Blog Archive

ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ – ಅರ್ಜಿ ಆಹ್ವಾನ

Tuesday, August 4th, 2020
hoisala

ಮಂಗಳೂರು : 2020-21 ನೇ ಸಾಲಿಗೆ ಬಾಲಕರಿಗಾಗಿ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಕಾರ್ಯಕ್ಕೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು ತಲಾ ರೂ. 10,000 ಗಳ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಶೌರ್ಯ ಪ್ರದರ್ಶಿಸಿದ ಅವಧಿಯು ಆಗಸ್ಟ್ 2019 ರಿಂದ ಜುಲೈ 2020 ರೊಳಗೆ ನಡೆದಿರಬೇಕು […]

ಮ್ಯಾಗ್ನೆಟ್‌‌‌‌‌‌ ನುಂಗಿದ ಬಾಲಕಿ… ಕೆಎಂಸಿ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

Tuesday, May 29th, 2018
magnet

ಮಂಗಳೂರು: ಒಂಭತ್ತು ವರ್ಷ ವಯಸ್ಸಿನ ಬಾಲಕಿಯ ಶ್ವಾಸನಾಳದಲ್ಲಿ ಸಿಲುಕಿಕೊಂಡಿದ್ದ ಮ್ಯಾಗ್ನೆಟ್(ಆಯಸ್ಕಾಂತ)ವೊಂದನ್ನು ಹೊರತೆಗೆಯುವ ಮೂಲಕ ಇಲ್ಲಿನ ಕೆಎಂಸಿ ಆಸ್ಪತ್ರೆ ಬಾಲಕಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿದೆ. ಬಾಲಕಿ ಮನೆಯಲ್ಲಿ ಆಟವಾಡುವಾಗ ಸಣ್ಣ ಮ್ಯಾಗ್ನೆಟ್‌ವೊಂದನ್ನು ನುಂಗಿದ್ದ ಕಾರಣ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಳು. ಬಲ ಶ್ವಾಸಕೋಶದ ನಾಳದಲ್ಲಿ ಮ್ಯಾಗ್ನೆಟ್ ಇರುವುದನ್ನು ಎಕ್ಸ್-ರೇ ತೋರಿಸಿತ್ತು. ಕೆಎಂಸಿ ಆಸ್ಪತ್ರೆಯ ಮಕ್ಕಳ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ಜಯತೀರ್ಥ ಜೋಷಿ ಅವರು ತಕ್ಷಣ ಮಗುವನ್ನು ಶಸ್ತ್ರಚಿಕಿತ್ಸಾ ಕೊಠಡಿಗೆ ವರ್ಗಾಯಿಸಿ ಬ್ರಾಂಕೊಸ್ಕೋಪ್‌ನಿಂದ ಮ್ಯಾಗ್ನೆಟ್ ಹೊರತೆಗೆಯುವ ಚಿಕಿತ್ಸಾ ಪ್ರಕ್ರಿಯೆ ಕೈಗೆತ್ತಿಕೊಂಡಿದ್ದರು. […]