Blog Archive

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 664 ಮಂದಿಗೆ ಕೊರೊನಾ ಸೋಂಕು, ನಾಲ್ವರ ಸಾವು

Wednesday, April 28th, 2021
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 664 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗೆಯೇ 256 ಮಂದಿ ಸೋಂಕಿತರು ಬುಧವಾರ ಗುಣಮುಖರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ವರದಿಯಾದ 664 ಕೊರೊನಾ ವೈರಸ್‌ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 42,729 ಕ್ಕೆ ಏರಿಕೆಯಾಗಿದೆ. ಈ ಪೈಕಿ 4694 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಒಟ್ಟು 7,29,742 ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಅದರಲ್ಲಿ 687013 ಮಾದರಿಗಳು ನೆಗೆಟಿವ್‌‌ ಆಗಿದೆ. ಬುಧವಾರ 256 ಜನರು ಗುಣಮುಖರಾಗಿದ್ದು […]

ದಕ್ಷಿಣ ಕನ್ನಡ ಜಿಲ್ಲೆ 474 , ಉಡುಪಿಯಲ್ಲಿ 274 ಕೊರೊನಾ ವೈರಸ್‌ ಪ್ರಕರಣಗಳು ಪತ್ತೆ

Friday, April 23rd, 2021
corona

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ವರದಿಯಾದ 474 ಕೊರೊನಾ ವೈರಸ್‌ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 39,718 ಕ್ಕೆ ಏರಿವೆ. ಈ ಪೈಕಿ 2,825 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಒಟ್ಟು 7,00,688 ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಅದರಲ್ಲಿ 6,60,970 ಮಾದರಿಗಳು ನೆಗೆಟಿವ್‌‌ ಆಗಿದೆ. ಗುರುವಾರ 121 ಜನರು ಗುಣಮುಖರಾಗಿದ್ದು ಒಟ್ಟು ಗುಣಮುಖರಾದವರ ಸಂಖ್ಯೆ 36,145ಕ್ಕೆ ಏರಿದೆ. ಈವರೆಗೆ ಒಟ್ಟು 745 ಸಾವುಗಳು ಸಂಭವಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 47,706 ಮಾಸ್ಕ್‌ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 272 ಮಂದಿಗೆ ಕೊರೋನಾ ಸೋಂಕು ಪತ್ತೆ

Monday, April 19th, 2021
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ  272 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ರವಿವಾರ 131 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ 744 ಮಂದಿ ಬಲಿಯಾಗಿದ್ದಾರೆ. ದ. ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 38,143 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 1,764 ಸಕ್ರಿಯ  ಕೇಸ್ ಗಳಿವೆ. ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 622 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈವರೆಗೆ 37,372 ಮಂದಿ ಗೆ ಸೋಂಕು ದೃಢಪಟ್ಟಿದೆ.

ಪ್ರಾಯೋಗಿಕ ಕರ್ಫ್ಯೂ ಹೆಸರಲ್ಲಿ ಜನಸಾಮಾನ್ಯರಿಗೆ ತೊಂದರೆ

Thursday, April 8th, 2021
night Curfew

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನೇಮೋತ್ಸವ, ಬ್ರಹ್ಮಕಲಶಗಳು ನಡೆಯುವುದರಿಂದ ಸರಕಾರ ಪ್ರಾಯೋಗಿಕ ಕರ್ಫ್ಯೂ ಜಾರಿ ರಾತ್ರಿ ದುಡಿಯುವ ಜನಸಾಮಾನ್ಯರಿಗೆ ದೊಡ್ಡ ಹೊಡೆತ ನೀಡಲಿದೆ. ರಾಜ್ಯದಲ್ಲಿ ಬಾರ್, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚುವ ಸಾಧ್ಯತೆಯಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿಡುವ ಚಿಂತನೆ ಮಾಡಲಾಗಿದೆ. ಏಪ್ರಿಲ್ 8ರ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಮಾತನಾಡಿ, ಉಡುಪಿ ಸೇರಿದಂತೆ 7 ಜಿಲ್ಲೆಗಳ ಎಂಟು ನಗರಗಳಲ್ಲಿ 10 ದಿನಗಳ ಕಾಲ ರಾತ್ರಿ ಕರ್ಫ್ಯೂ  ರಾತ್ರಿ 10 ರಿಂದ ಬೆಳಿಗ್ಗೆ […]

ದಕ್ಷಿಣ ಕನ್ನಡ ಜಿಲ್ಲೆಯ ಐವರು ಪೊಲೀಸ್ ಅಧಿಕಾರಿಗಳು ಸೇರಿದಂತೆ 120 ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

Thursday, February 11th, 2021
ದಕ್ಷಿಣ ಕನ್ನಡ ಜಿಲ್ಲೆಯ ಐವರು ಪೊಲೀಸ್ ಅಧಿಕಾರಿಗಳು ಸೇರಿದಂತೆ 120 ಪೊಲೀಸರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯ ಡಿಟಿ ನಾಗರಾಜ್ ಬಂಟ್ವಾಳ ವೃತ್ತ (ಸಿಪಿಐ), ಕಬ್ಬಾಳ್ ರಾಜ್ ಉಳ್ಳಾಲ್ ಪೊಲೀಸ್ ಠಾಣೆ (ಪಿಎಸೈ), ಪುರುಷೋತ್ತಮ ಎ, ಸಿಐಡಿ ಪೊಲೀಸ್ ಅರಣ್ಯ ಘಟಕ ಮಂಗಳೂರು, ವೆಂಕಟೇಶ್ ನಾಯಕ್ (ಸಿಹೆಚ್ ಸಿ) ಬೆಳ್ತಂಗಡಿ ವೃತ್ತ ಸೇರಿದಂತೆ 120 ವಿವಿಧ ವರ್ಗದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು 2019ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‍ನಲ್ಲಿ ಸೋಮವಾರ  ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2019ರ ಮುಖ್ಯಮಂತ್ರಿ ಪದಕ ಪುರಸ್ಕೃತ ಪೊಲೀಸ್ ಅಧಿಕಾರಿಗಳು […]

ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕು ಗಳಲ್ಲಿ ರವಿವಾರ ಎರಡನೇ ಹಂತದ ಚುನಾವಣೆ

Saturday, December 26th, 2020
vote

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕಿನ 114 ಗ್ರಾಪಂಗಳಿಗೆ ರವಿವಾರ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಮತದಾನ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಹೇರಲಾಗಿದೆ. ಬೆಳ್ತಂಗಡಿಯ 46, ಪುತ್ತೂರಿನ 22, ಕಡಬದ 21, ಸುಳ್ಯದ 25 ಸಹಿತ 114 ಗ್ರಾಪಂಗಳ 1541 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಆ ಪೈಕಿ 41 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದ ಕಾರಣ ರವಿವಾರ 1,500 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಂತಿಮವಾಗಿ ಕಣದಲ್ಲಿರುವ […]

ದಕ್ಷಿಣ ಕನ್ನಡ ಜಿಲ್ಲೆಯ 5 ಅಭಿವೃದ್ಧಿ ಕಾಮಗಾರಿಗಳಿಗೆ ನಿತಿನ್ ಗಡ್ಕರಿ ಚಾಲನೆ

Saturday, December 19th, 2020
Nithin Gadkari

ಮಂಗಳೂರು : ದ.ಕ ಜಿಲ್ಲೆಯ 214.22 ಕೋಟಿ ರೂ. ವೆಚ್ಚದ 5 ಅಭಿವೃದ್ಧಿ ಕಾಮಗಾರಿಗಳಿಗೆ ರಾಷ್ಟ್ರೀಯ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು. ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿರುವ ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ 69.02 ಕೋಟಿ ರೂ. ವೆಚ್ಚದ ನೂತನ ಷಟ್ಪಥ ಕೂಳೂರು ಸೇತುವೆ, ರಾಷ್ಟ್ರೀಯ ಹೆದ್ದಾರಿ 275ರಲ್ಲಿರುವ ಸಂಪಾಜೆ ಘಾಟ್ನ ತಡೆಗೋಡೆ ಹಾಗೂ ರಸ್ತೆ 2.53 ಕಿ.ಮೀ. […]

ಕೊರೋನ ಲಾಕ್ ಡೌನ್ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಪದವಿ ಕಾಲೇಜುಗಳು ಆರಂಭ

Tuesday, November 17th, 2020
Degree college

ಮಂಗಳೂರು : ಕೊರೋನ ಲಾಕ್ ಡೌನ್ ಬಳಿಕ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಪದವಿ ಕಾಲೇಜುಗಳಲ್ಲಿ ತರಗತಿಗಳು ಇಂದಿನಿಂದ ಆರಂಭಗೊಂಡಿವೆ. ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವು ಕಾಲೇಜುಗಳಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ತರಗತಿ ಆರಂಭಿಸಲಾಗಿದೆ. ಕೋವಿಡ್-19 ನೆಗೆಟಿವ್ ವರದಿ ಇದ್ದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಅದೇರೀತಿ ಕಾಲೇಜಿಗೆ ಆಗಮಿಸುವುದಕ್ಕೆ ಸಮ್ಮತಿ ಇರುವುದಾಗಿ ಪೋಷಕರಿಂದ ಒಪ್ಪಿಗೆ ಪತ್ರ ತಂದಿರುವ ವಿದ್ಯಾರ್ಥಿಗಳಿಗೆ ತರಗತಿಗೆ ಪ್ರವೇಶ ನೀಡಲಾಗಿದೆ. ತರಗತಿ ಪ್ರವೇಶಿಸುವ ಮೊದಲು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 220 ಮಂದಿಗೆ ಕೊರೊನಾ ಸೋಂಕು, 5 ಮಂದಿ ಬಲಿ

Saturday, October 17th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 220 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಶುಕ್ರವಾರ 391 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಶುಕ್ರವಾರದ ರಾಜ್ಯ ಆರೋಗ್ಯ ಬಲಿಟಿನ್ ಮಾಹಿತಿ ಪ್ರಕಾರ 5 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಕೊರೊನಾ ಸೋಂಕಿಗೆ ಒಟ್ಟು  624 ಸಾವು ಸಂಭವಿಸಿದೆ. ಶುಕ್ರವಾರದ 391 ಮಂದಿ ಒಳಗೊಂಡು ಈವರೆಗೆ ಒಟ್ಟು ಗುಣಮುಖರಾದವರು 23804 ಮಂದಿ. ದ.ಕ ಜಿಲ್ಲೆಯಲ್ಲಿ ಈವರೆಗೆ  ಸಕ್ರಿಯ ಪ್ರಕರಣಗಳ ಸಂಖ್ಯೆ  3531, ಒಟ್ಟು ಕೊರೊನಾ ನೆಗೆಟಿವ್ ಪ್ರಕರಣಗಳು 189046,  ಪಾಸಿಟಿವ್ ಪ್ರಕರಣಗಳು 27959, ಈವರೆಗೆ 217005 ಮಂದಿಯ ಕೊರೊನಾ ಪರೀಕ್ಷೆ ಮಾಡಲಾಗಿದೆ.

ಕೊರೋನ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ- 303, ನಾಲ್ಕು ಸಾವು, ಉಡುಪಿ – 319, ಕಾಸರಗೋಡು – 295

Monday, October 12th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 303 ಮಂದಿಗೆ ಕೊರೋನ ಸೋಂಕು ತಗುಲಿದ್ದು4 ಮಂದಿ ಮೃತಪಟ್ಟಿದ್ದಾರೆ. 194 ಮಂದಿ ಗುಣಮುಖ ರಾಗಿದ್ದಾರೆ. ಉಡುಪಿಯಲ್ಲಿ ಮತ್ತೆ 319 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈವರೆಗಿನ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 1,99,759 ಮಂದಿಯ ಪರೀಕ್ಷೆ ಮಾಡಿಸಲಾಗಿದೆ. ಆ ಪೈಕಿ 1,72,927 ಮಂದಿಯ ವರದಿ ನೆಗೆಟಿವ್ ಮತ್ತು 26,832 ಮಂದಿಯ ವರದಿ ಪಾಸಿಟಿವ್ ಬಂದಿದೆ. ಅಲ್ಲದೆ ಒಟ್ಟು 609 ಮಂದಿ ಸಾವಿಗೀಡಾಗಿದ್ದಾರೆ. 21,938 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 4,285 ಸಕ್ರಿಯ ಪ್ರಕರಣಗಳಿವೆ. […]