Blog Archive

ಚೊಚ್ಚಲ ಆಯವ್ಯಯ ಮಂಡಿಸುವ ಮುನ್ನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೊಮ್ಮಾಯಿ

Friday, March 4th, 2022
cm-temple

  ಬೆಂಗಳೂರು: ತಮ್ಮ ಚೊಚ್ಚಲ ಆಯವ್ಯಯ ಮಂಡಿಸುವ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸದ ಸಮೀಪದ ಶ್ರೀಕಂಠೇಶ್ವರ ದೇವಾಲಯ ದಲ್ಲಿ ಪೂಜೆ ಸಲ್ಲಿಸಿದರು. ದೇವಾಲಯದ ಹೊರಗೆ ಮುಖ್ಯಮಂತ್ರಿ ಯವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾಯುತ್ತಿದ್ದ ಪೌರ ಕಾರ್ಮಿಕ ಮಹಿಳೆಯರ ಬೇಡಿಕೆಯನ್ನು ಮನ್ನಿಸಿ, ಅವರೊಂದಿಗೆ ಫೋಟೋ ತೆಗೆಸಿಕೊಂಡರು. ನಂತರ ಅವರ ಕಷ್ಟ ಸುಖ ಆಲಿಸಿದರು. ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಜೊತೆಗಿದ್ದರು.

ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಿದ ಸರಕಾರ

Friday, January 21st, 2022
weekend-curfew

ಬೆಂಗಳೂರು  : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು ನಡೆಸಿದ ಪರಿಶೀಲನಾ ಸಭೆಯಯಲ್ಲಿ  ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಿ, ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರ ಮುಂದುವರಿಸುವುದಾಗಿ ತೀರ್ಮಾನಿಸಲಾಗಿದೆ. ಮುಖ್ಯಾಂಶಗಳು: 1. ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ 2. ಒಟ್ಟು 5344 ಸೊಂಕಿತರು ಆಸ್ಪತ್ರೆಗೆ […]

ರಾಜ್ಯದ ಎಲ್ಲಾ ಶಾಲೆ ಕಾಲೇಜುಗಳಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ 

Tuesday, January 18th, 2022
CM Bommai

ಬೆಂಗಳೂರು: ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆ. ಹೀಗಾಗಿ ಸುಭಾಷ ಚಂದ್ರ ಬೋಸ್ ಅವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಗಳವಾರ ಬೆಂಗಳೂರಿನಲ್ಲಿ ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ( ಜನವರಿ 23) ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ […]

ಕೋವಿಡ್ ತೊಲಗಿಸಲು ಪಣ ತೋಡೋಣ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

Monday, January 3rd, 2022
cm Bommai

ಬೆಂಗಳೂರು : 2022ನ್ನು ಆರೋಗ್ಯಭರಿತ ಹಾಗೂ ಕೋವಿಡ್ ಮುಕ್ತ ವರ್ಷವನ್ನಾಗಿ ಮಾಡಲು ಸಂಕಲ್ಪ ತೋಡೋಣ. ಕೋವಿಡ್ ವಿರುದ್ದ ಒಟ್ಟಾಗಿ ಸಮರವನ್ನು ಸಾರಿ ತೊಲಗಿಸಲು ಪಣ ತೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಅವರು ಇಂದು ಅವರು ಇಂದು ಭೈರವೇಶ್ವರನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಸ್ನಾತಕೋತ್ತರ ಕಾಲೇಜಿನಲ್ಲಿ 15-18 ವರ್ಷದೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಅತ್ಯಂತ ಯಶಸ್ವಿಯಾಗಿ ಕೋವಿಡ್ ನ್ನು […]

ಕಾರ್ಯಕ್ರಮದ ವೇದಿಕೆಯಲ್ಲಿ ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸಂಸದ‌ ಡಿ.ಕೆ.‌ ಸುರೇಶ್ ಹೊಡೆದಾಟ

Monday, January 3rd, 2022
Ramanagar

ರಾಮನಗರ: ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಎದುರೇ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸಂಸದ‌ ಡಿ.ಕೆ.‌ ಸುರೇಶ್ ಹೊಡೆದಾಟಕ್ಕೆ ಮುಂದಾದ‌ ಘಟನೆ ರಾಮನಗರದಲ್ಲಿ ನಡೆಯಿತು. ರಾಮನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಸೋಮವಾರ ನಡೆದ ಪ್ರತಿಮೆಗಳ ಅನಾವರಣ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ವೇಳೆ ವೇದಿಕೆಯಲ್ಲಿ ಅಶ್ವತ್ಥನಾರಾಯಣರ ಮಾತಿನಿಂದ ಕೆರಳಿದ‌ ಸುರೇಶ್ ಅವರತ್ತ ನುಗ್ಗಿದರು. ಅತ್ತ ಅಶ್ವತ್ಥನಾರಾಯಣ ಸಹ‌ ಕೆರಳಿದರು. ನಂತರ ಇಬ್ಬರು‌ ಕೈ ಕೈ ಮಿಲಾಯಿಸಲು ಮುಂದಾದರು. ವಿಧಾನ‌ ಪರಿಷತ್ ಸದಸ್ಯ ಎಸ್. ರವಿ ಮೈಕ್ ನಲ್ಲಿ‌ […]

ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣ ವರದಿ: ನಾಳೆ ತಜ್ಞರೊಂದಿಗೆ ಸಭೆ; ಹೊಸ ಮಾರ್ಗಸೂಚಿ ಜಾರಿಗೆ ಕ್ರಮ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, December 2nd, 2021
omicron

ನವದೆಹಲಿ :  ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಾಳೆ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಪರಿಣತರೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ನವದೆಹಲಿಯಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ರಾಜ್ಯದಿಂದ ಎನ್ ಸಿ ಬಿ ಎಸ್ ಗೆ ಕಳುಹಿಸಿದ್ದ ಮಾದರಿಯಲ್ಲಿ ಕೇಂದ್ರ ಸರ್ಕಾರವು ಇಂದು ಎರಡು ಒಮಿಕ್ರಾನ್ ಪ್ರಕರಣಗಳನ್ನು ದೃಢ ಪಡಿಸಿದೆ. ಆದರೆ ವಿವರವಾದ ಪರೀಕ್ಷಾ ವರದಿ ಬಂದಿಲ್ಲ. […]

ಬಿಡಿಎ ಭ್ರಷ್ಟಾಚಾರ: ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಸಿಎಂ

Sunday, November 21st, 2021
Basavaraja Bommai

ಬೆಂಗಳೂರು : ನಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು  ಮುಖ್ಯಮಂತ್ರಿ ಬಸವರಾಜ .  ಬೊಮ್ಮಾಯಿ ಅವರು ಇಂದು  ಸ್ಪಷ್ಟಪಡಿಸಿದರು. ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಮುಖ್ಯಮಂತ್ರಿಗಳು ಎ.ಸಿ. ಬಿ ವರದಿ ಸಲ್ಲಿಸಿದ  ನಂತರ ಶಿಫಾರಸ್ಸುಗಳನ್ನು ಚಾಚೂತಪ್ಪದೆ ಪಾಲಿಸಲಾಗುವುದು. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ  ಎಂದರು. ‘ಸಾರ್ವಜನಿಕರಿಂದಲೂ ಬಿಡಿಎ ಅಕ್ರಮಗಳ ಬಗ್ಗೆ ದೂರುಗಳು ಬಂದಿದ್ದವು. ಎಸ್.ಆರ್.ವಿಶ್ವನಾಥ ಅವರೂ ಸಹ ಈ ಬಗ್ಗೆ ನನ್ನ ಗಮನ ಸೆಳೆದಿದ್ದರು. ಸಂಬಂಧಪಟ್ಟ ನಗರಾಭಿವೃದ್ಧಿ ಇಲಾಖೆ  ಅಧಿಕಾರಿಗಳಿಗೆ ಈ […]

ಪುನೀತ್ ಚಾರಿತ್ರ್ಯವೇ ಒಂದು ಚರಿತ್ರೆ – ಬಸವರಾಜ ಬೊಮ್ಮಾಯಿ

Wednesday, November 17th, 2021
puneeth

ಬೆಂಗಳೂರು : ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’  ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು. ಅವರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಪುನೀತ್ ರಾಜ್‌ಕುಮಾರ್‌ರವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’  ಘೋಷಣೆ ಮಾಡಿದ ಮುಖ್ಯಮಂತ್ರಿಗಳು, ವಿವಿಧ ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.ಯುವರತ್ನ ಪುನೀತ್‌ರ ನೆನಪನ್ನು ಚಿರಸ್ಥಾಯಿಯಾಗಿಸಲು ಪುನೀತ್ ಸ್ಮಾರಕವನ್ನು ನಿರ್ಮಿಸಲಾಗುವುದು […]

ಕನ್ನಡವನ್ನು ಬಿಟ್ಟುಕೊಡುವುದಿಲ್ಲ ಎನ್ನುವ ಸ್ಪೂರ್ತಿ ಇರಲಿ : ಬಸವರಾಜ ಬೊಮ್ಮಾಯಿ ಕರೆ

Monday, November 1st, 2021
Kannada Rajyotsava Bommai

ಬೆಂಗಳೂರು : ಕನ್ನಡವನ್ನು ಬಿಟ್ಟುಕೊಡುವುದಿಲ್ಲ ಎನ್ನುವ ಸ್ಪೂರ್ತಿ ಕನ್ನಡಿಗರಿಗಿರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ಮೈಸೂರು ಬ್ಯಾಂಕ್ ಬಳಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಉತ್ಸವ ಹಾಗೂ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕನ್ನಡವನ್ನು ಬೆಳೆಸಿ ಕರ್ನಾಟಕವನ್ನು ಉಳಿಸಬೇಕು. ಕನ್ನಡಿಗರು ಈ ಕೆಲಸ ಮಾಡಬೇಕು. ಕನ್ನಡ ಬಳಕೆ, ಇತರರಿಗೆ ಕಲಿಸುವುದು, ಸಾಹಿತ್ಯ, ಸಂಸ್ಕೃತಿಯಲ್ಲಿ ನಿರಂತರವಾಗಿ ಬೆಳೆಸಲು ಪರಿಶ್ರಮ ಅಗತ್ಯ. ಕನ್ನಡಕ್ಕೆ ಆಡಳಿತದಲ್ಲಿ ಹಾಗೂ ಬದುಕಿನಲ್ಲಿ ಅಗ್ರಮಾನ್ಯ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿಗಳು […]

ಅಲ್ಪಸಂಖ್ಯಾತ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಅನ್ಯಾಯ ಎಸಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Tuesday, October 26th, 2021
Hanagal Election

ಹಾನಗಲ್ : ಇಂದಿಗೂ ಕಾಂಗ್ರೆಸ್ ಪಕ್ಷ ಬ್ರಿಟಿಷರ ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು.‌ ಹಾನಗಲ್ ವಿಧಾನಸಭಾ ಕ್ಷೇತ್ರದ ಆಡೂರು ಗ್ರಾಮದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರವಾಗಿ ಮತಯಾಚನೆ ಮಾಡಿದ ನಂತರ ಅವರು ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದು ಬ್ರಿಟಿಷ್ ವ್ಯಕ್ತಿ. ಒಡೆದಾಳುವುದು ಬ್ರಿಟಿಷರ ನೀತಿಯನ್ನು ಅವರು ಸದಾ ಅನುಸರಿಸಿಕೊಂಡು ಬಂದವರು. ಈಗ ಅದೇ ಸಂಸ್ಕೃತಿಯನ್ನು ಕಾಂಗ್ರೆಸ್ ಮುಂದುವರಿಸಿದೆ. ಹೀಗಾಗಿ ಕಾಂಗ್ರೆಸ್ಸನ್ನು ಪುಡಿ ಪುಡಿ ಮಾಡಿ ಎಂದು ಬೊಮ್ಮಾಯಿ ಕರೆ […]