Blog Archive

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ`ಕೋಟಿ ಚೆನ್ನಯ’ ಹೆಸರು

Saturday, August 3rd, 2019
Koti-chennaya airport

ಮಂಗಳೂರು :  ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಬೇಕೆಂಬ ಒತ್ತಾಯ ಕೇಳಿ ಬರುತ್ತಿರುವ ಬೆನ್ನಲ್ಲೇ ಜಿಲ್ಲಾಧಿಕಾರಿಯ ಮೂಲಕ ರಾಜ್ಯ ಸರ್ಕಾರಕ್ಕೆ ಈ ಪ್ರಸ್ತಾವನೆ ಕಳುಹಿಸಲಾಗಿದೆ ಎಂಬ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಆ. 3 ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸಿಇಓ ಡಾ.ಸೆಲ್ವಮಣಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಧರಣೇಂದ್ರ ಕುಮಾರ್, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ […]

ಸ್ವಚ್ಛಮೇವ ಜಯತೆ ಎಂಬ ಘೋಷವಾಕ್ಯದಡಿ ಘನ ತ್ಯಾಜ್ಯ ವಿಲೇವಾರಿ

Wednesday, May 1st, 2019
swacha-meva

ಮಂಗಳೂರು: ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಸ್ವಚ್ಛಮೇವ ಜಯತೆ ಎಂಬ ಘೋಷವಾಕ್ಯದಡಿ ಘನ ತ್ಯಾಜ್ಯ ವಿಲೇವಾರಿ ಕಾರ್ಯಕ್ರಮದ ಕುರಿತು ನಿರಂತರ ಅರಿವು ಮೂಡಿಸುವ ಹಿನ್ನಲೆಯಲ್ಲಿ ಆಯ-ವ್ಯಯದಲ್ಲಿ ಘೋಷಣೆಯಾದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂನ್ 5 ರಿಂದ 30 ರವರೆಗೆ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇ, ನಿರ್ವಹಣೆ ಕುರಿತು ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ ಆರ್ ಸೆಲ್ವಮಣಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ […]

ಜಿಲ್ಲಾ ಪಂಚಾಯತ್ ಮಂಗಳೂರು “ಎ” ಗ್ರೇಡ್ ಅಧಿಕಾರಿಗಳ ವಸತಿ ಗೃಹ ಉದ್ಘಾಟನೆ

Wednesday, September 26th, 2018
urva-store

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು “ಎ” ಗ್ರೇಡ್ ಅಧಿಕಾರಿಗಳ ವಸತಿ ಗೃಹವನ್ನು ಬುಧವಾರ ಉರ್ವ ಸ್ಟೋರಿನಲ್ಲಿ ವಸತಿ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ನಡೆದ‌ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಂಗಳೂರು ದಸರಾಗೆ ದೇಶ ವಿದೇಶಗಳಿಂದ ಜನರು ಬರುತ್ತಾರೆ. ದಸರಾ ಬರುತ್ತಿರುವುದರಿಂದ ಹಬ್ಬ ಆರಂಭವಾಗುವ ಮುಂಚೆ ಗುಂಡಿ ಬಿದ್ದ ರಸ್ತೆಗಳನ್ನು ಮುಚ್ಚಿ ಎಂದು ಅಧಿಕಾರಿಗಳಿಗೆ ಸಚಿವ ಯು.ಟಿ.ಖಾದರ್ ಸೂಚಿಸಿದ್ದಾರೆ. ಏರ್ಪೋರ್ಟ್ನಲ್ಲಿ ಇಳಿದ ಕೂಡಲೇ ಅವರಿಗೆ ಗುಂಡಿ ಇರುವ ರಸ್ತೆಗಳು […]

ಸುಮಾರು 49,000 ಕೋಟಿ ರೂ.ಗಳಷ್ಟು ಕೃಷಿ ಸಾಲ ಮನ್ನಾ..ನಾಲ್ಕೈದು ದಿನಗಳಲ್ಲಿ ಜಾರಿಗೆ!

Monday, July 30th, 2018
kumarseamy

ಬೆಂಗಳೂರು: ರಾಜ್ಯದಲ್ಲಿ ಸುಮಾರು 49,000 ಕೋಟಿ ರೂ.ಗಳಷ್ಟು ಬೃಹತ್ ಮೊತ್ತದ ಕೃಷಿ ಸಾಲ ಮನ್ನಾ ಮಾಡಲಾಗಿದ್ದು, ಈ ಕುರಿತು ನಾಲ್ಕೈದು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು. ಈ ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳ ಸಭೆಯಲ್ಲಿ ಮಾತನಾಡಿದ ಸಿಎಂ, ಸಾಲ ಮನ್ನಾ ಕಾರ್ಯಕ್ರಮ ಯಶಸ್ವಿಯಾಗಿ […]

ಮಂಗಳೂರು ಪುರಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣ

Saturday, April 14th, 2018
Ambedkar Jayanti

ಮಂಗಳೂರು : ಅಂಬೇಡ್ಕರ್ ಜಯಂತಿ ಆಚರಣೆಯ ಅಂಗವಾಗಿ ಪುರಭವನದ ಎದುರಿನ ಅಂಬೇಡ್ಕರ್ ಪ್ರತಿಮೆಯನ್ನು ಗೌರವಿಸಿದ ಅಧಿಕಾರಿಗಳು ಹೂ ಮಾಲೆ ಹಾಕಿ ಅಂಬೇಡ್ಕರ್ ಜಯಂತಿ ಆಚರಿಸಿದರು. ಈ ಸಂದರ್ಭ ಎಸ್ ಪಿ ರವಿಕಾಂತೇ ಗೌಡ, ಜಿಲ್ಲಾ ಪಂಚಾಯತ್ ಸಿಇಒ ಡಾ. ಎಂ. ಆರ್. ರವಿ, ಜಿಲ್ಲಾಧಿಕಾರಿ ಶಶಿಕಾಂತ್ ಸೇಂತಿಲ್ , ಕಮಿಷನರ್ ಟಿ.ಆರ್. ಸುರೇಶ್ ಜಿಲ್ಲಾ ಸಮಾಜ ಕಲ್ಯಾಣಧಿಕಾರಿ ಯೋಗೀಶ್, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಮೊದಲಾದವರು ಉಪಸ್ಥಿತರಿದ್ದರು.

ಮಕ್ಕಳನ್ನು ಭಿಕ್ಷೆ ಬೇಡಿಸುವುದನ್ನು ನಿಲ್ಲಿಸಿ ಸರಕಾರದ ಬಿಸಿಯೂಟ ಪಡೆಯಿರ

Friday, February 9th, 2018
dakshina-kannada

ಮಂಗಳೂರು: ಕಲ್ಲಡ್ಕದ ಶ್ರೀರಾಮ ಹಾಗೂ ಪುಣಚದ ಶ್ರೀ ದೇವಿ ಪ್ರೌಢಶಾಲೆಗಳಿಗೆ ಅಕ್ಷರ ದಾಸೋಹದಡಿ ಮಧ್ಯಾಹ್ನದ ಬಿಸಿಯೂಟ ನೀಡುವಂತೆ ಅಧಿಕಾರಿಗಳಿಂದ ಸಾಕಷ್ಟು ಪತ್ರ ವ್ಯವಹಾರಗಳು ನಡೆದಿದ್ದರೂ ಶಾಲೆಗಳ ಆಡಳಿತ ಮಂಡಳಿ ಸ್ಪಂದಿಸದೆ ಮಕ್ಕಳನ್ನು ಹಕ್ಕುಗಳಿಂದ ವಂಚಿಸಲಾಗಿದೆ. ಬಿಸಿಯೂಟಕ್ಕಾಗಿ ಮಕ್ಕಳನ್ನು ಭಿಕ್ಷೆ ಬೇಡಿಸುವುದನ್ನು ನಿಲ್ಲಿಸಿ ಸರಕಾರದಿಂದ ಸಿಗುವ ಸೌಲಭ್ಯವನ್ನು ಈ ಶಾಲೆಗಳು ಪಡೆಯಬೇಕು ಎಂದು ಜಿಪಂ ವಿಪಕ್ಷವಾದ ಕಾಂಗ್ರೆಸ್‌ನ ಸದಸ್ಯರು ಆಗ್ರಹಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಿ.ಪಂ. ವಿಪಕ್ಷ ನಾಯಕ ಎಂ.ಎಸ್.ಮುಹಮ್ಮದ್, ರಾಜ್ಯದ […]

ಮಲೆಕುಡಿಯರ ಸಮಸ್ಯೆಗಳಿಗಾಗಿ ಪ್ರತ್ಯೇಕ ಸಭೆ: ಹೇಮಲತಾ

Thursday, December 21st, 2017
malekudi

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಮಲೆಕುಡಿಯರು ಮತ್ತು ಕೊರಗ ಸಮುದಾಯದವರ ಸಭೆಯನ್ನು ಜತೆಯಾಗಿ ನಡೆಸಲಾಗುತ್ತಿದ್ದು, ಮುಂದೆ ಮಲೆಕುಡಿಯರ ಸಮಸ್ಯೆಗಳನ್ನು ಅರಿತುಕೊಳ್ಳಲು ಅನುಕೂಲವಾಗುವಂತೆ ಪ್ರತ್ಯೇಕ ಸಭೆಯನ್ನು ನಡೆಸಲಾಗುವುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸುನ್ವಯಾಧಿಕಾರಿ ಹೇಮಲತಾ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಮಲೆಕುಡಿಯ ಸಮುದಾಯದ ದ.ಕ. ಜಿಲ್ಲಾ ಮಟ್ಟದ ಸಂಶೋಧನಾ ಸಮಾಲೋಚನಾ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಸಮುದಾಯದ ಸಂಪೂರ್ಣ ಮನೆ ಮನೆ ಅಧ್ಯಯನ ನಡೆಯದೆ ಕುಂದು ಕೊರತೆಗಳನ್ನು ತಿಳಿದುಕೊಳ್ಳುವುದು ಅಸಾಧ್ಯ. […]

ಪ್ರಧಾನ ಮಂತ್ರಿಯವರ ಮುದ್ರಾ ಯೋಜನೆ ಕುರಿತಂತೆ ಸಮಗ್ರ ಮಾಹಿತಿ ಅಭಿಯಾನ :ಸಂಸದ ನಳಿನ್

Wednesday, October 11th, 2017
mudra yojan

ಮಂಗಳೂರು: ಅ.16ರಂದು ನಗರದ ಪುರಭವನದಲ್ಲಿ ಪ್ರಧಾನ ಮಂತ್ರಿಯವರ ಮುದ್ರಾ ಯೋಜನೆ ಕುರಿತಂತೆ ಸಮಗ್ರ ಮಾಹಿತಿಯನ್ನು ನೀಡುವ ಜತೆಗೆ ಕೇಂದ್ರ ಸರಕಾರದ ವಿವಿಧ ಸಾಲ ಸೌಲಭ್ಯಗಳ ಕುರಿತಂತೆ ಮಾಹಿತಿ ಒದಗಿಸುವ ವಿಶೇಷ ಅಭಿಯಾನ ನಡೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು. ದ.ಕ. ಜಿಲ್ಲಾ ಪಂಚಾಯತ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರದ ಕೌಶಲಾಭಿವೃದ್ಧಿ ಸಚಿವ ಅನಂತ ಹೆಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. ದ.ಕ. ಜಿಲ್ಲೆಯಲ್ಲಿ ಮುದ್ರಾ ಯೋಜನೆಯಡಿ ಈಗಾಗಲೇ 59,408 ಫಲಾನುಭವಿಗಳಿಗೆ 748.95 ಕೋಟಿ […]

ಸಂತೋಷದಿಂದಿದ್ದಾಗ ಮಾತ್ರ ಮನುಷ್ಯನ ಆಯಸ್ಸು ವೃದ್ಧಿ: ರಮಾನಾಥ ರೈ

Thursday, October 5th, 2017
elders

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಮಾನಸಿಕವಾಗಿ ಸಂತೋಷದಿಂದಿದ್ದಾಗ ಮಾತ್ರ ಮನುಷ್ಯನ ಆಯಸ್ಸು ಹೆಚ್ಚಾಗುತ್ತದೆ ಎಂದು ಕಾರ್ಯಕ್ರಮದಲ್ಲಿ  ತಿಳಿಸಿದರು. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ಜರಗಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ- 2017 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವನು ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಅದರಲ್ಲೂ ಪ್ರಕೃತಿದತ್ತವಾಗಿ ಲಭಿಸುವ ಆಹಾರ ಪದ್ಧತಿಯನ್ನು ಬಳಸಿಕೊಂಡರೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು. ಶಿಸ್ತುಬದ್ಧ ಜೀವನಕ್ಕೆ ಮತ್ತು ಆರೋಗ್ಯ ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಭಾರತೀಯ ಮೂಲದ ಔಷಧಗಳನ್ನು ಬಳಕೆ ಮಾಡಿಕೊಳ್ಳಬೇಕು. ಹೆಚ್ಚಾಗಿ ಗಿಡ […]

ಸ್ವಚ್ಛತೆ ನಿರ್ಲಕ್ಷ್ಯ: ಐದು ಗ್ರಾ.ಪಂ.ಗಳಿಗೆ ನೋಟೀಸ್, ವಿಸರ್ಜಿಸಲು ಸರಕಾರಕ್ಕೆ ಶಿಫಾರಸು ಚಿಂತನೆ

Saturday, July 29th, 2017
Natekal

ಮಂಗಳೂರು  : ಸ್ವಚ್ಛತಾ ಕಾರ್ಯಗಳ ಅನುಷ್ಠಾನದಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿರುವ ಜಿಲ್ಲೆಯ 5 ಗ್ರಾಮ ಪಂಚಾಯತ್‍ಗಳನ್ನು ವಿಸರ್ಜಿಸಲು ಸರಕಾರಕ್ಕೆ ಏಕೆ ಶಿಫಾರಸು ಮಾಡಬಾರದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ. ಮಂಗಳೂರು ತಾಲೂಕಿನ ತಲಪಾಡಿ, ಸೋಮೇಶ್ವರ, ಬೆಳ್ಮ, ಗಂಜೀಮಠ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್‍ಗಳಿಗೆ ನೋಟೀಸ್ ಜಾರಿಯಾಗಿದೆ. ಸಂಪೂರ್ಣ ಸ್ವಚ್ಛತಾ ಆಂದೋಲನದಡಿ ನಿರ್ಮಲ ಗ್ರಾಮ ಪುರಸ್ಕಾರ ಪಡೆದು ಹಾಗೂ ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ಬಯಲು ಬಹಿರ್ದೆಸೆ ಮುಕ್ತ ಎಂದು […]