Blog Archive

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜೂನ್ 30 ರವರೆಗೆ ಲಾಕ್ ಡೌನ್ ಘೋಷಣೆ ಮಾಡಲು ಹೇಳಿಲ್ಲಾ! ಶೆಟ್ಟರ್

Saturday, May 29th, 2021
Jagadish Shetter

ಹುಬ್ಬಳ್ಳಿ: ಜಲ ಜೀವನ ಯೋಜನೆಯಡಿಯಲ್ಲಿ ಧಾರವಾಡ ಜಿಲ್ಲೆಯ 388 ಗ್ರಾಮಗಳಿಗೆ ಮುಂದಿನ ಮೂರು ವರ್ಷಗಳಲ್ಲಿ, ಕುಡಿಯುವ ನೀರು ಒದಗಿಸಲಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ, ಜಿಲ್ಲೆಗೆ 1032 ಕೋಟಿಯಲ್ಲಿ ಜಲ ಜೀವನ ಯೋಜನೆ ರೂಪಿಸಲಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ 403 ಕೋಟಿ ನೀಡಿದರೇ, 602 ಕೋಟಿ ರಾಜ್ಯ ಸರ್ಕಾರ ನೀಡಿದೆ, 423 ಕೋಟಿ ನಬಾರ್ಡ್ ರಿಂದ ಸಾಲ ತೆಗೆದುಕೊಳ್ಳಲಾಗುತ್ತಿದೆ ಎಂದರು. […]

ರಾಜ್ಯವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸಲು ದಿಟ್ಟಹೆಜ್ಜೆಗೆ ತೀರ್ಮಾನ : ಶೆಟ್ಟರ್‌

Wednesday, May 26th, 2021
Jagadish Shetter

ಬೆಂಗಳೂರು : ರಾಜ್ಯವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯಿಂದ ನೂತನ ಆಮ್ಲಜನಕ ಘಟಕಗಳ ಉತ್ಪಾದನೆ ಪ್ರೋತ್ಸಾಹಿಸಲು ಉತ್ತೇಜನ ಯೋಜನೆಯನ್ನು ತರಲು ಚಿಂತನೆ ನಡೆದಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದರು. ಇಂದು ವಿಧಾನಸೌಧದಲ್ಲಿ ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ಸಚಿವ ಜಗದೀಶ್‌ ಶೆಟ್ಟರ್‌ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಈ ವಿಷಯ […]

ಸಚಿವ “ಜಗದೀಶ್ ಶೆಟ್ಟರ್” ಅವರನ್ನೇ ಗುಂಡಿಯಲ್ಲಿ ಮುಳುಗಿಸಿದ ಮಂದಿ…

Sunday, September 27th, 2020
shetter

ಹುಬ್ಬಳ್ಳಿ : ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ನಗರದ ವಿದ್ಯಾವನ ನಿವಾಸಿಗಳು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಅವರ ಭಾವಚಿತ್ರವನ್ನು ರಸ್ತೆಯ ಗುಂಡಿಯಲ್ಲಿ ನೆಟ್ಟು ವಿನೂತನ ಪ್ರತಿಭಟನೆ ನಡೆಸಿದರು. ಮಳೆಯಿಂದ ರಸ್ತೆಗಳು ಹಾಳಾಗಿ ಹೋಗಿವೆ. ಎಲ್ಲೆಂದರಲ್ಲಿ ಗುಂಡುಗಳು ಬಿದ್ದು ಜನರು ಓಡಾಡಲು ಆಗದ ಸ್ಥಿತಿ ಇದೆ. ಹೀಗಾಗಿ ರಸ್ತೆ ದುರಸ್ತಿ ಹಾಗೂ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ರಸ್ತೆ ಗುಂಡಿಗೆ ರಂಗೋಲಿ ಹಾಕಿ ಹಾಗೂ ತಿಪ್ಪೆಯಲ್ಲಿ ಜಗದೀಶ್ ಶೆಟ್ಟರ್ ಅವರ ಫೋಟೋ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆ‌ ಕೂಡಲೇ […]

ಹುಬ್ಬಳ್ಳಿ : 24ರ ನಂತರ ಲಾಕ್ ಡೌನ್ ಗೆ ಪ್ಲಾನ್

Tuesday, July 21st, 2020
hubballi

ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಲಾಕ್ ಡೌನ್ ಮಾಡಿದ್ರು ಸಹ ದಾರಿಗೆ ಬರದ ಕೋವಿಡ್ ಗೆ ಜಿಲ್ಲಾಡಳಿತ ತಲೆ ಕೆಡಿಸಿಕೊಂಡಿದೆ. ಅಲ್ಲದೆ ಮತ್ತೊಂದು ಸುತ್ತಿನ ಲಾಕ್ ಡೌನ್ ಮಾಡಲು ಈಗಾಗಲೇ ಸದ್ದಿಲ್ಲದೆ ಪ್ಲಾನ್ ಮಾಡಿದೆ. ಹೌದು…ರಾಜ್ಯದಲ್ಲಿ ನಿತ್ಯ ಕೊರೊನಾ ಹಾವಳಿ ಹೆಚ್ಚಾಗಿದ್ದು, ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ..ಈ ಹಿನ್ನೆಲೆ ಈಗಾಗಲೇ ಲಾಕ್ ಡೌನ್ ಘೋಷಣೆ ಸಹ ಮಾಡಿದೆ.ಆದ್ರೆ ಇಷ್ಟೆಲ್ಲಾ ಮಾಡಿದ್ರು ಸಹ ಕೊರೋನಾ ರಣಕೇಕೆ ಮಾತ್ರ ನಿಂತಿಲ್ಲ. […]

ಬೆಳಗಾವಿ : ಸಚಿವ ಜಗದೀಶ್ ಶೆಟ್ಟರ್ ರವರ ಕಾರಿಗೆ ಮುತ್ತಿಗೆ ಹಾಕಿ ರೈತರ ಪ್ರತಿಭಟನೆ

Friday, September 20th, 2019
Jagadeesh-shetter

ಬೆಳಗಾವಿ : ತಮ್ಮ ಯಾವುದೇ ಬೇಡಿಕೆಗಳಿಗೆ ಸರಕಾರದಿಂದ ಸ್ಪಷ್ಟ ಭರವಸೆ ಸಿಗಲಿಲ್ಲ ಹಾಗೂ ಯಾವುದೇ ಪ್ಯಾಕೇಜ್ ಘೋಷಣೆ ಆಗಲಿಲ್ಲ ಎಂದು ಆರೋಪಿಸಿ ರೈತರು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಪ್ರಸಂಗ ಶುಕ್ರವಾರ ಬೆಳಗಾವಿ ಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ನೆರೆ ಹಾವಳಿ ಹಾಗೂ ಪರಿಹಾರ ಕಾರ್ಯಗಳ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಹಾಗೂ ರೈತರ ಸಭೆಯಲ್ಲಿ ಭಾಗವಹಿಸಿದ್ದ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಸರಕಾರದಿಂದ […]

ಈ ಸಮ್ಮಿಶ್ರ ಸರ್ಕಾರ ನೀರಿನ ಮೇಲಿನ ಗುಳ್ಳೆಯಂತೆ: ಜಗದೀಶ್ ಶೆಟ್ಟರ್

Monday, September 17th, 2018
jagadish-shetter

ಹುಬ್ಬಳ್ಳಿ: ಈ ಸಮ್ಮಿಶ್ರ ಸರ್ಕಾರ ನೀರಿನ ಮೇಲಿನ ಗುಳ್ಳೆಯಂತೆ. ಹಾಗಾಗಿ ಇದು ಯಾವಾಗ ಬೇಕಾದರೂ ಒಡೆಯಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ‌ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಜನಾದೇಶದ ವಿರುದ್ಧ ಇರುವ ಸರ್ಕಾರ‌. ಅಧಿಕಾರದ ಹಪಾಹಪಿಯಿಂದ ಸಮ್ಮಿಶ್ರ ಸರ್ಕಾರ ಬಂದಿದೆ. ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಗುದ್ದಾಟ ನಡೆಸಿದ್ದಾರೆ. ಅವರ ನಡುವೆ ಒಳಬೇಗುದಿ ಇದೆ. ಜೆಡಿಎಸ್ ಜೊತೆ ಮೈತ್ರಿ‌ ಮಾಡಿಕೊಂಡು ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಟೀಕಿಸಿದರು. ಸಿಎಂ ಕಿಂಗ್ ಪಿನ್ […]

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯಲ್ಲಿ ಬಿಜೆಪಿ ಪಾತ್ರವಿಲ್ಲ: ಜಗದೀಶ್ ಶೆಟ್ಟರ್

Thursday, June 14th, 2018
jagadish-shetter

ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯಲ್ಲಿ ಬಿಜೆಪಿ ಪಾತ್ರವಿಲ್ಲ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ನಿಜವಾದ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯ ಎಸ್‌ಐಟಿ ಅಧಿಕಾರಿಗಳು ಕೆಲವರನ್ನು ಬಂಧಿಸಿದ್ದಾರೆ. ಇನ್ನು ಅವರ ಮೇಲೆ ತನಿಖೆಯಾಗಬೇಕು. ತನಿಖೆ ನಂತರ ತಪ್ಪಿತಸ್ಥರು ಯಾರೆಂದು ಗೊತ್ತಾಗಲಿದೆ. ತಪ್ಪು ಯಾರೇ ಮಾಡಿದ್ರು ಅವರಿಗೆ ಶಿಕ್ಷೆಯಾಗಲಿ ಎಂದರು. ಇದೇ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು […]

ದೇವರ, ರೈತರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಿಎಸ್‌ವೈ

Thursday, May 17th, 2018
yedeyurappa

ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ದೇವರ ಮತ್ತು ರೈತರ ಹೆಸರಲ್ಲಿ ಬಿಎಸ್‌ವೈ ಪದಗ್ರಹಣ ಮಾಡಿದರು. ರಾಜ್ಯಪಾಲ ವಜುಭಾಯ್ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜಗದೀಶ್ ಶೆಟ್ಟರ್, ಈಶ್ವರಪ್ಪ, ಶ್ರೀರಾಮುಲು, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಮುಖ್ಯಮಂತ್ರಿಯಾಗಿ ಬಿಎಸ್‌ವೈ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತು.

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ 1 ಲಕ್ಷ ರೂ. ಸಾಲ ಮನ್ನಾ: ಯಡಿಯೂರಪ್ಪ

Friday, May 4th, 2018
yedeyurappa

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಘೋಷಿಸಿದರು. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ 1 ಲಕ್ಷ ರೂ. ಸಾಲ ಮನ್ನಾ ಹಾಗೂ ಸಹಕಾರಿ ಸಂಘಗಳಲ್ಲಿನ ಸಾಲ50 ಸಾವಿರದಿಂದ 1 ಲಕ್ಷಕ್ಕೆ ವಿಸ್ತರಣೆ ಮಾಡಲಾಗುತ್ತದೆ ಎಂದು ಘೋಷಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲಿಗೆ ಶಾಸಕ ವಿಜಯಕುಮಾರ್ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಬಳಿಕ ಸುರೇಶ್ ಕುಮಾರ್ ನೇತೃತ್ವದ ಸಮಿತಿ ರಚಿಸಿರುವ ಪ್ರಣಾಳಿಕೆಯನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ […]

ಕಡಬ ತಾಲೂಕು ತೆಕ್ಕೆಗೆ ರಾಜ್ಯದ ನಂ. 1 ದೇಗುಲ

Monday, January 1st, 2018
subramanya

ಸುಬ್ರಹ್ಮಣ್ಯ : ಸುಳ್ಯ ತಾಲೂಕಿನ ಜನತೆಗೆ ಹೊಸ ವರ್ಷ ಕಹಿ ಅನುಭವ ನೀಡಲಿದೆ. ಕಾರಣ, ಸುಳ್ಯ ತಾಲೂಕು ಮತ್ತಷ್ಟು ಕಿರಿದಾಗಲಿದೆ. ಜತೆಗೆ ಇಲ್ಲಿ ತನಕ ತಾಲೂಕಿನಲ್ಲಿ ಮುಕುಟಪ್ರಾಯವಾಗಿದ್ದ ರಾಜ್ಯದ ನಂ. 1 ದೇಗುಲ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಇನ್ನು ಮುಂದೆ ಕಡಬ ತಾಲೂಕು ಜತೆ ಗುರುತಿಸಿಕೊಳ್ಳಲಿದೆ. 2017ರ ವರ್ಷಕ್ಕೆ ಭಾವಪೂರ್ಣ ವಿದಾಯದ ಜತೆ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಹಲವು ಮಹತ್ವದ ಸ್ಥಳಗಳು ಸುಳ್ಯದ ಕೈತಪ್ಪಲಿವೆ. ಇವೆಲ್ಲ ಕಡಬ ತಾಲೂಕಿಗೆ ಸೇರುವುದರಿಂದ ನೋವಿನ ವಿದಾಯ ಹೇಳುವುದು […]