Blog Archive

ಸಿಎಂ ವಿರುದ್ಧ ಅಕ್ರಮ ಡಿನೋಟಿಫಿಕೇಶನ್ ಆರೋಪ, ರಾಜ್ಯಪಾಲರಿಗೆ ದೂರು

Thursday, December 21st, 2017
rajyapala

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಮಾಡಿದೆ. ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ನೇತೃತ್ವದ ನಿಯೋಗ ಬುಧವಾರ ರಾಜ್ಯಪಾಲರಿಗೆ ಈ ಕುರಿತು ಮನವಿ ಮಾಡಿದೆ. ಭೂಪಸಂದ್ರ ಅಕ್ರಮ ಡಿನೋಟಿಫಿಕೇಶನ್ ಆರೋಪದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲಾಗಿದೆ. ಯಡಿಯೂರಪ್ಪ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭವೃದ್ಧಿ ಸಚಿವ ಕೆ.ಜೆ.ಜಾರ್ಜ್, ಹೆಚ್ಚುವರಿ ಕಾರ್ಯದರ್ಶಿ ಮಹೇಂದ್ರ ಜೈನ್ […]

ಸಮುದಾಯ ಭವನಕ್ಕೆ ಜಮೀನು ಮಂಜೂರು ಮಾಡಲು ಒತ್ತಾಯಿಸಿ ಬ್ಯಾರಿ ಒಕ್ಕೂಟದಿಂದ ಸಿಎಂಗೆ ಮನವಿ

Saturday, December 16th, 2017
shringari

ಶೃಂಗೇರಿ: ಶೃಂಗೇರಿಯಲ್ಲಿ ಬ್ಯಾರಿ ಸಮುದಾಯ ಭವನ/ಬ್ಯಾರಿ ಸಾಂಸ್ಕೃತಿಕ ಕೇಂದ್ರ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡುವಂತೆ ಶೃಂಗೇರಿ ಕ್ಷೇತ್ರ ಬ್ಯಾರಿ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ. ಇತ್ತೀಚೆಗೆ ಕೊಪ್ಪಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಒಕ್ಕೂಟದ ಅಧ್ಯಕ್ಷ ಅಬ್ದುಲ್ ಖಾದರ್ ಹಾಗೂ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಕೆ.ಮುಹಮದ್ ಅವರು ಈ ಮನವಿ ಸಲ್ಲಿಸಿದ್ದು, ಒಕ್ಕೂಟದ ಬಹುಕಾಲದ ಬೇಡಿಕೆಯಾಗಿರುವ ಸಮುದಾಯ ಭವನಕ್ಕೆ ಮೂರು ಎಕರೆ ಸರಕಾರಿ ಜಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು.

ಸಮಾಜಘಾತುಕ ಶಕ್ತಿಗಳ ವಿರುದ್ಧ ಬಿಗಿ ಕಾನೂನು ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

Friday, July 7th, 2017
CM Siddaramaiah

ಮಂಗಳೂರು :  ಅಡ್ಯಾರ್ ನಲ್ಲಿ  ನಡೆಯುವ ಕಾಂಗ್ರೆಸ್ ಪಕ್ಷದ ಮೈಸೂರ್ ವಿಭಾಗದ  ಪ್ರತಿನಿಧಿಗಳ ಸಮಾವೇಶಕ್ಕೆ ಆಗಮಿಸಿದ ಕರ್ನಾಟಕ ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರೊಂದಿಗೆ ಮಾತನಾಡಿ ಕೆಲವು ಸಮಾಜ ಘಾತುಕ ಶಕ್ತಿಗಳು ಕಾನೂನು ಕೈಗೆತ್ತಿಕೊಳ್ಳುತ್ತಿ ಕೊಂಡು ಜಿಲ್ಲೆಯ ಜನರ ನೆಮ್ಮದಿಯನ್ನು ಹಾಳು ಮಾಡುತ್ತಿದ್ದಾರೆ ನಮ್ಮ ಸರ್ಕಾರ ಇದಕ್ಕೆ ಖಂಡಿತ ಅವಕಾಶ ನೀಡುವುದಿಲ್ಲ ಎಂದು  ಹೇಳಿದರು. ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುವ ಸಂಘಟನೆ ಸಫಲತೆ ಕಾಣುವುದಿಲ್ಲ, ಸಮಾಜಘಾತುಕ ಶಕ್ತಿಗಳ ವಿರುದ್ಧ ಬಿಗಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದವರು ಹೇಳಿದರು. ಈ ಸಂದರ್ಭ […]

ವರ್ಗಾವಣೆ ಕುರಿತು ಹಬ್ಬಿದ್ದ ಸುದ್ದಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಸ್ಪಷ್ಟನೆ

Wednesday, July 27th, 2016
A-B-Ibrahim

ಮಂಗಳೂರು: ತಮ್ಮ ವರ್ಗಾವಣೆ ಕುರಿತು ಹಬ್ಬಿದ್ದ ಸುದ್ದಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಸ್ಪಷ್ಟನೆ ನೀಡಿದ್ದಾರೆ. ಎ.ಬಿ.ಇಬ್ರಾಹಿಂ ಅವರ ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಡೆ ನೀಡಿದ್ದಾರೆ ಎಂಬ ಸುದ್ದಿಗಳನ್ನು ಅವರು ತಳ್ಳಿ ಹಾಕಿದ್ದಾರೆ. ಸೋಮವಾರ ಬೆಳಗ್ಗೆಯಿಂದ ಎ.ಬಿ.ಇಬ್ರಾಹಿಂ ಅವರ ವರ್ಗಾವಣೆಗೆ ತಡೆ ನೀಡಲಾಗಿದೆ ಎಂಬ ಸುದ್ದಿ ಹಬ್ಬಿತ್ತು. ಒನ್ ಇಂಡಿಯಾಗೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ‘ವರ್ಗಾವಣೆಗೆ ತಡೆ ನೀಡಿಲ್ಲ. ಡಾ.ಕೆ.ಜಿ.ಜಗದೀಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ’ ಎಂದು ಹೇಳಿದ್ದಾರೆ. ಕಳೆದ ವಾರ […]

ನನ್ನ ಹೇಳಿಕೆಯನ್ನು ತಿರುಚಿದ್ದು ಮಾಧ್ಯಮಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

Thursday, April 3rd, 2014
ನನ್ನ ಹೇಳಿಕೆಯನ್ನು ತಿರುಚಿದ್ದು ಮಾಧ್ಯಮಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರೈತ ವಿಠಲ್ ಅರಬಾವಿ ಅವರು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೀಗ ಉಲ್ಟಾ ಹೊಡೆದಿದ್ದಾರೆ. ನಾನು ರೈತನ ಸಾವಿಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದೇ, ಇದನ್ನು ಮಾಧ್ಯಮಗಳು ತಿರುಚಿವೆ ಎಂದು ಹೇಳಿದ್ದಾರೆ. ರೈತ ವಿಠಲ್ ಅರಬಾವಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾನು ಎಲ್ಲೂ ಹೇಳಿಲ್ಲ ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ. ನಾನು ರೈತನ ಸಾವಿಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದೇ. ಸದ್ಯ ವಿಠಲ್ ಅರಬಾವಿ ಆತ್ಮಹತ್ಯೆ […]

ಕಾಂಗ್ರೆಸ್ ತನ್ನ ಆಡಳಿತಾವಧಿಯಲಿ ಜನೋಪಯೋಗಿ ಕಾರ್ಯಗಳ ಮೂಲಕ ಉತ್ತಮ ಆಡಳಿತವನ್ನು ನೀಡಲಿದೆ : ಇಬ್ರಾಹಿಂ ಕೋಡಿಜಾಲ್

Tuesday, May 14th, 2013
Ibrahim Kodijal

ಮಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಸಿದ್ದರಾಮಯ್ಯನವರು ಉತ್ತಮ ಆಡಳಿತವನ್ನು ನೀಡಲಿದ್ದು, ಕರ್ನಾಟಕ ರಾಜ್ಯವನ್ನು ಪ್ರಗತಿ ಪಥದತ್ತ ಕೊಂಡೊಯ್ಯಲಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಹೇಳಿದರು. ಅವರು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಏರ್ಪಡಿಸಲಾದ ಪತ್ರಿಕಾಘೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಪ್ರಾರಂಭದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಇತ್ತೀಚಿಗೆ ನಡೆದ ವಿಧಾನಸಭಾ ಚುನವಣೆಗಳಲ್ಲಿ ಭ್ರಷ್ಟಾಚಾರದಿಂದ ಕೂಡಿದ್ದ ಬಿಜೆಪಿ ಸರ್ಕಾರವನ್ನು ತಿರಸ್ಕರಿಸಿದ ಮತದಾರ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತವನ್ನು ನೀಡುವ […]