Blog Archive

ಮೂಡಬಿದ್ರೆಯಲ್ಲಿ ಹಳೆ ನಿಷ್ಠಾವಂತ ಅಮರನಾಥ್ ಶೆಟ್ಟಿಗೆ ಜೆಡಿಎಸ್ ಟಿಕೆಟ್

Saturday, April 21st, 2018
amaranath

ಮಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮೂಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಹಳೆ ನಿಷ್ಠಾವಂತ ಮುಖಂಡ ಅಮರನಾಥ್ ಶೆಟ್ಟಿ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದೆ. ಈ ಮೂಲಕ ಮುಲ್ಕಿ – ಮೂಡಬಿದ್ರೆ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಪ್ರಬಲ ಸ್ಪರ್ಧೆ ನೀಡಲು ತಂತ್ರ ರೂಪಿಸಿದೆ. ಈ ಹಿನ್ನೆಲೆಯಲ್ಲಿ ತ್ರಿಕೋನ ಸ್ಪರ್ಧೆಗೆ ವೇದಿಗೆ ಸಿದ್ದವಾಗಿದೆ. ಮೂಲ್ಕಿ ಮೂಡಬಿದ್ರೆ ಕ್ಷೇತ್ರ ದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮುಲ್ಕಿಯ ಉದ್ಯಮಿ ಜೀವನ್ ಶೆಟ್ಟಿ ಅವರನ್ನು ಕಣಕ್ಕಿಳಿಸಲು ನಿನ್ನೆ ಜೆಡಿಎಸ್ ವರಿಷ್ಠರು ತೀರ್ಮಾನಿಸಿದ್ದರು. ಆದರೆ […]

ಮೂಡಬಿದ್ರೆಯಿಂದ ಉದ್ಯಮಿ ಜೀವನ್ ಶೆಟ್ಟಿ ಕಣಕ್ಕಿಳಿಸಲು ಜೆಡಿಎಸ್ ತೀರ್ಮಾನ

Friday, April 20th, 2018
jeeven-shetty

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿಯ ಹೋರಾಟಕ್ಕೆ ವೇದಿಕೆಯಾಗಲಿದೆ . ಜಿಲ್ಲೆಯ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಈ ನಡುವೆ ಮೂಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಆಭ್ಯರ್ಥಿ ಕಣಕ್ಕಿಳಿಸಲಿದ್ದು ಇಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಮೂಲ್ಕಿ ಮೂಡಬಿದ್ರೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಜೀವನ್ ಶೆಟ್ಟಿ ಆಯ್ಕೆಯಾಗಿದ್ದರೆ. ಈ ಹಿಂದೆ ಮುಲ್ಕಿ-ಮೂಡಬಿದ್ರೆ ಕ್ಷೇತ್ರದಿಂದ ಮಾಜಿ ಸಚಿವ ಅಮರನಾಥ್ ಶೆಟ್ಟಿ ಸ್ಪರ್ಧಿಸುತ್ತಿದ್ದರು. […]

ಕೈತಪ್ಪಿದ ಟಿಕೆಟ್: ಮೂಡಬಿದ್ರೆಯಲ್ಲಿ ಬಂಡಾಯ ಬಾವುಟ ಹಾರಿಸಿದ ಜಗದೀಶ್ ಅಧಿಕಾರಿ

Tuesday, April 17th, 2018
moodbidre

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಕ್ಷೇತ್ರದಲ್ಲಿ ಬಿಜೆಪಿ ಉಮಾನಾಥ್ ಕೋಟ್ಯಾನ್ ಅವರಿಗೆ ಟಿಕೆಟ್ ನೀಡಿರುವುದು ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಪೋಟಕ್ಕೆ ಕಾರಣವಾಗಿದೆ. ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ತಮ್ಮನ್ನು ಕಡೆಗಣಿಸಿ ಉಮಾನಾಥ್ ಕೋಟ್ಯಾನ್ ಅವರಿಗೆ ಟಿಕೆಟ್ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮೂಡಬಿದ್ರೆಯಲ್ಲಿ ಗೆಲ್ಲುವ ಕುದುರೆಯನ್ನು ನಿಲ್ಲಿಸಿಲ್ಲ. ಅದರ ಬದಲಿಗೆ ಸತ್ತ ಕತ್ತೆಯನ್ನು ‌ನಿಲ್ಲಿಸಲಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಕೈತಪ್ಪಿರುವುದರಿಂದ ಸಿಟ್ಟಿಗೆದ್ದಿರುವ ಅವರು […]

ಕುಡುಪು ಕ್ಷೇತ್ರಕ್ಕೆ ಮೂಡಬಿದ್ರೆ, ಗುರುಪುರ, ವಾಮಂಜೂರಿನಿಂದ ಬೃಹತ್ ಹೊರೆಕಾಣಿಕೆ

Friday, February 23rd, 2018
horekanike

ಮಂಗಳೂರು: ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಬ್ರಹ್ಮಕಲಶೋತ್ಸವ ಪ್ರಯುಕ್ತ ಮೂಡುಬಿದಿರೆ, ಕೈಕಂಬ, ಗುರುಪುರ, ವಾಮಂಜೂರು ಹಾಗೂ ಸುತ್ತಮುತ್ತಲ ಪ್ರದೇಶದ ದೇವಸ್ಥಾನಗಳ ಮೂಲಕ ಗುರುವಾರ ದೇವಳಕ್ಕೆ ಹಸಿರುವಾಣಿ ಹೊರೆಕಾಣಿಕೆಯ ಹೊಳೆಯಂತೆಯೇ ಹರಿದು ಬಂತು. ಮೂಡುಬಿದಿರಿ, ಗಂಜಿಮಠ, ಮಿಜಾರು, ಕೈಕಂಬ , ಮಣಿಪಾಲ್, ಬಜ್ಪೆ, ಕಿನ್ನಿಕಂಬಳ, ಗುರುಪುರ ಶ್ರೀ ವರದರಾಜ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ವೈದ್ಯನಾಥ ದೈವಸ್ಥಾನದಲ್ಲಿ ಸಂಗ್ರಹವಾದ ಹೊರೆಕಾಣಿಕೆ ವಾಹನಗಳು ವಾಮಂಜೂರಿಗೆ ಸಾಗಿ, ಅಲ್ಲಿಂದ ಮುಂದಕ್ಕೆ ಭವ್ಯ ಮೆರವಣಿಗೆಯಿಂದ ಕುಡುಪಿನತ್ತ ಸಾಗಿದವು. ವಾಮಂಜೂರಿನ ಶ್ರೀ ರಾಮ […]

ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ

Friday, January 26th, 2018
Alvas Student

ಮಂಗಳೂರು: ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಾವಣಗೆರೆ ಮೂಲದ ರಚನಾ ಎಂ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ರಚನಾ ಸಾವಿಗೆ ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ರಚನಾ, ಡೆತ್‌ನೋಟ್‌ನಲ್ಲಿ ಅನಾರೋಗ್ಯದ ಬಗ್ಗೆ ಉಲ್ಲೇಖಿಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಡಬಿದ್ರೆಯ ಗುರು ಬಸದಿ ಪಂಚಲೋಹದ ವಿಗ್ರಹಕಳ್ಳರ ಬಂಧನ

Saturday, July 13th, 2013
Guru Basadi Idol Theft

ಮೂಡಬಿದ್ರೆ: ಜೂನ್ 17ರಂದು ರಾತ್ರಿ ಮೂಡಬಿದ್ರೆಯ ಗುರು ಬಸದಿಯಲ್ಲಿ ಬೆಲೆಬಾಳುವ ವಿಗ್ರಹಗಳನ್ನು ಕಳವು ಮಾಡಿದ್ದ ಇಬ್ಬರು ವಿಗ್ರಹಕಳ್ಳರನ್ನು ಕೋಲಾರ ಪೊಲೀಸರು ಶುಕ್ರವಾರ ಕರ್ನಾಟಕ ಮತ್ತು ಆಂಧ್ರಪ್ರದೇಶ ಗಡಿಯಲ್ಲಿ ಬಂಧಿಸಿದ್ದಾರೆ. ಕರ್ನಾಟಕ  ಗಡಿಪ್ರದೇಶವಾದ ಕರ್ನೂಲ್ ನಲ್ಲಿ ಒರಿಸ್ಸಾ ಮೂಲದ ದಾಸ್ ಮತ್ತು ಪ್ರಮೋದ್ ಎಂಬವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ. ಶ್ರೀ ಆದಿನಾಥ ಸ್ವಾಮಿ ಪಂಚಲೋಹದ ವಿಗ್ರಹವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪಂಚಲೋಹದ ವಿಗ್ರಹದ ಮೌಲ್ಯ ಸುಮಾರು ಒಂದು ಸಾವಿರ ಕೋಟಿ ಎಂದು ಅಂದಾಜಿಸಲಾಗಿದೆ.  ಕಳ್ಳತನವಾಗಿರುವ ಇತರ ವಿಗ್ರಹಗಳನ್ನು ಇನ್ನಷ್ಟೇ ಪತ್ತೆ […]