Blog Archive

ಯಾವ ಚುನಾವಣೆ ಬಂದರೂ ನಾವು ಎದುರಿಸಲು ಸಿದ್ಧರಿದ್ದೇವೆ : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

Saturday, October 19th, 2019
dinesh-gundu-rao

ಮಂಡ್ಯ : ಉಪಚುನಾವಣೆಯಾಗಲಿ, ಸಾರ್ವತ್ರಿಕ ಚುನಾವಣೆ ಬರಲಿ, ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಕಾರ್ಯನಿಮಿತ್ತ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ನಗರದಲ್ಲಿ ಕಾಂಗ್ರೆಸ್ಸಿಗರಿಂದ ಸ್ವಾಗತ ಸ್ವೀಕರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಕಟ್ಟಲು ನಾವೆಲ್ಲ ಕೆಲಸ ಮಾಡುತ್ತಿದ್ದೇವೆ. ರಾಜ್ಯ ಬಿಜೆಪಿ ಸರ್ಕಾರದಿಂದ ಜನರಲ್ಲಿ ಭ್ರಮನಿರಸನ ಆಗಿದೆ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಸಿಎಂಗೆ ಏನು ಕೇಳಿದರೂ ನನ್ನ ಹತ್ತಿರ ಹಣವಿಲ್ಲ, ನಡೆಸಲು ಆಗುತ್ತಿಲ್ಲ ಎನ್ನುತ್ತಿದ್ದಾರಲ್ಲ ಏನು ಹೇಳಬೇಕು. ಚುನಾವಣೆ ಬಂದರೆ […]

ದಿನೇಶ್ ಗುಂಡೂರಾವ್ ವಿರುದ್ದ ಏಕ ವಚನದಲ್ಲಿ ವಾಗ್ದಾಳಿ ಮಾಡಿದ ಎಸ್ ಟಿ ಸೋಮಶೇಖರ್

Friday, September 27th, 2019
somashekar

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಅನರ್ಹ ಶಾಸಕ ಸೋಮಶೇಖರ್ ಫುಲ್ ಗರಂ ಆಗಿದ್ದು, ದಿನೇಶ್ ಗುಂಡೂರಾವ್ ಅಯೋಗ್ಯ ಎಂದಿದ್ದಾರೆ. ಬೆಂಗಳೂರಿನಲ್ಲಿ ಇಂದು ದಿನೇಶ್ ಗುಂಡೂರಾವ್ ವಿರುದ್ದ ಏಕ ವಚನದಲ್ಲಿ ವಾಗ್ದಾಳಿ ಮಾಡಿದ ಸೋಮಶೇಖರ್, ದಿನೇಶ್ ಗುಂಡೂರಾವ್ ಅಯೋಗ್ಯ. ಸಿದ್ದರಾಮಯ್ಯನ ಚೇಲಾ ಅವನು ಎಂದಿದ್ದಾರೆ. ಸಿದ್ದರಾಮಯ್ಯನವರದ್ದು ಕಾಂಗ್ರೆಸ್ ಪಕ್ಷವೋ ಅಥವಾ ಮೂಲ ಕಾಂಗ್ರೆಸ್ ಪಕ್ಷವೋ? ಎಂದು ಪ್ರಶ್ನಿಸಿದ ಅವರು, ಪದೇ ಪದೇ ಅನರ್ಹರ ಬಗ್ಗೆ ಮಾತಾಡೋದು ಬೇಡ. ಪಕ್ಷ ವಿರೋಧಿಗಳನ್ನು ಇಟ್ಟುಕೊಂಡು ಸಭೆ ಮಾಡ್ತೀರಿ. […]

ಬೆಂಗಳೂರು : ಡಿಕೆಶಿ ಬಂಧನ ಖಂಡಿಸಿ : ಒಕ್ಕಲಿಗರ ಸಂಘಟನೆಗಳ ಪ್ರತಿಭಟನೆ

Wednesday, September 11th, 2019
okkaliga

ಬೆಂಗಳೂರು : ದೇಶದ ಆರ್ಥಿಕ ಪರಿಸ್ಥಿತಿ ತೀವ್ರ ಕುಸಿದು, ನಿರುದ್ಯೋಗದ ಪ್ರಮಾಣ ಹೆಚ್ಚಳ ವಾಗುತ್ತಿದ್ದರೂ ಬಿಜೆಪಿ ಮಾತ್ರ ದ್ವೇಷದ ರಾಜಕಾರಣ ಮಾಡಿಕೊಂಡು ಬರುತ್ತಿದೆ. ಡಿಕೆ ಶಿವಕುಮಾರ್ ತನಿಖೆಗೆ ಸಹಕರಿಸಿದರೂ, ಅವರನ್ನು ಬಂಧಿಸಿ ಹೇಡಿತನದ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಮಾಜಿ ಸಚಿವ ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರ ಸಂಘಟನೆಗಳು ನ್ಯಾಷನಲ್ ಕಾಲೇಜು ಮೈದಾನದಿಂದ ಫ್ರೀಡಂ ಪಾರ್ಕ್ ವರೆಗೆ ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ ಅವರು ನಾವು ಸುಮ್ಮನೆ ಕೂರಲು ಸಾಧ್ಯವೇ ಇಲ್ಲಾ. […]

ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ

Thursday, August 29th, 2019
Congress-pratibhatane

ಬೆಂಗಳೂರು : ಅತಿವೃಷ್ಟಿ ಬಗ್ಗೆ ರಾಜ್ಯ ಸರಕಾರದ ನಿರ್ಲಕ್ಷ ಮತ್ತು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ಧರಣಿ ನಡೆಸುತ್ತಿದೆ . ನಗರದ ಮೌರ್ಯ ಸರ್ಕಲ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಕಾಂಗ್ರೆಸ್ ಶಾಸಕರು, ನಾಯಕರು ಸಾಥ್ ನೀಡಿದ್ದಾರೆ. ಇಂದು ಸಂಜೆ 5ವರೆಗೂ ಈ ಧರಣಿ ಸತ್ಯಾಗ್ರಹ ನಡೆಯಲಿದ್ದು ಬಳಿಕ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಭೇಟಿಯಾಗಿ ಮನವಿ ಪತ್ರ ನೀಡಲಿದ್ದಾರೆ.    

ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನಾಚರಣೆ..!

Monday, August 20th, 2018
siddaramaih

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ದೇವರಾಜ ಅರಸು ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನಾಚರಣೆ ಆಚರಿಸಲಾಯಿತು. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ದಿ. ರಾಜೀವ್ ಗಾಂಧಿ ಮತ್ತು ದಿ. ದೇವರಾಜ್ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ವೇಳೆ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್, ಮಾಜಿ ಸಚಿವ ಹೆಚ್. ಆಂಜನೇಯ, ಶಾಸಕ ಭೈರತಿ ಸುರೇಶ್, ಮಾಜಿ ಸಚಿವೆ ಮೋಟಮ್ಮ ಉಪಸ್ಥಿತರಿದ್ದರು. ಇದೇ ವೇಳೆ ಮಾತನಾಡಿದ […]

ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿದೆ, ಸರ್ಕಾರಕ್ಕೆ ತೊಂದರೆ ಇಲ್ಲ: ದಿನೇಶ್ ಗುಂಡೂರಾವ್

Friday, August 10th, 2018
dinesh-gundo-rao

ಬೆಂಗಳೂರು: ಅನೈತಿಕ ಮೈತ್ರಿ ಎಂದು ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಯು ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವ ಪ್ರಯತ್ನದ ಭಾಗವಾಗಿದೆ. ಅವರು ಏನೇ ತಿಪ್ಪರಲಾಗ ಹಾಕಿದರೂ ಚಿಂತೆಯಿಲ್ಲ ಜೆಡಿಎಸ್ ನವರು ನಾವು ಎಲ್ಲರೂ ಒಗ್ಗಟ್ಟಾಗಿದ್ದೇವೆ ಸರ್ಕಾರಕ್ಕೆ ತೊಂದರೆಯಿಲ್ಲ, ಹೀಗಾಗಿ ಸುಸೂತ್ರವಾಗಿ ಆಡಳಿತ ನಡೆಯಲಿದೆ‌ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಅನಗತ್ಯವಾಗಿ ಬಿಜೆಪಿ ನಾಯಕ ಈಶ್ವರಪ್ಪ ಮೈತ್ರಿ ಸರ್ಕಾರವನ್ನು ಅಪವಿತ್ರ, ಅನೈತಿಕ ಹೊಂದಾಣಿಕೆ ಮಾಡಿಕೊಂಡಿದೆ, ಹೆಚ್ಚು ದಿನ ಇರುವುದಿಲ್ಲವೆಂಬ ಕೆಲಸಕ್ಕೆ ಬಾರದ ಹೇಳಿಕೆ ನೀಡುತ್ತಿದ್ದಾರೆ. ಅವರು ಬೇಕಾದರೆ […]

ಜನ‌ ನಮ್ಮ ವಿರುದ್ಧ ತಿರುಗಿ ಬಿದ್ದಿಲ್ಲ, ನಮ್ಮನ್ನು ‌ಒಪ್ಪಿಕೊಂಡಿದ್ದಾರೆ: ದಿನೇಶ್ ಗುಂಡೂರಾವ್

Saturday, July 21st, 2018
dinesh-gundu-rao

ಬೆಂಗಳೂರು: ಜನ‌ ನಮ್ಮ ವಿರುದ್ಧ ತಿರುಗಿ ಬಿದ್ದಿಲ್ಲ. ನಮ್ಮನ್ನು ‌ಒಪ್ಪಿಕೊಂಡಿದ್ದಾರೆ. ಆದರೂ ಪ್ರಜಾಪ್ರಭುತ್ವದಲ್ಲಿ ಸಂಖ್ಯೆ ಮುಖ್ಯ. ಅನಿವಾರ್ಯವಾಗಿ ಸಮ್ಮಿಶ್ರ ಸರ್ಕಾರ ರಚಿಸಿದ್ದೇವೆ. ಲೋಕಸಭೆಯಲ್ಲಿಯೂ ಉತ್ತಮ ಕೆಲಸ ಮಾಡಿ ಹೆಚ್ಚು ಸ್ಥಾನ ಗೆಲ್ಲಿಸಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪದಾಧಿಕಾರಿಗಳಿಗೆ ಕರೆ ನೀಡಿದ್ದಾರೆ. ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಕಾಂಗ್ರೆಸ್ಗೆ ಸವಾಲಾಗಿದೆ. ಡಿಸೆಂಬರ್ನಲ್ಲಿ ಲೋಕಸಭೆಗೆ ಚುನಾವಣೆ ಬರಬಹುದು‌. ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ಅಧಿಸೂಚನೆಯಾಗಲಿದೆ ಎಂದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷೆಯಷ್ಟು ಸ್ಥಾನ […]

ಸೋತ ಶಾಸಕರಿಗೆ ಧೈರ್ಯ ತುಂಬಿದ ರಾಜ್ಯ ‘ಕೈ’ ನಾಯಕರು

Monday, July 9th, 2018
dinesh-gundu-rao

ಬೆಂಗಳೂರು: ಶಾಸಕರ ಭವನದಲ್ಲಿ ಆಯೋಜಿಸಿದ್ದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು. 2008ರಲ್ಲಿ 88 ಸ್ಥಾನ ಗೆದ್ದು ಪ್ರತಿಪಕ್ಷದಲ್ಲಿ ಕುಳಿತಿದ್ದ ಕಾಂಗ್ರೆಸ್‍ 2013ರಲ್ಲಿ 122 ಸ್ಥಾನ ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸಿದ್ದರು. 2013-2018ರ ನಡುವೆ ಹಲವು ಭಾಗ್ಯಗಳನ್ನು ದಯಪಾಲಿಸಿದ್ದ ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಂಡಿದ್ದರು. ಪಕ್ಷ […]

ಯೋಗಿ ವಿರುದ್ಧ ಹೇಳಿಕೆ ಖಂಡಿಸಿ ಗುಂಡೂರಾವ್‌ಗೆ ಚಪ್ಪಲಿ ಪಾರ್ಸೆಲ್‌ ಮಾಡಿದ ಬಿಜೆಪಿ!

Monday, April 16th, 2018
yogi-adithyanath

ಮಂಗಳೂರು: ಯೋಗಿ ಆದಿತ್ಯನಾಥ್ ವಿರುದ್ಧ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಹಳೆ ಚಪ್ಪಲಿಗಳನ್ನು ಕೋರಿಯರ್ ಮೂಲಕ ಪಾರ್ಸೆಲ್ ಮಾಡಿದ್ದಾರೆ. ದಿನೇಶ್ ಗುಂಡೂರಾವ್‌ಗೆ ಚಪ್ಪಲಿ‌ ಪಾರ್ಸೆಲ್ ಮಾಡಿದ ಬಿಜೆಪಿ ಯುವ ಮೋರ್ಚಾ ವಿನೂತನವಾಗಿ ಪ್ರತಿಭಟನೆ ನಡೆಸಿತು. ದ.ಕ. ಜಿಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ದಿನೇಶ್ ಗುಂಡೂರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆಗೂ ಮುನ್ನ ಕಾಂಗ್ರೆಸಿಗರಿಂದ ಶಸ್ತ್ರತ್ಯಾಗ: ನಳಿನ್ ಕುಮಾರ್ ಕಟೀಲ್

Monday, February 19th, 2018
mangaluru

ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಕಾಲಿಡುತ್ತಿದ್ದಂತೆ ಕಾಂಗ್ರೆಸ್ ಹುಲಿಗಳು ಭಯಭೀತರಾಗಿ ಗುಹೆ ಸೇರುತ್ತಿದ್ದಾರೆ ಎಂದು ಸಂಸದ ನಳಿನ್ ಕುಮಾರ ಕಟೀಲ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಅಮಿತ್ ಶಾ ಗಲಭೆಗೆ ಪ್ರಚೋದನೆ ಕೊಡುತ್ತಾರೆಂದು ಕಾಂಗ್ರೆಸಿಗರು ಆರೋಪಿಸುತ್ತಾರೆ. ಆದರೆ, ಎಲ್ಲೆಲ್ಲಿ ಮುಖ್ಯಮಂತ್ರಿ ಹೋಗಿದ್ದಾರೆಯೋ ಅಲ್ಲೆಲ್ಲಾ ಹತ್ಯೆಗಳಾಗುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡಿ ಹೋದ ಬಳಿಕ ಕೋಮುಗಲಭೆಗಳು ನಡೆದ ನಿದರ್ಶನಗಳಿವೆ,” ಎಂದು ಕಿಡಿಕಾರಿದರು. ಕರಾವಳಿಯಲ್ಲಿ ಸೋಮವಾರದಿಂದ ಅಮಿತ್ ಶಾ ಪ್ರವಾಸ ಆರಂಭ […]