ದ.ಕ. ಜಿಲ್ಲೆಯಲ್ಲಿ ಹೊಸದಾಗಿ 46 ಮಂದಿಯಲ್ಲಿ ಸೋಂಕು, ಮೂವರು ಮೃತ
Sunday, November 22nd, 2020ಮಂಗಳೂರು : ದ.ಕ. ಜಿಲ್ಲೆಯಲ್ಲಿ ಹೊಸದಾಗಿ 46 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಕೊರೋನ ಸೋಂಕಿನಿಂದಾಗಿ ಮತ್ತೆ ಮೂವರು ಮೃತಪಟ್ಟಿದ್ದಾರೆ ಶನಿವಾರ 92 ಮಂದಿ ಕೊರೋನ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿನ 31,520 ಸೋಂಕಿತರ ಪೈಕಿ 30,234 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ 704 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 582 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 13,714 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ 14,83,612 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.