Blog Archive

ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮಾದ್ಯತೆ -ಬಿ.ಎಸ್. ಯಡಿಯೂರಪ್ಪ

Sunday, July 11th, 2021
Kalaburugi

ಕಲಬುರಗಿ : ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ನಗರದ ಎಂ.ಎಸ್.ಕೆ ಮಿಲ್ ವಾಣಿಜ್ಯ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರ ಇವರ ಜಂಟಿ ಅನುದಾನದಡಿಯಲ್ಲಿ 2 ಎಕರೆ ಪ್ರದೇಶದಲ್ಲಿ ಸುಮಾರು 26.30 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ಮಾದರಿಯ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣಕ್ಕೆ ಶನಿವಾರ ಅಡಿಗಲ್ಲು ಹಾಕಿ […]

ದಾಖಲೆ ಅವಧಿಯಲ್ಲಿ ನಿರ್ಮಾಣವಾದ ಮೇಕ್ ಶಿಫ್ಟ್ ಆಸ್ಪತ್ರೆಗೆ ಸಿಎಂ ಚಾಲನೆ

Wednesday, July 7th, 2021
makeshift

ಬೆಂಗಳೂರು  : ದೊಡ್ಡಬಳ್ಳಾಪುರದಲ್ಲಿ ದಾಖಲೆ ಅವಧಿಯಲ್ಲಿ ನಿರ್ಮಾಣವಾದ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ,”ದೊಡ್ಡಬಳ್ಳಾಪುರಕ್ಕೆ ಇವತ್ತು ಸುದಿನವಾಗಿದ್ದು, ಸುಸಜ್ಜಿತವಾದ ಮೇಕ್ ಶಿಫ್ಟ್ ಆಸ್ಪತ್ರೆ ತಲೆ ಎತ್ತಿ ನಿಂತಿದೆ. ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೂರು ವೈದ್ಯಕೀಯ ಕಾಲೇಜುಗಳಿವೆ. ಆದರೆ ದೊಡ್ಡಬಳ್ಳಾಪುರದಲ್ಲಿ ಇರಲಿಲ್ಲ. ಹೀಗಾಗಿ ನಾವು ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಇಲ್ಲಿ ನಿರ್ಮಾಣ ಮಾಡುವುದಕ್ಕೆ ನಿರ್ಧರಿಸಿದೆವು. ದೇಶದಾದ್ಯಂತ ಒಟ್ಟು […]

223 ಕೋಟಿ ರೂ. ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ 46 ಪಾರಂಪರಿಕ ತಾಣಗಳ ಅಭಿವೃದ್ಧಿ

Wednesday, July 7th, 2021
Kempegowda

ಬೆಂಗಳೂರು :  ನಾಡಪ್ರಭು ಕೆಂಪೇಗೌಡರ ಕಾಲದ ಸುಮಾರು 46 ಪಾರಂಪರಿಕ ತಾಣಗಳನ್ನು ಮೂರು ಸರ್ಕ್ಯುಟ್ ಗಳಲ್ಲಿ ಗುರುತಿಸಲಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಯನ್ನೂ ದೃಷ್ಟಿಯಲ್ಲಿರಿಸಿಕೊಂಡು ಈ ತಾಣಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಪಡಿಸಲು ಪರಿಕಲ್ಪನಾ ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಇದರಲ್ಲಿ 132 […]

ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆ ಪ್ರಗತಿ ಪರಿಶೀಲನೆ

Tuesday, June 29th, 2021
Badre Meldande

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ 9003.86 ಕೋಟಿ ರೂ. ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಎತ್ತಿನಹೊಳೆ ಯೋಜನೆಯು ಏಳು ಜಿಲ್ಲೆಯ 29 ತಾಲ್ಲೂಕುಗಳ 6557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ […]

ಮಾವು ಹೊತ್ತ ಕಿಸಾನ್ ರೈಲಿಗೆ ಹಸಿರು ನಿಶಾನೆ

Tuesday, June 29th, 2021
Mango-Train

ಬೆಂಗಳೂರು  : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಕಂದಾಯ ಸಚಿವ ಆರ್ ಅಶೋಕ ಅವರು ಚಿಂತಾಮಣಿಯಿಂದ ನವದೆಹಲಿಗೆ 250 ಟನ್ ಮಾವು ಸಾಗಿಸುವ ಕಿಸಾನ್ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಯಲಹಂಕ ರೈಲ್ವೆ ನಿಲ್ದಾಣದಿಂದ ನವದೆಹಲಿಗೆ ಕಿಸಾನ್ ರೈಲು ಪಯಣ ಶುರು ಮಾಡಿತು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, “ರೈತರು ದೂರದ ಸ್ಥಳಗಳಲ್ಲಿರುವ ಮಾರುಕಟ್ಟೆಗಳಿಗೆ ಪ್ರವೇಶವನ್ನು ಪಡೆಯಲು ಇದರಿಂದ ಸಾಧ್ಯವಾಗುತ್ತದೆ ಮತ್ತು ಅವರ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ ಒದಗಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು. ಕಿಸಾನ್ […]

ಕಾಸರಗೋಡು ಮತ್ತು ಮಂಜೇಶ್ವರದಲ್ಲಿ ಗ್ರಾಮಗಳ ಹೆಸರುಗಳ ಬದಲಾವಣೆ : ಪ್ರಕ್ರಿಯೆ ಸ್ಥಗಿತಗೊಳಿಸಲು ಕೇರಳ ಸರ್ಕಾರಕ್ಕೆ ಮುಖ್ಯಮಂತ್ರಿ ಪತ್ರ  

Monday, June 28th, 2021
Kerala Names

ಬೆಂಗಳೂರು : ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ ರವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ವಿಷಯವು ತಮ್ಮ ಗಮನಕ್ಕೆ ಈಗಾಗಲೇ ಬಂದಿದ್ದು, ಕೂಡಲೇ ಕೇರಳ ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ […]

ಕಲಿಕಾ ನಿರ್ವಹಣಾ ವ್ಯವಸ್ಥೆಯಡಿ ಸ್ಮಾರ್ಟ್ ತರಗತಿಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ. ವಿತರಣೆ

Wednesday, June 23rd, 2021
CM Tablet

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ಉನ್ನತ ಶಿಕ್ಷಣ ಇಲಾಖೆ ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿಜಿಟಲ್ ಕಲಿಕಾ ಯೋಜನೆಯಡಿ 2500 ಸ್ಮಾರ್ಟ್ ತರಗತಿಗಳನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ.ಗಳನ್ನು ಸಾಂಕೇತಿಕವಾಗಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಸರ್ಕಾರಿ ಕಾಲೇಜುಗಳಲ್ಲಿ 2,500 ತರಗತಿಗಳನ್ನು ಸ್ಮಾರ್ಟ್ ತರಗತಿ ಕೊಠಡಿಗಳಾಗಿ ಉನ್ನತೀಕರಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 6,500 ತರಗತಿ ಕೊಠಡಿಗಳನ್ನು ಸ್ಮಾರ್ಟ್ ತರಗತಿಗಳಾಗಿ ಪರಿವರ್ತಿಸಲಾಗುವುದು ಎಂದರು. 2021-22ನೇ ಸಾಲಿನಲ್ಲಿ ಸರ್ಕಾರಿ ಉನ್ನತ […]

ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ

Monday, June 21st, 2021
Yoga Day

ಬೆಂಗಳೂರು :  ಆಯುಷ್ ಇಲಾಖೆ ಹಮ್ಮಿಕೊಂಡಿರುವ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಚಾಲನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಉಪಸ್ಥಿತರಿದ್ದರು. ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವವಾದದು. ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಬಲಗೊಳ್ಳುತ್ತದೆ. ವ್ಯಕ್ತಿತ್ವ ವಿಕಸನ, ಏಕಾಗ್ರತೆಯ ಜೊತೆಗೆ ಸಮಾಜ ನಿರ್ಮಾಣದಲ್ಲಿಯೂ ಯೋಗ ಸಹಕಾರಿಯಾಗಿದೆ‌. ಯೋಗ, ವ್ಯಾಯಾಮಗಳು ನಮ್ಮ ಜೀವನಕ್ರಮವಾಗಿರಲಿ […]

ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Thursday, June 17th, 2021
vijayakrishna

ಬೆಂಗಳೂರು  : ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ..ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ 15 ವರ್ಷಗಳ ವೃತ್ತಿ ಜೀವನದಲ್ಲಿ ಅಪ್ರತಿಮ ಆಲ್ ರೌಂಡರ್ ಆಗಿದ್ದ ಅವರು 80 ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿ 2000 ರನ್ ಗಳನ್ನು ಗಳಿಸಿ 194 ವಿಕೆಟ್ ಗಳನ್ನು ಪಡೆದಿದ್ದರು. ಕರ್ನಾಟಕ ರಣಜಿ ಟ್ರೋಫಿಯನ್ನು ಎರಡು ಬಾರಿ ಗೆಲ್ಲಲು ಅವರು ಕಾರಣೀಭೂತರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. ಅವರ ನಿಧನದಿಂದ ಅತ್ಯುತ್ತಮ ಕ್ರಿಕೆಟಿಗನನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ […]

ಇಂಡೋ -ಇಸ್ರೇಲ್ ಯೋಜನೆಯಡಿ ಅಭಿವೃದ್ಧಿ ಪಡಿಸಿದ ಉತ್ಕೃಷ್ಟ ಕೇಂದ್ರಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ

Wednesday, June 16th, 2021
Yedyurappa

ಬೆಂಗಳೂರು : ಇಂಡೋ- ಇಸ್ರೇಲ್ ಯೋಜನೆಯಡಿ  ಅಭಿವೃದ್ಧಿ ಪಡಿಸಿದ 3 ಉತ್ಕೃಷ್ಟ ಕೇಂದ್ರಗಳಾದ ಕೋಲಾರದ ಮಾವು ಉತ್ಕೃಷ್ಟ ಕೇಂದ್ರ, ಬಾಗಲಕೋಟೆಯ  ದಾಳಿಂಬೆ  ಉತ್ಕೃಷ್ಟ ಕೇಂದ್ರ ಹಾಗೂ ಧಾರವಾಡದ ತರಕಾರಿ ಉತ್ಕೃಷ್ಟ ಕೇಂದ್ರಗಳನ್ನು ವರ್ಚುವಲ್ ಮೂಲಕ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿಂದು ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯವು ತೋಟಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ತೋಟಗಾರಿಕೆ ಬೆಳೆಗಳು ಕೃಷಿ ಬೆಳೆಗಳಿಗಿಂತ ಹೆಚ್ಚಿನ ಲಾಭಧಾಯಕ ವಾಗಿರುವುದರಿಂದ ತೋಟಗಾರಿಕೆ ಬೆಳೆಗಳ ವಿಸ್ತೀರ್ಣ ಪ್ರತಿ ವರ್ಷವು ಹೆಚ್ಚುತ್ತಿದೆ. ರಾಜ್ಯದಲ್ಲಿ […]