Blog Archive

ರಿಯಾಲಿಟಿ ಚೆಕ್ ಮಾಡಿ ಖಾಸಗಿ ಆಸ್ಪತ್ರೆಗಳಿಂದ ಹಾಸಿಗೆ ವಶಪಡಿಸಿಕೊಳ್ಳಿ

Wednesday, May 12th, 2021
Bommai

ಬೆಂಗಳೂರು :   ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಖಾಸಗಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳು ಸರ್ಕಾರಕ್ಕೆ ನಿಗದಿತ ಹಾಸಿಗೆಗಳನ್ನ ನೀಡದೆ ವಂಚಿಸುತ್ತಿರುವ ಕುರಿತಂತೆ ಕಂದಾಯ ಸಚಿವರಾದ ಆರ್ ಅಶೋಕ್, ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವರ್ಚುವಲ್ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳು ಇನ್ನೂ ಕೂಡಾ ಸರ್ಕಾರಕ್ಕೆ ನಿಗದಿತ ಬೆಡ್ ಗಳನ್ನ ನೀಡದೆ ತಪ್ಪು ಮಾಹಿತಿ ನೀಡುತ್ತಿರುವ ಕುರಿತಂತೆ ಪ್ರಮುಖವಾಗಿ ಚರ್ಚಿಸಲಾಯಿತು. ಈ ನಿಟ್ಟಿನಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರು […]

ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಪ್ರೇಮಾನಂದ ಶೆಟ್ಟಿ, ಸುಮಂಗಲಾ ಉಪ ಮೇಯರ್

Tuesday, March 2nd, 2021
PremanandaShetty

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ  ನೂತನ ಮೇಯರ್‌ ಆಗಿ ಬಿಜೆಪಿ ಸದಸ್ಯ ಪ್ರೇಮಾನಂದ ಶೆಟ್ಟಿ ಹಾಗೂ ಬಿಜೆಪಿ ಸದಸ್ಯೆ ಸುಮಂಗಲಾ ರಾವ್ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 22ನೇ ಅವಧಿಯ ಮೇಯರ್‌/ಉಪ ಮೇಯರ್‌ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆ ನಡೆದಿದ್ದು, ಚುನಾವಣಾ ಅಧಿಕಾರಿ ಪ್ರಕಾಶ್, ಅಪರ   ಜಿಲ್ಲಾಧಿಕಾರಿ ಎಂ ಜೆ ರೂಪಾ ಮತ್ತು ಎಂಸಿಸಿ ಉಪ ಆಯುಕ್ತ ಸಂತೋಷ್ ಅವರು ಚುನಾವಣೆ ನಡೆಸಿದರು. ಪ್ರೇಮಾನಂದ ಶೆಟ್ಟಿ ಹಾಗೂ ಸುಮಂಗಲಾ ರಾವ್ ಅವರು ಇಬ್ಬರು ಶಾಸಕರ ಮತ ಸೇರಿ ತಲಾ 46 […]

ಸಚಿವ “ಜಗದೀಶ್ ಶೆಟ್ಟರ್” ಅವರನ್ನೇ ಗುಂಡಿಯಲ್ಲಿ ಮುಳುಗಿಸಿದ ಮಂದಿ…

Sunday, September 27th, 2020
shetter

ಹುಬ್ಬಳ್ಳಿ : ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ನಗರದ ವಿದ್ಯಾವನ ನಿವಾಸಿಗಳು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಅವರ ಭಾವಚಿತ್ರವನ್ನು ರಸ್ತೆಯ ಗುಂಡಿಯಲ್ಲಿ ನೆಟ್ಟು ವಿನೂತನ ಪ್ರತಿಭಟನೆ ನಡೆಸಿದರು. ಮಳೆಯಿಂದ ರಸ್ತೆಗಳು ಹಾಳಾಗಿ ಹೋಗಿವೆ. ಎಲ್ಲೆಂದರಲ್ಲಿ ಗುಂಡುಗಳು ಬಿದ್ದು ಜನರು ಓಡಾಡಲು ಆಗದ ಸ್ಥಿತಿ ಇದೆ. ಹೀಗಾಗಿ ರಸ್ತೆ ದುರಸ್ತಿ ಹಾಗೂ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ರಸ್ತೆ ಗುಂಡಿಗೆ ರಂಗೋಲಿ ಹಾಕಿ ಹಾಗೂ ತಿಪ್ಪೆಯಲ್ಲಿ ಜಗದೀಶ್ ಶೆಟ್ಟರ್ ಅವರ ಫೋಟೋ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆ‌ ಕೂಡಲೇ […]

ಸೆಂಟ್ರಲ್ ಮಾರುಕಟ್ಟೆಯಲ್ಲಿ ಮತ್ತೆ ವ್ಯವಹಾರ ಆರಂಭಿಸಿದ ವರ್ತಕರು

Thursday, August 13th, 2020
central market

ಮಂಗಳೂರು :  ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಮತ್ತೆ ವ್ಯವಹಾರ ಸುರು ಮಾಡಿದ್ದಾರೆ.   ಮಹಾನಗರ ಪಾಲಿಕೆಯೇ ತಮ್ಮ ಆದೇಶ ವನ್ನು ಹಿಂಪಡೆದಿದೆ  ಎಂದು ಹೇಳಲಾಗುತ್ತಿದೆ. ಆದರೆ ಪಾಲಿಕೆಯ ಅಧಿಕೃತ ಮಾಹಿತಿ ಬಂದಿಲ್ಲ. ಸ್ಮಾರ್ಟ್ ಸಿಟಿ ಯೋಜನೆಯಡಿ ನೂತನ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಿ ಏಪ್ರಿಲ್ 7ರಿಂದ ನಗರದ ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರ ವ್ಯವಹಾರ ಸ್ಥಗಿತಗೊಳಿಸಲು ಜಿಲ್ಲಾಡಳಿತ ಆದೇಶಿಸಿತ್ತು. ವ್ಯಾಪಾರಿಗಳಿಗೆ ವ್ಯಾಪಾರ ವಹಿವಾಟು ನಡೆಸಲು ಎಪಿಎಂಸಿಯಲ್ಲಿ ವ್ಯವಸ್ಥೆ ಮಾಡಲಾಗಿತ್ತು.ಆದರೆ, ಎಪಿಎಂಸಿಯಲ್ಲಿ ಬಹಳಷ್ಟು ಅವ್ಯವಸ್ಥೆ ಇದ್ದ ಕಾರಣ ವ್ಯಾಪಾರಿಗಳು ಕೋರ್ಟ್ ಮೆಟ್ಟಿಲೇರಿತ್ತು. ತಮಗೆ ಮತ್ತೆ ಸೆಂಟ್ರಲ್ […]

ಮಂಗಳೂರು : ಖಜಾನೆ ಖಾಲಿಯಾದವರಿಂದ ಅಭಿವೃದ್ಧಿ ಕೆಲಸಗಳು ಸಾಧ್ಯವೇ; ಮಾಜಿ ಸಚಿವ ರಮಾನಾಥ ರೈ

Monday, October 28th, 2019
Congress

ಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ ಅವರು, ಕಾಂಗ್ರೆಸ್ ಆಡಳಿತಲ್ಲಿದ್ದಾಗ ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಸಾಧ್ಯವಾಗಿದೆ. ಆದರೆ ಬಿಜೆಪಿ ಸರಕಾರದಿಂದ ನೆರೆ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಆಕ್ಷೇಪಿಸಿದರು. ಈ ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಮಹಾನಗರ ಪಾಲಿಕೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ನಗರದ ನೀರಿನ ಸಮಸ್ಯೆಯನ್ನು ನಿವಾರಿಸುವಲ್ಲಿ ತುಂಬೆ ಅಣೆಕಟ್ಟು ರಚನೆ, ಒಳಚರಂಡಿ ಕಾಮಗಾರಿ, ನಗರದ ಪ್ರಮುಖ ರಸ್ತೆಗಳ ಕಾಂಕ್ರಿಟೀಕರಣ, […]

ಮಂಗಳೂರು : ಮಹಾನಗರ ಪಾಲಿಕೆಯ ಹೊಸ ಆಯುಕ್ತರಾಗಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ನೇಮಕ

Tuesday, September 17th, 2019
Ajith

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಹಿರಿಯ ಕೆಎಎಸ್ ಅಧಿಕಾರಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ನೇಮಕಗೊಂಡಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಮುಹಮ್ಮದ್ ನಝೀರ್ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅಜಿತ್ ಕುಮಾರ್ ಹೆಗ್ಡೆ ಅವರನ್ನು ನೇಮಕಗೊಳಿಸಿ ಎಂದು ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಅಜಿತ್‌ ಕುಮಾರ್ ಈ ಮೊದಲು ಬೆಂಗಳೂರಿನ ಜಲಾನಯನ ಅಭಿವೃದ್ಧಿ ಇಲಾಖೆಯ ಅಪರ ನಿರ್ದೇಶಕ ಹಾಗೂ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.  

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ ಆರಂಭ

Saturday, September 14th, 2019
Mangaluru-city

ಮಂಗಳೂರು : ರಾಜ್ಯ ಚುನಾವಣ ಆಯೋಗವು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ ನಡೆಸುವಂತೆ ದ.ಕ. ಜಿಲ್ಲಾಧಿಕಾರಿಯವರನ್ನು ಕೋರಿದ್ದು, ಪಾಲಿಕೆ ಚುನಾವಣೆಗೆ ಪೂರ್ವಸಿದ್ಧತೆ ಆರಂಭಗೊಂಡಿದೆ. ನ್ಯಾಯಾಲಯದ ಪ್ರಕರಣಗಳು ಇತ್ಯರ್ಥವಾಗಿರುವ ಮತ್ತು 2019ರ ಡಿಸೆಂಬರ್‌ನಲ್ಲಿ ಅಧಿಕಾರ ಅವಧಿ ಮುಕ್ತಾಯವಾಗುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಂಬಂಧ ಪೂರ್ವಸಿದ್ಧತೆ ಮಾಡಿಕೊಳ್ಳುವ ಬಗ್ಗೆ ರಾಜ್ಯ ಚುನಾವಣ ಆಯೋಗ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಕೋರಿದೆ. ಮತದಾನ ಪಟ್ಟಿ, ಮತದಾನ ಕೇಂದ್ರಗಳ ಪಟ್ಟಿ ಸಿದ್ಧಪಡಿಸುವುದು, ಮತದಾನ ಸಿಬಂದಿ ನೇಮಕ, ಇವಿಎಂ ಸಂಗ್ರಹ, ಚುನಾವಣಾಧಿಕಾರಿಗಳ […]

ಆರೋಗ್ಯವಂತ ಭಾರತ ಸೃಷ್ಟಿ, ಸ್ವಚ್ಛ ಪರಿಸರದಿಂದ ಮಾತ್ರ ಸಾಧ್ಯ: ವೇದವ್ಯಾಸ ಕಾಮತ್

Friday, December 28th, 2018
swaccha-bharat

ಮಂಗಳೂರು: 2014ರಲ್ಲಿ ಹೊಸ ಹೆಸರಿನಿಂದ ಪ್ರಾರಂಭವಾದ ಸ್ಚಚ್ಛ ಭಾರತ ಅಭಿಯಾನ ಇಂದು ದೇಶದ್ಯಾಂತ ಗುರುತಿಸಲ್ಪಟ್ಟಿದ್ದು, ಸ್ಚಚ್ಛತೆಯ ಕಲ್ಪನೆಯನ್ನು ಮನೆ ಮನೆಗೆ ಮುಟ್ಟಿಸಬೇಕು ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ವೇದವ್ಯಾಸ ಕಾಮತ್ ಶಾಸಕರು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಭಿಪ್ರಾಯಪಟ್ಟರು. ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ ಎಂಬ ದ್ಯೇಯ ವಾಕ್ಯದಂತೆ ನಾವೆಲ್ಲರೂ ಸ್ವಚ್ಛತೆಯಲ್ಲಿ ಭಾಗಿಯಾಗೋಣ 2019 ರೊಳಗಾಗಿ ಮಹಾತ್ಮ ಗಾಂಧೀಜಿಯ ಕನಸಾದ ಸ್ವಚ್ಛ ಭಾರತದ ಕನಸು ನನಸಾಗಿಸೋಣ ಎಂದು ಕಾರ್ಯಕ್ರzಮದಲ್ಲಿ ತಿಳಿಸಿದರು. ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ವಾರ್ತಾ ಮತ್ತು ಪ್ರಸಾರ […]

ಬಿಜೆಪಿ ಶಾಸಕರನ್ನು‌ ಹೊರಗಿಟ್ಟು ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಡೆಸಲಾಗಿದೆ: ಪ್ರೇಮಾನಂದ್ ಶೆಟ್ಟಿ

Tuesday, November 20th, 2018
premananda-shetty

ಮಂಗಳೂರು: ಸಾಮಾನ್ಯ ಸಭೆ ಹಾಗೂ ವಿವಿಧ ಸ್ಥಾಯಿ ಸಮಿತಿಯ ಸಭೆಗಳು ಪ್ರತಿ ತಿಂಗಳು ಅಥವಾ 15 ದಿನಗಳಿಗೊಮ್ಮೆ‌ ನಡೆಸುವ ತೀರ್ಮಾನವನ್ನು ಮಾಜಿ‌ ಸಿಎಂ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಆದರೆ ಕಳೆದ ವಿಧಾನಸಭ ಚುನಾವಣೆಯ ನಂತರ ಈ ಸಭೆಗಳು ನಡೆದಿರುವುದು ಅತ್ಯಂತ ವಿರಳ. ಒಂದು ಸಭೆ ಅಕ್ಟೋಬರ್ಗೆ ನಡೆದಿದೆ, ಮತ್ತೊಂದು ಇಂದು ಕರೆಯಲಾಗಿತ್ತು. ಆದರೆ ನಾವು ಈ ಸಭೆಯನ್ನು ಬಹಿಷ್ಕರಿಸಿದ್ದೇವೆ ಎಂದು ಪಾಲಿಕೆಯ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ‌ ಮುಖಂಡ ಪ್ರೇಮಾನಂದ್ ಹೇಳಿದರು. ದ.ಕ. ಜಿಲ್ಲಾ ಬಿಜೆಪಿ […]

ಮಹಾನಗರ ಪಾಲಿಕೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಈಶ್ವರಪ್ಪ

Tuesday, August 14th, 2018
ishwarappa

ಶಿವಮೊಗ್ಗ: ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಬಿಡುಗಡೆ ಮಾಡಿದರು. ನಗರದ ಬಿಜೆಪಿ ಕಚೇರಿಯಲ್ಲಿ ಪಟ್ಟಿ ಬಿಡುಗಡೆ ಮಾಡಿದ ಶಾಸಕ ಕೆ.ಎಸ್. ಈಶ್ವರಪ್ಪ 35 ವಾರ್ಡ್ಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದರು. ಆಗಸ್ಟ್ 31 ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಲ್ಲೂ ಅಸಮಾಧಾನ ವ್ಯಕ್ತವಾಗಿದ್ದು, ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ ಗೈರಾಗಿದ್ದರು.