Blog Archive

ದೆಹಲಿಯಲ್ಲಿ ಇನ್ನೂ ಆರದ ಪೌರತ್ವ ತಿದ್ದುಪಡಿ ಕಾಯ್ದೆಯ ಕಿಚ್ಚು : ಮೆಟ್ರೋ ನಿಲ್ದಾಣ ಸ್ಥಗಿತ, ಟ್ರಾಫಿಕ್​ ಜಾಮ್

Thursday, December 19th, 2019
dehli

ನವ ದೆಹಲಿ : ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆರಂಭವಾಗಿರುವ ಪ್ರತಿಭಟನೆಯ ಕಾವು ಸದ್ಯಕ್ಕೆ ತಣ್ಣಗಾಗುವ ಯಾವುದೇ ಲಕ್ಷಣಗಳೂ ಕಾಣಿಸುತ್ತಿಲ್ಲ. ಇಂದೂ ಸಹ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು ದೆಹಲಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ 13 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಸ್ಥಗಿತಗೊಳಿಸಲಾಗಿದೆ. ಅಧಿಕ ವಾಹನ ಸಂದಣಿ ಹೊಂದಿರುವ ದೆಹಲಿಯಲ್ಲಿ ಮೆಟ್ರೋ ಸಂಚಾರ ಪ್ರಯಾಣಿಕರ ಜೀವನಾಡಿ. ಪ್ರತಿದಿನ ಲಕ್ಷಾಂತರ ಜನ ಮೆಟ್ರೋ ಸೇವೆಯನ್ನು ಅವಲಂಭಿಸಿದ್ದಾರೆ. ಆದರೆ, ಪೌರತ್ವ […]

ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಭಾರತೀಯ ಮುಸ್ಲಿಮರು ಆತಂಕ ಪಡುವ ಅವಶ್ಯಕತೆ ಇಲ್ಲ : ಐಪಿಎಸ್​​ ಭಾಸ್ಕರ್​​ ರಾವ್​​​

Saturday, December 14th, 2019
Bhaskar

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿ ಮಾಡಲೊರಟ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಭಾರತೀಯ ಮುಸ್ಲಿಮರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ಧಾರೆ. ‘ಭಾರತೀಯರೆಲ್ಲರೂ ಒಂದು, ಪೌರತ್ವ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆಯಿಲ್ಲ. ಇದು ಬೇರೆ ದೇಶದಿಂದ ಬರುವ ಅಕ್ರಮ ವಲಸಿಗರಿಗೆ ಸಂಬಂಧಿಸಿದ ಕಾನೂನು. ಹಾಗಾಗಿ ಇದರ ಸಂಬಂಧಿತ ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆಯನ್ನು […]

ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ

Thursday, December 12th, 2019
Pratibhatane

ಮಡಿಕೇರಿ : ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆಯನ್ನು ವಿರೋಧಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ)ದ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಸಮಾವೇಶಗೊಂಡ ಎಸ್‌ಡಿಪಿಐ ಪ್ರಮುಖರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಮಸೂದೆಯ ಪ್ರತಿಗಳನ್ನು ಹರಿದು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪ್ರಗತಿಪರ ಚಿಂತಕ ಸಿರಿಮನೆ ನಾಗರಾಜ್, ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆಯಲ್ಲಿ, ಧರ್ಮದ […]

ಪೌರತ್ವ ತಿದ್ದುಪಡಿ ಕಾಯ್ದೆ : ಈಶಾನ್ಯ ಭಾರತದಲ್ಲೆಡೆ ಕೇಂದ್ರದ ವಿರುದ್ಧ ಪ್ರತಿಭಟನೆ

Wednesday, December 11th, 2019
Assam

ಅಸ್ಸಾಂ : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನೂತನ ಪೌರತ್ವ ತಿದ್ದುಪಡಿ ಕಾಯ್ದೆಯ ಮೇಲೆ ಇಂದು ರಾಜ್ಯಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯುತ್ತಿರುವ ಬೆನ್ನಿಗೆ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಕೇಂದ್ರ ಸರ್ಕಾರ 2016ರ ರಿಂದಲೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ತುದಿಗಾಲಲ್ಲಿ ನಿಂತಿದೆ. ಆದರೆ, ಕಳೆದ ಮೂರು ವರ್ಷಗಳಿಂದ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ “ರಾಷ್ಟ್ರೀಯ ಪೌರತ್ವ ನೋಂದಣಿ” (ಎನ್ಆರ್ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಬಿ)ಯನ್ನು ಈಶಾನ್ಯ ರಾಜ್ಯಗಳು ಕಟುವಾಗಿ ವಿರೋಧಿಸುತ್ತಲೇ […]