ಡಿಕೆಶಿ ಬಂಧಿಸಿರುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
Wednesday, September 11th, 2019ಬೆಂಗಳೂರು : ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನ ಖಂಡಿಸಿ ರಾಜ್ಯ ಒಕ್ಕಲಿಗರ ಸಂಸ್ಥೆಗಳ ಒಕ್ಕೂಟ ಬುಧವಾರ ಬೃಹತ್ ಪ್ರತಿಭಟನಾ ಮೆರವಣಿಗೆಯೊಂದಿಗೆ ರಾಜಭವನ ಚಲೋ ನಡೆಸುತ್ತಿದೆ. ಡಿಕೆ ಶಿವಕುಮಾರ್ ಬಂಧನ ಖಂಡಿಸಿ ರಾಮನಗರದಿಂದ ಬೆಂಗಳೂರಿನತ್ತ ಪ್ರತಿಭಟನಾಕಾರರು ಹೊರಟಿದ್ದು, ಇಂದಿನ ಪ್ರತಿಭಟನಾ ಸಮಾವೇಶದಲ್ಲಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ರಾಜ್ಯ ಒಕ್ಕಲಿಗರ ಸಂಘ ತಿಳಿಸಿದೆ. ಜಾರಿ ನಿರ್ದೇಶನಾಲಯ ಡಿಕೆಶಿಯನ್ನು ಬಂಧಿಸಿರುವುದನ್ನು ವಿರೋಧಿಸಿ ರಾಜ್ಯ ಒಕ್ಕಲಿಗರ ಸಂಘ ನೀಡಿರುವ ಬೃಹತ್ ಪ್ರತಿಭಟನಾ ರಾಲಿಯ ಹಿನ್ನೆಲೆಯಲ್ಲಿ […]