Blog Archive

ಕುಡುಪು ಬ್ರಹ್ಮಕಲಶ ಧಾರ್ಮಿಕ ಸಮಾರಂಭ

Monday, February 19th, 2018
kudupu

ಮಂಗಳೂರು: ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನ ನಾಗರಾಧನೆಯ ಪ್ರಸಿದ್ಧ ಕ್ಷೇತ್ರವಾಗಿದ್ದು, ಬಹಳ ವರ್ಷಗಳ ಬಳಿಕ ಜೀರ್ಣೋದ್ಧಾರ ಕಾಣುತ್ತಿದೆ. ಸಮಗ್ರ ಭೂಮಿಯಲ್ಲಿ ನಾಗ ದೇವರ ಸ್ಥಾನ ಇದೆ. ಪ್ರಸಕ್ತ ನಾಗನಿಗೆ ನಿರ್ದಿಷ್ಟ ಸ್ಥಾನ ಕಲ್ಪಿಸಲಾಗಿದೆ. ನಾಗದೇವರ ಸಾನಿಧ್ಯವಿರುವ ದೇವಸ್ಥಾನಗಳಲ್ಲಿ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಕೂಡಾ ಒಂದು ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು. ಅವರು ಕುಡುಪು ಅನಂತ ಪದ್ಮನಾಭ ದೇವಸ್ಥಾನದ ಅನಂತ ಪದ್ಮನಾಭ ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ […]

ಪರಿಶಿಷ್ಟರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇವೆ : ಶಾಸಕ ಲೋಬೋ

Wednesday, February 7th, 2018
j-r-lobo

ಮಂಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಇತ್ತೀಚಿಗೆ 4-02-18 ಉರ್ವದ ಬಿಲ್ಲವ ಸಂಘದಲ್ಲಿ ಜರಗಿತು. ಕಾರ್ಯಕ್ರಮವನ್ನು ಶಾಸಕರಾದ ಜೆ.ಆರ್.ಲೋಬೋರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿದ್ದ ಅನೇಕ ಪರಿಶಿಷ್ಟ ಕಾಲನಿಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಟ್ಟಿದ್ದು, ವಸತಿ ರಹಿತರಿಗೆ ಆಶ್ರಯ ಯೋಜನೆಯಲ್ಲಿ ಮನೆ, ಕಾಂಕ್ರೀಟ್ ರಸ್ತೆ, ದೈವಸ್ಥಾನ, ಭಜನಾ ಮಂದಿರದ ಅಭಿವೃದ್ಧಿಗೆ ನೆರವು, ಪರಿಶಿಷ್ಟ ವಿಧ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್, ನೂತನ […]

ಶಾಂತಿ, ಸಹನೆ, ಸಂಯಮ ನಮ್ಮ ಉಸಿರಾಗಲಿ: ಸಚಿವ ರೈ

Friday, January 26th, 2018
ramanath

ಮಂಗಳೂರು: ಸಹಬಾಳ್ವೆಯ ಬದುಕನ್ನು ನಮ್ಮದಾಗಿಸಿಕೊಂಡು ಶಾಂತಿ, ಸಹನೆ, ಸಂಯಮವನ್ನು ಉಸಿರಾಗಿಸಿಕೊಳ್ಳೋಣ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕರೆ ನೀಡಿದರು. ನಗರದ ನೆಹರೂ ಮೈದಾನದಲ್ಲಿ ಇಂದು ಬೆಳಗ್ಗೆ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಸಂಭ್ರಮಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕರಾದ ಜೆ.ಆರ್.ಲೋಬೋ, ಬಿ.ಎ.ಮೊಯ್ದಿನ್ ಬಾವ, ಮೇಯರ್ ಕವಿತಾ ಸನಿಲ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ರಾಜ್ಯ ಗೇರು ಅಭಿವೃದ್ಧಿ ನಿಗಮದ […]

ಕಾಂಗ್ರೆಸ್‌ v/s ಬಿಜೆಪಿ ನೇರ ಹಣಾಹಣಿ

Wednesday, January 17th, 2018
j-r-lobo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಕುತೂಹಲ ಕೆರೆಳಿಸಿರುವ ಕ್ಷೇತ್ರ ಮಂಗಳೂರು ದಕ್ಷಿಣ. ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಇಲ್ಲಿ ನೇರಾನೇರ ಸ್ಪರ್ಧೆ. ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್‌ನ ಜೆ.ಆರ್.ಲೋಬೋ. ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರು ಕ್ಷೇತ್ರದ ಟಿಕೆಟ್‌ಗೆ ಪ್ರಯತ್ನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರು ಅವರಾದರೂ ಜೆ.ಆರ್.ಲೋಬೋಗೆ ಟಿಕೆಟ್ ನಿರಾಕರಿಸಲು ಕಾರಣಗಳು ಇಲ್ಲ. ಬಿಜೆಪಿ ಕ್ಷೇತ್ರದಿಂದ ಯುವ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂಬುದು ಸದ್ಯದ ಸುದ್ದಿ. ಉದ್ಯಮಿಗಳಾದ […]

ಮಕ್ಕಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಅರಿವು ಮೂಡಿಸಬೇಕು :ಶಾಸಕ ಜೆ.ಆರ್.ಲೋಬೋ

Tuesday, November 7th, 2017
makkala samsattu

ಮಂಗಳೂರು: ಸರಕಾರದ ಯೋಜನೆ ನೀತಿ ನಿಯಾಮವಳಿಗಳ ನಿರೂಪಣೆಯಲ್ಲಿ ಮಕ್ಕಳ ಸಂಬಂಂಧಿಸಿದ ಸಮಸ್ಯೆಗಳನ್ನು ಪ್ರತಿಬಿಂಬಿಸಲು ಜನಪ್ರತಿನಿಧಿಗಳು ಸದನದಲ್ಲಿ ಧ್ವನಿ ಎತ್ತಲು ಮಕ್ಕಳು ಶಾಸಕರೊಂದಿಗೆ ನೇರ ಸಂವಾದ ನಡೆಸಿ ಚರ್ಚಿಸಲು ’ಮಕ್ಕಳ ಸಂಸತ್ತು-2017’ ಎಂಬ ಕಾರ್ಯಕ್ರಮ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಬೆಂಗಳೂರು, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ, ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಸೆಂಟ್ರಲ್, ಪಡಿ ಸಂಸ್ಥೆ, ಚೈಲ್ಡ್‌ಲೈನ್-1098 ಸಹಯೋಗದಲ್ಲಿ ರೋಶನಿ ನಿಲಯ ಕಾಲೇಜು ಸಭಾಂಗಣದಲ್ಲಿ ಇಂದು ನಡೆಯಿತು. ಈ ಕಾರ್ಯಕ್ರಮದಲ್ಲಿ, ಭವಿಷ್ಯಕ್ಕೆ ಸುಶಿಕ್ಷಿತ ಸಮಾಜದ […]

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ

Monday, October 16th, 2017
kavitha sanil

ಮಂಗಳೂರು:ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಜೆ.ಆರ್.ಲೋಬೋ ಹಾಗೂ ಮೇಯರ್ ಕವಿತಾ ಸನಿಲ್ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 5.14 ಕೋ.ರೂ. ವೆಚ್ಚದಲ್ಲಿ  ಶಿಲಾನ್ಯಾಸ ನಡೆಸಿದರು. ಲೇಡಿಹಿಲ್ ವೃತ್ತ ಅಭಿವೃದ್ದಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ ಅವರು, ಮಂಗಳೂರು ನಗರ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ಮೂರು ವರ್ಷಗಳಲ್ಲಿ ಸುಮಾರು 2,500 ಕೋ.ರೂ., ಅನುದಾನ ಬೇರೆ ಬೇರೆ ಮೂಲಗಳಿಂದ ಲಭ್ಯವಾಗಲಿದೆ ಹಾಗೂ ವಿವಿಧ ಮೂಲಗಳಿಂದ ವಿವಿಧ ಯೋಜನೆಗಳಿಗಾಗಿ ಅನುದಾನ ದೊರೆಯಲಿದೆ. ಹೀಗಾಗಿ ಮುಂದಿನ ಮೂರು ವರ್ಷದಲ್ಲಿ ಮಂಗಳೂರು ನಗರದ […]

ಮಂಗಳೂರು: ನವಕರ್ನಾಟಕ ವಿಷನ್‌ 2025 ಸಮಗ್ರ ಅಭಿವೃದ್ಧಿಯ ನಕಾಶೆ ಕಾರ್ಯಕ್ರಮ

Wednesday, October 4th, 2017
nava karnataka

ಮಂಗಳೂರು: ಶಾಸಕ ಜೆ.ಆರ್‌.ಲೋಬೋ,  ಜಿಲ್ಲೆಯ ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ, ಬಂದರು, ಮೀನುಗಾರಿಕೆ, ಬ್ಯಾಂಕಿಂಗ್‌, ಕೈಗಾರಿಕೆ ಹಾಗೂ ಕೃಷಿ ಕ್ಷೇತ್ರವು ಉತ್ತಮ ಪ್ರಗತಿ ಸಾಧಿಸಿದ್ದು, ಇದನ್ನು ಭವಿಷ್ಯ ದೃಷ್ಟಿಯಿಂದ ಅಭಿವೃದ್ಧಿಗೊಳಿಸುವ ಪ್ರಯತ್ನ ಅನಿವಾರ್ಯವಾಗಿದೆ, ರಸ್ತೆಸಹಿತ ಮೂಲ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ತಿಳಿಸಿದರು. ಅವರು  ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿನೂತನ ನವಕರ್ನಾಟಕ ವಿಷನ್‌ 2025 ಸಮಗ್ರ ಅಭಿವೃದ್ಧಿಯ ನಕಾಶೆ ಕಾರ್ಯಕ್ರಮದಡಿ ಜಿಲ್ಲೆಯ ಅಭಿವೃದ್ಧಿಯ ಮುನ್ನೋಟಗಳನ್ನು ರೂಪಿಸುವ ಕಾರ್ಯಾಗಾರದಲ್ಲಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು. ಮೇಯರ್‌ […]

ಮಂಗಳೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ

Monday, October 2nd, 2017
Gandhi jayanthi

ಮಂಗಳೂರು: ಜಿಲ್ಲಾಡಳಿತ ಹಾಗೂ ಭಾರತ ಸೇವಾದಳ ವತಿಯಿಂದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಇಂದು ಪುರಭವನ ಮುಂಭಾಗದ ಗಾಂಧಿ ಪ್ರತಿಮೆ ಬಳಿ ನಡೆಯಿತು. ಶಾಸಕ ಜೆ.ಆರ್. ಲೋಬೋ, ಅಪರ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ, ಭಾರತ ಸೇವಾದಳ ಜಿಲ್ಲಾಧ್ಯಕ್ಷ ಬಶೀರ್ ಬೈಕಂಪಾಡಿ, ತಹಶಿಲ್ದಾರ್ ಗುರುಪ್ರಸಾದ್, ಸೇವಾದಳದ ಫ್ರಾನ್ಸಿಸ್, ಮಂಜೇಗೌಡ ಮತ್ತಿತರರು ಈ ಕ್ಷಣಕ್ಕೆ ಸಾಕ್ಷಿಯಾದರು. ಇದೇ ಸಂದರ್ಭದಲ್ಲಿ ಪೌರಕಾಮಿ೯ಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ರುದ್ರಪ್ಪರನ್ನು ಗೌರವಿಸಲಾಯಿತು. ‌ಜೊತೆಗೆ ಗಾಂಧಿ ಜಯಂತಿ […]

ಪಿಎಫ್‌ಐ ವತಿಯಿಂದ 180 ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Monday, January 16th, 2017
PFI

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವತಿಯಿಂದ 180 ಮಂದಿ ವಿದ್ಯಾರ್ಥಿಗಳಿಗೆ 12.93 ಲಕ್ಷ ರೂ. ವೆಚ್ಚದಲ್ಲಿ ವಿದ್ಯಾರ್ಥಿ ವೇತನವನ್ನು ಶಾಸಕ ಜೆ.ಆರ್ ಲೋಬೋ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜ್ಞಾನ ಮತ್ತು ವ್ಯಕ್ತಿತ್ವ ವಿಕಸನ ಜೀವನದಲ್ಲಿ ಮುಖ್ಯ ಪಾತ್ರವನ್ನು ವಹಿಸಲಿದ್ದು, ಈ ಎರಡೂ ಅಂಶಗಳಿಂದ ಸಾಮಾಜಿಕ ಸಮಸ್ಯೆಯನ್ನು ಎದರಿಸುವುದರೊಂದಿಗೆ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿಎಫ್‌ಐ ರಾಜ್ಯಾಧ್ಯಕ್ಷ ಶಾಫಿ ಬೆಳ್ಳಾರೆ ವಹಿಸಿದ್ದರು. ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್ […]

ಜೆ.ಆರ್ ಲೋಬೋ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಸೆನೆಟ್‌ಗೆ ಸದಸ್ಯರಾಗಿ ಆಯ್ಕೆ

Sunday, August 2nd, 2015
jr Lobo

ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಮಾನ್ಯ ಶ್ರೀ ಜೆ. ಆರ್ ಲೋಬೋರವರು ರಾಜೀವ್ ಗಾಂಧಿ ಆರೋಗ್ಯ ವಿಜ್ಙಾನಗಳ ವಿಶ್ವವಿದ್ಯಾಲಯದ ಸೆನೆಟ್‌ಗೆ ಸದಸ್ಯರಾಗಿ ಚುನಾಯಿತರಾಗಿರುತ್ತಾರೆಂದು ಎಂ. ಗುರುರಾಜ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ. ಇದಲ್ಲದೆ, ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಮಾನ್ಯ ಶ್ರೀ ಡಾ. ಸಿ.ಎನ್. ಅಶ್ವಥ್‌ನಾರಾಯಣ ಹಾಗೂ ಕೋಲಾರದ ಮಾಲೂರು ಕ್ಷೇತ್ರದ ಶಾಸಕ ಮಾನ್ಯ ಶ್ರೀ ಕೆ.ಎಸ್. ಮಂಜುನಾಥಗೌಡ ಇವರು ನೂತನ ಸದಸ್ಯರಾಗಿ ಆಯ್ಕೆಗೊಂಡಿರುತ್ತಾರೆ.