶಾಖಾ ಅಧ್ಯಕ್ಷ […]

ರಫೆಲ್ ಹಗರಣ ಮುಚ್ಚಿಹಾಕಲು ಕೇಂದ್ರ ಸರ್ಕಾರ ಸಂಚು: ಯು.ಟಿ. ಖಾದರ್

Saturday, November 3rd, 2018
u-t-khader-2

ಮಂಗಳೂರು: ರಫೆಲ್ ಹಗರಣವನ್ನು ಮುಚ್ಚಿ ಹಾಕಲು ಕೇಂದ್ರ ಸರ್ಕಾರವು ಸಿಬಿಐನ ಮುಖ್ಯಸ್ಥರನ್ನು ರಾತ್ರೋರಾತ್ರಿ ಅನಿರ್ಧಿಷ್ಟಾವಧಿ ರಜೆ ನೀಡಿ ಕಳುಹಿಸಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಕಿಡಿಕಾರಿದ್ದಾರೆ. ನಗರಲಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಬಿಐ ಡೈರೆಕ್ಟರ್ನ್ನು ಯಾವುದೇ ಕಾರಣವಿಲ್ಲದೆ ಅನಿರ್ಧಿಷ್ಟಾವಧಿ ರಜೆಗೆ ಕಳುಹಿಸಿರುವುದರ ಬಗ್ಗೆ ದೇಶದ ಜನತೆಗೆ ಕೇಂದ್ರ ಸರ್ಕಾರ ಉತ್ತರಿಸಬೇಕು. ಸಿಬಿಐ ಮುಖ್ಯಸ್ಥರನ್ನು ಯಾಕಾಗಿ ರಜೆಗೆ ಕಳುಹಿಸಿದ್ದಾರೆ? ಅದರ ಉದ್ದೇಶವೇನು? ರಾತ್ರಿ ಎರಡು ಗಂಟೆಗೆ ಪ್ರಧಾನಮಂತ್ರಿ ಕಚೇರಿಯಿಂದ ಆದೇಶ ಬರಲು […]

ಕೇಂದ್ರ ಸರ್ಕಾರಕ್ಕೆ 4ರ ಸಂಭ್ರಮ: ಮಂಗಳೂರಲ್ಲಿ ‌ಮಹಿಳಾ ಕಾಂಗ್ರೆಸ್ ಪ್ರತಿಭಟನೆ

Saturday, May 26th, 2018
protest

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಾಲ್ಕು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯು.ಟಿ‌.ಖಾದರ್, ಮೋದಿ‌ ಅಧಿಕಾರಕ್ಕೆ ಬಂದಾಗ ತಾನು ದೇಶದ ಗೇಟ್ ಕೀಪರ್ ಆಗುತ್ತೇನೆ ಎಂದರು. ಆದರೆ ಇವರ‌ ಜೊತೆ ಫೋಟೋ ತೆಗೆಸಿಕೊಂಡು ಕೆಲವರು ಸಾವಿರಾರು ಕೋಟಿ ಸಮೇತ ವಿದೇಶಕ್ಕೆ ಹಾರಿದ್ದಾರೆ. […]

‘ನಮ್ಮಷ್ಟು ಹಿಂದೂಪರ ಕೆಲಸ ಯಾರೂ ಮಾಡಿಲ್ಲ: ಪ್ರಮೋದ್ ಮಧ್ವರಾಜ್

Thursday, February 8th, 2018
udupi-pramod

ಉಡುಪಿ:‘ಕಾಂಗ್ರೆಸ್ ಸರ್ಕಾರ ಮಾಡಿದಷ್ಟು ಹಿಂದೂಪರವಾದ ಕೆಲಸವನ್ನು ಬೇರೆ ಯಾವ ಸರ್ಕಾರವೂ ಮಾಡಿಲ್ಲ’ ಎಂದು ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ‘ಮೊದಲು ದೇವಸ್ಥಾನಗಳಿಗೆ ಕೇವಲ 15 ಸಾವಿರ ಮಾತ್ರ ತಸ್ತೀಕ್ ನೀಡಲಾಗುತ್ತಿತ್ತು, ಆದರೆ ನಮ್ಮ ಸರ್ಕಾರ ಅದನ್ನು 48 ಸಾವಿರಕ್ಕೆ ಏರಿಕೆ ಮಾಡಿದೆ. ಮಠಗಳನ್ನು ಸರ್ಕಾರ ಸ್ವಾಧೀನಕ್ಕೆ ಪಡೆಯುವ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ. ಧಾರ್ಮಿಕ ದತ್ತಿ ಕಾಯ್ದೆಯನ್ನು ಪುನರ್ […]