Blog Archive

ಮೀಂಜ ಪಂ. ಸದಸ್ಯೆ ಯಶೋಧ ಆಳ್ವ ನಿಧನ

Thursday, September 1st, 2016
Yashodha-alwa

ಮಂಜೇಶ್ವರ: ಮೀಂಜ ಗ್ರಾಮ ಪಂಚಾಯತ್‌ನ ಸದಸ್ಯೆ, ಹೊಸಂಗಡಿ ಬಳಿಯ ಕೊಡ್ಡ್ಡೆ ಮಜಿಬೈಲು ನಿವಾಸಿ ಚಂದ್ರಹಾಸ ಆಳ್ವರ ಪತ್ನಿ ಯಶೋಧ ಆಳ್ವ(57) ಮಂಗಳವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಕೆಲವು ತಿಂಗಳಿಂದ ಅಸೌಖ್ಯದಿಂದ ಬಳಲುತ್ತಿದ್ದರು. ಮೃತರು ಪತಿ, ಇಬ್ಬರು ಪುತ್ರಿಯರು,ಪುತ್ರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ. ಕಳೆದ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಮೀಂಜ ಗ್ರಾಮ ಪಂಚಾಯತ್‌ನ 11ನೇ ವಾರ್ಡ್ ಮಜಿಬೈಲ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಧಾರ್ಮಿಕ ಸಾಮಾಜಿಕ ಸಾಂಸ್ಕೃತಿಕ ವಲಯದಲ್ಲಿ ಸಕ್ರಿಯರಾಗಿದ್ದ […]

ಸರಳ ಅಂಕದ ಸೋಲಿಗೆ ಗೊಂದಲ ಕಾರಣ-ಶಂಕೆ

Thursday, May 19th, 2016
ಸರಳ ಅಂಕದ ಸೋಲಿಗೆ ಗೊಂದಲ ಕಾರಣ-ಶಂಕೆ

ಮಂಜೇಶ್ವರ : ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕುತೂಹಲಕಾರಿ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಲ್ಲಿ ಬಹು ನಿರೀಕ್ಷಿತ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಪ್ರತಿಸ್ಪರ್ಧಿ ಯುಡಿಎಫ್ ಅಭ್ಯರ್ಥಿ ಪಿ.ಬಿ ಅಬ್ದುಲ್ ರಸಾಕ್ ಎದುರು ಕೇವಲ 89 ಅಂತರದ ಸೋಲನುಭವಿಸಲು ಕಾರಣಗಳ ಲೆಕ್ಕಾಚಾರ ನಡೆಯುತ್ತಿದ್ದು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದವರು ಬಿಜೆಪಿ ಮತ ವಿಭಜನೆಗೆ ಕಾರಣವೆಂದು ಪ್ರಾಥಮಿಕ ವರದಿಗಳು ತಿಳಿಸುತ್ತವೆ. ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ರವರ ಹೆಸರಿನೊಡನೆ ಹೆಚ್ಚು ತಾಳೆಯಾಗುವ ಪೆರ್ಲ ಪ್ರದೇಶದ ಕೆ.ಸುಂದರ ಎಂಬವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ467 ಮತಗಳನನು […]

ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ

Thursday, March 27th, 2014
Shoba Karandlaje

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಡಾ. ಮುದ್ದು ಮೋಹನ್‌ ಅವರಿಗೆ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಬಿಜೆಪಿಯ ಕಾರ್ಕಳ ಶಾಸಕರಾದ ಸುನಿಲ್‌ ಕುಮಾರ್‌,ಚಿಕ್ಕಮಗಳೂರು ಶಾಸಕ ಸಿಟಿ ರವಿ , ತರಿಕೆರೆಯ ಮಾಜಿ ಶಾಸಕ ಸುರೇಶ್‌ , ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಉಪಸ್ಥಿತರಿದ್ದರು.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಡಿ.ವಿ

Wednesday, March 6th, 2013
DV Sadananda Gowda

ಮಂಗಳೂರು : ವೈಯಕ್ತಿಕ ಕಾರಣಗಳಿಂದಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಹೇಳಿದ್ದಾರೆ. ಮಂಗಳೂರಿನಲ್ಲಿ ಮಂಗಳವಾರ ತನ್ನನ್ನು ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲಿರುವ ಬಿಜೆಪಿಯ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 25ರ ಒಳಗೆ ಪ್ರಕಟಿಸಲಾಗುವುದು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದ ಬಳಿಕ ರಾಜ್ಯದ ಬಿಜೆಪಿ ನಾಯಕರು ಹಾಗೂ ಉನ್ನತ ಮಟ್ಟದ ನಾಯಕರ ಸಭೆ ನಡೆಸಲಾಗುವುದು. ಇದರಲ್ಲಿ ವಿಧಾನಸಭಾ ಅಭ್ಯರ್ಥಿಗಳ ಮೊದಲ […]

ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆ ಕೆ.ಜಯಪ್ರಕಾಶ್ ಹೆಗ್ಡೆ ಭಾರಿ ಅಂತರದ ಗೆಲುವು

Wednesday, March 21st, 2012
Jayaprakash Hegde Wins

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು 45,724 ಮತಗಳ ಭರ್ಜರಿ ಅಂತರದೊಂದಿಗೆ ಗೆಲುವು ಸಾಧಿಸುವ ಮೂಲಕ, ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಅವರನ್ನು ಸೋಲಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆಯವರು 3,98,723 ಮತಗಳನ್ನು ಪಡೆದರೆ, ಬಿಜೆಪಿಯ ಸುನೀಲ್ ಕುಮಾರ್ 3,52,999 ಮತ ಗಳಿಸಿ ಪರಾಜಯಗೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಭೋಜೇಗೌಡ 72, 080 ಮತ ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಇಂದು ಬೆಳಿಗ್ಗೆ 8ಗಂಟೆಗೆ ಮತ ಎಣಿಕೆ ಆರಂಭಗೊಂಡಾಗ ಪ್ರಥಮ […]

ಮುಖ್ಯಮಂತ್ರಿಗಳಿಂದ ಬಿಜೆಪಿ ಅಭ್ಯರ್ಥಿ ವಿ.ಸುನೀಲ್‌ ಕುಮಾರ್‌ ಪರ ಪ್ರಚಾರ

Tuesday, March 6th, 2012
Cm Udupi

ಉಡುಪಿ: ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರು  ಜಿಲ್ಲೆಯ ವಿವಿಧೆಡೆ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ವಿ.ಸುನೀಲ್‌ ಕುಮಾರ್‌  ಪರ ಪ್ರಚಾರ ನಡೆಸಿದರು. ಕಾರ್ಕಳ ಹೊಸ್ಮಾರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಕಾರ್ಕಳ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.  ಮುಖ್ಯಮಂತ್ರಿಗಳೊಂದಿಗೆ ವಿಧಾನಸಭಾ ಡೆಪ್ಯುಟಿ ಸ್ಪೀಕರ್‌ ಯೋಗೀಶ ಭಟ್‌, ಅಭ್ಯರ್ಥಿ ಸುನೀಲ್‌ಕುಮಾರ್‌, ಜಿಲ್ಲಾಧ್ಯಕ್ಷ ಕೆ.ಉದಯಕುಮಾರ ಶೆಟ್ಟಿ, ಶಾಸಕರಾದ ಕೆ.ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಕೋಟ ಶ್ರೀನಿವಾಸ ಪೂಜಾರಿ, ನಗರಸಭಾಧ್ಯಕ್ಷ ಕಿರಣ್‌ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು. ಉಡುಪಿ ತಾಲೂಕಿನಲ್ಲಿ ಪ್ರವಾಸ ಪೆರ್ಡೂರು ಶ್ರೀಅನಂತಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ […]

ಕೊಪ್ಪಳ ಕರಡಿ ಸಂಗಣ್ಣ ವಿಜಯ

Thursday, September 29th, 2011
ಕೊಪ್ಪಳ ಕರಡಿ ಸಂಗಣ್ಣ ವಿಜಯ

ಕೊಪ್ಪಳ : ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬಸವರಾಜ ಕೆ. ಹಿಟ್ನಾಳ್ ಎರಡನೇ ಸ್ಥಾನ ಗಳಿಸಿದ್ದರೆ. ಜೆಡಿಎಸ್ ಅಭ್ಯರ್ಥಿ ಪ್ರದೀಪ್ ಗೌಡ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾದಿರಿಸಿಕೊಂಡ ಮಾಜಿ ಜೆಡಿಎಸ್ ಶಾಸಕ ಕರಡಿ ಸಂಗಣ್ಣ ಪ್ರಸಕ್ತ ಬಿಜೆಪಿ ಪರ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರ ವಿಜಯೋತ್ಸಾಹ ಎಲ್ಲೆಲ್ಲೂ ಕಂಡುಬಂದಿದೆ. ಜೆಡಿಎಸ್ ಪಕ್ಷಕ್ಕೆ ಫಲಿತಾಂಶ ತುಸು ಆಶ್ಚರ್ಯ ತಂದಿದೆ. ಏಕೆಂದರೆ ಜೆಡಿಎಸ್ಸನ್ನು […]