Blog Archive

ಕೊರೊನಾ ಪಾಸಿಟಿವ್ ಸೋಂಕು ಜೂನ್ 14 : ದಕ್ಷಿಣ ಕನ್ನಡ -5, ಉಡುಪಿ -21, ಕರ್ನಾಟಕ – 176

Sunday, June 14th, 2020
corona-virus

ಮಂಗಳೂರು  :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಜೂನ್ 14 ರಂದು ಐವರಲ್ಲಿ ಕೊರೊನಾ ಪಾಸಿಟಿವ್ ಸೋಂಕು ಪತ್ತೆಯಾಗಿದೆ. ಈ ಪೈಕಿ ಮೂವರು ದುಬೈನಿಂದ ಮರಳಿದವರಾಗಿದ್ದು, ಇಬ್ಬರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ ಹನ್ನೊಂದು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯಲ್ಲಿ ರವಿವಾರ ಮತ್ತೆ 21 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತರ ಪೈಕಿ ಹದಿನೆಂಟು ಮಂದಿ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. ಉಳಿದಂತೆ ಉತ್ತರ ಪ್ರದೇಶ ಹಾಗೂ ತಮಿಳುನಾಡಿನಿಂದ ಮರಳಿದ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ೫೩ ವರ್ಷದ ವ್ಯಕ್ತಿಯಲ್ಲಿ ಸೋಂಕು […]

ಕೊರೊನಾ ಪಾಸಿಟಿವ್ ಪ್ರಕರಣ ಜೂನ್ 10 : ದಕ್ಷಿಣ ಕನ್ನಡ ಜಿಲ್ಲೆ-4, ಉಡುಪಿ ಜಿಲ್ಲೆ- 0

Wednesday, June 10th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರದಂದು ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.  ಉಡುಪಿ ಜಿಲ್ಲೆಯಲ್ಲಿ ಇಂದು  ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಸೋಂಕಿತ ನಾಲ್ವರು ಕೂಡ ಪುರುಷರಾಗಿದ್ದಾರೆ. 29 ಹಾಗೂ 30 ವರ್ಷದ ಯುವಕರು, 40 ಹಾಗೂ 60 ವರ್ಷದ ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ 29 ವರ್ಷದ ವ್ಯಕ್ತಿ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿಯಾಗಿದ್ದಾರೆ. ಸೌದಿ ಅರೇಬಿಯಾದಿಂದ್ದ ಬಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು. ಅವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇನ್ನು […]

ಕೊರೊನಾ ಪಾಸಿಟಿವ್ ಜೂನ್ 9: ದಕ್ಷಿಣ ಕನ್ನಡ ಜಿಲ್ಲೆ- 23, ಉಡುಪಿ ಜಿಲ್ಲೆ- 0

Tuesday, June 9th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 9, ಮಂಗಳವಾರ 23 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.  ಇದರಿಂದಾಗಿ ಸೋಂಕಿತರ ಸಂಖ್ಯೆ 218ಕ್ಕೆ ಏರಿಕೆಯಾಗಿದೆ ಸೋಂಕಿತರ ಪೈಕಿ ಪೈಕಿ  ಇಬ್ಬರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಮೂವರು ದುಬೈನಿಂದ ಮರಳಿದವರಾಗಿದ್ದಾರೆ. ಉಳಿದ 18 ಮಂದಿ ಸೌದಿಯಿಂದ ಮರಳಿದವರಾಗಿದ್ದಾರೆ. ಈ ಎಲ್ಲಾ 23 ಮಂದಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ 96 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 115 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಜೂನ್ 9ರಂದು ಕೊರೊನಾ ವೈರಸ್ ನ […]

ಕೊರೊನಾ ಪಾಸಿಟಿವ್‌‌ ಪ್ರಕರಣ : ದ.ಕ ಜಿಲ್ಲೆ24, ಉಡುಪಿ ಜಿಲ್ಲೆ 121

Saturday, June 6th, 2020
corona virus

ಮಂಗಳೂರು, : ದ.ಕ ಜಿಲ್ಲೆಯಲ್ಲಿ ಜೂನ್ 6ರಂದು ಶನಿವಾರ 24 ಕೊರೊನಾ ಪ್ರಕರಣ ಪತ್ತೆಯಾಗಿದ್ದರೆ, ಉಡುಪಿಯಲ್ಲಿ 121 ಕೊರೊನಾ ಪಾಸಿಟಿವ್‌‌ ಪ್ರಕರಣ ವರದಿಯಾಗಿದೆ. ದಕ್ಷಿಣ ಕನ್ನಡದಲ್ಲಿ ಶನಿವಾರ ಹದಿನೈದು ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ 65 ಸಕ್ರಿಯ ಪ್ರಕರಣಗಳಿದ್ದು, 103 ಜನರು ಚೇತರಿಸಿಕೊಂಡಿದ್ದಾರೆ ಮತ್ತು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಏಳು ಸಾವುಗಳು ದಾಖಲಾಗಿವೆ. ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 121 ಪಾಸಿಟಿವ್ ಪ್ರಕರಣಗಳಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. 16 ಮಕ್ಕಳು ಸೇರಿದಂತೆ ಎಪ್ಪತ್ತೆಂಟು ಪುರುಷರು ಮತ್ತು […]

ದ.ಕ ಕನ್ನಡ ಜಿಲ್ಲೆಯಲ್ಲಿ ಶನಿವಾರ ಎರಡು ಕೊರೊನಾ ಪಾಸಿಟಿವ್ ಪ್ರಕರಣ ದೃಢ

Saturday, May 23rd, 2020
Corona Belthangady

ಮಂಗಳೂರು : ದ.ಕ ಕನ್ನಡ ಜಿಲ್ಲೆಯಲ್ಲಿ ಶನಿವಾರ ಎರಡು ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಹಿಂತಿರುಗಿದ 20 ವರ್ಷದ ಯುವಕ ಹಾಗೂ 41 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಮಹಿಳೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಅವರ ಗಂಟಲ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಪರೀಕ್ಷೆ ಮಾಡಿದಾಗ ಸೋಂಕು ಪತ್ತೆಯಾಗಿದೆ. ಮಹಿಳೆಯಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಗ್ರಾಮಸ್ಥರೆ ಒತ್ತಾಯ ಮಾಡಿ ಪರೀಕ್ಷೆಗೊಳಪಡುವಂತೆ ತಿಳಿಸಿದ್ದರು. ಇದೀಗ ಮಹಿಳೆಯನ್ನು ಕೋವಿಡ್ ಆಸ್ಪತ್ರೆಗೆ […]

ದ.ಕ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರು ಸೇರಿ, ಒಟ್ಟು ಮೂವರಿಗೆ ಕೊರೊನಾ ಪಾಸಿಟಿವ್

Wednesday, May 6th, 2020
ದ.ಕ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರು ಸೇರಿ, ಒಟ್ಟು ಮೂವರಿಗೆ ಕೊರೊನಾ ಪಾಸಿಟಿವ್

ಮಂಗಳೂರು : ದ.ಕ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 28 ಪ್ರಕರಣ ಪತ್ತೆಯಾದಂತಾಗಿದೆ. ಸದ್ಯ 13 ಸಕ್ರಿಯಕೊರೊನಾ ಪ್ರಕರಣಗಗಳಿವೆ. ಫಸ್ಟ್ ನ್ಯೂರೋ ಆಸ್ಪತ್ರೆ ಯ ಸಂಪರ್ಕ ಹೊಂದಿದ್ದ P-536 ಮಹಿಳೆಯಿಂದ ಇಬ್ಬರಿಗೆ ಸೋಂಕು ಹರಡಿರುವುದು ಖಚಿತವಾಗಿದೆ. ಬೋಳೂರು ನಿವಾಸಿಗಳಾದ 38 ವರ್ಷದ ಮಹಿಳೆ ಹಾಗೂ 11 ವರ್ಷದ ಬಾಲಕಿಗೆ ಸೋಂಕು ಇರುವುದು ದೃಢಪಟ್ಟಿದೆ. ಬಂಟ್ವಾಳದ ಪಿ – 360 ರ ಸಂಪರ್ಕದಲ್ಲಿದ್ದ ಮೃತ ಮಹಿಳೆಯ 16 ವರ್ಷದ ಮಗಳಿಗೂ […]

ದಕ್ಷಿಣ ಕನ್ನಡದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್, ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 16

Tuesday, April 21st, 2020
BC Road

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಒಂದು ಕೊರೊನಾ ಪಾಸಿಟಿವ್ ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ದಾಖಲಾದ ಪ್ರಕರಣಗಳ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಬಂಟ್ವಾಳದಲ್ಲಿ ಭಾನುವಾರ ಮೃತಪಟ್ಟ ಮಹಿಳೆ ಪಕ್ಕದ ಮನೆಯ 67 ವರ್ಷದ ಮಹಿಳೆಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಮಹಿಳೆಯ ಮನೆಯವರೂ ಸೇರಿದಂತೆ ಮಂಗಳವಾರ 9 ಮಂದಿಯನ್ನು ಕ್ವಾರಂಟೈನ್ನಲ್ಲಿರಿಸಿ, ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ. ಬಂಟ್ವಾಳ ರಸ್ತೆಗೆ ಮಣ್ಣು ಹಾಕಿ ಬಂದ್ ಮಾಡಲಾಗಿದೆ. ಸ್ಥಳಕ್ಕೆ ಸಹಾಯಕ ಕಮೀಷನರ್ ಮದನ್ ಮೋಹನ್ ಆಗಮಿಸಿ, ಸ್ಥಳ ಪರಿಶೀಲನೆ […]

ಏಪ್ರಿಲ್ 19 : ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್, ಪೀಡಿತರ ಸಂಖ್ಯೆ ಒಟ್ಟು15 ಕ್ಕೆ ಏರಿಕೆ

Sunday, April 19th, 2020
uppinangady

ಮಂಗಳೂರು :  ಜಿಲ್ಲೆಯಲ್ಲಿ ಮತ್ತೆ ಕೊರೊನಾ  ಆತಂಕ ಹೆಚ್ಚಾಗಿದೆ.  ಕಳೆದ 12 ದಿನಗಳಲ್ಲಿ ದ.ಕ. ಜಿಲ್ಲೆಯಲ್ಲಿ ಯಾವುದೇ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಅದರ ಬಳಿಕ ಏಪ್ರಿಲ್ 17ರಂದು ಉಪ್ಪಿನಂಗಡಿ ಮೂಲದ ವ್ಯಕ್ತಿಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಅವರಿಗೆ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದ ವ್ಯಕ್ತಿಯ ಪತ್ನಿಯಲ್ಲಿ ಏಪ್ರಿಲ್ 19ರಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಈಗ ಕೊರೊನಾ ಪೀಡಿತರ ಸಂಖ್ಯೆ 15 ಕ್ಕೆ ಏರಿದೆ.  12 ಮಂದಿ ಡಿಸ್ಚಾರ್ಜ್ ಆಗಿದ್ದಾರೆ