Blog Archive

ಜಪಾನ್ ನ ಪ್ರಧಾನ ಮಂತ್ರಿ ಶಿಂಜೋ ಅಬೆ ಅವರು ಮುಂದಿನ ತಿಂಗಳು ಭಾರತಕ್ಕೆ ಭೇಟಿ

Friday, November 29th, 2019
Emfal

ಇಂಫಾಲ್ : ಜಪಾನ್ ದೇಶದ ಪ್ರಧಾನ ಮಂತ್ರಿ ಶಿಂಜೋ ಅಬೆ ಅವರು ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ ತಿಂಗಳ ಮಧ್ಯದಲ್ಲಿ ಇಂಫಾಲ್ ಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಂಜೋ ಅಬೆ ನಡುವಿನ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಇಂಫಾಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಂತರ ಇಂಫಾಲ್ ಯುದ್ಧದ 75 ವರ್ಷದ ಸ್ಮರಣೆಯ ಹಿನ್ನಲೆಯಲ್ಲಿ ಇಲ್ಲಿನ ಶಾಂತಿ ಸಂಗ್ರಹಾಲಯಕ್ಕೆ ಭೇಟಿ ನೀಡಲಿದ್ದಾರೆ. ಮಣಿಪುರದ ರಾಜಧಾನಿ ಇಂಫಾಲ್ […]

ಶಾಂತಿ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ

Saturday, November 9th, 2019
modi

ಹೊಸದಿಲ್ಲಿ : ವಿಶ್ವದ ಗಮನ ಸೆಳೆದಿರುವ ಅಯೋಧ್ಯೆ ಭೂ ವಿವಾದ ಸಂಬಂಧ ಅಂತಿಮ ತೀರ್ಪು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದ್ದು, ಶಾಂತಿ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಯೋಧ್ಯೆ ವಿಷಯದಲ್ಲಿ ಸುಪ್ರೀಂ ಕೋರ್ಟ್ ಏನೇ ತೀರ್ಪು ನೀಡಲಿ, ಅದು ಯಾರ ಗೆಲುವೂ ಅಲ್ಲ, ಯಾರ ಸೋಲೂ ಅಲ್ಲ. ಶಾಂತಿ, ಏಕತೆ, ಸದ್ಭಾವನೆಯನ್ನು ಗಟ್ಟಿಗೊಳಿಸಬೇಕು ಎಂದು ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ.  

ಕನ್ನಡದಲ್ಲೇ ರಾಜ್ಯೋತ್ಸವದ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

Friday, November 1st, 2019
Narendra-Modi

ನವದೆಹಲಿ : ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಕೋರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹಿಮ್ಮಡಿಗೊಳಿಸಿದ್ದಾರೆ. ಇಂದು ರಾಜ್ಯದಲ್ಲೆಡೆ 64ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಶುಭಕೋರಿದ್ದಾರೆ. ಕನ್ನಡದಲ್ಲೇ […]

ಜಮ್ಮು ಮತ್ತು ಕಾಶ್ಮೀರ ಇನ್ನು ಕೇಂದ್ರಾಡಳಿತ ಪ್ರದೇಶ : ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಘೋಷಣೆ

Thursday, August 8th, 2019
Modi

ನವದೆಹಲಿ  : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. “ನಾನು ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಇಡೀ ರಾಷ್ಟ್ರದ ಜನರನ್ನು ಅಭಿನಂದಿಸುತ್ತೇನೆ. ಕೆಲವು ವಿಷಯಗಳು ಜೀವಂತವಿರುವವರೆಗೂ ಅವು ಎಂದಿಗೂ ಬದಲಾಗುವುದಿಲ್ಲ ಅಥವಾ ದೂರ ಹೋಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. 370 ನೇ ವಿಧಿ ಇದೇ ರೀತಿಯದಾಗಿತ್ತು.” ಎಂದು ಪ್ರಧಾನಿ ಹೇಳಿದರು. “ಸರ್ದಾರ್ ಪಟೇಲ್, ಬಾಬಾ ಸಾಹೇಬ್ ಅಂಬೇಡ್ಕರ್, ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ, […]

ಗುರುಪೂರ್ಣಿಮೆ : ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಆಶೀರ್ವದಿಸಿದ ವಿಶ್ವೇಶತೀರ್ಥ ಸ್ವಾಮೀಜಿ

Tuesday, July 16th, 2019
Narebdra-modi

ಉಡುಪಿ : ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಗುರುಪೂರ್ಣಿಮೆಯ ಶುಭ ದಿನ ಮಂಗಳವಾರ ಸುಮಾರು 20 ನಿಮಿಷಗಳನ್ನು ಅವರೊಂದಿಗೆ ಕಳೆದರು. ಕಳೆದ ಮೂರು ದಿನಗಳಿಂದ ಹೊಸದಿಲ್ಲಿಯಲ್ಲಿರುವ ಪೇಜಾವರಶ್ರೀ, ಮಂಗಳವಾರ ಗುರುಪೂರ್ಣಿಮೆಯ ಶುಭ ಅವಸರದಲ್ಲಿ ತಮ್ಮ ಶಿಷ್ಯೆ ಮಾಜಿ ಕೇಂದ್ರ ಸಚಿವೆ ಉಮಾಭಾರತಿ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ನಾಲ್ಕು ಗಂಟೆ ಸುಮಾರಿಗೆ ಪ್ರಧಾನಿ ಕಾರ್ಯಾಲಯವೇ ವ್ಯವಸ್ಥೆಗೊಳಿಸಿದಂತೆ ಪ್ರಧಾನಿ ಅವರನ್ನು ಭೇಟಿಯಾದರು ಎಂದು ಸ್ವಾಮೀಜಿಗಳ ನಿಕಟವರ್ತಿ ಮೂಲಗಳು ತಿಳಿಸಿವೆ. ಪೇಜಾವರಶ್ರೀಗಳ […]

ವಿಪಕ್ಷೀಯರು ಭ್ರಷ್ಟಾಚಾರದ ಮೂಲಕ ದೇಶದ ಸಂಪತ್ತನ್ನು ಕೊಳ್ಳೆ ಹೊಡೆದರು

Monday, April 15th, 2019
Vijayasankalpa

ಮಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮತ್ತಿತರ ಪಕ್ಷಗಳು ವಂಶೋದಯದ ಬಗ್ಗೆಯೇ ಗಮನವನ್ನು ಕೇಂದ್ರೀಕರಿಸಿವೆ. ಆದರೆ ಬಿಜೆಪಿಯು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾ ನತೆಯ ಲಾಭ ದೊರೆಯಬೇಕೆಂಬ ಅಂತ್ಯೋದಯದ ತಣ್ತೀವನ್ನು ಹೊಂದಿದೆ. ವಂಶೋ ದಯದವರು ಅವರ ಕುಟುಂಬದ ಹಿತಾಸಕ್ತಿ ಯನ್ನೇ ನೋಡಿಕೊಳ್ಳುವರು. ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳೂರಿನ ಕೇಂದ್ರ ಮೈದಾನದಲ್ಲಿ ಶನಿವಾರ ಬಿಜೆಪಿ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌-ಜೆಡಿಎಸ್‌ ಅವರ ಕುಟುಂಬಿಕರನ್ನು ಮಾತ್ರ ಅಧಿಕಾರಕ್ಕೆ ತರಲು ಯತ್ನಿಸುವರು ಎಂದರು. ವಿಪಕ್ಷೀಯರು ಭ್ರಷ್ಟಾಚಾರದ ಮೂಲಕ ದೇಶದ ಸಂಪತ್ತನ್ನು ಕೊಳ್ಳೆ […]