Blog Archive

ದೇಶೀಯ ವಿಮಾನ ಸಂಚಾರಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿದ್ಧತೆ

Friday, May 22nd, 2020
mangalore-airport

ಮಂಗಳೂರು : ದೇಶೀಯ ವಿಮಾನ ಸಂಚಾರದ ಬಗ್ಗೆ ಸಿದ್ಧವಾಗಿ ರುವಂತೆ ಸೂಚನೆ ಬಂದಿದೆ. ಆದರೆ ವಿಮಾನಗಳ ಪ್ರಯಾಣದ ವೇಳಾಪಟ್ಟಿ ಬಂದಿಲ್ಲ. ಪೂರ್ವಭಾವಿಯಾಗಿ ನಿಲ್ದಾಣದಲ್ಲಿ ಪ್ರಯಾಣಿಕ ಸ್ನೇಹಿ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ವಿ.ವಿ. ರಾವ್ ತಿಳಿಸಿದ್ದಾರೆ. ದೇಶೀಯ ಪ್ರಯಾಣಿಕ ವಿಮಾನಗಳ ಹಾರಾಟಕ್ಕೆ ಸಿದ್ಧವಾಗಿರುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಸೂಚನೆ ನೀಡಿದ್ದರೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೂರ್ಣ ಪ್ರಮಾಣದಲ್ಲಿ ಸಂಚಾರ ಆರಂಭಕ್ಕೆ  ಜೂನ್‌ ಮೊದಲ ವಾರದ ವರೆಗೆ ಕಾಯಬೇಕಾಗ ಬಹುದು ಎಂದು ಅವರು ಹೇಳಿದರು. […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ನಾಲ್ವರಿಗೆ ಕೋವಿಡ್-19 ಸೋಂಕು ದೃಢ

Tuesday, March 24th, 2020
corona

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ನಾಲ್ವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಇವರೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ. ಮಾರ್ಚ್ 23 ಮತ್ತು 24ರಂದು ಮಂಗಳೂರಿನಲ್ಲಿ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಮಾರ್ಚ್ 19ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಏರ್ ಇಂಡಿಯಾ ( ಐಎಕ್ಸ್ 814) ಮತ್ತು ಮಾರ್ಚ್ 20ರಂದು ಆಗಮಿಸಿದ್ದ ಸ್ಪೈಸ್ ಜೆಟ್ (ಎಸ್ ಜಿ-60) ವಿಮಾನದಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರು ಕಡ್ಡಾಯವಾಗಿ 14 ದಿನಗಳ ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ಆದೇಶಿಸಿದ್ದಾರೆ. ಈ […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಆದಿತ್ಯ ರಾವ್‌ನ ಮಂಪರು ಪರೀಕ್ಷೆ

Friday, March 13th, 2020
Adithya-Rao

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಶಂಕಿತ ಉಗ್ರ ಆದಿತ್ಯ ರಾವ್‌ನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಪೊಲೀಸರು ನಿರ್ಧರಿಸಿದ್ದಾರೆ. ಜ.20ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಶಂಕಿತ ಉಗ್ರ ಆದಿತ್ಯ ರಾವ್‌ನನ್ನು ಮಂಗಳವಾರ ತಹಶೀಲ್ದಾರ್ ಎದುರು ಗುರುತು ಪತ್ತೆ ಪರೇಡ್ ನಡೆಸಲಾಗಿತ್ತು. ಆದಿತ್ಯ ರಾವ್‌ನನ್ನು ನೋಡಿದ್ದ 15 ಮಂದಿ ಪ್ರತ್ಯಕ್ಷ ಸಾಕ್ಷಿಗಳನ್ನು ಕರೆಸಿ ಗುರುತು ಪತ್ತೆ ಪರೇಡ್ ನಡೆಸಲಾಗಿತ್ತು. ಘಟನೆಯಲ್ಲಿ ಬಂಧಿತ ಆದಿತ್ಯ ರಾವ್‌ನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ […]

ಆರೋಪಿ ಬಾಂಬ್ ಇಟ್ಟು ಬೆಂಗಳೂರಿಗೆ ಹೋಗಿದ್ದು ಪೊಲೀಸರಿಗೆ ಗೊತ್ತಾಗಲಿಲ್ಲವೆ : ಮಾಜಿ ಸಚಿವ ಯು.ಟಿ ಖಾದರ್ ಪ್ರಶ್ನೆ

Wednesday, January 22nd, 2020
UTKhader

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ನೇರವಾಗಿ ಬೆಂಗಳೂರು ಪೊಲೀಸರಿಗೆ ಶರಣಾಗುವ ಪರಿಸ್ಥಿತಿ ಇದೆಯೆಂದರೆ ಇದು ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯ ಎಂದು ಮಾಜಿ ಸಚಿವ ಯು.ಟಿ ಖಾದರ್ ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ಗಂಭೀರ ವಿಚಾರ. ಆರೋಪಿ ಬಾಂಬ್ ಇಟ್ಟು ಬೆಂಗಳೂರಿಗೆ ಹೋಗುವುದು ಪೊಲೀಸರಿಗೆ ಗೊತ್ತಾಗಲಿಲ್ಲವೆ? ಎಂದು ಪ್ರಶ್ನಿಸಿದ ಅವರು, ಸಮಾಜದ್ರೋಹಿಗಳಿಗೆ ಧರ್ಮವಿಲ್ಲ, ಎಲ್ಲಾ ಧರ್ಮದಲ್ಲೂ ಸಮಾಜದ್ರೋಹಿಗಳಿದ್ದಾರೆ ಎಂಬುದು ಗೊತ್ತಾಗಲಿದೆ. ಇದೊಂದು ಸಮಾಜ ವಿರೋಧಿ ಕೆಲಸ, ಆದಿತ್ಯರಾವ್ […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪ್ರಕರಣ : ಮಂಗಳೂರಿನ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಆದಿತ್ಯ ರಾವ್

Wednesday, January 22nd, 2020
adithya-rao

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ವೊಂದರಲ್ಲಿ ಸ್ಫೋಟಕ ಇರಿಸಿದ್ದ ಪ್ರಕರಣದ ಪ್ರಮುಖ ಆರೋಪಿ ಮಣಿಪಾಲದ ಆದಿತ್ಯ ರಾವ್, ಮಂಗಳೂರಿನ ಹೊಟೇಲ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ವಿಷಯ ಬಹಿರಂಗವಾಗಿದೆ. ಆರೋಪಿ ಆದಿತ್ಯ ರಾವ್ ಇಂದು ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಆರೋಪಿಯು ನಗರದ ಬಲ್ಮಠದ ಹೋಟೆಲ್‌ವೊಂದರಲ್ಲಿ ಒಂದು ತಿಂಗಳು ಕೆಲಸ ಮಾಡಿದ್ದಾನೆ. ಹೋಟೆಲ್‌ನ ಬಿಲ್ಲಿಂಗ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಪಿ, ಅಚ್ಚುಕಟ್ಟಾಗಿಯೇ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಯು ಕೆಲಸಕ್ಕೆ ಬರುವಾಗ ಬ್ಯಾಗ್‌ವೊಂದನ್ನು ಸದಾ ಹಿಡಿಕೊಂಡು ಬರುತ್ತಿದ್ದ. […]

ಸಜೀವ ಬಾಂಬ್ ಸ್ಫೋಟ : ಧೈರ್ಯ ಪ್ರದರ್ಶಿಸಿದ ಕೊಡಗಿನ ಕಮಾಂಡೋ ಗಣೇಶ್ ಪೂಜಾರಿ

Wednesday, January 22nd, 2020
ganesj-poojary

ಮಡಿಕೇರಿ : ಮಂಗಳೂರು ಇಂಟರ್ ನ್ಯಾಷನಲ್ ಏರ್ ಪೋರ್ಟ್‌ನಲ್ಲಿ ಬ್ಯಾಗ್‌ವೊಂದರಲ್ಲಿ ಪತ್ತೆಯಾಗಿದ್ದ ಬಾಂಬ್ ಅನ್ನು ಸ್ಪೋಟ ಮಾಡುವಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಪ್ರಮುಖ ಪಾತ್ರವಹಿಸಿದೆ. ಈ ಕಾರ್ಯಾಚರಣೆಯಲ್ಲಿ ಕೊಡಗಿನ ಯೋಧರೊಬ್ಬರು ಕೂಡ ಕೈ ಜೋಡಿಸಿದ್ದಾರೆ. ಮಡಿಕೇರಿ ತಾಲೂಕಿನ ಕತ್ತಲೆಕಾಡು ಗ್ರಾಮದ ನಿವಾಸಿ ಗಣೇಶ್ ಪೂಜಾರಿ(34) ಅವರು ಪ್ರಸ್ತುತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಕಮಾಂಡೋ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಾಂಬ್ ಪತ್ತೆ ಕಾರ್ಯ ಮತ್ತು ಅದನ್ನು ನಿರ್ಜನ ಪ್ರದೇಶದಲ್ಲಿ ಸ್ಫೋಟ ಮಾಡುವಲ್ಲಿ ತಮ್ಮ ಪ್ರಾಣದ ಹಂಗನ್ನು […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ವ್ಯಕ್ತಿ ಆದಿತ್ಯರಾವ್ ಬೆಂಗಳೂರು ಪೊಲೀಸರಿಗೆ ಶರಣು

Wednesday, January 22nd, 2020
Accused-Adithya-Rao

ಬೆಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉಡುಪಿ ಮೂಲದ ಆದಿತ್ಯರಾವ್ ಎಂಬಾತ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಬೆಂಗಳೂರಿನ ನೃಪತುಂಗ ರಸ್ತೆ ಬಳಿ ಇರುವ ಡಿಜಿಐಜಿಪಿ ಕಚೇರಿಗೆ ಬಂದು ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಹುಸಿ‌ ಬಾಂಬ್ ಕರೆಯಿಂದ ಆದಿತ್ಯರಾವ್ ಅರೆಸ್ಟ್ ಆಗಿದ್ದ. ಇಂದು ಡಿಜಿ ಕಚೇರಿಗೆ ಬಂದು ಶರಣಾದ ಹಿನ್ನೆಲೆ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸ್ರು ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮುಂದುವರೆಸಲಿದ್ದಾರೆ. ಎರಡು […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ : ನಿಷ್ಕ್ರಿಯಕ್ಕೆ ಬದಲು ಸ್ಫೋಟಿಸಲು ಸಿದ್ಧತೆ

Monday, January 20th, 2020
bomb

ಮಂಗಳೂರು : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಂದು ಒಂದರ ಹಿಂದೊಂದರಂತೆ ಪತ್ತೆಯಾದ ಸಜೀವ ಬಾಂಬ್ ಇಡೀ ರಾಜ್ಯವನ್ನು ತಲ್ಲಣಕ್ಕೆ ದೂಡಿತ್ತು. ಹೀಗೆ ಪತ್ತೆಯಾದ ಸ್ಪೋಟಕವನ್ನು ನಿಷ್ಕ್ರಿಯಗೊಳಿಸಲು ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಕರಾವಳಿಗೆ ತೆರಳಿದ್ದರು. ಆದರೆ, ಪೊಲೀಸರು ಇದೀಗ ಸ್ಫೋಟಕವನ್ನು ನಿಷ್ಕ್ರಿಯಗೊಳಿಸುವ ಬದಲು ಸ್ಪೋಟಿಸಲು ಮುಂದಾಗಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗುತ್ತಿದೆ. ಬೆಳಗ್ಗೆ ವಿಮಾನ ನಿಲ್ದಾಣದ ಪ್ರಯಾಣಿಕರು ವಿಶ್ರಾಂತಿ ಪಡೆಯುವ ಸ್ಥಳದಲ್ಲಿ ಲ್ಯಾಪ್ಟಾಪ್ ಬ್ಯಾಗ್ನಲ್ಲಿ ಒಂದು ಸಜೀವ ಬಾಂಬ್ ಪತ್ತೆಯಾಗಿದ್ದರೆ, ಮಧ್ಯಾಹ್ನದ ವೇಳೆಗೆ ಹೈದರಾಬಾದ್ಗೆ ತೆರಳಲು ಸಿದ್ಧವಾಗಿದ್ದ […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ನಲ್ಲಿ ಸಜೀವ ಬಾಂಬ್ ಪತ್ತೆ

Monday, January 20th, 2020
bomb

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜ.20 ರ ಸೋಮವಾರ ಅನುಮಾನಸ್ಪದ ಬ್ಯಾಗ್ ನಲ್ಲಿ ಪ್ರಾಥಮಿಕ ಮಾಹಿತಿಯಂತೆ ಸಜೀವ ಬಾಂಬ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಟಿಕೆಟ್ ಕೌಂಟರ್ ಬಳಿ ಪತ್ತೆಯಾದ ಬ್ಯಾಗ್ ನ್ನು ಹೊರಭಾಗಕ್ಕೆ ತರಲಾಗಿದ್ದು, ಬಾಂಬ್ ನಿಷ್ಕ್ರೀಯ ವಾಹನವೂ ಸ್ಥಳಕ್ಕೆ ಆಗಮಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ. ಸ್ಥಳದಲ್ಲಿ ಆತಂಕಕಾರಿ ವಾತಾವರಣ ನಿರ್ಮಾಣವಾಗಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್ ಹರ್ಷ ಸ್ಥಳಕ್ಕೆ ಧಾವಿಸಿದ್ದಾರೆ. ಬಾಂಬ್ ಪತ್ತೆಯಾದ ಬಗ್ಗೆ ಪೊಲೀಸರು ಯಾವುದೇ ಸ್ಪಷ್ಟತೆ ನೀಡಿಲ್ಲ. […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಒಂದೂವರೆ ಕೆಜಿ ಅಕ್ರಮ ಚಿನ್ನ ವಶ

Thursday, January 9th, 2020
vimana-nildana

ಮಂಗಳೂರು : ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂರು ವಿವಿಧ ಪ್ರಕರಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಚಿನ್ನಾಭರಣವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೂರು ಪ್ರಕರಣಗಳಲ್ಲಿ ಒಟ್ಟು 63 ಲಕ್ಷದ 73 ಸಾವಿರ ಮೌಲ್ಯದ 1 ಕೆ ಜಿ 575 ಗ್ರಾಂ ವಶಪಡಿಸಿಕೊಳ್ಳಲಾಗಿದೆ. ಜನವರಿ 6 ರಂದು ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದ ಪ್ರಯಾಣಿಕನಿಂದ 336.7 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಕ್ಸ್ ನಲ್ಲಿ ಅಡಗಿಸಿಟ್ಟು ತಂದಿದ್ದ. ಇದರ ಮೌಲ್ಯ 13.43 ಲಕ್ಷ ಎಂದು ಅಂದಾಜಿಸಲಾಗಿದೆ. ಜನವರಿ […]