Blog Archive

ಸುಳ್ಳು ಹೇಳಿ ಜನರ ದಾರಿ ತಪ್ಪಿಸುವ‌ ಕೆಲಸವನ್ನು ಕೇಂದ್ರ ಸರ್ಕಾರದ ಪ್ರತಿನಿಧಿ ಮಾಡುತ್ತಿದ್ದಾರೆ: ರಮಾನಾಥ ರೈ

Wednesday, November 28th, 2018
ramanatha

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು, ಕೇಂದ್ರ ಸರ್ಕಾರ ಮತ್ತು ಲೋಕಸಭೆ ಚುನಾಯಿತ ಜನಪ್ರತಿನಿಧಿ ಆದಷ್ಟು ಬೇಗ ಈ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದರು. ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರ ಇರುವಾಗ ಈ ಯೋಜನೆ ಪ್ರಾರಂಭವಾಗಿದ್ದು, ಎಲ್ಎನ್ಟಿ ಗುತ್ತಿಗೆದಾರ ಕಂಪೆನಿಯು ಈ ಕಾಮಗಾರಿಯನ್ನು ವಹಿಸಿಕೊಂಡಿತ್ತು. ರಸ್ತೆ ರಚನೆ ಮಾಡುವ ಎಲ್ಲಾ ಪ್ರಕ್ರಿಯೆ ಪೂರ್ಣಗೊಂಡಿದ್ದು, ಭೂಸ್ವಾಧೀನ‌ […]

ಟಿಪ್ಪು ಸುಲ್ತಾನ್​ ನಂತರ ಈ ರಾಜ್ಯವನ್ನು ಆಳಿದ ಮತಾಂಧ ಯಾರೆಂದು ಹೇಳಿದರೆ ಅದು ಸಿದ್ದರಾಮಯ್ಯ: ನಳಿನ್​ ಕುಮಾರ್ ವ್ಯಂಗ್ಯ

Saturday, November 10th, 2018
Tippu-protest-4

ಮಂಗಳೂರು: ರಾಜ್ಯದ ಸಿಎಂ ಕುಮಾರಸ್ವಾಮಿ‌ ಬಹಳ ಬುದ್ಧಿವಂತರು. ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಆಚರಿಸುತ್ತಿದ್ದರು ಎಂಬ ಕಾರಣಕ್ಕೆ ತಾವು ಅಚರಿಸುತ್ತಿರುವುದಾಗಿ ಹೇಳಿದರು. ಕಾಂಗ್ರೆಸ್ನವರ ಋಣದಲ್ಲಿದ್ದಾರೆ ಎಂಬ ಕಾರಣಕ್ಕೆ ಅದನ್ನು ಮುಂದುವರಿಸಿದ್ದಾರೆ ಸಂಸದ ನಳಿನ್ ಕುಮಾರ್ ಕಟೀಲು ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ಆಚರಿಸುತ್ತಿರುವ ಟಿಪ್ಪು ಜಯಂತಿ ವಿರುದ್ಧ ದ.ಕ.ಜಿಲ್ಲಾ ಬಿಜೆಪಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಸಿಎಂ ಟಿಪ್ಪು ಜಯಂತಿ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡು ಆಚೆಯೂ ಅಲ್ಲ, ಈಚೆಯೂ ಅಲ್ಲ ಅನ್ನುವಂತಾಗಿದೆ. ಅಲ್ಲದೆ, ಇದೇ […]

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ: ಸಂಸದ ನಳಿನ್ ಅವರಿಂದ ಉದ್ಘಾಟನೆ

Monday, October 8th, 2018
nalin-kumar

ಮಂಗಳೂರು: ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವಜನ ಒಕ್ಕೂಟ ಇವರ ಆಶ್ರಯದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಇಂದು ಬೆಳಗ್ಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸಮಾರಂಭಕ್ಕೆ ಚಾಲನೆ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕಸ್ತೂರಿ ಪಂಜ, ಮಮತಾ ಗಟ್ಟಿ, ಲಿಲ್ಲಿ ಪಾಯಸ್ ಮತ್ತಿತರರು […]

ವಾಜಪೇಯಿ ನಿಧನರಾದ ಹಿನ್ನೆಲೆ..ಬಿಜೆಪಿ ಕಚೇರಿಯಲ್ಲಿ ಶೃದ್ದಾಂಜಲಿ!

Friday, August 17th, 2018
nalin-kumar

ಮಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನರಾದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಶೃದ್ದಾಂಜಲಿ ಅರ್ಪಿಸಲಾಯಿತು. ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಶೃದ್ದಾಂಜಲಿ ಸಭೆಯಲ್ಲಿ ವಾಜಪೇಯಿ ಅವರಿಗೆ ಪುಷ್ಪನಮನ ಸಲ್ಲಿಸಿ ನುಡಿನಮನ ಸಲ್ಲಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಾಜಿ ಶಾಸಕ ಯೋಗೀಶ್ ಭಟ್ ಮೊದಲಾದವರು ನುಡಿನಮನ ಸಲ್ಲಿಸಿದರು.

ನಾಳೆಯಿಂದ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗಮೇಳ

Thursday, July 5th, 2018
ನಾಳೆಯಿಂದ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗಮೇಳ

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಜುಲೈ 6 ಹಾಗೂ 7ರಂದು `ಆಳ್ವಾಸ್ ಪ್ರಗತಿ 2018′-10ನೇ ವರ್ಷದ ಬೃಹತ್ ಉದ್ಯೋಗ ಮೇಳವು ವಿದ್ಯಾಗಿರಿಯ ಆಳ್ವಾಸ್ ಕಾಲೇಜಿನ ಸುಂದರಿ ಆನಂದ ಆಳ್ವ ಆವರಣದಲ್ಲಿ ನಡೆಯಲಿದೆ. 600 ಹೆಸರಾಂತ ಕಂಪೆನಿಗಳು ಭಾಗವಹಿಸಲಿದ್ದು, 2 ಸಾವಿರಕ್ಕೂ ಅಧಿಕ ಉದ್ಯೋಗವಕಾಶಗಳು ಸೃಷ್ಟಿಯಾಗಲಿವೆ. ಉಚಿತ ನೋಂದಾವಣೆ, ಅತ್ಯಂತ ಪಾರದರ್ಶಕತೆ, ವ್ಯವಸ್ಥಿತ ರೀತಿಯಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 12 ಸಾವಿರ ಅಭ್ಯರ್ಥಿಗಳು ಪ್ರಗತಿಯಲ್ಲಿ ಭಾಗಹಿಸುವ ನಿರೀಕ್ಷೆಯಿದೆ ಎಂದು ಆಳ್ವಾಸ್ ಶಿಕ್ಷಣ […]

ಮುಲ್ಲರಪಟ್ನ ಸೇತುವೆ ಕುಸಿಯಲು ಮರಳು ಮಾಫಿಯಾ, ಅಧಿಕಾರಿ ನಿರ್ಲಕ್ಷ ಕಾರಣ: ಸಂಸದ ನಳಿನ್ ಕುಮಾರ್

Tuesday, June 26th, 2018
nalin-kumar

ಮಂಗಳೂರು: ಮುಲ್ಲರಪಟ್ನ ಸೇತುವೆಯು ಮರಳು ಮಾಫಿಯಾಕ್ಕೆ ಬಲಿಯಾದ ಮೊದಲ ಸೇತುವೆಯಾಗಿದ್ದು, ಅಧಿಕಾರಿಗಳ ನಿರ್ಲಕ್ಷವೂ ಕಾರಣ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಅಧಿಕಾರಿಗಳಿಗೆ ಅಲ್ಲಿಯ ಸ್ಥಳೀಯರು ಮರಳು ತೆಗೆಯುವುದರಿಂದ ಆಗಿರುವ ಹಾನಿ ಬಗ್ಗೆ, ಪಿಲ್ಲರ್ ಕುಸಿತದ ಬಗ್ಗೆ ವೀಡಿಯೋ ರೆಕಾರ್ಡ್ ಮಾಡಿ ಕಳುಹಿಸಿದ್ದರು. ಆಗ ಜಿಲ್ಲಾಡಳಿತ ಸೇತುವೆ ಬದಿ ಯಂತ್ರಗಳನ್ನು ಉಪಯೋಗಿಸಿ ಮರಳು ತೆಗೆಯುವುದನ್ನು ನಿಲ್ಲಿಸಿಲ್ಲ. ಅಲ್ಲಿ ಕಳೆದ ಅವಧಿಯಲ್ಲಿ ಆಡಳಿತದಲ್ಲಿದ್ದವರ ಪ್ರಭಾವ, ಬೆಂಬಲದೊಂದಿಗೆ […]

ಮೂರು ತಿಂಗಳ ಒಳಗೆ ರಾಜ್ಯದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ: ನಳಿನ್ ಕುಮಾರ್

Thursday, June 21st, 2018
nalin-kumar

ಸುಳ್ಯ: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐಸಿಯುನಲ್ಲಿದೆ. ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಂಠಿತಗೊಂಡಿದೆ. ಮೂರು ತಿಂಗಳ ಒಳಗೆ ರಾಜ್ಯದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಸುಳ್ಯದ ಬಿಜೆಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಕುಮಾರಸ್ವಾಮಿ ಮತ್ತು ಪರಮೇಶ್ವರ್‌ ಅವರದ್ದು ಗುರು-ಹಿರಿಯರ ಸಮ್ಮುಖದಲ್ಲಿ ಆದ ಮದುವೆ. ಈಗ ಅವರೊಳಗೆ ಒಳ ಜಗಳ ಆರಂಭವಾಗಿದೆ. ಜಗಳ ವಿಚ್ಛೇದನ ಕೊಡುವ ಹಂತಕ್ಕೆ ಬಂದು ತಲುಪಿದೆ. ಕುಮಾರಸ್ವಾಮಿಯವರು ವಿಚ್ಛೇದನಕ್ಕೆ ಅರ್ಜಿ […]

ನಮ್ಮ ಗುರಿ ಮೂಡುಬಿದಿರೆ ಪುರಸಭೆಯನ್ನು ಕಾಂಗ್ರೆಸ್ ಮುಕ್ತ ಮಾಡುವುದು: ಉಮಾನಾಥ ಕೋಟ್ಯಾನ್

Monday, June 4th, 2018
umanath-kotian

ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಉಮಾನಾಥ ಕೋಟ್ಯಾನ್ ಹಾಗೂ ಕಾರ್ಯಕರ್ತರಿಗೆ ಭಾರತೀಯ ಜನತಾ ಪಾರ್ಟಿ ಮೂಡುಬಿದಿರೆ ಇದರ ವತಿಯಿಂದ ಅಭಿನಂದನಾ ಕಾರ್ಯಕ್ರಮವು ರವಿವಾರ ಪದ್ಮಾವತಿ ಕಲಾ ಮಂಟಪದಲ್ಲಿ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯವಾಗಿ ಬೆಳೆದಿರುವ ಕ್ಷೇತ್ರ ಮೂಡುಬಿದಿರೆಯಲ್ಲಿ ಬಿಜೆಪಿಯ ಗೆಲುವಿನ ಸಾಧನೆ ಅದ್ಭುತ. ಈ ಗೆಲುವಿನ ಹಿಂದೆ ಸಹಸ್ರರು ಕಾರ್ಯಕರ್ತರ ಪರಿಶ್ರಮವಿದೆ. ಕಾಂಗ್ರೆಸ್ ಮುಕ್ತ ಕ್ಷೇತ್ರವಾಗಿ ಮೂಡುಬಿದಿರೆಯು ಮಾರ್ಪಾಡಾಗಬೇಕೆಂಬುದು ಭಾರತೀಯ […]

ಕಾಂಗ್ರೆಸ್‌‌‌-ಜೆಡಿಎಸ್‌ ಮೈತ್ರಿ ಪ್ರಜಾಪ್ರಭುತ್ವ ವಿರೋಧಿ: ನಳಿನ್ ಕುಮಾರ್ ಕಟೀಲ್

Saturday, May 19th, 2018
nalin-kumar

ಮಂಗಳೂರು: ಚುನಾವಣೆಯ ಸಂದರ್ಭದಲ್ಲಿ ವೈಯಕ್ತಿಕ ಮತ್ತು ಸೈದ್ಧಾಂತಿಕವಾಗಿ ವಿರೋಧ ಮಾಡಿ ಈಗ ಅಧಿಕಾರ ಮಾಡಲು ಯತ್ನಿಸುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್‌ನ್ನು ರಾಜ್ಯದ ಜನ ತಿರಸ್ಕರಿಸಿದ್ದಾರೆ. ಬಿಜೆಪಿಗೆ ಜನಾಶೀರ್ವಾದ ಇದ್ದು, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದರು. ಅಪ್ಪನಾಣೆ ಹಾಕಿಕೊಂಡವರು ಈಗ ಒಂದಾಗಿದ್ದು, ಸಿದ್ದರಾಮಯ್ಯರಿಗೆ ಅಪ್ಪನ ಮೇಲೆ ನಂಬಿಕೆ ಇಲ್ಲದಂತಾಗಿದೆ ಎಂದು ಲೇವಡಿ ಮಾಡಿದರು.

ಕರಾವಳಿಯಲ್ಲಿ ಬಿಜೆಪಿ ಗೆಲುವು ಮೃತ ಹಿಂದೂ ಕಾರ್ಯಕರ್ತರಿಗೆ ಸಮರ್ಪಣೆ’

Wednesday, May 16th, 2018
nalin-kumar

ಮಂಗಳೂರು: ಕರಾವಳಿಯಲ್ಲಿಕಾಂಗ್ರೆಸ್ ಧೂಳಿಪಟವಾಗಿದೆ. ಬಿಜೆಪಿಯ ದಿಗ್ವಿಜಯವನ್ನು ದುಷ್ಕರ್ಮಿಗಳ ದಾಳಿಗೆ ಬಲಿಯಾದ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ್ , ದೀಪಕ್ ರಾವ್ ಮಡಿಲಿಗೆ ಅರ್ಪಣೆ ಮಾಡುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಕರಾವಳಿಯಲ್ಲಿ ಜನಾಶೀರ್ವಾದ ಬಿಜೆಪಿಗೆ ದೊರೆತಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ರಲ್ಲಿ ಬಿಜೆಪಿ ಆಭ್ಯರ್ಥಿಗಳು ಜಯಗಳಿಸಿದ್ದಾರೆ. ದುರಾಡಳಿತ, ಭ್ರಷ್ಟಾಚಾರ, ಕೋಮುಭಾವನೆ ಕೆರಳಿಸುವ ಗೂಂಡಾಗಿರಿ ರಾಜಕಾರಣದಿಂದ ಜನರು ಬೇಸತ್ತಿದ್ದರು. ಈ ಹಿನ್ನೆಲೆಯಲ್ಲಿ ಕರಾವಳಿಯ ಜನರು ಕಾಂಗ್ರೆಸ್ […]