ದಕ್ಷಿಣ ಕನ್ನಡ ಜಿಲ್ಲೆಯ ಭಯೋತ್ಪಾದಕ ಫ್ಯಾಕ್ಟರಿಗಳಿಗೆ ಬೀಗ: ರಾಮಲಿಂಗಾ ರೆಡ್ಡಿ
Wednesday, March 7th, 2018ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಭಯೋತ್ಪಾದಕರ ಎರಡು ಫ್ಯಾಕ್ಟರಿಗಳನ್ನು ಬಂದ್ ಮಾಡುತ್ತೇವೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಗುಡುಗಿದ್ದಾರೆ. ಸೋಮವಾರ ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆಗಳನ್ನು ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ. ಸಂಘ ಪರಿವಾರದ ಫ್ಯಾಕ್ಟರಿ ಹಾಗೂ ಎಸ್ ಡಿಪಿಐ, ಪಿಎಫ್ಐ ಫ್ಯಾಕ್ಟರಿಗಳನ್ನು ಬಂದ್ ಮಾಡ್ತೇವೆ,” ಎಂದು ತಿಳಿಸಿದ್ದಾರೆ. “ಪಿಎಫ್ಐ ಬ್ಯಾನ್ ಮಾಡಿ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಪಿಎಫ್ಐ ಯಾಕೆ ಬ್ಯಾನ್ ಮಾಡಿಲ್ಲ?” ಎಂದು ಪ್ರಶ್ನಿಸಿದ ಅವರು, […]