Blog Archive

ನ್ಯಾಯಾಲಯದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Monday, December 30th, 2019
Mangalore-court

ಮಂಗಳೂರು : ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರರು- 10, ಬೆರಳಚ್ಚುಗಾರರು –6, ಬೆರಳಚ್ಚು-ನಕಲುಗಾರರು –13 ಮತ್ತು ಆದೇಶಿಕ-ಜ್ಯಾರಿಕಾರರು -5 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/dakshinakannada  ದಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ 2020ನೇ ಜನವರಿ 13 ರಿಂದ ಫೆಬ್ರವರಿ 12 ರಂದು ರಾತ್ರಿ 11.59 ರವರೆಗೆ […]

ಮಂಗಳೂರು : ಯುವಕನ ಹತ್ಯೆಗೈದ ಆರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Tuesday, November 5th, 2019
marder-case

ಮಂಗಳೂರು : ಯುವಕನೋರ್ವನನ್ನು ಹತ್ಯೆಗೈದ ಆರು ಮಂದಿಯ ಮೇಲಿನ ಆರೋಪ, ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ನಗರದ ವೆಲೆನ್ಸಿಯಾ ಸಮೀಪದ ಗೋರಿಗುಡ್ಡೆ ನಿವಾಸಿ ಮೆರ್ಲಿಕ್ ಅಂತೋನಿ ಡಿಸೋಜ(21)ಎಂಬಾತ ಹತ್ಯೆಯಾದಾತ. ವೆಲೆನ್ಸಿಯಾ ನಿವಾಸಿಗಳಾದ ನಿಶಾಕ್ ಪೂಜಾರಿ(30), ವಿನೇಶ್ ಕುಮಾರ್(32), ಪ್ರವೀಣ್ ಪೂಜಾರಿ(43), ಮುಳಿಹಿತ್ಲು ನಿವಾಸಿ ಸಚಿನ್ ಶೆಟ್ಟಿ (23), ಜಪ್ಪಿನಮೊಗರು ನಿವಾಸಿ ಗಣೇಶ್ ಕುಲಾಲ್(27), ಜೆಪ್ಪು ಕುಟ್ಪಾಡಿ ನಿವಾಸಿ ಸಂದೀಪ್ ಶೆಟ್ಟಿ (34) ಶಿಕ್ಷೆಗೊಳಗಾದ ಅಪರಾಧಿಗಳು. […]

ಅಪ್ರಾಪ್ತೆ ಮೇಲೆ ಅತ್ಯಾಚಾರ : ಅಪರಾಧಿಗೆ ಹತ್ತು ವರ್ಷ ಜೈಲು ಮತ್ತು 10,000 ರೂ. ದಂಡ

Tuesday, September 24th, 2019
aprapte

ಮಂಗಳೂರು : ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿ , ಆಕೆಯನ್ನು ಗರ್ಭಿಣಿಯನ್ನಾಗಿಸಿದ ಪ್ರಕರಣದಲ್ಲಿ ಬಂಟ್ವಾಳ ತಾಲ್ಲೂಕು ಸಜಿಪಮುನ್ನೂರು ಶಾರದಾನಗರ ನಿವಾಸಿ ಸಂತೋಷ್ (34) ಎಂಬಾತನಿಗೆ ನಗರದ ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಲಯ ಹತ್ತು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 10,000 ದಂಡ ವಿಧಿಸಿ ಮಂಗಳೂರಿನ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯ ( ಪೋಕ್ಸೋ ) ಸೋಮವಾರ ತೀರ್ಪು ನೀಡಿದೆ. 14 ವರ್ಷದ ಬಾಲಕಿಯೂ ಅಂಗಡಿಗೆ ಹೋಗುತ್ತಿದ್ದಾಗ, […]

ಅಕ್ಟೋಬರ್21ರಂದು 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ

Saturday, September 21st, 2019
shasakaru

ನವದೆಹಲಿ : ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ ಬೆನ್ನಲ್ಲೇ ಕರ್ನಾಟಕದ 15 ಅನರ್ಹ ಶಾಸಕರ ಕ್ಷೇತ್ರಗಳಿಗೂ ಉಪಚುನಾವಣೆಯ ದಿನಾಂಕ ಘೋಷಿಸಿದೆ. ಅಕ್ಟೋಬರ್ 21ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ರಾಜ್ಯದ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಿಸಿಲ್ಲ. ಆರ್ ಆರ್ ನಗರ(ಮುನಿರತ್ನ ಕ್ಷೇತ್ರ) ಮತ್ತು ಮಸ್ಕಿ(ಪ್ರತಾಪ್ ಗೌಡ)ಕ್ಷೇತ್ರಗಳಲ್ಲಿ ಉಪಚುನಾವಣೆ […]

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ ಆರಂಭ

Saturday, September 14th, 2019
Mangaluru-city

ಮಂಗಳೂರು : ರಾಜ್ಯ ಚುನಾವಣ ಆಯೋಗವು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ ನಡೆಸುವಂತೆ ದ.ಕ. ಜಿಲ್ಲಾಧಿಕಾರಿಯವರನ್ನು ಕೋರಿದ್ದು, ಪಾಲಿಕೆ ಚುನಾವಣೆಗೆ ಪೂರ್ವಸಿದ್ಧತೆ ಆರಂಭಗೊಂಡಿದೆ. ನ್ಯಾಯಾಲಯದ ಪ್ರಕರಣಗಳು ಇತ್ಯರ್ಥವಾಗಿರುವ ಮತ್ತು 2019ರ ಡಿಸೆಂಬರ್‌ನಲ್ಲಿ ಅಧಿಕಾರ ಅವಧಿ ಮುಕ್ತಾಯವಾಗುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಂಬಂಧ ಪೂರ್ವಸಿದ್ಧತೆ ಮಾಡಿಕೊಳ್ಳುವ ಬಗ್ಗೆ ರಾಜ್ಯ ಚುನಾವಣ ಆಯೋಗ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಕೋರಿದೆ. ಮತದಾನ ಪಟ್ಟಿ, ಮತದಾನ ಕೇಂದ್ರಗಳ ಪಟ್ಟಿ ಸಿದ್ಧಪಡಿಸುವುದು, ಮತದಾನ ಸಿಬಂದಿ ನೇಮಕ, ಇವಿಎಂ ಸಂಗ್ರಹ, ಚುನಾವಣಾಧಿಕಾರಿಗಳ […]

ಜೈಲಿನ ಬಳಿಯೇ ಬೀಡುಬಿಟ್ಟ ರೆಡ್ಡಿ ಆಪ್ತ ಅಲಿಖಾನ್ ಅಂಡ್ ಟೀಂ!

Tuesday, November 13th, 2018
janardhan-reddy

ಬೆಂಗಳೂರು: ಆಂಬಿಡೆಂಟ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ಡಿ ಈಗಾಗಲೇ ಪರಪ್ಪನ ಅಗ್ರಹಾರ ಸೇರಿದ್ದಾರೆ. ಆದ್ರೆ ಜೈಲಿನ ಬಳಿಯೇ ರೆಡ್ಡಿ ಆಪ್ತ ಅಲಿಖಾನ್ ಅಂಡ್ ಟೀಂ ಬೀಡು ಬಿಟ್ಟಿದೆ. ನಂಬರ್ ಪ್ಲೇಟ್ ಇಲ್ಲದ ಬಿಳಿಯ ಬಣ್ಣದ ಇನೋವಾ ಕಾರಿನಲ್ಲಿ ಅಲಿಖಾನ್ ಅಂಡ್ ಟೀಂ ಬಂದಿದ್ದು, ಮಾಧ್ಯಮಗಳ ಕ್ಯಾಮರಾ ಕಂಡ ಕೂಡಲೇ ಅಲ್ಲಿಂದ ಕಾಲ್ಕಿತ್ತಿದ್ದಾರೆ. ರೆಡ್ಡಿ ಜೈಲಿಗೆ ಹೋದಾಗಲಿಂದಲೂ ಜೈಲ್ ಬಳಿಯೇ ಬೀಡು ಬಿಟ್ಟು ರೆಡ್ಡಿಗೆ ಊಟ, ತಿಂಡಿಯ ವ್ಯವಸ್ಥೆ ಮಾಡಿದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿರುವ ಹಿನ್ನೆಲೆ […]

ಯುವತಿಯನ್ನು ಬೆದರಿಸಿ ಅತ್ಯಾಚಾರ ನಡೆಸಿದ ಆರೋಪದಲ್ಲಿ ಒಬ್ಬನ ಬಂಧನ

Wednesday, February 8th, 2017
arrested

ಮಂಗಳೂರು: ಯುವತಿಯನ್ನು ಬೆದರಿಸಿ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕೊಣಾಜೆ ಪೊಲೀಸರು ಒಬ್ಬನನ್ನು ಬಂಧಿಸಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ. ಬಂಧಿತನ್ನು ಬೊಳಿಯಾರ್ ನಿವಾಸಿ ಮಹಮ್ಮದ್ ಮುಸ್ತಾಫ (23) ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆರೋಪಿ ಆಶ್ರಫ್ ತಲೆಮರೆಸಿಕೊಂಡಿದ್ದಾನೆ. ಕೆಲ ತಿಂಗಳ ಹಿಂದೆ ಇಬ್ಬರು ಆರೋಪಿಗಳು ಯುವತಿಯನ್ನು ಬೆದರಿಸಿ ಅತ್ಯಾಚಾರ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಸಂತ್ರಸ್ತ ಯುವತಿ ಕೊಣಾಜೆ ಠಾಣೆಗೆ ದೂರು ನೀಡಿದ್ದಳು. ಬಂಧಿತ ಮುಸ್ತಾಫನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಖೋಟಾನೋಟು ಹೊಂದಿದ್ದ ವ್ಯಕ್ತಿಯೋರ್ವನಿಗೆ ಮಂಗಳೂರಿನ ಸತ್ರ ನ್ಯಾಯಾಲಯದಿಂದ ಐದು ವರ್ಷ ಜೈಲು ಶಿಕ್ಷೆ

Wednesday, January 25th, 2017
Abdul-Khadar

ಮಂಗಳೂರು: ಖೋಟಾನೋಟು ಹೊಂದಿದ್ದ ವ್ಯಕ್ತಿಯೋರ್ವನಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ಸಹಿತ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ವಿಧಿಸಲು ತಪ್ಪಿದಲ್ಲಿ ಅಪರಾಧಿ ಆರು ತಿಂಗಳ ಹೆಚ್ಚುವರಿ ಕಾರಾಗೃಹ ಸಜೆ ಅನುಭವಿಸುವಂತೆ ಜಿಲ್ಲಾ ಸತ್ರ ನ್ಯಾಯಾಧೀಶ ಕೆ.ಎಸ್.ಬಿಳಗಿ ತೀರ್ಪಿನಲ್ಲಿ ತಿಳಿಸಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಳ ಗ್ರಾಮದ ಅರಿಪ್ಪುಕಟ್ಟ ನಿವಾಸಿ ಅಬ್ದುಲ್‌ಖಾದರ್(62) ಶಿಕ್ಷೆಗೊಳಗಾದ ಅಪರಾಧಿ. ಪಬ್ಲಿಕ್ ಪ್ರಾಸಿಕ್ಯೂಟರ್ ಪುಷ್ಪರಾಜ್ ಕೆ. ವಾದಿಸಿದ್ದರು. 2002ರ […]

ಗಾಂಜಾ ಸಾಗಾಟ ಮಾಡುತ್ತಿದ್ದವನ ಬಂಧನ: ಗಾಂಜಾ ಸಹಿತ ವಶಕ್ಕೆ

Tuesday, November 29th, 2016
Ganja

ಮಂಗಳೂರು: ಜಿಲ್ಲೆ ಹಾಗೂ ನಗರಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದವನನ್ನು ಗಾಂಜಾ ಸಹಿತ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾಸರಗೋಡು ಕುಂಬಳೆಯ ಇಬ್ರಾಹಿಂ (38) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದ ಬಳಿಯಿಂದ ಬೃಹತ್ ಪ್ರಮಾಣದಲ್ಲಿ ಮಂಗಳೂರು ನಗರಕ್ಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಪಂಪ್ವೆಲ್ ವೃತ್ತದ ಬಳಿಯಿರುವ ಹೊಟೇಲ್ ಪದ್ಮಶ್ರೀ ಮುಂಭಾಗದಲ್ಲಿ ಗಾಂಜಾವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪುತ್ತೂರು, ಸುಳ್ಯ […]

ಭಾಸ್ಕರ್ ಶೆಟ್ಟಿ ಅವರ ಕೊಲೆ ಪ್ರಕರಣದ ಆರೋಪಿ ನಿರಂಜನ್‌ ಭಟ್ ಆತ್ಮಹತ್ಯೆಗೆ ಯತ್ನ

Wednesday, August 10th, 2016
Niranjan-Bhat

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಅವರ ಕೊಲೆ ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ ಕಾರ್ಕಳ ನಂದಳಿಕೆಯ ಜ್ಯೋತಿಷಿ ನಿರಂಜನ್‌ ಭಟ್ ವಜ್ರದ ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ‘ಭಾಸ್ಕರ್‌ ಶೆಟ್ಟಿ ಕೊಲೆ ನಡೆದಿರುವುದು ಖಚಿತವಾದ ನಂತರ ನಿರಂಜನ್‌ಗಾಗಿ ಹುಡುಕಾಟ ತೀವ್ರಗೊಳಿಸಲಾಗಿತ್ತು. ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಖಚಿತವಾದ ನಂತರ ಆಗಸ್ಟ್ 7ರಂದೇ ಉಂಗುರ ನುಂಗಿದ್ದ. 8ರಂದು ನಿಟ್ಟೆಯಲ್ಲಿ ಆತನನ್ನು ಬಂಧಿಸಲಾಯಿತು. ಎಲ್ಲ ಪ್ರಕ್ರಿಯೆ ನಡೆಸಿ ವಿಚಾರಣೆ ಆರಂಭಿಸಿದ ನಂತರ ಹೊಟ್ಟೆ ನೋವು ಎಂದು ಹೇಳಿದ. ಉಂಗುರ ನುಂಗಿರುವ ವಿಷಯವನ್ನು […]