Blog Archive

ಜಯನಗರ, ಪರಿಷತ್‌‌ ಚುನಾವಣೆ: ಗೆದ್ದ ಅಭ್ಯರ್ಥಿಗಳಿಗೆ ಪರಮೇಶ್ವರ್ ಶುಭಾಶಯ

Wednesday, June 13th, 2018
parameshwar

ಬೆಂಗಳೂರು: ರಾಜ್ಯ ವಿಧಾನಸಭೆಯ ಜಯನಗರ ಕ್ಷೇತ್ರದಲ್ಲಿ ಹಾಗೂ ವಿಧಾನ ಪರಿಷತ್‌ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಸಾಧಿಸಿದ ಗೆಲುವಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಂತಸ ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರ್ ಮೂಲಕ ತಮ್ಮ ಸಂತಸ ಹಂಚಿಕೊಂಡಿರುವ ಅವರು ಗೆದ್ದ ಅಭ್ಯರ್ಥಿಗಳಿಗೆ ಈ ಮೂಲಕ ಅಭಿನಂದನೆ ಕೂಡ ಸಲ್ಲಿಸಿದ್ದಾರೆ. ಜಯನಗರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಅನುಕಂಪದ ಅಲೆಯನ್ನೂ ಮೀರಿ ಉತ್ತಮ ಗೆಲುವು ಸಾಧಿಸಿರುವ ಸೌಮ್ಯ ರೆಡ್ಡಿಗೆ ಪರಮೇಶ್ವರ್ ಶುಭಾಶಯ ತಿಳಿಸಿದ್ದಾರೆ. ಈ ಗೆಲುವಿಗೆ ಕಾರಣರಾದ ಮತದಾರರನ್ನು ಅಭಿನಂದಿಸಿರುವ […]

ಸಚಿವ ಸ್ಥಾನ ಸಿಗದವರು ತಾಳ್ಮೆಯಿಂದ ಕಾಯಿರಿ: ಪರಮೇಶ್ವರ್

Thursday, June 7th, 2018
G.parameshwara

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗುವ ಅವಕಾಶ ಕಳೆದುಕೊಂಡಿರುವ ಶಾಸಕರು ನಿರಾಶರಾಗಬೇಕಿಲ್ಲ. ತಾಳ್ಮೆಯಿಂದ ಕೆಲ ಸಮಯ ಕಾಯಿರಿ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮನವಿ ಮಾಡಿದ್ದಾರೆ. ಬೆಂಗಳೂರಿನ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲರ ಆಶಯ ಈಡೇರಿಕೆ ಕಷ್ಟಸಾಧ್ಯ. ಆದ್ದರಿಂದ ಅತೃಪ್ತರು ಕೆಲ ಸಮಯ ತಾಳ್ಮೆಯಿಂದಿರಿ. ಮೈತ್ರಿ ಸರ್ಕಾರವನ್ನು ಇಡೀ ದೇಶ ನೋಡುತ್ತಿದೆ. ಪ್ರತಿಪಕ್ಷ ಬಿಜೆಪಿ ಅವಕಾಶಕ್ಕೆ ಕಾಯುತ್ತಿದೆ. ಇದಕ್ಕೆಲ್ಲಾ ಆಸ್ಪದ […]

ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಕೊನೆಗೂ ಖಾತೆ ಹಂಚಿಕೆ… ಯಾವ ಪಕ್ಷಕ್ಕೆ ಯಾವ ಖಾತೆ?

Friday, June 1st, 2018
g-parameshwara

ಬೆಂಗಳೂರು: ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಕೊನೆಗೂ ಖಾತೆ ಹಂಚಿಕೆ ಮಾಡಿಕೊಂಡಿವೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಹಾಗೂ ಡಿಸಿಎಂ ಪರಮೇಶ್ವರ್‌ ಬೆಳಗ್ಗೆ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಇಬ್ಬರ ನಡುವೆ ಖಾತೆ ಹಂಚಿಕೆ ನಿರ್ಧಾರಕ್ಕೆ ಬರಲಾಯ್ತು. ಇದೀಗ ಒಪ್ಪಂದ ಪ್ರಕಾರ ಜೆಡಿಎಸ್‌ಗೆ 12 ಹಾಗೂ ಕಾಂಗ್ರೆಸ್‌ 22 ಖಾತೆಗಳನ್ನು ಹಂಚಿಕೊಳ್ಳಲಾಗಿದೆ. ಖಾತೆಗಳ ಹಂಚಿಕೆ ವಿವರ ಇಂತಿದೆ: ಜೆಡಿಎಸ್‌: 1. ಮಾಹಿತಿ, ಇಂಟೆಲಿಜೆನ್ಸ್‌‌, ಪ್ಲಾನಿಂಗ್‌ ಆ್ಯಂಡ್‌ ಸ್ಟ್ಯಾಟಿಟಿಕ್ಸ್‌‌, 2. ಹಣಕಾಸು ಮತ್ತು ಅಬಕಾರಿ […]

ಸಾಲ ಮನ್ನಾ ಮಾಡಲು ಕಾಂಗ್ರೆಸ್‌ ವಿರೋಧವಿಲ್ಲ: ಪರಮೇಶ್ವರ್‌

Wednesday, May 30th, 2018
g-pareshmeshwar

ಬೆಂಗಳೂರು: ರೈತರ ಸಾಲಮನ್ನಾ ಮಾಡಲು ಕಾಂಗ್ರೆಸ್ ಪಕ್ಷದ ವಿರೋಧವಿಲ್ಲ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ. ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಾಲಮನ್ನಾ ಕುರಿತ ಪ್ರಮುಖ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಜೆಡಿಎಸ್‌ಗೆ ಬಹುಮತ ಬಂದಿದ್ದರೆ ಕುಮಾರಸ್ವಾಮಿ ಈ ಹೊತ್ತಿಗೆ ಸಾಲಮನ್ನಾ ಮಾಡಿರುತ್ತಿದ್ದರು, ಆದರೆ ಸಮ್ಮಿಶ್ರ ಸರ್ಕಾರವಾದ್ದರಿಂದ ಚರ್ಚಿಸಿಯೇ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ರೈತರೊಂದಿಗಿನ ಸಭೆಯಲ್ಲೂ ಈ ವಿಷಯ ಮಾತನಾಡಿದ ಪರಮೇಶ್ವರ್ ಅವರು, ಮನೆ, ವಾಹನಕ್ಕೆ ಮಾಡಿದ ಸಾಲಗಳನ್ನು ಮನ್ನಾ […]

ದೆಹಲಿಗೆ ತೆರಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಪರಮೇಶ್ವರ್‌

Saturday, May 26th, 2018
rahul-gandhi

ಬೆಂಗಳೂರು: ಕಾಂಗ್ರೆಸ್ ಪಕ್ಷದ ಯಾವ ಯಾವ ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂಬುದನ್ನು ಹೈಕಮಾಂಡ್‌ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಪರಮೇಶ್ವರ್‌ ಅವರು ಇಂದು ದೆಹಲಿಗೆ ತೆರಳಿದ್ದಾರೆ. ನಿನ್ನೆಯಷ್ಟೆ ವಿಶ್ವಾಸಮತವನ್ನು ಸಮ್ಮಿಶ್ರ ಸರ್ಕಾರ ಗೆದ್ದಿದ್ದು, ಇಂದಿನಿಂದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಪ್ರಾರಂಭವಾಗಿದೆ. ಅದರ ಭಾಗವಾಗಿಯೇ ಇಂದು ಈ ಇಬ್ಬರು ನಾಯಕರು ರಾಹುಲ್ ಗಾಂಧಿ ಅವರನ್ನು ಭೇಟಿ ಆಗಲು ತೆರಳಿದ್ದಾರೆ. ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರಿಂದ ‘ದೆಹಲಿ ಲಾಬಿ’ ಜೆಡಿಎಸ್‌-ಕಾಂಗ್ರೆಸ್‌ನ ಮೈತ್ರಿ ಸರ್ಕಾರವು […]

ಬಿಜೆಪಿ ಇಂದಿಗೂ ನಮ್ಮ ಶಾಸಕರಿಗೆ ಆಮಿಷ ಒಡ್ಡುತ್ತಿದೆ: ಪರಮೇಶ್ವರ್‌

Friday, May 25th, 2018
congress

ಬೆಂಗಳೂರು: ಬಿಜೆಪಿ ಶಾಸಕರು ಇಂದಿಗೂ ಕೂಡ ನಮ್ಮ ಶಾಸಕರಿಗೆ ಆಮಿಷ ಒಡ್ಡುತ್ತಿದ್ದಾರೆ. ಆದರೆ ನಮ್ಮ ಶಾಸಕರು ಯಾವುದೇ ಆಮಿಷಕ್ಕೆ ಒಳಗಾಗಲ್ಲ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದು ವಿಶ್ವಾಸಮತ ಯಾಚನೆ ಇದ್ದು, ವಿಶ್ವಾಸಮತ ಸಾಬೀತು ಪಡಿಸುವ ವಿಶ್ವಾಸವಿದೆ. ವಿಶ್ವಾಸಮತ ಯಾಚನೆ ಜೊತೆ ಸ್ಪೀಕರ್ ಚುನಾವಣೆ ಕೂಡ ಇದೆ. ಶಾಸಕ ರಮೇಶ್ ಕುಮಾರ್ ಸ್ಪೀಕರ್ ಚುನಾವಣೆಯಲ್ಲಿ ಗೆದ್ದು ಸ್ಪೀಕರ್ ಆಗಲಿದ್ದಾರೆ. ನಮ್ಮಲ್ಲಿ ಹೆಚ್ಚು ಸ್ಥಾನಗಳು ಇರುವುದರಿಂದ ರಮೇಶ್ ಕುಮಾರ್ ಸ್ಪೀಕರ್ […]

ಬಿಜೆಪಿಯವರು ತಾವು ಹೇಳಿದ ಮಾತಿಗೆ ಬದ್ಧರಾಗಿಲ್ಲ ಮಂಗಳೂರಿನಲ್ಲಿ ರಾಹುಲ್ ಗಾಂಧಿ

Friday, April 27th, 2018
rahul-gandhi-

ಮಂಗಳೂರು : ಎಐಸಿಸಿ ಅಧ್ಯಕ್ಷ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳೂರಿನಲ್ಲಿ ಬಹುನಿರೀಕ್ಷಿತ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಮಂಗಳೂರಿನ ಟಿಎಂಎ ಪೈ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು ಮಂಗಳೂರಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲು ಖುಷಿಯಾಗುತ್ತಿದೆ. ಈ ಪ್ರಣಾಳಿಕೆಯನ್ನು ನಾಲ್ಕು ಗೋಡೆಗಳ ಮಧ್ಯೆ ಕುಳಿತ ನಾಲ್ವರು ತಯಾರಿಸಿದ್ದಲ್ಲ. ಎಲ್ಲಾ ಸಮುದಾಯಗಳನ್ನು ಕೇಳಿ ಇದನ್ನು ರಚಿಸಲಾಗಿದೆ. ನಿಮ್ಮ ಸರಕಾರ ಏನು ಮಾಡಬೇಕು ಎಂಬುದನ್ನು ಜನರಿಂದಲೇ ಕೇಳಿ ಇದನ್ನು ರಚಿಸಲಾಗುತ್ತದೆ. ಇದು […]

ಕಾಂಗ್ರೆಸ್ ಪಕ್ಷ ಉಳಿಯಬೇಕಾದ್ರೆ ರಾಜ್ಯದಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯಾಗಬೇಕು: ಪೂಜಾರಿ

Friday, February 3rd, 2017
Janardhana-Poojary

ಮಂಗಳೂರು: ರಾಜ್ಯದಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಮತ್ತೆ ಕೇಳಲಾರಂಭಿಸಿದೆ. ಅದಕ್ಕೆ ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಧ್ವನಿಗೂಡಿಸಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಉಳಿಯಬೇಕಾದ್ರೆ ಗೃಹ ಸಚಿವ ಪರಮೇಶ್ವರ್ ಸಿಎಂ ಆಗಬೇಕು. ಈ ಬಗ್ಗೆ ಜನರ ಅಪೇಕ್ಷೆಯೂ ಇದೆ. ಆದರೆ ಪಕ್ಷದಲ್ಲಿ ಕೆಲವರು ಸರ್ಕಸ್ ಮಾಡುತ್ತಿದ್ದರೆ, ಪಕ್ಷದಲ್ಲಿ ಶನಿಯ ಪ್ರಭಾವ ಇದೆ, ನಮಗೆ ಶನಿ ಹಿಡಿದಿದೆ ಎಂದು ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿಎಂ ಸೇರಿ ಕಾಂಗ್ರೆಸ್‌‌‌ […]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪರಮೇಶ್ವರ್‌

Saturday, August 27th, 2016
kollur chandika homa

ಕೊಲ್ಲೂರು: ರಾಜ್ಯ ಗೃಹಸಚಿವ ಡಾ| ಜಿ. ಪರಮೇಶ್ವರ್‌ ಅವರು ಪತ್ನಿ ಕನ್ನಿಕಾ ಸಮೇತರಾಗಿ ಶುಕ್ರವಾರ ಬೆಳಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಅಡಿಗ, ತಾ.ಪಂ. ಸದಸ್ಯೆ ಗ್ರೀಷ್ಮಾ ಭಿಡೆ, ತಾ.ಪಂ. ಮಾಜಿ ಸದಸ್ಯ ರಮೇಶ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

ಗೋ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೇ ಕಾನೂನು ತಂದರೆ ಒಳಿತು: ಪರಮೇಶ್ವರ್

Saturday, August 27th, 2016
Parameshwar

ಮಂಗಳೂರು: ಗೋ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೇ ಕಾನೂನು ತಂದರೆ ಒಳಿತು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂದು ಮಂಗಳೂರು ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋ ರಕ್ಷಣೆಯ ಹೆಸರಿನಲ್ಲಿ ದೇಶದೆಲ್ಲೆಡೆ ಹಲ್ಲೆ, ಕೊಲೆ ನಡೆಯುತ್ತಿವೆ. ಪ್ರಧಾನಿ ಮೋದಿಯವರು ಗೋ ರಕ್ಷಕರ ಹೆಸರಿನಲ್ಲಿ ದಾಂಧಲೆ ನಡೆಸುವವರ ದಾಖಲೆ ಸಂಗ್ರಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ ಬಳಿಕವೂ ಕರಾವಳಿಯಲ್ಲಿ ಗೋ ರಕ್ಷಣೆಯ ಹೆಸರಿನಲ್ಲಿ ಕೊಲೆ […]