Blog Archive

ಮಹಾಮಾರಿ ಕೊರೋನಾ ವೈರಸ್​ಗೆ ಇಟಲಿಯಲ್ಲಿ ಒಂದೇ ದಿನಕ್ಕೆ 500 ಸಾವು

Thursday, March 19th, 2020
itali

ಇಟಲಿ : ಮಹಾಮಾರಿ ಕೊರೋನಾ ವೈರಸ್ ಇಟಲಿ ದೇಶದಲ್ಲಿ ಅಟ್ಟಹಾಸ ಮುಂದುವರಿಸಿದೆ. ಬುಧವಾರ ಒಂದೇ ದಿನ ಇಟಲಿಯಲ್ಲಿ ಬರೋಬ್ಬರಿ 475 ಜನರು ಈ ವೈರಸ್ಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 3,000 ಗಡಿ ತಲುಪಿದೆ. ಜನವರಿ ಅಂತ್ಯಕ್ಕೆ ಕೊರೋನಾ ವೈರಸ್ ಚೀನಾದಲ್ಲಿ ತನ್ನ ಪ್ರಭಾವ ಬೀರಲು ಆರಂಭಿಸಿತ್ತು. ಮೊದಲು 30 ಜನರು ಮೃತಪಟ್ಟಿದ್ದರು. ಈ ಸಂಖ್ಯೆ ಈಗ 3,245ಕ್ಕೆ ಏರಿಕೆ ಆಗಿದೆ. ನಂತರ ಈ ವೈರಸ್ ಇಟಲಿಗೂ ಹಬ್ಬಿದ್ದು, ಈ ಮಹಾಮಾರಿ ವೈರಸ್ನಿಂದ ದಿನೇ ದಿನೇ […]

ಮಾಂಸ ಆಹಾರ ಸೇವನೆಯಿಂದ ಕೊರೋನಾ ವೈರಸ್ ಹರಡುವುದಿಲ್ಲ : ಸಚಿವ ಡಾ| ಸುಧಾಕರ್

Tuesday, March 10th, 2020
sudhakar

ಬೆಂಗಳೂರು : ಮಾಂಸ ಆಹಾರ ಸೇವನೆ ಮಾಡುವುದರಿಂದ ಮಾರಣಾಂತಿಕ ಕೊರೋನಾ ವೈರಸ್ ಹರಡುವುದಿಲ್ಲ, ಕೆಲವು ಮಾರ್ಗಸೂಚಿಗಳನ್ನು ಅನುಸರಿಸಿ ಆಹಾರ ಸೇವಿಸಿದರೆ ಏನೂ ಸಮಸ್ಯೆ ಇಲ್ಲ. ಹೀಗಾಗಿ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸಚಿವ ಡಾ|ಸುಧಾಕರ್ ತಿಳಿಸಿದ್ದಾರೆ. ಕೊರೋನಾ ವೈರಸ್ ರಾಜ್ಯಕ್ಕೂ ಆವರಿಸಿರುವ ಹಿನ್ನೆಲೆ ಜನರ ಆತಂಕವನ್ನು ದೂರ ಮಾಡುವ ಸಲುವಾಗಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, “ಕೊರೋನಾ ವೈರಸ್ ಪ್ರಾಣಿಗಳಿಂದ ಹರಡಿರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಈ ರೀತಿಯ ಸುದ್ದಿಯನ್ನು ಹಬ್ಬಿಸಲಾಗುತ್ತಿದೆ. ಆದರೆ, ಮಾಂಸ […]

ಕೊರೋನಾ ವೈರಸ್​ ಭೀತಿ : ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾದೇಶ ಪ್ರವಾಸ ರದ್ದು

Monday, March 9th, 2020
PM

ನವದೆಹಲಿ : ವಿಶ್ವದೆಲ್ಲೆಡೆ ಕೊರೋನಾ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾದೇಶ ಪ್ರವಾಸವನ್ನು ರದ್ದು ಮಾಡಲಾಗಿದೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ. ಎಲ್ಲವೂ ಅಂದುಕೊಂಡತೆ ನಡೆದಿದ್ದರರೆ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾಜೊತೆಗೆ ದ್ವಿಪಕ್ಷೀಯ ಮಾತುಕತೆಗಾಗಿ ಇಂದು ಬಾಂಗ್ಲಾದೇಶಕ್ಕೆ ತೆರಳಬೇಕಿತ್ತು. ಅಲ್ಲದೆ, ವಿವಿಧ 7 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಮಾರಣಾಂತಿಕ ಕೊರೋನಾ ವೈರಸ್ ಭೀತಿ ಎಲ್ಲೆಡೆ ವ್ಯಾಪಿಸಿರುವ ಕಾರಣ ಮೋದಿ ಅವರ ಆರೋಗ್ಯದ ಹಿತದೃಷ್ಟಿಯಿಂದ ಬಾಂಗ್ಲಾ ಪ್ರವಾಸವನ್ನು ರದ್ದು ಮಾಡಲಾಗಿದೆ […]

ಕೊರೋನಾ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತೆ ವಹಿಸಿ : ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

Thursday, March 5th, 2020
G.Jagadeesha

ಉಡುಪಿ : ಕೊರೋನಾ ವೈರಸ್ ನಿಯಂತ್ರಣ ಕುರಿತಂತೆ ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲೆಯಲ್ಲಿ ಕರೋನಾ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೋನಾ ವೈರಸ್ ನಿಯಂತ್ರಣ ಕುರಿತಂತೆ ಕಾರ್ಯ ನಿರ್ವಹಿಸಲು, ಸರ್ಕಾರ ಸೂಚಿಸಿರುವ ವಿವಿಧ ಅಧಿಕಾರಿಗಳ ನೇತೃತ್ವದ ಸಮಿತಿಗಳನ್ನು ರಚಿಸುವಂತೆ ಹಾಗೂ ಎಲ್ಲಾ ಸಮಿತಿಗಳು ಪರಸ್ಪರ ಸಮನ್ವಯದಿಂದ […]

ಸಗಣಿ ಮತ್ತು ಗೋ ಮೂತ್ರದಿಂದ ಕೊರೋನಾ ವೈರಸ್ ಗುಣಪಡಿಸಬಹುದು : ಬಿಜೆಪಿ ಶಾಸಕಿ ಸುಮನ್ ಹರಿಪ್ರಿಯಾ ಹೇಳಿಕೆ

Tuesday, March 3rd, 2020
hari-preeya

ಗೌಹಾತಿ : ಚೀನಾ ಸೇರಿದಂತೆ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಇದೇ ಸಂದರ್ಭದಲ್ಲಿ ಈ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಹಾಗೂ ಈ ವೈರಸ್ ಬಾಧಿಸುವವರಿಗೆ ಔಷಧಿ ಕಂಡುಹಿಡಿಯುವ ನಿಟ್ಟಿನಲ್ಲಿ ವಿಶ್ವ ವೈದ್ಯ ಸಮೂಹವೇ ತಲೆಕೆಡಿಸಿಕೊಂಡು ಕೂತಿದೆ. ಆದರೆ ಇತ್ತ ಅಸ್ಸಾಂ ವಿಧಾನಸಭೆಯಲ್ಲಿ ಹೇಳಿಕೆಯೊಂದನ್ನು ನೀಡಿರುವ ಭಾರತೀಯ ಜನತಾ ಪಕ್ಷದ ಶಾಸಕಿ ಸುಮನ್ ಹರಿಪ್ರಿಯಾ ಅವರು ಗೋಮೂತ್ರ ಮತ್ತು ಸಗಣಿ ಕೊರೋನಾ ವೈರಸ್ ತಡೆಯುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಗೋಮೂತ್ರ […]

ಕೊರೋನಾ ವೈರಸ್ ಬಗ್ಗೆ ಭಯ ಬೇಡ; ಅಗತ್ಯ ಮುನ್ನೆಚ್ಚರಿಕೆ ವಹಿಸಿ : ಡಾ.ಕೆ.ಮೋಹನ್ ಸಲಹೆ

Monday, February 3rd, 2020
mohan

ಮಡಿಕೇರಿ : ಕೊರೋನಾ ವೈರಸ್ ಬಗ್ಗೆ ಭಯ ಬೇಡ. ಈ ವೈರಸ್ ಬಗ್ಗೆ ಈಗಾಗಲೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ವೈರಸ್ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಕೆ.ಮೋಹನ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚೀನಾ ದೇಶದಾದ್ಯಂತ ಕೊರೋನಾ ವೈರಸ್ ಹರಡಿದ್ದು, ಒಬ್ಬರಿಂದ […]