ರವಿಚಂದ್ರ ಪಿ.ಎಂ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ
Monday, July 4th, 2016ಮಂಗಳೂರು : ಶ್ರೀ ರವಿಚಂದ್ರ ಪಿ.ಎಂ ಮಂಗಳೂರಿನಲ್ಲಿ ವಕೀಲರಾಗಿದ್ದು ವಿದ್ಯಾರ್ಥಿ ದೆಸೆಯಿಂದಲೂ ಎಬಿವಿಪಿ ಮುಖಂಡರಾಗಿ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಎಬಿವಿಪಿಯ ವಿವಿಧ ಜವಾಬ್ದಾರಿಗಳನ್ನು ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸಿ ರಾಜ್ಯಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ, ಅಧಿವಕ್ತ ಪರಿಷತ್ತಿನ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ, ಇದೀಗ ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುತ್ತಾರೆ.