Blog Archive

ಏಷ್ಯಾ ಕಪ್: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ..!

Thursday, September 20th, 2018
india

ನವದೆಹಲಿ: ಏಷ್ಯಾ ಕಪ್ ಟೂರ್ನಿಯ ಕ್ರಿಕೆಟ್ ಪಂದ್ಯದಲ್ಲಿ ಮ್ಯಾಜಿಕಲ್ ಬೌಲಿಂಗ್ನಿಂದ ಬದ್ಧ ಎದುರಾಳಿ ಪಾಕ್ ತಂಡವನ್ನು ಮಣಿಸಿ ಭಾರತ ದಿಗ್ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ದೇಶದ ಕ್ರೀಡಾಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಭಾರತ-ಪಾಕ್ ಕ್ರಿಕೆಟ್ ಪಂದ್ಯ ಅಂದ್ರೇನೇ ಹಾಗೆ. ವಿಶ್ವ ಕ್ರಿಕೆಟ್ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸುವಂತದ್ದು. ಹೀಗಿರುವಾಗ ದುಬೈನಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯಲ್ಲಿ ಈ ಎರಡೂ ದೇಶಗಳ ಮಧ್ಯದ ಕ್ರಿಕೆಟ್ ಫೈಟ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. ಈ ಪಂದ್ಯದಲ್ಲಿ ಪಾಕ್ ವಿರುದ್ಧ ಭಾರತ ಭರ್ಜರಿ ಗೆಲುವು ದಾಖಲಿಸಿದೆ. ಕೇವಲ […]

ಇಂಗ್ಲೆಂಡ್​ ವಿರುದ್ಧದ ಮೊದಲ ಏಕದಿನ ಪಂದ್ಯ..ಭಾರತಕ್ಕೆ 8 ವಿಕೆಟ್​ಗಳ ಭರ್ಜರಿ ಜಯ!

Friday, July 13th, 2018
india

ನ್ಯಾಟಿಂಗ್ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಯನ್ನು ಗೆದ್ದು ಬೀಗಿರುವ ಟೀಂ ಇಂಡಿಯಾ ಈಗ ಏಕದಿನ ಸರಣಿಯ ಮೊದಲ ಪಂದ್ಯದಲ್ಲೂ ಭರ್ಜರಿ ಜಯ ಸಾಧಿಸಿದೆ. ಇಲ್ಲಿನ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 8 ವಿಕೆಟ್ಗಳ ಭರ್ಜರಿ ಜಯ ಗಳಿಸಿದೆ. ಇಂಗ್ಲೆಂಡ್ ನೀಡಿದ 268 ರನ್ಗಳ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ ಕೇವಲ 40.1 ಓವರ್ಗಳಲ್ಲಿ 2 ವಿಕೆಟ್ಕಳೆದುಕೊಂಡು 269 ರನ್ ಗಳಿಸಿ ಗೆಲುವಿನ ಕೇಕೆ ಹಾಕಿತು. ಹಿಟ್ಮ್ಯಾನ್ ರೋಹಿತ್ […]

ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿಗೆ ಇಂದು 37ನೇ ವರ್ಷದ ಹುಟ್ಟುಹಬ್ಬ..!

Saturday, July 7th, 2018
m-s-dhoni

ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಅವಿಭಾಜ್ಯ ಅಂಗ, ಮಾಜಿ ನಾಯಕ, ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಭಾರತೀಯ ಕ್ರಿಕೆಟ್ ಕಂಡಂತಹ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಧೋನಿ ಇಂದಿಗೆ ಸರಿಯಾಗಿ 37 ವರ್ಷಗಳ ಹಿಂದೆ ಅಂದರೆ ಜುಲೈ 7, 1981ರಲ್ಲಿ ರಾಂಚಿಯಲ್ಲಿ ಜನಿಸಿದವರು. ಧೋನಿ ಡಿಸೆಂಬರ್ 23, 2004ರಂದು ಬಾಂಗ್ಲಾದೇಶದ ವಿರುದ್ಧ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡುತ್ತಾರೆ. ಅದಾದ ಒಂದು ವರ್ಷದ ನಂತರ ಅಂದರೆ, ಡಿಸೆಂಬರ್ 2, 2005ರಲ್ಲಿ ಧೋನಿ […]

ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿದ ರಾಹುಲ್ ಗಾಂಧಿ

Thursday, May 17th, 2018
rahul-gandhi

ಹರ್ಯಾಣ : ಹರ್ಯಾಣದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ. “ಭಾರತದಲ್ಲಿ ಭಯ ಮತ್ತು ಅಭದ್ರತೆಯ ವಾತಾವರಣ ತಲೆದೂರಿದೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸಹ ಸರ್ಕಾರಕ್ಕೆ ಹೆದರುವಂಥ ಪರಿಸ್ಥಿತಿ ಇದೆ. ಇಂಥ ಪರಿಸ್ಥಿತಿ ಪಾಕಿಸ್ಥಾನದಂತ ಸರ್ವಾಧಿಕಾರಿ ದೇಶಗಳಲ್ಲಿ ಮಾತ್ರ ಇರುತ್ತಿತ್ತು” ಎಂದು ಅವರು ಹೇಳಿಕೆ ನೀಡಿದ್ದರು. ಹರ್ಯಾಣದಲ್ಲಿ ಇಂದು ನಡೆದ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಅವರು ಕರ್ನಾಟಕದ ರಾಜಕೀಯದ ಕುರಿತು ಬೇಸರ ವ್ಯಕ್ತಪಡಿಸಿದರು. ಬಹುಮತವಿಲ್ಲದಿದ್ದರೂ ಸರ್ಕಾರ ರಚಿಸಿದ, ಮುಖ್ಯಮಂತ್ರಿಯಾಗಿ ಬಿ ಎಸ್ […]

ಮಲಬಾರ್ ಗೋಲ್ಡ್‌ ಆ್ಯಂಡ್ ಡೈಮಂಡ್ಸ್: ಪ್ರಚಾರ ರಾಯಭಾರಿಯಾಗಿ ಮಾನುಷಿ ಚಿಲ್ಲರ್ ಆಯ್ಕೆ

Friday, April 6th, 2018
manushi-chiller

ಮಂಗಳೂರು: ‘ಮಿಸ್ ವರ್ಲ್ಡ್’ ಸೌಂದರ್ಯ ಪ್ರಶಸ್ತಿ ವಿಜೇತೆ, ಮಾನುಷಿ ಚಿಲ್ಲರ್ ಅವರು ವಿಶ್ವದ ಪ್ರಮುಖ ಚಿನ್ನಾಭರಣ ಸಮೂಹಗಳಲ್ಲೊಂದಾದ ಮಲಬಾರ್ ಗೋಲ್ಡ್‌ ಆ್ಯಂಡ್ ಡೈಮಂಡ್ಸ್ ಇದರ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯಾದ 21 ವರ್ಷದ ಮಾನುಷಿ ಚಿಲ್ಲರ್ ಕಳೆದ ವರ್ಷದ ನವೆಂಬರ್‌ನಲ್ಲಿ ಮಿಸ್‌ವರ್ಲ್ಡ್ ಪ್ರಶಸ್ತಿ ಗೆದ್ದಿದ್ದರು. ಮಾನುಷಿ ಮಿಸ್ವರ್ಲ್ಡ್ ಪುರಸ್ಕಾರ ಗೆದ್ದ ಭಾರತದ ಆರನೆ ಮಹಿಳೆಯಾಗಿದ್ದಾರೆ. ಮಿಸ್‌ವರ್ಲ್ಡ್ ಪಟ್ಟ ಆಲಂಕರಿಸುವುದಕ್ಕಿಂತ ಬಹಳ ಸಮಯ ಮೊದಲೇ ಮಾನುಷಿ, ಮಾನವೀಯ ಸೇವಾ ಚಟುವಟಿಕೆಗಳಲ್ಲಿಯೂ ತನ್ನನ್ನು ತೊಡಗಿಸಿ ಕೊಂಡಿದ್ದರು. ಈ ಹಿನ್ನೆಲೆಯಲ್ಲಿ […]

ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟ ಕುಂದಾಪುರದ ಗುರುರಾಜ್

Thursday, April 5th, 2018
gururaj

ಕುಂದಾಪುರ: ಕುಂದಾಪುರದ ಗುರುರಾಜ್ ಪೂಜಾರಿ ಅವರು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಗೇಮ್ಸ್‌ 2018ರಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ. ವೇಟ್‌ಲಿಫ್ಟಿಂಗ್‌ನ ಪುರುಷರ 56 ಕೆಜಿ ವಿಭಾಗದಿಂದ ಸ್ಪರ್ಧಿಸಿದ್ದ ಭಾರತದ ಮಂಗಳೂರಿನ ಕುಂದಾಪುರದ ಗುರುರಾಜ್ ಪೂಜಾರಿ ಅವರು ಬೆಳ್ಳಿ ಪದಕವನ್ನು ಕೊರಳಿಗೇರಿಸಿಕೊಂಡು ಬೀಗಿದ್ದಾರೆ.25 ವರ್ಷದ ಗುರುರಾಜ್ ಅವರು ವೈಯಕ್ತಿಕ ಅತ್ಯುತ್ತಮ ಸಾಧನೆಯಾದ 249 (111+134) ಕೆಜಿ ಭಾರ ಎತ್ತುವ ಮೂಲಕ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಳೆದ ಮೂರು ಬಾರಿ ಚಾಂಪಿಯನ್ ಎನಿಸಿಕೊಂಡಿರುವ ಮಲೇಷಿಯಾದ ಮೊಹಮ್ಮದ್ ಇಜಹಾರ್ ಅವರು ಪ್ರಥಮ […]

4ನೇ ವಿಶ್ವಕಪ್‌‌ಗೆ ಮುತ್ತಿಕ್ಕಿದ ರಾಹುಲ್‌ ಸೈನ್ಯಕ್ಕೆ ಬಹುಮಾನ ಘೋಷಿಸಿದ ಬಿಸಿಸಿಐ

Saturday, February 3rd, 2018
world-cup

ನವದೆಹಲಿ: ನಾಲ್ಕು ಬಾರಿ ಐಸಿಸಿ ಅಂಡರ್-19 ವಿಶ್ವಕಪ್‌‌ ಗೆದ್ದು ಇತಿಹಾಸ ನಿರ್ಮಿಸಿರುವ ಟೀಂ ಇಂಡಿಯಾಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಿಸಿದೆ. ಇಂದು ನ್ಯೂಜಿಲೆಂಡ್‌ನ ಓವಲ್‌ ಮೈದಾನದಲ್ಲಿ ಫೈನಲ್‌‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಪೃಥ್ವಿ ಶಾ ಪಡೆ 8 ವಿಕೆಟ್‌ಗಳಿಂದ ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ ನಾಲ್ಕು ಬಾರಿ ವಿಶ್ವಕಪ್‌ ಎತ್ತಿ ಹಿಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಟೀಂ ಇಂಡಿಯಾ ಪಾತ್ರವಾಗಿದೆ. ಫೈನಲ್‌ ಪಂದ್ಯದಲ್ಲಿ ಪೃಥ್ವಿ ಶಾ ಪಡೆ ಜಯ ದಾಖಲಿಸುತ್ತಿದ್ದಂತೆ ಭಾರತೀಯ ಕ್ರಿಕೆಟ್‌ ನಿಯಂತ್ರಣ […]

ಬಾಯಿ ಮಾತಿನಲ್ಲಿ ಸಂವಿಧಾನ ಒಪ್ಪಿಕೊಂಡರೆ ಸಾಲದು: ಅನಂತಕುಮಾರ್‌ ಹೆಗಡೆ

Friday, January 26th, 2018
Ananth-kumar-hegde

ಬೆಂಗಳೂರು: ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ ಹೊಡೆದು ಬಾಯಿ ಮಾತಿನಲ್ಲಿ ಸಂವಿಧಾನ ಒಪ್ಪಿಕೊಂಡರೆ ಸಾಲದು. ನಮ್ಮ ಸಂಸ್ಕೃತಿ, ಆಚಾರ-ವಿಚಾರಗಳನ್ನು ಒಪ್ಪಿಕೊಂಡಾಗ ಮಾತ್ರ ಸಂವಿಧಾನಕ್ಕೆ ಗೌರವ ನೀಡಿದಂತಾಗುತ್ತದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಎದುರಾಳಿಗಳಿಗೆ ಟಾಂಗ್ ನೀಡಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ 69ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಭಾಷಣದಲ್ಲಿ ವ್ಯಂಗ್ಯ ಮಿಶ್ರಿತವಾಗಿಯೇ ಕುಹಕವಾಡುತ್ತಿದ್ದರು. ನಾನು ಎಲ್ಲವನ್ನು ಹೇಳುವುದಕ್ಕೆ ಹೋದರೆ ಕೆಲವರು ಒಪ್ಪಿಕೊಳ್ಳುವುದಿಲ್ಲ. ಮೊದಲು ವಾಸ್ತವಿಕತೆಯನ್ನು ಅರ್ಥ ಮಾಡಿಕೊಳ್ಳಬೇಕು. ಎಲ್ಲವನ್ನು ಬಣ್ಣದ ಕನ್ನಡಕದಲ್ಲೆ ನೋಡುತ್ತಾರೆ ಎಂದು […]

ಭಾರತ ಆತಂಕದಲ್ಲಿದೆ…ಬಹ್ರೇನ್‌ನಲ್ಲಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

Tuesday, January 9th, 2018
rahul-gandhi

ಬಹ್ರೇನ್: ವಿದೇಶ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಹ್ರೇನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಹ್ರೇನ್‌ನ ಮನಮ್‌ನಲ್ಲಿರುವ ಅನಿವಾಸಿ ಭಾರತೀಯರನ್ನು ರಾಹುಲ್ ಭೇಟಿಯಾಗಿ ಸಂವಾದ ನಡೆಸಿದರು. ಬಹ್ರೇನ್ ಬಳಿಕ ಕಾಂಗ್ರೆಸ್ ಯುವರಾಜ ಕೆನಡಾ ಹಾಗೂ ಸಿಂಗಪೂರ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಅನಿವಾಸಿ ಭಾರತಿಯರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಮೋದಿ ಸರ್ಕಾರದ ಜಿಎಸ್‌ಟಿ ಹಾಗೂ ನೋಟ್ ಬ್ಯಾನ್ ನಿರ್ಧಾರದಿಂದ ದೇಶದ ಆರ್ಥಿಕತೆ ಹದಗೆಟ್ಟಿದೆ ಎಂದು ದೂರಿದರು. ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಮೋದಿ ಸರ್ಕಾರ […]

ಭಾರತದ-ಚೀನಾ ನಡುವಿನ ಸಂಬಂಧ ಉಪನ್ಯಾಸ

Saturday, December 9th, 2017
BL Santhosh

ಮೂಡುಬಿದಿರೆ: ಭಾರತವು ಯಾವ ಅಪಾಯಕಾರಿ ದೇಶಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕಾಗಿತ್ತೋ, ಆ ದೇಶವನ್ನು ಕಡೆಗಣಿಸಿ, ನಿರ್ಲಕ್ಷಿತ ದೇಶಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿರುವುದೇ ಇಂದಿನ ಚೀನಾ ಮತ್ತು ಭಾರತದ ನಡುವಿನ ಸಮಸ್ಯೆಗೆ ಕಾರಣ ಎಂದು ಬಿ.ಜೆ.ಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿಯಾಗಿರುವ ಬಿ.ಎಲ್.ಸಂತೋಷ್ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಕ್ಲಬ್ ಹಾಗೂ ಸಂಚಲನ ಮೂಡಬಿದಿರೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ `ಭಾರತ ಮತ್ತು ಚೀನಾ ನಡುವಿನ ಸಂಬಂಧ’ ಎಂಬ ವಿಷಯದ ಕುರಿತು ಮಾತನಾಡಿದರು. ದುರಾದೃಷ್ಟವಷಾತ್ ನಾವು […]