Blog Archive

ಕಾಳಿ ಚರಣ್ ಮಹಾರಾಜ್ ಸ್ವಾಮೀಜಿ ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಭೇಟಿ

Monday, October 19th, 2020
Kali charan swamiji

ಮಂಗಳೂರು: ಶಿವ ತಾಂಡವ ಸ್ತೋತ್ರ ಖ್ಯಾತಿಯ ಕಾಳಿ ಚರಣ್ ಮಹಾರಾಜ್ ಸ್ವಾಮೀಜಿ  ರವಿವಾರ ಮೂಡುಬಿದಿರೆ ತಾಲೂಕಿನ ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಗೆ  ಭೇಟಿ ನೀಡಿದರು. ಸಾವಿರ ಕಂಬದ ಬಸದಿಯ ಚಂದ್ರನಾಥ ಸ್ವಾಮಿ ಆಲಯ ಕ್ಷೇತ್ರಪಾಲ ದೇವರು, ನಾಗಾಲಯಗಳಿಗೆ ಭೇಟಿ ನೀಡಿ ದರ್ಶನ ಪಡೆದರು. ಬಸದಿಯ ವಾಸ್ತು ಶಿಲ್ಪಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಕಾಳಿ ಚರಣ್ ಮಹಾರಾಜ್ ಸ್ವಾಮೀಜಿಯವರು ಬಸದಿಯ ವಾಸ್ತು ವೈಭವಕ್ಕೆ ಬೆರಗಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಪ್ರಸಾದ್ ಕುಮಾರ್, ಜವನೆರ್ ಬೆದ್ರ ಸಂಘಟನೆಯ […]

ಮಾನಸಿಕವಾಗಿ ನೊಂದ ಹದಿಮೂರರ ಬಾಲಕಿ ಆತ್ಮಹತ್ಯೆಗೆ ಶರಣು

Thursday, October 8th, 2020
pooja

ಮೂಡುಬಿದಿರೆ : ಸಹೋದರಿ ಬುದ್ದಿ ಮಾತು ಹೇಳಿದ ಕಾರಣ  ಮಾನಸಿಕವಾಗಿ ನೊಂದ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಮೂಡುಮಾರ್ನಾಡಿನ ಗುಡ್ಡದ ಮೇಲು ಎಂಬಲ್ಲಿ ಗುರುವಾರ ನಡೆದಿದೆ. ಕರುಣಾಕರ ಹಾಗೂ ಸುಶೀಲಾ ದಂಪತಿಯ ಪುತ್ರಿ ಪೂಜಾ(13) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಪೂಜಾ ಮಧ್ಯಾಹ್ನ ತನ್ನ ಸಂಬಂಧಿಕರ ಮಕ್ಕಳೊಂದಿಗೆ ಆಟವಾಡುತ್ತಾ ಅವರೊಂದಿಗೆ ಜಗಳವಾಡಿ ಹೊಡೆದು ತೊಂದರೆ ನೀಡುತ್ತಿದ್ದಳು. ಸಣ್ಣ ಮಕ್ಕಳಿಗೆ ತೊಂದರೆ ಕೊಡಬಾರದು ಎಂದು ಸಹೋದರಿ ಬುದ್ಧಿ ಮಾತು ಹೇಳಿದ್ದಾರೆ. ಇದರಿಂದಾಗಿ ಖಿನ್ನತೆಗೆ ಒಳಗಾದ ಪೂಜಾ ಮನೆ ಬಳಿ ಇರುವ ಹಾಡಿಯಲ್ಲಿ ಮರದ […]

ಮೂಡುಬಿದಿರೆಯ ತಾಲೂಕು : ತಾಲೂಕು ಪಂಚಾಯತ್‌ ಸದಸ್ಯನ ಅಪಹರಣ, ದೂರು

Tuesday, August 4th, 2020
sukumar

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ತಾಲೂಕು ಪಂಚಾಯತ್‌ ಚುನಾವಣೆ ವೇಳೆ ತನ್ನನು ಅಪಹರಣ ಮಾಡಲಾಗಿದೆ ಎಂದು ಸದಸ್ಯರೋರ್ವರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ತಾಪಂ ಸದಸ್ಯ ಸುಕುಮಾರ್ ಸನಿಲ್ ಅಪಹರಣಕ್ಕೊಳಗಾದವರು. ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಸುಕುಮಾರ್ ಸನಿಲ್ ಸೋಮವಾರ ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ನಡೆಯಬೇಕಿದ್ದ ತಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅದನ್ನು ತಡೆಯಲು ನನ್ನನ್ನು ಅಪಹರಣಗೈದು ಉಡುಪಿಗೆ ತಂದು ಬಿಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. […]

ದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

Wednesday, July 29th, 2020
sindhubroopesh

ಮಂಗಳೂರು :  ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ಬಜ್ಪೆ ಸಮೀಪದ ನಿವಾಸಿ ರಂಜಿತ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ಮಾಡಿದರೆ  ಕಾನೂನು ಕ್ರಮ ಕೈಗೊಳ್ಳುವುದಾಗಿ  ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ […]

ಮೂಡುಬಿದಿರೆಯಲ್ಲಿ ಬೃಹತ್‌ ಜನಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಉದ್ಘಾಟಿಸಿದ ಕೋಟ ಶ್ರೀನಿವಾಸ ಪೂಜಾರಿ

Thursday, October 3rd, 2019
moodbidri

ಮೂಡುಬಿದಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ-ಮೂಡುಬಿದಿರೆ ವತಿಯಿಂದ 150ನೇ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಮೂಡುಬಿದಿರೆಯಲ್ಲಿ ಬೃಹತ್‌ ಜನಜಾಗೃತಿ ಜಾಥಾ ಮತ್ತು ಸಮಾವೇಶ ಬುಧವಾರ ಜರಗಿತು. ಪದ್ಮಾವತಿ ಕಲಾಮಂದಿರದಲ್ಲಿ ನಡೆದ ಸಮಾವೇಶವನ್ನು ಉದ್ಘಾಟಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಮಾಜವನ್ನು ವ್ಯಸನಮುಕ್ತ, ಪರಿಶ್ರಮಶೀಲ, ಅಭಿವೃದ್ಧಿಯ ಮಾರ್ಗದಲ್ಲಿ ಮುನ್ನಡೆಸುವಲ್ಲಿ ಸರಕಾರಕ್ಕೆ ಮಾರ್ಗದರ್ಶನ ನೀಡುವ ಮಟ್ಟಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಬೆಳೆದು ನಿಂತಿದೆ. ಗಾಂಧೀ […]

ಸ್ನೇಹಿತನ ಕೊಲೆ : ಆರೋಪಿಗೆ ಜೀವಾವಧಿ ಶಿಕ್ಷೆ

Tuesday, August 27th, 2019
jaya-madival

ಮಂಗಳೂರು : ಕುಡಿತದ ಮತ್ತಿನಲ್ಲಿ ಸ್ನೇಹಿತನನ್ನೇ ಕಡಿದು ಕೊಲೆಗೈದ ಆರೋಪಿಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮೂಡುಬಿದಿರೆಯ ಶಿರ್ತಾಡಿ ದೇವಸಮನೆ ನಿವಾಸಿ ಜಯ ಮಡಿವಾಳ (42) ಶಿಕ್ಷೆಗೊಳಗಾದ ಆರೋಪಿ. ಜಯ ಮಡಿವಾಳ ಕಳೆದ ವರ್ಷ ಅಕ್ಟೋಬರ್ 2ರಂದು ರಾತ್ರಿ ತನ್ನ ಮನೆಯಲ್ಲಿಯೇ ಸ್ನೇಹಿತ, ಪಚ್ಚಾಡಿ ಕಜೆ ಶಿರ್ತಾಡಿ ನಿವಾಸಿ ಶೇಖರ ಪೂಜಾರಿ(52) ಎಂಬವರನ್ನು ಕಡಿದು ಕೊಲೆ ಮಾಡಿದ್ದ. ಜಯ ಮಡಿವಾಳ ದೇವಸಮನೆಯಲ್ಲಿ ಓಬ್ಬನೇ ವಾಸಿಸುತ್ತಿದ್ದ. ಕೊಲೆಯಾಗುವ ದಿನದಂದು […]

ನಿಮಗೆ ಊಟ-ಅನ್ನಾ ಬೇಕಾದರೆ ಪ್ರಮಾಣಿಕವಾಗಿ ಕೆಲಸ ಮಾಡಿ, ಉಮಾನಾಥ್ ಕೋಟ್ಯಾನ್ ಎಚ್ಚರಿಕೆ

Monday, July 1st, 2019
Umanath-Kotian

ಮೂಡುಬಿದಿರೆ : ಸರಕಾರದ ಸವಲತ್ತುಗಳು ಜನರಿಗೆ ಸಿಗಬೇಕಾದರೆ ನಿಮ್ಮ ಕೈಕಾಲು ಇಡಿಯಬೇಕಾ?, ನಾಡ ಕಛೇರಿಯಲ್ಲಿ ಏನುಬೇಕೋ ಅದನ್ನು ಪಡಕೊಳ್ಳುವುದು ಜನರ ಹಕ್ಕು, ಮಗುವಿನ ಜನನ ಸರ್ಟಿಫಿಕೇಟು ಕೊಡಲು ಒಂದು ತಿಂಗಳು ಬೇಕಾ?, ನಿಮಗೆ ಊಟ ಅನ್ನಾ ಬೇಕಾದರೆ ಪ್ರಮಾಣಿಕವಾಗಿ ಕೆಲಸ ಮಾಡಿ ಎಂದು ಮೂಡಬಿದಿರಿ ನಾಡಕಛೇರಿ ಸಿಬ್ಬಂದಿಗಳಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಎಚ್ಚರಿಸಿದರು. ಮೂಡುಬಿದಿರೆ ನಾಡಕಚೇರಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಶಾಸಕ ಉಮಾನಾಥ್ ಕೋಟ್ಯಾನ್ ಆಕ್ರೋಶಗೊಂಡಿದ್ದಾರೆ. ಕಛೇರಿ ವೇಳೆ ಫೋನ್ ತಂದರೆ ಎಚ್ಚರಿಗೆ ಎಂದು ಅವಾಜ್ ಹಾಕಿದ್ದಾರೆ. […]

ಕಂಪೆನಿ ಪೈಪೋಟಿ ತಂತ್ರಗಳ ಕುರಿತು ಉಪನ್ಯಾಸ

Thursday, December 27th, 2018
alwas-clg

ಮೂಡುಬಿದಿರೆ: ಕಂಪೆನಿಗಳ ಪೈಪೋಟಿ ತಂತ್ರಗಳ ಕುರಿತು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಆಶ್ರಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಮಿಜಾರಿನ ಕ್ಯಾಂಪಸ್‍ನಲ್ಲಿ ಆಯೋಜಿಸಲಾಯಿತು. ಲಂಡನ್ ಕೆಪಿಎಂಜಿ ಆಡಳಿತಾತ್ಮಕ ಸಲಹೆಗಾರ್ತಿ ಲೌರಾ ಕ್ರೆನ್ಸ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಸಣ್ಣ ಹಾಗೂ ಸ್ಟಾರ್ಟ್‍ಅಪ್ ಕಂಪೆನಿಗಳು ಯಾವ ರೀತಿ ದೊಡ್ಡ ಕಂಪನಿಗಳೊಂದಿಗೆ ಸ್ಪರ್ಧಿಸಲು ಸಾಧ್ಯ ಎನ್ನುವುದರ ಬಗ್ಗೆ ತಿಳಿಸಿದರು. ಎಂಬಿಎ ವಿಭಾಗದ ಡೀನ್ ಪ್ರೊ. ಪಿ ರಾಮಕೃಷ್ಣ ಚಡಗ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಆಳ್ವಾಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ 2018

Friday, December 21st, 2018
christmas

ಮೂಡುಬಿದಿರೆ: ದ್ವೆಷ ಮತ್ತು ಧರ್ಮ ಹೀಗೆ ವಿಭಜಿಸುವ ಗೋಡೆಗಳನ್ನು ಕಿತ್ತೆಸೆದು ಮಾನವೀಯತೆ ಬೆಸೆಯುವ, ಬಂಧುತ್ವವನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ಬಂಧುತ್ವ ಎನ್ನುವುದು ಜಾತಿ, ಮತ ಧರ್ಮದ ಎಲ್ಲೆ ಮೀರಿದ ಸಂಬಂಧವಾಗಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಪೀಟರ್ ಪಾವ್ಲ್ ಸಲ್ದಾನ್ಹ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಗುರುವಾರ ಸಾಯಂಕಾಲ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆದ `ಆಳ್ವಾಸ್ ಕ್ರಿಸ್ಮಸ್ ಸಂಭ್ರಮ ೨೦೧೮’ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ನಾವೆಲ್ಲರೂ ಆತ್ಮ ಸಾಕ್ಷಿಗೆ ಸ್ಪಂದಿಸಿ ಒಳಿತನ್ನುಂಟು ಮಾಡುವ ಮತ್ತು ಆ […]

ತಂದೆ ತಾಯಿಯವರನ್ನು ಕಳೆದುಕೊಂಡ ಮಕ್ಕಳ ದತ್ತು ಸ್ವೀಕಾರಕ್ಕೆ ಆಳ್ವಾಸ್ ನಿರ್ಧಾರ

Monday, December 17th, 2018
alwas-college

ಮೂಡುಬಿದಿರೆ: ಮೈಸೂರಿನ ಸುಳ್ವಾಡಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶಣ ಸೇವಿಸಿ ಕೃಷ್ಣ ನಾಯ್ಕ್-ಮೈಲಿಬಾಯಿ ದಂಪತಿ ಸಾವನ್ನಪ್ಪಿದ್ದು, ಅವರ ಮೂವರು ಮಕ್ಕಳನ್ನು ದತ್ತು ಸ್ವೀಕರಿಸಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಿರ್ಧರಿಸಿದೆ. ಮಕ್ಕಳ ಅಭಿಪ್ರಾಯ ಪಡೆದು ಮುಂದಿನ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ. ಮಂಗಳವಾರ ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮೂವರು ಮಕ್ಕಳು ಹಾಗೂ ಅವರ ಸಂಬಂಧಿಕರನ್ನು ಭೇಟಿ ಮಾಡಿ, ಅವರಿಗೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು, […]