Blog Archive

ಕುಂದಾಪುರ : ಮಾಲಾಡಿಯಲ್ಲಿ ಮತ್ತೊಂದು ಚಿರತೆ ಸೆರೆ

Tuesday, December 24th, 2019
chirate

ಕುಂದಾಪುರ : ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಾಲಾಡಿ ಅರೆಬೈಲು ತೋಳಾರ್‌ ಮಾವಿನ ತೋಪಿನಲ್ಲಿ ಕಳೆದ ಹಲವು ದಿನಗಳಿಂದಲೂ ಚಿರತೆ ಸಂಚರಿಸುತ್ತಿರುವ ಬಗ್ಗೆ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕುಂದಾಪುರ ಅರಣ್ಯಾ ಇಲಾಖೆ ಚಿರತೆ ಸೆರೆ ಹಿಡಿಯಲು ಮಾಲಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಬಳಿ ಬೋನ್‌ ಇರಿಸಿ ಸತತವಾಗಿ ಒಂದು ತಿಂಗಳುಗಳ ಕಾಲ ಕಾರ್ಯಾಚರಣೆ ನಡೆಸಿದ ಫಲವಾಗಿ ಡಿ.24 ರಂದು ಹೆಣ್ಣು ಚಿರತೆ ಸೆರೆ ಬಿದ್ದಿದ್ದು ಒಟ್ಟಿನಲ್ಲಿ ಒಂದೇ ಕಡೆಯಲ್ಲಿ ನಾಲ್ಕನೆ ಚಿರತೆಯೊಂದು […]

ಮೈಸೂರು : ವಿದ್ಯುತ್ ತಂತಿಗೆ ಸಿಲುಕಿ ಚಿರತೆ ಸಾವು

Thursday, December 12th, 2019
mysuru

ಮೈಸೂರು : ವಿದ್ಯುತ್ ತಂತಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕು ಜೀರಿಯಾ ಬಳಿ ಬುಧವಾರ ರಾತ್ರಿ ನಡೆದಿದೆ. ಮೈಸೂರು ಜಿಲ್ಲೆ ಹೆಚ್.ಡಿ‌.ಕೋಟೆ ತಾಲೂಕಿನ ಜೀರಿಯಾ ಗ್ರಾಮದಲ್ಲಿ ರೈತರೊಬ್ಬರು ಅಕ್ರಮವಾಗಿ ನೀರಿನ ಪಂಪ್ ಸೆಟ್ ಗೆ ವಿದ್ಯುತ್ ತಂತಿ ಸಂಪರ್ಕ ಕಲ್ಪಿಸಿದ್ದರು ಎನ್ನಲಾಗಿದೆ. ಆಹಾರವನ್ನು ಅರಸಿ ನಾಡಿಗೆ ಬಂದಿರುವ ಚಿರತೆಯೊಂದು ಬಾಯಿಯಲ್ಲಿ ವಿದ್ಯುತ್ ತಂತಿಯನ್ನು ಕಚ್ಚಿಕೊಂಡಿರುವ ಸ್ಥಿತಿಯಲ್ಲಿಯೇ ಜೋತಾಡುತ್ತಾ ಅಸು ನೀಗಿದೆ. ಸುದ್ದಿ ತಿಳಿಯುತಿದ್ದಂತೆಯೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಾಗರಹೊಳೆ‌ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ಅರಣ್ಯ […]

ಮಾಲಾಡಿಯಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಬಿದ್ದ ಚಿರತೆ

Thursday, December 12th, 2019
chirate

ಕುಂದಾಪುರ : ಹಾಡುಹಗಲೇ ಪ್ರತಕ್ಷವಾಗಿ ಜನರಿಗೆ ನಿರಂತರವಾಗಿ ಉಪಟಳ ನೀಡುತ್ತಿದ್ದ, ಮಾತ್ರವಲ್ಲದೇ ನಾಯಿ, ಜಾನುವಾರು ಸೇರಿದಂತೆ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ ಬೋನಿಗೆ ಬಿದ್ದ ಘಟನೆ ಉಡುಪಿ ಜಿಲ್ಲೆ ತೆಕ್ಕಟ್ಟೆ ಗ್ರಾಮಪ್ಂಚಾಯತ್ ವ್ಯಾಪ್ತಿಯ ಮಾಲಾಡಿ ತೋಟದಲ್ಲಿ ನಡೆದಿದ್ದು ಗುರುವಾರ ಬೆಳಿಗ್ಗೆ ಸೆರೆಯಾದ ಚಿರತೆ ನೋಡಲು ನೂರಾರು ಮಂದಿ ಆಗಮಿಸಿದ್ದರು. ಮಾಲಾಡಿಯ ಎಕರೆ ಗಟ್ಟಲೆ ಇರುವ ಈ ತೋಟದಲ್ಲಿ ಕಳೆದ ಒಂದೆರಡು ವರ್ಷದಿಂದ ಚಿರತೆ ಕಾಟ ಹೆಚ್ಚಿತ್ತು. ಈ ಹಿನ್ನೆಲೆ ಕಳೆದ ವರ್ಷ […]

ಗುಡ್ಡಟ್ಟು : ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಬೋನಿಗೆ!

Wednesday, November 27th, 2019
chirate

ಕುಂದಾಪುರ : ಕಳೆದ ಕೆಲವು ತಿಂಗಳಿನಿಂದ ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡಟ್ಟು ಎಂಬಲ್ಲಿನ ಜನರ ನಿದ್ರೆಗೆಡಿಸಿದ್ದ ಚಿರತೆಯೊಂದು ಬೋನಿಗೆ ಬಿದ್ದಿದ್ದು ಬುಧವಾರ ಮುಂಜಾನೆ ಅರಣ್ಯಾಧಿಕಾರಿಗಳು ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅಭಯಾರಣ್ಯಕ್ಕೆ ರವಾನಿಸಿದ್ದಾರೆ. ಶಂಕರನಾರಾಯಣ ಅರಣ್ಯ ಇಲಾಖೆ ವ್ಯಾಪ್ತಿಗೊಳಪಡುವ ಗುಡ್ಡಟ್ಟು ಭಾಗದಲ್ಲಿ ಚಿರತೆಯೊಂದು ಉಪಟಳ ನೀಡಿದ್ದು ದನ, ನಾಯಿ ಮೊದಲಾದ ಸಾಕು ಪ್ರಾಣಿಗಳು ಚಿರತೆಗೆ ಬಲಿಯಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಬಹಳಷ್ಟು ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಳೆದ ತಿಂಗಳು ಚಂದ್ರಾವತಿ ಗುಡ್ಡೆಮನೆ ಎನ್ನುವರ ಜಾಗದಲ್ಲಿ […]

ಪುರಿ : ಚಿರತೆ ದಾಳಿಯಿಂದ ತನ್ನ ತಮ್ಮನನ್ನು ರಕ್ಷಿಸಿದ ಬಾಲಕಿ

Wednesday, October 9th, 2019
powri

ಪುರಿ : ತಮ್ಮ ಜಮೀನಿನಿಂದ ಮನೆಗೆ ಮರಳುತ್ತಿದ್ದಾಗ ನಾಲ್ಕು ವರ್ಷದ ಪುಟ್ಟ ತಮ್ಮ ರಾಘವ್ ಮೇಲೆ ಚಿರತೆ ಎರಗಿದಾಗ ಎದೆಗುಂದದೆ, ಚಿರತೆಯೊಂದಿಗೆ ಸೆಣಸಾಡಿ ತಮ್ಮನನ್ನು ರಕ್ಷಿಸಿದ ಹನ್ನೊಂದು ವರ್ಷದ ಬಾಲಕಿ ರಾಖಿ ಇದೀಗ ತನ್ನ ಪ್ರಾಣಕ್ಕಾಗಿ ದೆಹಲಿಯ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾಳೆ. ಈ ಘಟನೆ ಅಕ್ಟೋಬರ್ 4 ರಂದು ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ದೇವ್ ಕುಂಡೈ ಟಾಲ್ಲಿ ಗ್ರಾಮದಲ್ಲಿ ನಡೆದಿದ್ದು, ಇಡೀ ದೇಶವೇ ಆಕೆಯ ಸಾಹಸವನ್ನು ಕೊಂಡಾಡುತ್ತಿದೆ. ಆಕೆಯ ಧೈರ್ಯಕ್ಕೆ ಇದೀಗ ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರಕ್ಕೆ […]

ರಾಯಿ : ನಾಯಿ ಹಿಡಿಯಲು ಬಂದಿದ್ದ ಚಿರತೆ ಬಾವಿಗೆ

Monday, September 30th, 2019
chirate

ಬಂಟ್ವಾಳ : ತಾಲೂಕಿನ ರಾಯಿ ಸಮೀಪದ ಬಲ್ಲಾಳ್ ಬೆಟ್ಟು ನಿವಾಸಿ ಮೋನಪ್ಪ ಬಂಗೇರ ಎಂಬವರ ಮನೆ ಅಂಗಳದಲ್ಲಿದ್ದ ಎರಡು ಸಾಕು ನಾಯಿಗಳನ್ನು ಹಿಡಿಯಲು ಬಂದಿದ್ದ ಚಿರತೆಯೊಂದು ಮನೆಯ ಬಾವಿಗೆ ಬಿದ್ದ ಘಟನೆ ಸೆ.30 ರ ಸೋಮವಾರ ಮುಂಜಾನೆ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಬಂದು ಚಿರತೆ ಮೇಲುತ್ತುವ ಕಾಯಾ೯ಚರಣೆ ವೀಕ್ಷಿಸಲು ಸ್ಥಳೀಯ ಅಪಾರ ಮಂದಿ ಕುತೂಹಲದಿಂದ ಜಮಾಯಿಸಿದ್ದಾರೆ. ಇಲ್ಲಿನ ದೈಲ, ಅಮ್ಯಾಲು, ಕೈತ್ರೋಡಿ, ಬದನಡಿ ಮತ್ತಿತರ ಪ್ರದೇಶಗಳಲ್ಲಿ ಕಳೆದ ಐದಾರು ವರ್ಷಗಳಲ್ಲಿ ಹಲವಾರು ನಾಯಿ ಮತ್ತು ಜಾನುವಾರುಗಳನ್ನು […]

ಬಾವಿಗೆ ಬಿದ್ದು ಚಿರತೆ ಸಾವು

Wednesday, January 31st, 2018
chitaa-well

ಉಡುಪಿ: ಆಹಾರ ಅರಸುತ್ತ ಬಂದ ಚಿರತೆಯೊಂದು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಪೆರ್ಡೂರು ಸಮೀಪದ ಬೆಳ್ಳರ್ಪಾಡಿಯ ಸುತ್ತುಬಲ್ಲೆ ಎಂಬಲ್ಲಿ ಸೋಮವಾರ ಬೆಳಕಿಗೆ ಬಂದಿದೆ. ಆಹಾರ ಅರಸುತ್ತ ಬಂದ 2 ವರ್ಷ ಪ್ರಾಯದ ಗಂಡು ಚಿರತೆಯು ಸುತ್ತುಬಲ್ಲೆಯ ಸತೀಶ್ ಕುಲಾಲ್ ಎಂಬುವವರ ಆವರಣವಿಲ್ಲದ ಬಾವಿಗೆ ಬಿದ್ದಿದೆ. ನೀರು ತುಂಬಿದ್ದ ಬಾವಿಯಿಂದ ಮೇಲೆ ಬರಲಾಗದೆ ಚಿರತೆ ಸಾವನ್ನಪ್ಪಿದ್ದು, ಚಿರತೆಯ ಮೃತದೇಹವನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ಸಹಕಾರದಿಂದ ಚಿರತೆಯ ಮೃತದೇಹವನ್ನು […]

ಕಾಡಿನಿಂದ ನಾಡಿಗೆ ಬಂದ ಚಿರತೆ: ಉರುಳಿಗೆ ಸಿಲುಕಿ ಮತ್ತೆ ಕಾಡಿಗೆ

Thursday, November 24th, 2016
Leopard

ಪುತ್ತೂರು: ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ಉರುಳಿಗೆ ಸಿಲುಕಿ ಮತ್ತೆ ಕಾಡಿಗೆ ಸೇರಲು ಹರಸಾಹಸಪಟ್ಟ ಘಟನೆ ಕೊಳ್ತಿಗೆ ಗ್ರಾಮದ ಮಾಲೆತ್ತೋಡಿಯಲ್ಲಿ ನಡೆದಿದೆ. ಕೊಳ್ತಿಗೆ ಗ್ರಾಮದ ಮಾಲೆತ್ತೋಡಿಯ ಬಾಲಕೃಷ್ಣ ಕೆದಿಲಾಯ ಎಂಬುವರ ತೋಟದ ಬದಿಯಲ್ಲಿ ಕಾಡುಹಂದಿಗೆ ಇರಿಸಿದ್ದ ಉರುಳಿಗೆ ಚಿರತೆ ಸಿಲುಕಿತ್ತು. ಇಡೀ ದಿನ ಸಂಕಟದಲ್ಲಿ ಸಿಲುಕಿಕೊಂಡು ಸಂಜೆ ವೇಳೆಗೆ ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದಿಂದ ಕಾಡು ಸೇರಿತು. ತೋಟಕ್ಕೆ ನೀರು ಹಾಯಿಸಲು ಹೋದ ವೇಳೆ ಚಿರತೆ ಉರುಳಿಗೆ ಬಿದ್ದಿರುವುದು ಬಾಲಕೃಷ್ಣರ ಮಗ ಮಧು ಕೆದಿಲಾಯ ಕಂಡಿದ್ದರು. ಬಳಿಕ […]

ಕಟಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಣಿಸಿಕೊಂಡಿರುವ ಚಿರತೆ: ಸ್ಥಳೀಯರ ಆತಂಕ

Thursday, September 1st, 2016
Leopard

ಕಾಪು: ಕಟಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡು ಮರಿಗಳ ಸಹಿತ ಚಿರತೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕಟಪಾಡಿ, ಅಗ್ರಹಾರ, ಮಣಿಪುರ, ಸುಭಾಸ್‌ ನಗರ, ಕುರ್ಕಾಲು ಮತ್ತು ಕುಂಜಾರುಗಿರಿ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದೀಚೆಗೆ ರಾತ್ರಿ ಚಿರತೆ ಸಂಚಾರ ಹೆಚ್ಚಿರುವುದರಿಂದ ಜನರು ಕತ್ತಲಾಗುವ ಮೊದಲೇ ಮನೆ ಸೇರುವಂತಾಗಿದೆ. ಕಟಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಣಿಸಿಕೊಂಡಿರುವ ಚಿರತೆ ಕೆಲವೊಂದು ಮನೆಗಳ ನಾಯಿ, ಬೆಕ್ಕು ಮತ್ತು ದನಗಳ ಮೇಲೆಯೂ ದಾಳಿ ನಡೆಸಿದೆ ಎನ್ನಲಾಗುತ್ತಿದೆ. ಕಟಪಾಡಿ ಸುತ್ತಲಿನ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವ ಬಗ್ಗೆ […]

ಬಂಟ್ವಾಳ : ಆಹಾರವನ್ನು ಹುಡುಕಿ ಬಂದ ಚಿರತೆ ಆಯತಪ್ಪಿ ಬಾವಿಯೊಳಗೆ ಬಿತ್ತು

Wednesday, March 18th, 2015
Chita

ಬಂಟ್ವಾಳ : ಆಹಾರವನ್ನು ಹುಡುಕಿ ಬಂದ ಚಿರತೆ ಆಯತಪ್ಪಿ ಬಾವಿಯೊಳಗೆ ಬಿದ್ದ ಘಟನೆ ಬಂಟ್ವಾಳದ ವಳಲೂರು ಎಂಬಲ್ಲಿ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ರಕ್ಷಿಸಿ ಪಿಲಿಕುಳ ವನ್ಯಧಾಮ ಕೇಂದ್ರಕ್ಕೆ ರವಾನಿಸಿದ್ದಾರೆ. ಮಂಗಳವಾರ ರಾತ್ರಿ ಕೋಳಿ ತಿನ್ನಲು ಬಂದ ಚಿರತೆ ವಳವೂರಿನ ನಿವಾಸಿ ಲಿಂಗಪ್ಪ ಪೂಜಾರಿ ಅವರ ಮನೆ ಸಮೀಪದ ಬಾವಿಗೆ ಬಿದ್ದಿತ್ತು. ಬುಧವಾರ ಬೆಳಗ್ಗೆ ಚಿರತೆಯನ್ನು ನೋಡಿದ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಬಾವಿಗೆ ಬಿದ್ದಿದ್ದ ಚಿರತೆ ಪೈಪನ್ನು […]