Blog Archive

ದೇಶದ 121, ರಾಜ್ಯದ 8 ಜಿಲ್ಲೆಗಳ ಮನೆ ಮನೆಗೂ ಅನಿಲ ಸರಬರಾಜು

Friday, November 23rd, 2018
narendra-modi

ನವದೆಹಲಿ: ದೇಶದ 121 ಜಿಲ್ಲೆ ಹಾಗೂ ರಾಜ್ಯದ 8 ಜಿಲ್ಲೆಗಳಲ್ಲಿ ಕೊಳವೆಗಳ ಮೂಲಕ ನೈಸರ್ಗಿಕ ಅನಿಲವನ್ನು (ಸಿಎನ್‌ಜಿ) ಮನೆ ಮನೆಗೂ ತಲುಪಿಸುವ ಯೋಜನೆಯಾದ ಅನಿಲ ವಿತರಣಾ ವ್ಯವಸ್ಥೆ (ಸಿಜಿಡಿ) ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಬಡವರಿಗೆ ಕಡಿಮೆ ಬೆಲೆಯಲ್ಲಿ ಎಲ್‌ಪಿಜಿ ಸಂಪರ್ಕ ಒದಗಿಸುವ ಕ್ರಾಂತಿಕಾರಿ ಯೋಜನೆ ಇದಾಗಿದೆ. ಮುಂದಿನ 3-4 ವರ್ಷಗಳಲ್ಲಿ ಕೊಳವೆ ಮೂಲಕ ನೈಸರ್ಗಿಕ ಅನಿಲ (ಸಿಎನ್‌ಜಿ) ಮನೆ ಮನೆಗೆ ವಿತರಿಸುವ ಯೋಜನೆಯನ್ನು ಸುಮಾರು 400 ಜಿಲ್ಲೆಗಳಿಗೆ […]

ಮೋದಿ ಅವರನ್ನು ವಿಶ್ವವೇ ಒಪ್ಪಿದ್ದರೂ ಪಾಕಿಸ್ತಾನ ಹಾಗೂ ಸಿದ್ದರಾಮಯ್ಯ ಮಾತ್ರ ದ್ವೇಷಿಸುತ್ತಾರೆ: ಕೆ.ಎಸ್.ಈಶ್ವರಪ್ಪ

Thursday, August 9th, 2018
ishwarappa

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವವೇ ಒಪ್ಪಿದ್ದರೂ ಪಾಕಿಸ್ತಾನ ಹಾಗೂ ಸಿದ್ದರಾಮಯ್ಯ ಮಾತ್ರ ದ್ವೇಷಿಸುತ್ತಾರೆ ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೂ ಮುನ್ನ ಮೋದಿಯನ್ನು ಕೊಲೆಗಡುಕ ಅಂದಿದ್ದರು. ಹಿಂದುಳಿದ ವರ್ಗಗಳ ದ್ವೇಷಿ ಅಂತಾ ಕರೆದಿದ್ದರು. ತಮ್ಮನ್ನು ತಾವು ಅಹಿಂದ ವರ್ಗಗಳ ಚಾಂಪಿಯನ್ ಎಂದುಕೊಳ್ಳುವ ಸಿದ್ದರಾಮಯ್ಯ ಒಬಿಸಿ ಶಾಶ್ವತ ಆಯೋಗಕ್ಕೆ ರಾಜ್ಯಸಭೆಯಲ್ಲಿ ಬೆಂಬಲ ಕೊಡಿಸಲಿಲ್ಲ ಎಂದು ದೂರಿದರು‌. 3 ತಿಂಗಳೋ- 6 ತಿಂಗಳೋ ಸರ್ಕಾರ ಇರಲಿದ್ದು, ಈ […]

ನಾವು ಎಲ್ಲರೂ ಸೇರಿ ಪ್ರಧಾನಿ ಮೋದಿಯನ್ನು ಸೋಲಿಸಲು ಹೋಗುತ್ತಿದ್ದೇವೆ: ರಾಹುಲ್ ಗಾಂಧಿ

Friday, July 20th, 2018
rahul-gandhi

ಹೊಸದಿಲ್ಲಿ: ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಚರ್ಚೆ ವೇಳೆ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಬಳಿಕ ಪ್ರಧಾನಿ ಬಳಿ ತೆರಳಿ ಅವರನ್ನು ಆಲಂಗಿಸಿಕೊಂಡರು. ತನ್ನನ್ನು ಆಲಂಗಿಸುತ್ತಿದ್ದಂತೆ ಪ್ರಧಾನಿ ಮೋದಿ ಅವರು ರಾಹುಲ್ ಬೆನ್ನು ತಟ್ಟಿದರು. “ನಾನು ನಿಮಗೆ ಪಪ್ಪು ಇರಬಹುದು. ಆದರೆ ಕಾಂಗ್ರೆಸ್ ಪಕ್ಷ ದೇಶ ಕಟ್ಟಿದೆ. ಈ ಭಾವನೆ ನಿಮ್ಮಲ್ಲಿಯೂ ಇದೆ. ನಾನು ಬಿಜೆಪಿ, ಆರ್ ಎಸ್ ಎಸ್ ಗೆ ಅಭಾರಿಯಾಗಿದ್ದೇನೆ. ನಿಮ್ಮಲ್ಲಿನ ಭಾವನೆ ಹೊರತರುವೆ. ನಿಮ್ಮನ್ನೂ ಕಾಂಗ್ರೆಸ್ ಗರನ್ನಾಗಿ ಮಾಡುವೆ” ಎಂದು ರಾಹುಲ್ ಭಾಷಣದಲ್ಲಿ […]

2019ರಲ್ಲಿ ಮಾತ್ರವಲ್ಲ, 2029ರವರೆಗೂ ಮೋದಿ ಗೆಲ್ಲಬೇಕು: ಎಸ್.ಎಲ್. ಭೈರಪ್ಪ

Friday, June 22nd, 2018
s-l-bairappa

ಮೈಸೂರು: 2019ರಲ್ಲಿ ಮಾತ್ರವಲ್ಲ, 2024 ಮತ್ತು 2029ರಲ್ಲೂ ನರೇಂದ್ರ ಮೋದಿ ಗೆಲ್ಲಲೇಬೇಕು. ಇಲ್ಲವಾದರೆ ಈ ದೇಶ ಉದ್ಧಾರವಾಗುವುದಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅಭಿಪ್ರಾಯಪಟ್ಟರು. ಇಂದು ಸಂಸದ ಪ್ರತಾಪ್ ಸಿಂಹ ಅವರು ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರನ್ನ ಭೇಟಿ ಮಾಡಿ, ಕೇಂದ್ರ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯ ಪುಸ್ತಕ ನೀಡಿದರು. ಜೊತೆಗೆ ಮೈಸೂರಿಗೆ ಕೇಂದ್ರ ಸರ್ಕಾರ ನೀಡಿರುವ ಪ್ರತಿಯೊಂದು ಯೋಜನೆ ಬಗ್ಗೆ ಸಾಹಿತಿಗಳಿಗೆ ಸಂಸದರು ಮಾಹಿತಿ ನೀಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಾಹಿತಿ ಎಸ್.ಎಲ್ […]

‘ಪೇಜಾವರ ಶ್ರೀ ಟಿವಿ ನೋಡಲ್ಲ, ಹಾಗಾಗಿ ಮೋದಿ ಅಭಿವೃದ್ಧಿ ಬಗ್ಗೆ ಗೊತ್ತಿಲ್ಲ’: ಶೋಭಾ ಕರಂದ್ಲಾಜೆ

Wednesday, June 6th, 2018
shobha-karandlaje

ಮಂಗಳೂರು: ಪೇಜಾವರ ಸ್ವಾಮೀಜಿಯವರು ಸನ್ಯಾಸಿಗಳು. ಅವರು ಹೆಚ್ಚಾಗಿ ಟಿವಿ ನೋಡೋದಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳು ಹಾಗೂ ಸಾಧನೆಗಳ ಬಗ್ಗೆ ಅವರಿಗೆ ಅರಿವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ನಿರೀಕ್ಷಿತ ಮಟ್ಟದ ಸಾಧನೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರಕಾರ ದಾಖಲೆ ಪ್ರಮಾಣದ ಸಾಧನೆಗಳನ್ನು ಮಾಡಿದೆ. ಅಂತರಾಷ್ಟ್ರೀಯ […]

2022ರ ವೇಳೆಗೆ ಪ್ರತಿಯೊಬ್ಬ ಭಾರತೀಯನಿಗೆ ವಾಸಿಸಲು ಮನೆ: ಪ್ರಧಾನಿ ಮೋದಿ

Tuesday, June 5th, 2018
narendra-modi

ನವದೆಹಲಿ: 2022ರ ವೇಳೆಗೆ ಪ್ರತಿಯೊಬ್ಬ ಭಾರತೀಯನಿಗೂ ನಿವಾಸ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯಲ್ಲಿ ನಮೋ ಆ್ಯಪ್‌ ಮೂಲಕ ಪ್ರಧಾನಮಂತ್ರಿ ಗ್ರಾಮೀಣ ಆವಾಸ್‌ ಯೋಜನೆ ಪಲಾನುಭವಿಗಳೊಂದಿಗೆ ಮೋದಿ ಅವರು ಸಂವಾದ ನಡೆಸಿದರು. ವಾಸ್ ಯೋಜನೆ ಎಂದರೆ ಕೇವಲ ಇಟ್ಟಿಗೆ, ಗಾರೆಗಳಿಗೆ ಸಂಬಂಧಿಸಿದ್ದಲ್ಲ. ಜನರಿಗೆ ಉತ್ತಮ ಗುಣಮಟ್ಟದ ಜೀವನ ಒದಗಿಸುವುದು. 2022ರ ವೇಳೆಗೆ ಭಾರತ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಕೊಳ್ಳುವ ಸಮಯದಲ್ಲಿ ಪ್ರತಿಯೊಬ್ಬ ಭಾರತೀಯ ಮನೆ ಹೊಂದುವಂತಾಗಬೇಕು. ಆ […]

ದೇಶದಲ್ಲಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಮೋದಿ ಭಯ, ಮೋದಿ ಜ್ವರ ಶುರುವಾಗಿದೆ: ಸಿ ಟಿ ರವಿ

Tuesday, June 5th, 2018
c-t-ravi

ಮಂಗಳೂರು: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವುದು ಹಳಸಿದವರ ಮತ್ತು ಹಸಿದವರ ಸರ್ಕಾರ ಎಂದು ಬಿಜೆಪಿ ವಕ್ತಾರ ಸಿ ಟಿ ರವಿ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಟಿ. ರವಿ, ಜನಾದೇಶ ಕಳೆದುಕೊಂಡ ಕಾಂಗ್ರೆಸ್ ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿದೆ. ದೇಶದಲ್ಲಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಮೋದಿ ಭಯ, ಮೋದಿ ಜ್ವರ ಶುರುವಾಗಿದೆ. ಅದಕ್ಕಾಗಿ ಬಿಜೆಪಿ ವಿರುದ್ದ ಎಲ್ಲಾ ಪಕ್ಷಗಳು ಒಟ್ಟಾಗುತ್ತಿದೆ. ಶಿಕ್ಷಕ ಮತ್ತು ಪದವೀದರ ಕ್ಷೇತ್ರದ ‌ವಿಧಾನಪರಿಷತ್ ಚುನಾವಣೆ ಯಲ್ಲಿ ಕಾಂಗ್ರೆಸ್, ಜೆಡಿಎಸ್ ಗುಂಡು ತುಂಡುಗಳ ಪಾರ್ಟಿ, ಹಣದ ಆಮೀಷ […]

ವಂಚನೆಯಲ್ಲಿ ಮೋದಿ, ಯಡಿಯೂರಪ್ಪ ಸಮಾನರು: ಶಾಸಕಿ ಶಕುಂತಳಾ ಶೆಟ್ಟಿ

Thursday, May 10th, 2018
shakuntala-shetty

ಪುತ್ತೂರು: ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿ ಪ್ರಕಾರ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದಾಗಿ ಹೇಳಿದ ಕೇಂದ್ರ ಸರಕಾರ ಅನಂತರ ಪ್ರತ್ಯೇಕವಾದಿಗಳ ಜತೆ ಸೇರಿ ಸರಕಾರ ರಚಿಸಿದೆ. ಅದೇ ರೀತಿ ಯಡಿಯೂರಪ್ಪ ಅವರು ಭ್ರಷ್ಟಾಚಾರ ನಿರ್ಮೂಲನೆ ಮಾಡುವುದಾಗಿ ತಾವೇ ಸಿಕ್ಕಿ ಬೀಳಲಿಲ್ಲವೇ? ಎಂದು ಕಾಂಗ್ರೆಸ್‌ ಅಭ್ಯರ್ಥಿ ಶಕುಂತಳಾ ಟಿ. ಶೆಟ್ಟಿ ಪ್ರಶ್ನಿಸಿದ್ದಾರೆ. ಬುಧವಾರ ಚುನಾವಣಾ ಪ್ರಚಾರ ಕಾರ್ಯದ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರು ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿದ ಯಾವ […]

ಕಾಂಗ್ರೆಸ್ ಪಿಎಂ ಅಭ್ಯರ್ಥಿಯನ್ನು ಮೋದಿ ತೀರ್ಮಾನ ಮಾಡೋದಲ್ಲ: ಪಿ. ಚಿದಂಬರಂ

Wednesday, May 9th, 2018
congress

ಮಂಗಳೂರು: ‘ಪ್ರಧಾನಿ ಹುದ್ದೆ ವಹಿಸಿಕೊಳ್ಳಲು ನಾನು ಸಿದ್ಧ’ ಎಂದ ರಾಹುಲ್ ಗಾಂಧಿಯವರನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೇವಡಿ ಮಾಡಿದ್ದರು. ಈ ಸಂಬಂಧ ಇದೀಗ ಪ್ರಧಾನಿ ವಿರುದ್ಧ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, “ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯನ್ನು ನರೇಂದ್ರ ಮೋದಿ ತೀರ್ಮಾನ ಮಾಡೋದಲ್ಲ. ಅದನ್ನು ಕಾಂಗ್ರೆಸ್ ಹಿರಿಯ ನಾಯಕರು ನಿರ್ಧಾರ ಮಾಡುತ್ತಾರೆ. ಬಹುಮತ ಬಂದರೆ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ. ಆದರೆ, ಈ ವಿಚಾರವನ್ನು ಕಾಂಗ್ರೆಸಿನ ಹಿರಿಯ ನಾಯಕರು […]

ಚಿನ್ನದ ನಾಡಲ್ಲಿ ಮೋದಿ… ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನೇರ ವಾಗ್ದಾಳಿ

Wednesday, May 9th, 2018
narendra-modi

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಚಿನ್ನದ ನಾಡು ಕೋಲಾರಕ್ಕೆ ಆಗಮಿಸಿದ್ದು, ಅಪಾರ ಜನರನ್ನುದ್ದೇಶಿಸಿ ಮಾತನಾಡುತ್ತಿದ್ದು, ಕನ್ನಡದಲ್ಲಿ ಭಾಷಣ ಆರಂಭಿಸಿದ್ದಾರೆ. ಎಂದಿನಂತೆ ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಚಿನ್ನದ ನಾಡಿನ ಮಹಾಜನತೆಗೆ ನನ್ನ ನಮಸ್ಕಾರಗಳು ಎಂದರು. ಶಕ್ತಿ ದೇವತೆ ಕೋಲಾರಮ್ಮ, ಮುಳುಬಾಗಿಲು ಆಂಜನೇಯ, ಕಾಲಜ್ಞಾನಿ ಕೈವಾರ ತಾತಯ್ಯ, ಸಾಹಿತಿಗಳಾದ ಡಿವಿಜಿ, ಮಾಸ್ತಿ ವೆಂಕಟೇಶ್‌ ಅಯ್ಯಂಗಾರ ಅವರನ್ನ ನೆನೆದರು. ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ, ಯಾವ ಪಕ್ಷ ಸೋಲುತ್ತೆ ಎಂಬುದು ಮಹತ್ವದಲ್ಲ. ಬದಲಿಗೆ ಯಾರು ಅಭಿವೃದ್ಧಿ ಮಾಡುತ್ತಾರೆ […]