Blog Archive

ಪಡಿತರ ವ್ಯವಸ್ಥೆ ಸಮರ್ಪಕಗೊಳಿಸಲು ವಿಜಿಲೆನ್ಸ್‌ ಸಮಿತಿ ರಚಿಸಲು ಪ್ರಸ್ತಾವನೆ: ಖಾದರ್‌

Saturday, February 3rd, 2018
U-T-Kader

ಮಂಗಳೂರು: ಪಡಿತರ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸುವ ಸಲುವಾಗಿ ಪಂಚಾಯತ್‌‌ ರಾಜ್ ಇಲಾಖೆಯ ಸಹಯೋಗದಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಜಿಲೆನ್ಸ್ ಸಮಿತಿ ರಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆಹಾರ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ಮೂರು ಮಂದಿಯ ವಿಜಿಲೆನ್ಸ್ ಸಮಿತಿ ಕಾರ್ಯಾಚರಿಸುತ್ತಿತ್ತು. ಆದರೆ ನಾಗರಿಕರಿಗೆ ಪಡಿತರ ವಿತರಣೆಯಲ್ಲಿ ತೊಂದರೆ ಆಗಬಾರದು ಎಂಬ ದಿಸೆಯಿಂದ ಈ ಬದಲಾವಣೆ ತರಲಾಗುತ್ತಿದೆ ಎಂದರು. ಇನ್ನು ಮುಂದೆ ಪಡಿತರ ಅಂಗಡಿ ಹೊಂದಿರುವ ಆಯಾ ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ […]

ತುಳುವರ ಬೇಡಿಕೆ ಪ್ರಧಾನಿಗೆ ತಲುಪಿಸಲು ಟ್ವಿಟರ್‌ ಅಭಿಯಾನ

Tuesday, October 24th, 2017
twitter

ಮಂಗಳೂರು:  ಅ. 29ರಂದು ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇರುವುದರಿಂದ ತುಳುವರ ಬೇಡಿಕೆಯನ್ನು ಪ್ರಧಾನಿಗೆ ತಲುಪಿಸಲು ತುಳುನಾಡು ಯೂನಿಫಿಕೇಶನ್‌ ಸಂಘಟನೆಯು ಇನ್ನೊಂದು ಟ್ವಿಟರ್‌ ಅಭಿಯಾನಕ್ಕೆ ಮುಂದಾಗಿದೆ. ಇದರಲ್ಲಿ ಎಲ್ಲ ಟ್ವೀಟ್‌ಗಳನ್ನು ರಾಜ್ಯವನ್ನು ಪ್ರತಿನಿಧಿಸುವ ಸಂಸದರಿಗೆ ಟ್ಯಾಗ್‌ ಮಾಡಲು ನಿರ್ಧರಿಸಲಾಗಿದೆ. ಅ. 29ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಇದೇ ವೇಳೆ ಜಿಲ್ಲೆಗೂ ಬರುವ ಸಾಧ್ಯತೆ ಇರುವುದರಿಂದ ಸಂಘಟನೆಯು ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು ಸೇರಿದಂತೆ ತುಳುವರ ಬೇಡಿಕೆಯನ್ನು […]

ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್

Friday, July 28th, 2017
Nawaz Sherif

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅಕ್ರಮ ಸಂಪಾದನೆ ಹಾಗೂ ತೆರಿಗೆ ವಂಚನೆಯಿಂದ ಗಳಿಸಿದ ಕಾಳಧನವನ್ನು ಅಂತರರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಇರಿಸಿರುವವರ ಪಟ್ಟಿಯು ಪನಾಮ ಪೇಪರ್ಸ್‌ ಸೋರಿಕೆಯಿಂದ ಬಹಿರಂಗಗೊಂಡಿತ್ತು. ವಿಶ್ವದಾದ್ಯಂತ ಬಾರಿ ಸುದ್ದಿಗೆ ಗ್ರಾಸವಾಗಿದ್ದ  ಈ  ಹಗರಣ ಸಂಬಂಧ ಪಾಕಿಸ್ತಾನ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ದೋಷಿ ಎಂದು ತೀರ್ಮಾನಿಸಿರುವ ಕೋರ್ಟ್ ಅವರನ್ನು ಪ್ರಧಾನಿ ಹುದ್ದೆಯಿಂದ ಅನರ್ಹಗೊಳಿಸಿದೆ.